ಚಾಮರಾಜನಗರ: ಸಚಿವ ವಿ ಸೋಮಣ್ಣ (V Somanna) ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದ ಚಾಮರಾಜನಗರ (Chamarajanagar) ಜಿಲ್ಲಾ ಬಿಜೆಪಿ ವಕ್ತಾರನಿಗೆ (BJP Spokesperson) ನೋಟಿಸ್ ನೀಡಲಾಗಿದೆ. ಚಾಮರಾಜನಗರ ಜಿಲ್ಲಾ ಬಿಜೆಪಿ ವಕ್ತಾರ ಅಯ್ಯನಪುರ ಶಿವಕುಮಾರ್‌ಗೆ ನೋಟೀಸ್ ಜಾರಿ ಮಾಡಲಾಗಿದೆ. ಸಚಿವ ಸೋಮಣ್ಣ ಅವರಿಗೆ ಮೈಸೂರು ವಿಭಾಗದ ಉಸ್ತುವಾರಿ ಹಾಗೂ ಚಾಮರಾಜನಗರ ಕ್ಷೇತ್ರದಲ್ಲಿ ಟಿಕೆಟ್ ನೀಡುವುದು ಬೇಡ ಎಂದು ಬಿಜೆಪಿ ವಕ್ತಾರ ಶಿವಕುಮಾರ್ ಒತ್ತಾಯ ಮಾಡಿದ್ದರು. ಚಾಮರಾಜನಗರದಲ್ಲಿ ಟಿಕೆಟ್ ನೀಡಿದರೆ ಗೋ ಬ್ಯಾಕ್ ಚಳವಳಿ …
Read More »ಮಹಾಲಿಂಗೇಶ್ವರ ಜಟೋತ್ಸವಕ್ಕೆ ಜನ ಸಾಗರ ;ದೇವರ ಮೊರೆ ಹೋದ ರಾಜಕಾರಣಿಗಳು
ಮಹಾಲಿಂಗಪುರ : ಹಿಂದೂಗಳ ಪವಿತ್ರ ಹಬ್ಬ, ವರ್ಷದ ಆರಂಭ ದಿನದವಾದ ಯುಗಾದಿಯ ದಿನ ನಸುಕಿನ ಜಾವ ನಡೆಯುವ ಜಟೋತ್ಸವ ವಿಕ್ಷಣೆಗಾಗಿ ಮುಂಜಾನೆ ಬುಧವಾರ ಪಟ್ಟಣದ ಐತಿಹಾಸಿಕ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭಕ್ತ ಜನಸಾಗರವೇ ಹರಿದು ಬಂದಿತ್ತು. ಜಟೋತ್ಸವ ಪವಾಡ ಪುರುಷ ಮಹಾಲಿಂಗೇಶ್ವರರ ಜಟೆಗಳು ವಿಜ್ಞಾನಕ್ಕೆ ಸವಾಲು ಎಂಬಂತೆ ಪ್ರತಿವರ್ಷ ಒಂದು ಗೋಧಿ ಕಾಳಿನಷ್ಟು ಬೆಳೆಯುತ್ತಿವೆ. ಇಂತಹ ಪವಾಡ ಸದೃಶ್ಯ ಜಟೆಗಳನ್ನು ನೋಡುವದೇ ಭಕ್ತರ ಸೌಭಾಗ್ಯ. ಇಂತಹ ವೈಶಿಷ್ಟ್ಯ ಪೂರ್ಣ ಜಟೆಗಳ ಅಭಿಷೇಕ (ಜಟೋತ್ಸವ)ದ …
Read More »ಗೋಕರ್ಣ: ಅಥರ್ವಣ ವೇದ ಪಂಡಿತ ಆಚಾರ್ಯ ಶ್ರೀಧರ ಅಡಿ ವಿಧಿವಶ
ಗೋಕರ್ಣ: ಖ್ಯಾತ ಅಥರ್ವಣವೇದ ಪಂಡಿತರಾಗಿದ್ದ ಗೋಕರ್ಣದ ಆಚಾರ್ಯ ಶ್ರೀಧರ ಅಡಿ ಬುಧವಾರ ಮಹಾರಾಷ್ಟ್ರದ ನಾಸಿಕ್ ನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ಪುತ್ರ ಮತ್ತು ಪುತ್ರಿ ಸೇರಿ ಅಪಾರ ಶಿಷ್ಯವರ್ಗ, ಬಂಧುಗಳನ್ನು ಅಗಲಿದ್ದಾರೆ. ವಾರಾಣಸಿಯಲ್ಲಿ ಋಗ್ವೇದ ಮತ್ತು ಯಜುರ್ವೇದ ಅಧ್ಯಯನ ಮುಗಿಸಿ ನಂತರ ಅಥರ್ವಣ ವೇದ ಪಾರಂಗತರಾಗಿ ವಿವಿಧೆಡೆ ವೇದ ಮಹತ್ವ ಸಾರಿ ಉಳಿಸಿ ಬೆಳೆಸುವ ಕೈಂಕರ್ಯದಲ್ಲಿ ತೊಡಗಿದ್ದರು. ಸಂಸ್ಕೃತ ಪಾಂಡಿತ್ಯ ಹೊಂದಿದ್ದ ಅವರು ವಾಗ್ಮಿಯೂ …
