Breaking News

ಈ ಬಾರಿ M3 EVM ಬಳಕೆ, ಎಲ್ಲ ಪಕ್ಷಗಳ ಜತೆ ಹೊಸ ಯಂತ್ರ ಪರಿಶೀಲನೆ: ರಾಜ್ಯ ಚುನಾವಣಾ ಆಯೋಗ ಮಾಹಿತಿ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಇಂದು (ಮಾ.29) ಸುದ್ದಿಗೋಷ್ಠಿ ನಡೆಸಿ, ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟಿಸಿದ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ, ಚುನಾವಣಾ ಪೂರ್ವ ತಯಾರಿ ಹಾಗೂ ನೀತಿ ಸಂಹಿತೆಯ ಎಚ್ಚರಿಕೆ ಸೇರಿದಂತೆ ಅನೇಕ ಮಾಹಿತಿಗಳನ್ನು ತಿಳಿಸಿದೆ.   ಬಹುನಿರೀಕ್ಷಿತ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನವು ಮೇ 10ರಂದು ನಡೆಯಲಿದ್ದು, ಮೇ 13ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ. ಏಪ್ರಿಲ್ 13ಕ್ಕೆ ಅಧಿಸೂಚನೆ ಪ್ರಕಟವಾಗಲಿದೆ. ರಾಜ್ಯ ಚುನಾವಣಾ …

Read More »

ಸಿದ್ದರಾಮಯ್ಯ, ಸಚಿವರಿಗೆ ತಟ್ಟಿದ ನೀತಿ ಸಂಹಿತೆ ಬಿಸಿ*

ಬೆಂಗಳೂರು; ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಚಿವರು, ವಿಪಕ್ಷ ನಾಯಕರಿಗೆ ನೀತಿ ಸಂಹಿತೆ ಬಿಸಿ ತಟ್ಟಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಿ ಕಾರಿನಲ್ಲಿ ವರುಣಾ ಕ್ಷೇತ್ರದ ಪ್ರವಾಸದಲ್ಲಿದ್ದರು. ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಸರ್ಕಾರಿ ವಾಹನ ಬಿಟ್ಟು ಖಾಸಗಿ ವಾಹನದಲ್ಲಿ ಸಿದ್ದರಾಮಯ್ಯ ತೆರಳಿದ್ದಾರೆ. ಈ ನಡುವೆ ಸಚಿವರಾದ ಹಾಲಪ್ಪ ಆಚಾರ್, ಸಿ.ಸಿ.ಪಾಟೀಲ್ ಕೂಡ ಸರ್ಕಾರಿ ವಾಹನಗಳಿಗೆ ಗುಡ್ ಬೈ ಹೇಳಿದ್ದು, ಖಾಸಗಿ …

Read More »

ನೀತಿಸಂಹಿತೆ ಉಲ್ಲಂಘಿಸಿದರೆ ಕಠಿಣ ಕ್ರಮ:D.C. ನಿತೇಶ್ ಪಾಟೀಲ

ಬೆಳಗಾವಿ: ಕರ್ನಾಟಕ ವಿಧಾನಸಭಾ ಚುನಾವಣೆಯ ನೀತಿಸಂಹಿತೆ ಇಂದಿನಿಂದಲೇ ಜಾರಿಗೆ ಬಂದಿರುವುದರಿಂದ ಸಾರ್ವಜನಿಕ ಸ್ಥಳದಲ್ಲಿರುವ ಎಲ್ಲ ಪೋಸ್ಟರ್, ಬ್ಯಾನರ್, ಗೋಡೆಬರಹಗಳನ್ನು ತೆರವುಗೊಳಿಸಬೇಕು. ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಎಲ್ಲ ತಂಡಗಳು ತಕ್ಷಣವೇ ಕಾರ್ಯಪ್ರವೃತ್ತಗೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದರು. ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಮಾ.29) ನಡೆದ ಚುನಾವಣಾಧಿಕಾರಿಗಳ ಹಾಗೂ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಮತಗಟ್ಟೆಗಳಲ್ಲಿ ಕನಿಷ್ಠ ಮೂಲಸೌಕರ್ಯವನ್ನು …

Read More »

ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆ

ಬೆಳಗಾವಿ : ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು ಮೇ 10 ಕ್ಕೆ ರಾಜ್ಯ ವಿಧಾನಸಭಾ ಚುನಾವಣೆ ಹಾಗೂ ಮೇ . 13 ಕ್ಕೇ ಫಲಿತಾಂಶ . ಈಗಾಗಲೇ ರಾಜ್ಯ ವಿಧಾನಸಭಾ ಚುನಾವಣೆ ಕುರಿತು ಪೂರ್ವ ತಯಾರಿಯನ್ನು ಚುನಾವಣಾ ಆಯೋಗ ಕೈಗೊಂಡಿದ್ದು ಏಪ್ರಿಲ್ 20 ಕ್ಕೆ ನಾಮಪತ್ರ ಸಲ್ಲಿಕೆ ಕೊನೆಯ ದಿನ. ಒಂದೇ ಹಂತದಲ್ಲಿ ಚುನಾವಣೆ. ‌

