ವಿಜಯಪುರ… ಬೈಕ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿಲಾರಿ ಡಿಕ್ಕಿರುವ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರದ ತೊರವಿ ರಸ್ತೆಯಲ್ಲಿ ಗುರುವಾರ ನಡೆದಿದೆ. ಇನ್ನು ಬೈಕ್‌ನಲ್ಲಿದ ಹಿಂಬದಿಯ ಮಹಿಳೆ ಮೃತಪಟ್ಟಿದ್ದಾಳೆ. ಆದ್ರೇ, ಮಹಿಳೆಯ ಹೆಸರು ತಿಳಿದುಬಂದಿಲ್ಲ. ಅಲ್ಲದೇ, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. KA 28 EF 3015 ಬೈಕ್‌ಗೆ KA 28 C 5824 ಲಾರಿ ಡಿಕ್ಕಿಯಾಗಿದೆ. ಅಲ್ಲದೇ, ಎರಡು ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ವಿಜಯಪುರ ಗ್ರಾಮೀಣ …
Read More »ಸತೀಶ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು:ಬೆಳಗಾವಿ ಜಿಲ್ಲೆಯ ವಿವಿದ ದಲಿತ ಪರ ಸಂಘಟನೆಗಳು ಮನವಿ
ಜಿಲ್ಲೆಯ ಅಹಿಂದ ನಾಯಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ವಿವಿದ ದಲಿತ ಪರ ಸಂಘಟನೆಗಳು ಕಾಂಗ್ರೇಸ್ ರಾಷ್ಟೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷವು 135 ಸ್ಥಾನಗಳನ್ನು ಪಡೆಯುವ ಮೂಲಕ ಅಭೂತಪೂರ್ವ ಸಾಧನೆ ಇ ಹಿನ್ನಲೆಯಲ್ಲಿ ಕಾಂಗ್ರೇಸ್ ನ ಎಲ್ಲ ಹಿರಿಯ ನಾಯಕರ ಪರಿಶ್ರಮದಿಂದ ಇಂದು ಜಾತಿ ವಿರೋಧಿ ಬಿಜೆಪಿನ್ನು ಸೋಲಿಸಿದೆ ಉತ್ತರ ಕರ್ನಾಟಕದ ಪ್ರಭಾವಿ …
Read More »ರಸ್ತೆಯಲ್ಲಿ ಭೀತಿ ಹುಟ್ಟಿಸಿದ ಒಂಟಿ ಸಲಗ: ಕೆಲ ಹೊತ್ತು ಟ್ರಾಫಿಕ್ ಜಾಮ್
ಮೂಡಿಗೆರೆ: ಕೊಟ್ಟಿಗೆಹಾರದಿಂದ ಮಂಗಳೂರು ಹೋಗುವ ಮಾರ್ಗ ಮಧ್ಯೆ ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ ಬುಧವಾರ ಸಂಜೆ ಒಂಟಿ ಸಲಗವೊಂದು ರಸ್ತೆಯಲ್ಲಿಯೇ ನಿಂತು ಪ್ರಯಾಣಿಕರಿಗೆ, ವಾಹನ ಸವಾರರಿಗೆ ಭಯ ಸೃಷ್ಟಿ ಮಾಡಿದೆ. ಸಂಜೆ 4.30 ಗಂಟೆ ಸಮಯದಲ್ಲಿ ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ ಕಾಡಾನೆಯೊಂದು ರಸ್ತೆಗೆ ಪ್ರವೇಶಿಸಿದೆ ಈ ವೇಳೆ ಈ ಮಾರ್ಗದಲ್ಲಿ ಬರುತ್ತಿದ್ದ ಮಂಗಳೂರು ಹಾಸನ ಸರ್ಕಾರಿ ಬಸ್ ಚಾಲಕ ಆನೆಯನ್ನು ಗಮನಿಸಿ ಕೊಂಚ ದೂರದಲ್ಲಿ ಬಸ್ಸನ್ನು ನಿಲ್ಲಿಸಿದ್ದಾನೆ. ಕೆಲ ಸಮಯದ …
Read More »ಸಿದ್ದರಾಮಯ್ಯ ಬ್ಲ್ಯಾಕ್‌ಮೇಲ್ ತಂತ್ರ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಮುಖ್ಯಮಂತ್ರಿಯಾಗುವುದಕ್ಕೆ ಸಿದ್ದರಾಮಯ್ಯ ಬ್ಲ್ಯಾಕ್‌ವೆುàಲ್ ತಂತ್ರ ಅನುಸರಿಸುತ್ತಿದ್ದಾರೆ. ಸೋನಿಯಾ ಗಾಂಧಿಯವರಿಗೆ ಫೋನ್ ಮಾಡಿ ತಮ್ಮನ್ನೇ ಸಿಎಂ ಮಾಡಬೇಕು. ಇಲ್ಲವಾದರೆ ತಮ್ಮ ದಾರಿ ತಾವು ನೋಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಪತ್ರಕರ್ತರೊಂದಿಗೆ ಅವರು ಮಾತನಾಡಿ, 2009ರಲ್ಲಿ ಸಂಸತ್ತಿನ ಚುನಾವಣೆಗೆ ಮೊದಲು ಅವರು ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ ಬೆದರಿಸಿದ್ದರು. ವಿಪಕ್ಷ ನಾಯಕ ಸ್ಥಾನ ಸಿಗದೆ ಇದ್ದರೆ ನನ್ನ ದಾರಿ ನನಗೆ ಎಂದಿದ್ದರು. …