Read More »ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ
ಬೆಳಗಾವಿ: ಸೂಕ್ತ ದಾಖಲಾತಿಗಳಲ್ಲದೇ ಸಾಗಿಸಲಾಗುತ್ತಿದ್ದ 9 ಲಕ್ಷ ರೂಪಾಯಿ ನಗದು ಹಣವನ್ನು ಕಣಬರಗಿ ಚೆಕ್ ಪೋಸ್ಟ್ ನಲ್ಲಿ ಮಂಗಳವಾರ ವಶಪಡಿಸಿಕೊಳ್ಳಲಾಗಿದೆ. ಬೆಳಗಾವಿ ನಗರದಿಂದ ಅಂಕಲಗಿ ಕಡೆಗೆ ಹೊರಟಿದ್ದ ಕಾರನ್ನು ಕಣಬರಗಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿದಾಗ ನಗದು ಪತ್ತೆಯಾಗಿದೆ. ನಗದು ಹಣವು ಖಾಸಗಿ ಫೈನಾನ್ಸ್ ಕಂಪನಿಗೆ ಸೇರಿದೆ. ಆದರೆ ಈ ಹಣಕ್ಕೆ ಸಂಬಂಧಿಸಿದಂತೆ ಸಮರ್ಪಕ ದಾಖಲೆಗಳನ್ನು ಅವರು ಒದಗಿಸಿರುವುದಿಲ್ಲ. ಇದಲ್ಲದೇ ಹಣ ಸಾಗಾಣಿಕೆಗೆ ಸಂಬಂಧಿಸಿದಂತೆ ಇರುವ ನಿಗದಿತ ಎಸ್.ಓ.ಪಿ.ಯನ್ನು …
Read More »ದೂರು ನೀಡಲು ಬಂದಿದ್ದ ಯುವತಿ ಜೊತೆ ದುರ್ವರ್ತನೆ
ಬೆಂಗಳೂರು: ದೂರು ನೀಡಲು ಬಂದಿದ್ದ ಯುವತಿ ಜೊತೆ ದುರ್ವರ್ತನೆ ತೋರಿದ ಕೂಡಿಗೆಹಳ್ಳಿ ಠಾಣೆ ಪೊಲೀಸ್ ಇನಸ್ಪೆಕ್ಟರ್ ನ್ನು ಅಮಾನತುಗೊಳಿಸಲಾಗಿದೆ. ರಾಜಣ್ಣ ಅಮಾನತುಗೊಂಡವ. ಪ್ರಕರಣವೊಂದರ ಸಂಬಂಧ ದೂರು ನೀಡಲು ಠಾಣೆಗೆ ಬಂದಿದ್ದ ಯುವತಿಯ ಮೊಬೈಲ್ ಸಂಖ್ಯೆ ಪಡೆದಿದ್ದ ರಾಜಣ್ಣ, ನಂತರ ಆಕೆಯೊಂದಿಗೆ ಅಸಭ್ಯ ಚಾಟಿಂಗ್ ಮಾಡಿದ್ದ. ಇನ್ನೊಮ್ಮೆ ಠಾಣೆಗೆ ಕರೆಸಿ ಡ್ರೈ ಫ್ರುಟ್ ಬಾಕ್ಸ್ ನೀಡಿ ತನ್ನ ರೂಮ್ ಗೆ ಬರುವಂತೆ ಕರೆದಿದ್ದ. ರಾಜಣ್ಣನ ವರ್ತನೆಯಿಂದ ಬೇಸತ್ತ ಯುವತಿ ದಾಖಲೆಗಳ ಸಮೇತ ಹಿರಿಯ …
Read More »ಪೀರನವಾಡಿ ಚೆಕ್ ಪೋಸ್ಟ್ ನಲ್ಲಿ ಫ್ಲೈಯಿಂಗ್ ಸ್ಕ್ವಾಡ್ ತಂಡವು ಬುಧವಾರ 2.89 ಲಕ್ಷ ರೂಪಾಯಿ ಜಪ್ತಿ ಮಾಡಿಕೊಂಡಿರುತ್ತದೆ.
