Breaking News

ಸಾರ್ವಜನಿಕರು ಗೂಡ್ಸ್ ವಾಹನಗಳಲ್ಲಿ ಸಂಚರಿಸಬಾರದು:ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ: ಜಿಲ್ಲೆಯಲ್ಲಿ ಗೂಡ್ಸ್ ವಾಹನಗಳಲ್ಲಿ ಪ್ರಯಾಣಿಕರನ್ನು ಕರೆದೊಯ್ಯವುದು ಕಂಡುಬಂದರೆ‌ ಅಂತಹ ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದ್ದಾರೆ. ಗೂಡ್ಸ್ ವಾಹನಗಳಲ್ಲಿ ಜನರನ್ನು ಕರೆದೊಯ್ಯುವುದನ್ನು ಚುನಾವಣಾ ಆಯೋಗ ಕೂಡ ಗಂಭೀರವಾಗಿ ಪರಿಗಣಿಸಿದೆ. ಗೂಡ್ಸ್ ವಾಹನಗಳಲ್ಲಿ ಜನರನ್ನು ಕರೆದೊಯ್ಯುವುದನ್ನು ಮೋಟಾರು ವಾಹನ ಕಾಯ್ದೆ ಪ್ರಕಾರ ನಿಷೇಧಿಸಲಾಗಿರುತ್ತದೆ. ಪೊಲೀಸ್ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಇಂದಿನಿಂದ ಜಿಲ್ಲೆಯಾದ್ಯಂತ ತೀವ್ರ ತಪಾಸಣೆ ನಡೆಸಲಿದ್ದಾರೆ. ಕಾನೂನು ಉಲ್ಲಂಘನೆ ಕಂಡುಬಂದರೆ ಕಠಿಣ ಕ್ರಮವನ್ನು …

Read More »

ಖಾನಾಪುರದಲ್ಲಿ ಡಾ.ಸೋನಾಲಿ ಸರ್ನೋಬತ್ ಬಿಜೆಪಿಯ ಪ್ರಬಲ ಆಕಾಂಕ್ಷಿ

ಖಾನಾಪುರ: ಕರ್ನಾಟಕ ವಿಧಾನ ಸಭೆ ಚುನಾವಣೆ ಇನ್ನೇನು ಘೋಷಣೆಯಾಗಲಿದೆ. ಇಡೀ ರಾಜ್ಯದಲ್ಲಿ ಚುನಾವಣೆ ವಾತಾವರಣ ನಿರ್ಮಾಣವಾಗಿದೆ. ಅಘೋಷಿತ ನೀತಿ ಸಂಹಿತೆ ಜಾರಿಯಾಗಿದೆ. ರಾಜಕೀಯ ಪಕ್ಷಗಳು ಕಳೆದ 3 ತಿಂಗಳನಿಂದಲೆ ಚುನಾವಣೆ ಮೂಡ್ ಗೆ ಜಾರಿವೆ. ಪ್ರಮುಖ ಮೂರೂ ಪಕ್ಷಗಳು ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿವೆ. ಪಕ್ಷಾಂತರ ಪರ್ವವೂ ಜೋರಾಗಿದೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆ ಇನ್ನಷ್ಟು ಘಟಾನುಘಟಿಗಳು ಪಕ್ಷ ಬದಲಾವಣೆ ಮಾಡುವ ಮುನ್ಸೂಚನೆ ಈಗಾಗಲೆ ಕಾಣಿಸಿದೆ. ಪಕ್ಷಾಂತರಿಗಳಿಗಾಗಿ ಮೂರೂ ಪಕ್ಷಗಳು ಕೆಲವು ಸೀಟ್ …

Read More »

ಬೆಳಗಾವಿಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಜಿಲ್ಲೆಯ ಸಂಭಾವ್ಯ ಅಭ್ಯರ್ಥಿಗಳ ಲೇಟೆಸ್ಟ್ ಮಾಹಿತಿ

ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬುಧವಾರ ಬಿಡುಗಡೆಯಾಗುವ ಸಾಧ್ಯತೆ ಇದೆ. ರಾಜ್ಯದ ಸುಮಾರು 125 – 150 ಕ್ಷೇತ್ರಗಳ ಮೊದಲ ಪಟ್ಟಿ ಬಿಡುಗಡೆಯಾಗಬಹುದು. ಇದರಲ್ಲಿ ಬೆಳಗಾವಿ ಜಿಲ್ಲೆಯ 12-14 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಸಾಧ್ಯತೆ ಇದೆ. ಬೆಳಗಾವಿ ಜಿಲ್ಲೆಯ 2 -4 ಕಡೆಗಳಲ್ಲಿ ಅಚ್ಛರಿಯ ಅಭ್ಯರ್ಥಿಗಳನ್ನು ಕಾಂಗ್ರೆಸ್ ಕಣಕ್ಕಿಳಿಸುವ ನಿರೀಕ್ಷೆ ಇದೆ. ಬೆಳಗಾವಿ ಜಿಲ್ಲೆಯ ಸಂಭಾವ್ಯ ಅಭ್ಯರ್ಥಿಗಳ ಲೇಟೆಸ್ಟ್ ಮಾಹಿತಿ ಇಲ್ಲಿದೆ: ಬೆಳಗಾವಿ ಗ್ರಾಮೀಣ – ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ …

Read More »

ಸಿಆರ್‌ಪಿಎಫ್‌ನಲ್ಲಿ 9,212 ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಮೆಟ್ರಿಕುಲೇಷನ್ ಅಥವಾ 10 ನೇ ತರಗತಿ ಮುಗಿಸಿ ವಿವಿಧ ಕೌಶಲ್ಯ ಹೊಂದಿರುವವರಿಗೆ ಕೇಂದ್ರ ಸಶಸ್ತ್ರ ಮೀಸಲು ಪೊಲೀಸ್ ಪಡೆಯಲ್ಲಿ (ಸಿಆರ್‌ಪಿಎಫ್) ದೊಡ್ಡ ಪ್ರಮಾಣದ ನೇಮಕಾತಿಗೆ ಚಾಲನೆ ನೀಡಲಾಗಿದೆ. ಸಿಆರ್‌ಪಿಎಫ್‌ನಲ್ಲಿ ಪುರುಷ ಮತ್ತು ಮಹಿಳೆಯರಿಗೆ ‘ಟೆಕ್ನಿಷಿಯನ್’ ಹಾಗೂ ‘ಟ್ರೇಡ್ಸ್‌ಮನ್’ ಕಾನ್‌ಸ್ಟೆಬಲ್ ಎಂಬ ಒಟ್ಟು 9,212 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಇದರಲ್ಲಿ 9,105 ಹುದ್ದೆಗಳು -ಪುರುಷರಿಗೆ ಹಾಗೂ 107 ಹುದ್ದೆಗಳು ಮಹಿಳೆಯರಿಗೆ ಮೀಸಲಿವೆ. ಹುದ್ದೆಗಳು ರಾಜ್ಯವಾರು ಹಂಚಿಕೆಯಾಗಿದ್ದು ಇದೇ ಮಾರ್ಚ್ 27 ರಿಂದ www.crpf.gov.in …

Read More »

ಬೆಳಗಾವಿ: ಎಂಇಎಸ್‌ನಿಂದ ಶಿವಾಜಿ ಪ್ರತಿಮೆ ‘ಶುದ್ಧೀಕರಣ’

ಬೆಳಗಾವಿ: ‘ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಪ್ರತಿಮೆಯನ್ನು ಬಳಸಿಕೊಂಡು, ಶಿವಾಜಿ ಮಹಾರಾಜರಿಗೆ ಅಪಚಾರ ಎಸಗಿದ್ದಾರೆ’ ಎಂದು ಆರೋಪಿಸಿದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌), ರಾಜಹಂಸಗಡ ಕೋಟೆಯಲ್ಲಿ  ಪ್ರತಿಮೆ ಶುದ್ಧೀಕರಣಗೊಳಿಸಿತು.   ಪಂಚ ನದಿಗಳಿಂದ ನೀರು ತಂದು, ಪ್ರತಿಮೆ ಶುಚಿಗೊಳಿಸಲಾಯಿತು. ನಂತರ ಕ್ಷೀರಾಭಿಷೇಕ ಮಾಡಲಾಯಿತು. ರಾಯಗಡದಿಂದ ಅರ್ಚಕರನ್ನು ಆಹ್ವಾನಿಸಿ, ವಿಶೇಷ ಪೂಜೆ ಸಲ್ಲಿಸಲಾಯಿತು. ಸಾವಿರಾರು ಜನರು ಇದಕ್ಕೆ ಸಾಕ್ಷಿಯಾದರು. ಈಗಾಗಲೇ ಎರಡು ಬಾರಿ ಅನಾವರಣಗೊಂಡಿದ್ದ ಶಿವಾಜಿ ಪ್ರತಿಮೆ ‘ಶುದ್ಧೀಕರಣ’ ನೆಪದಲ್ಲಿ …

Read More »

ವೃದ್ಧರಲ್ಲದವರಿಗೂ ವೃದ್ಧಾಪ್ಯ ವೇತನ ಕೊಡಿಸುವ ಕಳ್ಳಾಟ ನಡೆಸಿದ್ದ ‘ಚತುರ’ ಈಗ ಸಿಕ್ಕಿಬಿದ್ದಿದ್ದಾನೆ.

