ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಮುಸ್ಲಿಂ ಸಮುದಾಯ ಬಾಂಧವರಿಗೆ ಇತರೆ ಸಮಾಜದವರಿಂದ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಂಡಿದ್ದು, ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಎಲ್ಲ ಸಮುದಾಯಗಳು ಒಗ್ಗಟ್ಟಿನ ಮಂತ್ರ ಪಠಿಸುವ ಮೂಲಕ ಶಾಂತಿ ಸಾಮರಸ್ಯವನ್ನು ಕಾಪಾಡಿಕೊಂಡು ಬರುತ್ತಿವೆ ಎಂದು ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಮೂಡಲಗಿ ಪಟ್ಟಣದ ತಹಶೀಲ್ದಾರ ಕಚೇರಿಯ ಹತ್ತಿರ ಜರುಗಿದ ಅರಭಾವಿ ಕ್ಷೇತ್ರದ ಮುಸ್ಲಿಂ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, …
Read More »ಪೂರ್ಣಿಮಾ ಹೆಗಲ ಮೇಲೆ ಕೈ ಇಟ್ಟು, ‘ನಮ್ಮ ಜೊತೆಯಲ್ಲೇ ಇದ್ದಾರೆ’ ಎಂದ ಬಿಎಸ್‌ವೈ
ಚಿತ್ರದುರ್ಗ: ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೆರೆ ಎಳೆದಿದ್ದಾರೆ. ಹಿರಿಯೂರಿನಲ್ಲಿ ಸೋಮವಾರ ಬಿಜೆಪಿ ಆಯೋಜಿಸಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಆಗಮಿಸಿದ್ದ ವೇಳೆ ಸುದ್ದಿಗಾರರ ಜೊತೆ ಮಾತನಾಡಿ, ನಮ್ಮ ಜೊತೆಯಲ್ಲೇ ಇದ್ದಾರಲ್ಲಾ ಎಂದು ಪೂರ್ಣಿಮಾ ಹೆಗಲ ಮೇಲೆ ಕೈ ಇಟ್ಟು ಹೇಳಿದರು. ಈ ವೇಳೆ ಪೂರ್ಣಿಮಾ ಟಿವಿಯವರಿಗೆ ಬುದ್ದಿ ಇಲ್ಲ. ಪದೇ ಪದೇ ನನ್ನ ಹೆಸರು ತೋರಿಸುತ್ತಿದ್ದಾರೆ …
Read More »ನಡ್ಡಾ ಅವರ ರಿಮೋಟ್ ಕಂಟ್ರೋಲ್ ಯಾರ ಬಳಿ ಇದೆ?: ಖರ್ಗೆ ತಿರುಗೇಟು
ಬೆಳಗಾವಿ: ಮೋದಿ ಅವರು ನನ್ನ ರಿಮೋಟ್ ಕಟ್ರೋಲ್ ಬೇರೆಯವರ ಬಳಿ ಇದೆ ಎಂದಿದ್ದಾರೆ. ಹಾಗಾದರೆ ನಿಮ್ಮ ನಡ್ಡಾ ಅವರ ರಿಮೋಟ್ ಕಂಟ್ರೋಲ್ ಯಾರ ಬಳಿ ಇದೆ? ಅದಾನಿ ಅವರ ಬಗ್ಗೆ ರಾಹುಲ್ ಗಾಂಧಿ ಅವರು ಪ್ರಶ್ನೆ ಕೇಳಿದರೆ ಅದನ್ನು ಕಡತದಿಂದ ತೆಗೆದು ಹಾಕುತ್ತಾರೆ.ದೇಶದಲ್ಲಿ ಪ್ರಜಾಪ್ರಭುತ್ವವಿಲ್ಲ, ಜಾತಿವಾದ, ತಾರತಮ್ಯವಿದೆ ಎಂದು ಹೇಳಿದರೆ ಅದು ತಪ್ಪಾ? ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ಸೋಮವಾರ ನಡೆದ ಯುವ …
Read More »ಮಂಗಳೂರು: ಮಾ.21ರಿಂದ ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ
ಮಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಾ.21ರಿಂದ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಎಲ್ಲೆಲ್ಲಿ ಮಳೆ? ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಬೀದರ್, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಹಾಗೂ ಕಲಬುರ್ಗಿ ಜಿಲ್ಲೆಯಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ನೀಡಿದೆ. ಕಳೆದ …