Read More »

ನಿತಿನ್ ಗಡ್ಕರಿಗೆ ಬೆದರಿಕೆ ಹಾಕಿದ್ದ ಶಂಕಿತನನ್ನು ಬೆಳಗಾವಿಯಿಂದ ಕರೆದೊಯ್ದ ನಾಗ್ಪುರ ಪೊಲೀಸರು

ಮಹಾರಾಷ್ಟ್ರ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಎರಡು ಬಾರಿ ಬೆದರಿಕೆ ಕರೆಗಳನ್ನು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ನಾಗ್ಪುರ ಪೊಲೀಸರು ಬೆಳಗಾವಿ ಜೈಲಿನಿಂದ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ನಗರದ ಧಾಂತೋಳಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ಪೂಜಾರಿಯನ್ನು ಹಿಂಡಲಗಾ ಜೈಲಿನಿಂದ ಬಂಧಿಸಿ ಬೆಳಗ್ಗೆ ವಿಮಾನ ಮೂಲಕವಾಗಿ ನಾಗ್ಪುರಕ್ಕೆ ಕರೆದೊಯ್ಯಲಾಗಿದೆ. ‘ಕೇಂದ್ರ ಸಚಿವರಿಗೆ ಬೆದರಿಕೆ ಕರೆಗಳನ್ನು …

Read More »

ಗಾಂಜಾ ಮಾರಿ ಜೈಲು ಪಾಲಾದ ಗಂಡ; ಪತಿಯ ವ್ಯವಹಾರವನ್ನೇ ಮುಂದುವರೆಸಿದ್ದ ಚಾಲಾಕಿ ಪತ್ನಿ!

ಬೆಂಗಳೂರು: ಪತಿ ಗಾಂಜಾ ದಂಧೆಯಲ್ಲಿ ಜೈಲು ಪಾಲಾಗುತ್ತಿದ್ದಂತೆ, ಚಾಲಾಕಿ ಪತ್ನಿ ಅದೇ ವ್ಯವಹಾರವನ್ನು ನಡೆಸಿದ್ದಾಳೆ. ಸದ್ಯ ಕಲಾಸಿಪಾಳ್ಯ ಠಾಣಾ ಪೊಲೀಸರು ಗಾಂಜಾ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಮಹಿಳೆಯನ್ನು ಬಂಧಿಸಿದ್ದಾರೆ. ನಗ್ಮಾ(27) ಬಂಧಿತ ಮಹಿಳೆ. ಸದ್ಯ ಪೊಲೀಸರು ಆಕೆಯಿಂದ 26 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ನಗ್ಮಾಳ ಪತಿ ಮುಜ್ಜು ಎಂಬಾತ ವಿಶಾಖಪಟ್ಟಣಂನಿಂದ ಗಾಂಜಾ ತಂದು ಬೆಂಗಳೂರಿನಲ್ಲಿ ಮಾರಾಟ ನಡೆಸುತ್ತಿದ್ದ. ಈತನನ್ನು ಕಳೆದ ತಿಂಗಳು ಬಂಧಿಸಿದ ಪೊಲೀಸರು ಜೈಲಿಗಟ್ಟಿದ್ದರು. ಗಂಡ ಜೈಲಿಗೆ ಹೋಗುತ್ತಿದ್ದಂತೆ ಅದೇ …

Read More »

ಬಿಜೆಪಿ ಶಾಸಕರಿಗೆ ಡಿಕೆ ಶಿವಕುಮಾರ್ ಟಿಕೆಟ್ ಆಮಿಷ: ಸಿಎಂ ಬೊಮ್ಮಾಯಿ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಳೆದ ಎರಡು ಮೂರು ದಿನಗಳಿಂದ ನಮ್ಮ ಶಾಸಕರಿಗೆ ಫೋನ್ ಮಾಡುತ್ತಿದ್ದಾರೆ. ಟಿಕೆಟ್ ಭರವಸೆ ನೀಡುತ್ತಿದ್ದಾರೆ. ಹತಾಶೆಯಿಂದ ‌ನಮ್ಮ ಪಕ್ಷದವರನ್ನು ಸಂಪರ್ಕಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ದಿವಾಳಿಯಾಗಿದೆ ಎನ್ನುವುದಕ್ಕೆ ಇದೆ ಸಾಕ್ಷಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ ಡಿಪಿಐ ಸಂಘಟನೆಯಿಂದ ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಮಾತನಾಡಿ, ಎಸ್ ಡಿಪಿಐನವರು ನನನ್ನು ಹೊಗಳಲು ಸಾಧ್ಯನಾ? ಎಸ್ …

Read More »