ಬೆಳಗಾವಿ: ಇಲ್ಲಿನ ಪೀರನವಾಡಿ ಚೆಕ್ ಪೋಸ್ಟ್ ನಲ್ಲಿ ಫ್ಲೈಯಿಂಗ್ ಸ್ಕ್ವಾಡ್ ತಂಡವು ಬುಧವಾರ 2.89 ಲಕ್ಷ ರೂಪಾಯಿ ಜಪ್ತಿ ಮಾಡಿಕೊಂಡಿರುತ್ತದೆ. ಚೆಕ್ ಪೋಸ್ಟ್ ಮೂಲಕ ಹೋಗುತ್ತಿದ್ದ ಇಂಡಿಕಾ ವಾಹನವನ್ನು ಪೊಲೀಸ್ ಹಾಗೂ ಎಫ್.ಎಸ್.ಟಿ. ತಂಡದ ಅಧಿಕಾರಿಗಳು ತಪಾಸಣೆ ನಡೆಸಿದ ಸಂದರ್ಭದಲ್ಲಿ ನಗದು ಪತ್ತೆಯಾಗಿರುತ್ತದೆ. ನಗದು ಹಣವನ್ನು ಖಜಾನೆಯಲ್ಲಿ ಜಮಾ ಮಾಡಲಾಗಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Read More »13 ಲಕ್ಷ ಅಕ್ರಮ ಹಣ ಪತ್ತೆ
ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬೆಳಗಾವಿ ಪೊಲೀಸರು ಹೈ ಅಲರ್ಟ್ ಆಗಿದ್ದು, ಚುನಾವಣಾ ಅಕ್ರಮದ ಮೇಲೆ ದಾಳಿ ನಡೆಸಿದ್ದಾರೆ. ಪ್ರತಿ ದಿನ ಕಂತೆ ಕಂತೆ ಅಕ್ರಮ ಹಣ ಪತ್ತೆಯಾಗಿದೆ. ಬೆಳಗಾವಿ ಮಾರ್ಕೆಟ್ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 13 ಲಕ್ಷ ಅಕ್ರಮ ಹಣ ವಶಕ್ಕೆ ಪಡೆದಿದ್ದಾರೆ. ಪೋರ್ಟ್ ರಸ್ತೆಯ ಪೀಪಲಕಟ್ಟಾ ಚೆಕ್ ಪೋಸ್ಟ್ ಬಳಿ ಆಕ್ಟೀವಾ ವಾಹನ ತಪಾಸಣೆ ನಡೆಸಿದಾಗ ಡಿಕ್ಕಿಯಲ್ಲಿ 13 ಲಕ್ಷ ಅಕ್ರಮ ಹಣ ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ.
Read More »ರಾಮದುರ್ಗ: ಇಂದಿನಿಂದ ವೆಂಕಟೇಶ್ವರ ಜಾತ್ರೆ ವೈಭವ
ರಾಮದುರ್ಗ: ಪುಣೆಯ ಪೇಶ್ವೆಗಳ (ಮರಾಠಿಗರ) ಆಡಳಿತದಲ್ಲಿ ಪಟ್ಟಣದಲ್ಲಿ ನಿರ್ಮಿಸಿದ, ವೆಂಕಟೇಶ್ವರ ದೇವಸ್ಥಾನದ ಜಾತ್ರೆ ಮಾರ್ಚ್ 22ರಿಂದ ಏಪ್ರಿಲ್ 31ರವರೆಗೆ ನಡೆಯಲಿದೆ. ಗಡಿ ಭಾಗದಲ್ಲಿ ಕನ್ನಡ- ಮರಾಠಿ ಸಂಸ್ಕೃತಿಗಳ ಸಂಗಮವಾಗಿ ಈ ಉತ್ಸವ ಬೆಳೆದುಬಂದಿದೆ. ರಾಮದುರ್ಗ ಸಂಸ್ಥಾನವು ಪುಣೆಯ ಪೇಶ್ವೆಗಳ ಆಡಳಿತಕ್ಕೆ ಒಳಪಟ್ಟಿತ್ತು. ನರಗುಂದ ಮತ್ತು ರಾಮದುರ್ಗದ ಸಂಸ್ಥಾನಗಳ ಉಭಯ ಸಹೋದರರ ಆಡಳಿತ ವಿಭಜನೆಯಾದ ನಂತರ ರಾಮದುರ್ಗದ ಕೊನೆಯ ಅರಸು ರಾಮ್‌ರಾವ್ ಭಾವೆ ಇಲ್ಲಿನ ವೆಂಕಟೇಶ್ವರ ದೇವಸ್ಥಾನ ನಿರ್ಮಿಸಿ ಜಾತ್ರೆ ನಡೆಸಿಕೊಂಡು …