Read More »2 PU: ಹಾಜರಾತಿ ಕೊರತೆ ಇದ್ದರೂ ಪರೀಕ್ಷೆ ಬರೆಯಲು ಅವಕಾಶ
ಬೆಂಗಳೂರು: ತರಗತಿ ಹಾಜರಾತಿ ಕೊರತೆಯಿಂದ 2023ರ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಿಂದ ವಂಚಿತರಾಗಿರುವ ಕಲಾ ಮತ್ತು ವಾಣಿಜ್ಯ ವಿಭಾಗದ 12,385 ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅನುವು ಮಾಡಿಕೊಟ್ಟಿದೆ. ಈ ಸಂಬಂಧ ಪತ್ರಿಕಾ ಪ್ರಕಟನೆ ನೀಡಿರುವ ಮಂಡಳಿ ಅಧ್ಯಕ್ಷ ಆರ್.ರಾಮಚಂದ್ರನ್ ಅವರು, 2022-23ನೇ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ತರಗತಿ ವಿದ್ಯಾರ್ಥಿಗಳಾಗಿ ನೋಂದಾ ಯಿಸಿಕೊಂಡಿದ್ದ ಸಾವಿರಾರು ವಿದ್ಯಾರ್ಥಿಗಳು …
Read More »ಡಿಕೆಶಿ ಅಕ್ರಮ ಆಸ್ತಿ ವಿಚಾರಣೆ ಜುಲೈ 14ಕ್ಕೆ ಮುಂದೂಡಿಕೆ
ಹೊಸದಿಲ್ಲಿ: ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿಗಳ ತನಿಖೆ ಮುಂದುವರಿಸಲು ಅವಕಾಶ ನೀಡಬೇಕೆಂದು ಸಿಬಿಐ ಸರ್ವೋಚ್ಚ ಪೀಠದಲ್ಲಿ ಸಲ್ಲಿರುವ ಅರ್ಜಿ ವಿಚಾರಣೆ ಜು.14ಕ್ಕೆ ಮುಂದೂಡಲ್ಪಟ್ಟಿದೆ. ಮೇ 23ಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆಯಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅಕ್ರಮ ಆಸ್ತಿ ಹೊಂದಿದ್ದಾರೆ, ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಪ್ರಕರಣಗಳನ್ನು ಸಿಬಿಐ ವಿಚಾರಣೆ ನಡೆಸುತ್ತಿದೆ. ಶಿವಕುಮಾರ್ ಮನವಿಯಂತೆ ಫೆ.10ರಂದು ಉಚ್ಚ ನ್ಯಾಯಾಲಯ ವಿಚಾರಣೆಗೆ ತಡೆ ನೀಡಿತ್ತು. ಇದರ ವಿರುದ್ಧ ಸಿಬಿಐ …
Read More »ಸರಕಾರದ ಜತೆ ಪಠ್ಯವೂ ಬದಲು? ಮೊದಲರ್ಧ ವರ್ಷ ಗೊಂದಲ?
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದ್ದ ಪಠ್ಯಪುಸ್ತಕ ಪರಿಷ್ಕರಣೆಯ ಭವಿಷ್ಯ ಏನು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈಗಾ ಗಲೇ ಶೇ.90ರಷ್ಟು ಪಠ್ಯ ಪುಸ್ತಕಗಳು ವಿತರಣೆಯಾಗಿದ್ದು, ಇದೇ 29ರಿಂದ ಆರಂಭವಾಗಲಿರುವ 2023-24ರ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳು ಪರಿಷ್ಕೃತ ಪಠ್ಯವನ್ನೇ ಓದುತ್ತಾರೋ ಅಥವಾ ಪಠ್ಯ ಪುಸ್ತಕ ಇನ್ನೊಮ್ಮೆ ಪರಿಷ್ಕೃತ ಗೊಳ್ಳಲಿದೆಯೇ ಎಂಬ ಚರ್ಚೆ ಆರಂಭಗೊಂಡಿದೆ. ಬಿಜೆಪಿ ಸರಕಾರ ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ರಚಿಸಿ 5ರಿಂದ …
Read More »ಧಾರವಾಡ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು: ಯಾರಿಗೆ ಸಿಗಲಿದೆ ಸಚಿವ ಸ್ಥಾನದ ಪಟ್ಟ?