ಬೆಂಗಳೂರು: ವೃದ್ಧರಲ್ಲದವರಿಗೂ ವೃದ್ಧಾಪ್ಯ ವೇತನ ಕೊಡಿಸುವ ಕಳ್ಳಾಟ ನಡೆಸಿದ್ದ ‘ಚತುರ’ ಈಗ ಸಿಕ್ಕಿಬಿದ್ದಿದ್ದಾನೆ. ಚತುರ್(45) ಬಂಧಿತ. ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಕಾರ್ಯಾಚರಿಸಿ ಈತನ ಕೃತ್ಯಗಳನ್ನು ಬಯಲಿಗೆಳೆದಿದ್ದಾರೆ. ಆರೋಪಿ ಯಾರೇ ಹಣ ಕೊಟ್ಟರೂ ಅವರ ಆಧಾರ್ ಕಾರ್ಡ್ ನಲ್ಲಿ ಜನ್ಮ ದಿನಾಂಕವನ್ನೇ ತಿದ್ದಿ ಅವರಿಗೆ ವೃದ್ಧಾಪ್ಯ ವೇತನ ಕೊಡಿಸುವ ಕೆಲಸ ಮಾಡುತ್ತಿದ್ದ. ನಗರದಲ್ಲಿ ಮೂರು ಪ್ರತ್ಯೇಕ ಸ್ಟಾಲ್ ಗಳನ್ನು ತೆರದಿರುವ ಈತ ಇಲ್ಲಿಂದ ಸರಕಾರಿ ಯೋಜನೆಗಳ ಸೌಲಭ್ಯ ಕೊಡಿಸುವ ಮಧ್ಯವರ್ತಿ …

Read More »

ಸಿದ್ದರಾಮಯ್ಯ ಸ್ಪರ್ಧೆಗಾಗಿ ಕ್ಷೇತ್ರ ತ್ಯಾಗಕ್ಕೆ ಕಾಂಗ್ರೆಸ್‌ನಲ್ಲಿ ಪೈಪೋಟಿ

ಕೊಪ್ಪಳ: ಹೈಕಮಾಂಡ್‌ ಸಿದ್ದರಾಮಯ್ಯ ಅವರಿಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದು ಬೇಡ ಎಂದು ಸೂಚಿಸಿದ ಹಿಂದೆಯೇ, ಅವರ ಸ್ಪರ್ಧೆಗೆ ಕ್ಷೇತ್ರ ಬಿಟ್ಟುಕೊಡಲು ಜಿಲ್ಲೆಯಲ್ಲಿ ಪೈಪೋಟಿ ಏರ್ಪಟ್ಟಿದೆ. ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಮತ್ತು ಕೊಪ್ಪಳದ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ‘ತಮ್ಮ ಕ್ಷೇತ್ರದಿಂದ ಸ್ಪರ್ಧಿಸುವಂತೆ ಆಹ್ವಾನಿಸಿದ್ದಾರೆ. ಇಲ್ಲಿ ಜಾತಿ ಲೆಕ್ಕಾಚಾರವು ಇದೆ ಎಂಬ ಚರ್ಚೆ ನಡೆದಿದೆ. ಕುಷ್ಟಗಿ ಕ್ಷೇತ್ರದಲ್ಲಿ 40 ಸಾವಿರಕ್ಕೂ ಹೆಚ್ಚು ಮತ್ತು ಕೊಪ್ಪಳ ಕ್ಷೇತ್ರದಲ್ಲಿ 35 ಸಾವಿರದಷ್ಟು ಕುರುಬರು ಇದ್ದಾರೆ. ಕೊಪ್ಪಳದಲ್ಲಿ …

Read More »