ಅದಾನಿ ಮ್ಯಾನೇಜರ್‌ ಮಾತ್ರ, ದುಡ್ಡೆಲ್ಲಾ ಪ್ರಧಾನಿ ನರೇಂದ್ರ ಮೋದಿಯದ್ದು: ಕೇಜ್ರಿವಾಲ್

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ʼಅದಾನಿ ಕೇವಲ ಮ್ಯಾನೇಜರ್‌ ಮಾತ್ರ, ಕಂಪನಿಯಲ್ಲಿನ ಎಲ್ಲಾ ಹಣವನ್ನು ಪ್ರಧಾನಿ ಮೋದಿಯೇ ಹೂಡಿಕೆ ಮಾಡಿದ್ದಾರೆʼ ಎಂದು ಹೇಳಿದ್ದಾರೆ.   ದಿಲ್ಲಿ ಅಸೆಂಬ್ಲಿಯಲ್ಲಿ ಮಾತನಾಡಿದ ಕೇಜ್ರಿವಾಲ್, ಜೆಪಿಸಿ, ಸಿಬಿಐ ಅಥವಾ ಇಡಿ ತನಿಖೆಯು ಅದಾನಿ ಪತನಕ್ಕೆ ಕಾರಣವಾಗುವುದಲ್ಲ ಬದಲಾಗಿ ಪ್ರಧಾನಿ ಮೋದಿಯವರ ಪತನಕ್ಕೆ ಕಾರಣವಾಗುತ್ತದೆ. ಹಾಗಾಗಿ, ಪ್ರಧಾನಿ ಮೋದಿ ಅದಾನಿಯನ್ನು ರಕ್ಷಿಸುತ್ತಿದ್ದಾರೆ ಎಂದು …

Read More »

ಚುನಾವಣೆಗೆ ಸ್ಪರ್ಧಿಸಲೇಬೇಕೆಂದು ಲಕ್ಷ್ಮಣ ಸವದಿ ನಿರ್ಧರಿಸಿದರೆ ಜಿಲ್ಲೆಯಷ್ಟೇ ಅಲ್ಲ, ರಾಜ್ಯ ರಾಜಕಾರಣದಲ್ಲೂ ಬಿಜೆಪಿಯಲ್ಲಿ ದೊಡ್ಡ ಗೊಂದಲ ಸೃಷ್ಟಿ

ಬೆಳಗಾವಿ : ಬಿಜೆಪಿಯ ಟಿಕೆಟ್ ಘೋಷಣೆ ದಿನಾಂಕ ಮುಂದಕ್ಕೆ ಹೋಗಿರುವುದರಿಂದ ನನ್ನ ನಿರ್ಧಾರ ತೆಗೆದುಕೊಳ್ಳುವ ದಿನವನ್ನು ಮುಂದೂಡಿದ್ದೇನೆ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಮಾರ್ಚ್ 27ರೊಳಗೆ ಎಲ್ಲ ಸಮುದಾಯದ ನಾಯಕರ ಜೊತೆ ಚರ್ಚಿಸಿ, 27ರಂದು ನನ್ನ ನಿರ್ಧಾರವನ್ನು ಪ್ರಕಟಿಸುತ್ತೇನೆ ಎಂದು ಲಕ್ಷ್ಮಣ ಸವದಿ ಈ ಮೊದಲು ತಿಳಿಸಿದ್ದರು. ಆದರೆ ಬಿಜೆಪಿಯ ಟಿಕೆಟ್ ಘೋಷಣೆ ಸಮಯ ಮುಂದಕ್ಕೆ ಹೋಗಿದೆ. ಹಾಗಾಗಿ ನಾನು ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅವರು …

Read More »

2023: ಕಾಂಗ್ರೆಸ್‌ ಸೇಪರ್ಡೆಯಾದ ಕೂಡ್ಲಿಗಿ ಬಿಜೆಪಿ ಶಾಸಕ

ಕೂಡ್ಲಿಗಿ, ಮಾರ್ಚ್‌, 28: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಜಕೀಯ ಪಕ್ಷಗಳಲ್ಲಿ ಬೆಳವಣಿಗೆಗಳು ಆಗುತ್ತಲೇ ಇವೆ. ರಾಜಕೀಯ ನಾಯಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿಯುತ್ತಿದ್ದು, ಎಲ್ಲಾ ಪಕ್ಷಗಳಲ್ಲಿ ಇದೀಗ ಬಂಡಾಯದ್ದೇ ಚಿಂತೆ ಆಗಿದೆ. ಇದೇ ರೀತಿ ಇಂದು ಕೂಡ್ಲಿಗಿ ಬಿಜೆಪಿ ಶಾಸಕ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಶಾಸಕ ಗೋಪಾಲಕೃಷ್ಣ ಅವರು ನಿನ್ನೆ ಕಾಂಗ್ರೆಸ್ ಮುಖಂಡರನ್ನು ಭೇಟಿ ಆಗಿದ್ದು, ಇಂದು ಕೊನೆಗೂ ಅವರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಕೂಡ್ಲಿಗಿ ವಿಧಾಸಭಾ ಕ್ಷೇತ್ರದಲ್ಲಿ …

Read More »