ಹುಬ್ಬಳ್ಳಿ : ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿರುವ ಧಾರವಾಡ ಜಿಲ್ಲೆ ಕಾಂಗ್ರೆಸ್ಸಿಗೆ ಬಹುದೊಡ್ಡ ಗೆಲುವಿನ ಕೊಡುಗೆ ಕೊಟ್ಟಿದೆ. ಏಳು ವಿಧಾನಸಭಾ ಕ್ಷೇತ್ರದಲ್ಲಿ ನಾಲ್ಕು ಕ್ಷೇತ್ರದಲ್ಲಿ ಕೈ ಬಾವುಟ ಹಾರಿದ್ದು, ಇದೀಗ ಜಿಲ್ಲೆಯಲ್ಲಿ ಯಾರಿಗೆ ಸಿಗಲಿದೆ ಸಚಿವ ಸ್ಥಾನ ಎಂಬ ಕುತೂಹಲ ಮೂಡಿದೆ. ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಹು-ಧಾ ಪೂರ್ವ, ಧಾರವಾಡ ಗ್ರಾಮೀಣ, ಕಲಘಟಗಿ ಹಾಗೂ ನವಲಗುಂದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಕುಂದಗೋಳ, ಹು-ಧಾ ಪಶ್ಚಿಮ ಹಾಗೂ ಸೆಂಟ್ರಲ್ ಕ್ಷೇತ್ರದಲ್ಲಿ …
Read More »ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಡಿಸಿಎಂ ಸ್ಥಾನ ನೀಡಬೇಕು: ಮಲ್ಲಿಕಾರ್ಜುನ ಶ್ರೀಗಳ ಆಗ್ರಹ
ಧಾರವಾಡ: ಜಿಲ್ಲೆಯಿಂದ ಹೊರಗಿದ್ದುಕೊಂಡು ಐತಿಹಾಸಿಕ ಜಯ ಸಾಧಿಸಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಧಾರವಾಡ ಮುರುಘಾ ಮಠದ ಮಲ್ಲಿಕಾರ್ಜುನ ಶ್ರೀಗಳು ಒತ್ತಾಯಿಸಿದರು. ಮುರುಘಾ ಮಠದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಸರ್ವಧರ್ಮ ನಾಯಕನಾಗಿರುವ ವಿನಯ್ ಕುಲಕರ್ಣಿ ಉತ್ತರ ಕರ್ನಾಟಕದ ಪ್ರಬಲ ಲಿಂಗಾಯತ ನಾಯಕರಾಗಿದ್ದಾರೆ. ಅವರಿಗೆ ಡಿಸಿಎಂ ಸ್ಥಾನ ಕೊಟ್ಟು ಗೌರವ ನೀಡಬೇಕು ಎಂದು ಆಗ್ರಹಿಸಿದರು. ಇದು ನಮ್ಮ ಸ್ವಂತದ ವಿಚಾರ, ಅವರು ಡಿಸಿಎಂ …
Read More »ಜನಸೇವೆಯ ಜೊತೆಗೆ ಸಾಂಪ್ರದಾಯಿಕತೆಗೆ ಒತ್ತು: ನೈರುತ್ಯ ರೈಲ್ವೆ ವಲಯದಲ್ಲಿ ಮಹತ್ವದ ಕಾರ್ಯ…!
ಹುಬ್ಬಳ್ಳಿ: ಜನರಿಗೆ ಗುಣಮಟ್ಟದ ಸಾರಿಗೆ ಸೇವೆ ನೀಡುವ ಮೂಲಕ ಜನಮನ್ನಣೆ ಪಡೆದಿರುವ ನೈರುತ್ಯ ರೈಲ್ವೆ ಈಗ ದೇಶದ ಸಾಂಪ್ರದಾಯಿಕತೆ ಒತ್ತು ನೀಡುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಭಾರತೀಯ ರೈಲ್ವೆ ಸಚಿವಾಲಯದ ‘ಒಂದು ನಿಲ್ದಾಣ ಒಂದು ಉತ್ಪನ್ನ’ ಯೋಜನೆಯನ್ನು ‘ವೋಕಲ್ ಫಾರ್ ಲೋಕಲ್’ ಎಂಬ ದೃಷ್ಟಿಕೋನದಿಂದ ಪ್ರಾರಂಭಿಸಿದೆ. ಜನಸೇವೆಯ ಜೊತೆಗೆ ಸಾಂಪ್ರದಾಯಿಕತೆಗೆ ಒತ್ತು: ನೈರುತ್ಯ ರೈಲ್ವೆ ವಲಯದಲ್ಲಿ ಮಹತ್ವದ ಕಾರ್ಯ…! ಸ್ಥಳೀಯರೇ ತಯಾರಿಸಿದ ಉತ್ಪನ್ನಗಳಿಗೆ ಸರಿಯಾದ ಮಾರುಕಟ್ಟೆ ಒದಗಿಸುವುದು ಮತ್ತು …
Read More »
Laxmi News 24×7