ಜ್ಞಾನವಿದ್ದರೆ ಸಾಲದು, ಬದುಕುವ ಕಲೆಯೂ ಗೊತ್ತಿರಬೇಕು

ಬೆಳಗಾವಿ: ‘ಪ್ರಸ್ತುತ ಕಾಲಘಟ್ಟದಲ್ಲಿ ನಮ್ಮ ಬಳಿ ಜ್ಞಾನವಿದ್ದರಷ್ಟೇ ಸಾಲದು. ಪರಿಸ್ಥಿತಿಗೆ ಅನುಗುಣವಾಗಿ ಅದನ್ನು ಬಳಸುವ ಕಲೆಯೂ ಗೊತ್ತಿರಬೇಕು’ ಎಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿ ಮಾಜಿ ಉಪಾಧ್ಯಕ್ಷ ಡಾ.ಬಿ.ತಿಮ್ಮೇಗೌಡ ಅಭಿಪ್ರಾಯಪಟ್ಟರು.   ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ನಡೆದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ(ಆರ್‌ಸಿಯು)ದ 11ನೇ ವಾರ್ಷಿಕ ಘಟಿಕೋತ್ಸವದ ಭಾಷಣ ಮಾಡಿದ ಅವರು, ‘ಶಿಕ್ಷಣ ಸಂಸ್ಥೆಗಳು ವೃತ್ತಿಪರರನ್ನು ಸೃಷ್ಟಿಸಿದರೆ ಸಾಲದು. ವಿದ್ಯಾರ್ಥಿಗಳಲ್ಲಿ ವೃತ್ತಿಯಾಚೆಗಿನ ನೈತಿಕ ಮೌಲ್ಯಗಳನ್ನು ಬೆಳೆಸಲು ಪ್ರಯತ್ನಿಸಬೇಕು. ಕಲಿಕೆಗೆ ಯಾವುದೇ …

Read More »

“ಯುಗ ಯುಗಾದಿ ಕಳೆದರೂ, ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ” 

ಪಕ್ಷಿಗಳಲ್ಲಿ ನವಿಲು, ಪ್ರಾಣಿಗಳಲ್ಲಿ ಮಾನವ, ಋತುಗಳಲ್ಲಿ ವಸಂತ ಋತು ಶ್ರೇಷ್ಠವಾಗಿರುವಂತೆ ಎಲ್ಲಾ ಹಬ್ಬಗಳಲ್ಲಿ ಯುಗಾದಿಯು ಶ್ರೇಷ್ಠ. ಈ ಹಬ್ಬವನ್ನು ಭಾರತದಲ್ಲಿ ಬೇರೆ-ಬೇರೆ ಹೆಸರಿನಿಂದ ಆಚರಿಸುತ್ತಾರೆ. ಯುಗಾದಿ ಹಬ್ಬವು ಪೌರಾಣಿಕ ಹಾಗೂ ಐತಿಹಾಸಿಕ ವಿಶೇಷತೆಗಳ ದಿನವಾಗಿದೆ. ಇದು ಬ್ರಹ್ಮದೇವನ ಸೃಷ್ಟಿಯ ದಿನ. ಚೈತ್ರಶುದ್ಧ ಪಾಡ್ಯದಂದು ಸೂರ್ಯೋದಯವಾಗುತ್ತಿರುವಾಗ ಬ್ರಹ್ಮನು ವಿಶ್ವವನ್ನು ಸೃಷ್ಟಿಸಿದನೆಂದು, ಅಂದಿನಿಂದ ಕಾಲಗಣನೆಗಾಗಿ ಗ್ರಹ-ನಕ್ಷತ್ರ-ಮಾಸ-ಋತು-ವರ್ಷ ಇವುಗಳನ್ನು ಏರ್ಪಡಿಸಿದನೆಂದು ವ್ರತಖಂಡದಲ್ಲಿ ಮತ್ತು ಪುರಾಣಗಳಲ್ಲಿ ಉಲ್ಲೇಖವಿದೆ.  ಪಂಚಾಂಗಗಳೂ ಇದನ್ನೇ ಹೇಳುತ್ತವೆ.  ವೇದಗಳ ಕಾಲದಿಂದಲೂ ಯುಗಾದಿಯ …

Read More »

ಸ್ಯಾಂಡಲ್ ವುಡ್ ನಟ ಚೇತನ್ ಅರೆಸ್ಟ್

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಚೇತನ್ ಅವರನ್ನು ಬೆಂಗಳೂರಿನ ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಿಂದುತ್ವದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಪೋಸ್ಟ್ ಮಾಡಿದ್ದ ಹಿನ್ನಲೆಯಲ್ಲಿ ಚೇತನ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಚೇತನ್ ನನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ನಟ ಚೇತನ್ ವಿರುದ್ಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿ …

Read More »