Read More »ರಾಮದುರ್ಗ: ವೈಭವದ ಬಸವಣ್ಣ ಪಲ್ಲಕ್ಕಿ ಉತ್ಸವ
ರಾಮದುರ್ಗ: ಹಲಗತ್ತಿ ಗ್ರಾಮದಲ್ಲಿ ಯುಗಾದಿ ಸಂಭ್ರಮದ ಸಿದ್ಧತೆಗಳು ಭರದಿಂದ ಸಾಗಿವೆ. ಗ್ರಾಮದ ಬಸವಣ್ಣ ದೇವರ ಪಲ್ಲಕ್ಕಿ ಉತ್ಸವ ಮಾರ್ಚ್ 27ರಂದು ಅದ್ಧೂರಿಯಾಗಿ ಜರುಗಲಿದೆ. ಮಾರ್ಚ್ 22ರಂದು ಓಕುಳಿ ಹೊಂಡ ಪೂಜೆ ನೆರವೇರುವುದು. ನಂತರ ಮೂರು ದಿನ ಬಣ್ಣದ ಓಕುಳಿ ವೈಭವದಿಂದ ನೆರವೇರಲಿದೆ. ಮಲಪ್ರಭೆ ನದಿ ದಡದಲ್ಲಿರುವ ಹಲಗತ್ತಿ ಸುಂದರ ತಾಣ. ಬಸವಣ್ಣನ ಹರಕೆ ತೀರಿಸಲು ಸುತ್ತಲಿನ ಜನ ಭಕ್ತಿ ಭಾವದಿಂದ ಆಗಮಿಸುತ್ತಾರೆ. ಹೆಣ್ಣುಮಕ್ಕಳು ಗಂಡನ ಮನೆಯಿಂದ ಯುಗಾದಿ ಹಬ್ಬಕ್ಕೆಂದು ತವರಿಗೆ …
Read More »ಈ ಭೂಮಿಯಿಂದ ನಿರ್ಗಮನರಾಗುವಾಗ ದೇವರಾಗಿ ಹೋಗುತ್ತಾರೆ. ಇದಕ್ಕೆ ವಿಜಯಪುರದ ಸಿದ್ಧೇಶ್ವರ ಸ್ವಾಮಿಜಿಗಳೇ ಜ್ವಲಂತ ಉದಾಹರಣೆ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಮಾನವರಾಗಿ ಹುಟ್ಟಿದ ಮೇಲೆ ನಾವು ಸಕಲರಿಗೂ ಒಳ್ಳೆಯದನ್ನೇ ಬಯಸಬೇಕು. ಈ ಭೂಮಿಯಲ್ಲಿ ಮನುಷ್ಯರಾಗಿ ಹುಟ್ಟಿರುವದು ನಮ್ಮೆಲ್ಲರ ಪುಣ್ಯವಾಗಿದೆ. ಆದರೆ ಕೆಲವೇ ಕೆಲವು ಜನರು ಈ ಭೂಮಿಯಿಂದ ನಿರ್ಗಮನರಾಗುವಾಗ ದೇವರಾಗಿ ಹೋಗುತ್ತಾರೆ. ಇದಕ್ಕೆ ವಿಜಯಪುರದ ಸಿದ್ಧೇಶ್ವರ ಸ್ವಾಮಿಜಿಗಳೇ ಜ್ವಲಂತ ಉದಾಹರಣೆ ಎಂದು ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ವಡೇರಹಟ್ಟಿ ಗ್ರಾಮದ ಮಲ್ಲಿಕಾರ್ಜುನ ಮಠದಲ್ಲಿ ಕಳೆದ ಭಾನುವಾರದಂದು ಸಿದ್ಧೇಶ್ವರ ಸ್ವಾಮಿಜಿಗಳ ನುಡಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ …
Read More »