Read More »ಬೆಂಗಳೂರು: ಕಾಂಗ್ರೆಸ್ 4 ನೇ ಗ್ಯಾರಂಟಿ ಘೋಷಣೆ, ಯುವನಿಧಿ ಮೂಲಕ ನಿರುದ್ಯೋಗಿಗಳಿಗೆ ಆರ್ಥಿಕ ನೆರವು
ಬೆಂಗಳೂರು: ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದ್ದು, ವಿವಿಧ ಯೋಜನೆಗಳ ಮೂಲಕ ಪ್ರತಿ ವರ್ಗದ ಜನರ ಮನಗೆಲ್ಲಲು ಮುಂದಾಗಿದೆ. ಇದೀಗ ಕಾಂಗ್ರೆಸ್ 4ನೇ ಗ್ಯಾರಂಟಿ ಯೋಜನೆ ಘೋಷಿಸಿದೆ. ನಿರುದ್ಯೋಗಿ ಪದವಿಧರರಿಗೆ 3000 ರೂ. ಹಾಗೂ ಡಿಪ್ಲೊಮಾ ಪ್ರತಿತಿಂಗಳು 1500 ರೂ. ನಿರುದ್ಯೋಗ ಭತ್ಯೆ ಘೋಷಿಸಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಯುವ ಕ್ರಾಂತಿ ಸಮಾವೇಶದಲ್ಲಿ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಯುವನಿಧಿ ಹೆಸರಿನ ಗ್ಯಾರಂಟಿ ಕಾರ್ಡ್ ಬಿಡುಗಡೆ ಮಾಡಿದರು. ಈಗಾಗಲೇ …
Read More »ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ.
ಬೆಳಗಾವಿ: ಭ್ರಷ್ಟ ಬಿಜೆಪಿ ಸರ್ಕಾರವನ್ನು ತೊಲಗಿಸುವ ಪಣ ತೊಟ್ಟು, ನಾವು ಇದೇ ಭೂಮಿಯಿಂದ ಪ್ರಜಾಧ್ವನಿ ಯಾತ್ರೆ ಆರಂಭಿಸಿದ್ದೆವು. ಇಂದು ಇದೇ ಭೂಮಿಯಲ್ಲಿ ಈ ಯುವಕ್ರಾಂತಿ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ. ಬೆಳಗಾವಿಯ ಯುವಕ್ರಾಂತಿ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಈ ಪಕ್ಷ ರೈತರು, ಕಾರ್ಮಿಕರು, ಯುವಕರು, ಮಹಿಳೆಯರ ನಂಬಿಕೆಯನ್ನು ಪಡೆದಿದ್ದು, ಅವರ ನಂಬಿಕೆ ಉಳಿಸಿಕೊಳ್ಳುವ ಕೆಲಸ …
Read More »5 ಹಾಗೂ 8ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ
ಬೆಂಗಳೂರು: 5 ಹಾಗೂ 8ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಮಾರ್ಚ್ 27ರಂದು ಪರೀಕ್ಷೆ ನಿಗದಿ ಮಾಡಿ ಆದೇಶ ಹೊರಡಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಅನುದಾನರಹಿತ ಶಾಲೆಗಳ ಸಂಘಟನೆಗಳು ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿವೆ. 5 ಹಾಗೂ 8ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ಮಾರ್ಚ್ 13ರಕ್ಕೆ ನಿಗದಿ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು. ಶಿಕ್ಷಣ ಇಲಾಖೆ ಕ್ರಮ ಪ್ರಶ್ನಿಸಿ ಪೋಷಕರು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ …
Read More »ಅಂದರ್- ಬಾಹರ್ ಆಟದಲ್ಲಿ ತೊಡಗಿದ್ದ ಎಂಟು ಜನ ಆರೋಪಿ ಪೊಲೀಸರು ವಶಕ್ಕೆ
ಖಾನಾಪುರ: ತಾಲೂಕಿನ ಪಾರಿಷ್ವಾಡ ಗ್ರಾಮದಲ್ಲಿ ಮಲಪ್ರಭಾ ನದಿ ದಂಡೆಯಲ್ಲಿ ಅಂದರ್- ಬಾಹರ್ ಆಟದಲ್ಲಿ ತೊಡಗಿದ್ದ ಎಂಟು ಜನ ಆರೋಪಿತರನ್ನು ಪೊಲೀಸರು ವಶಕ್ಕೆ ಪಡೆದ್ದಾರೆ. ಖಚಿತ ಮಾಹಿತಿ ಮೇರೆಗೆ ಖಾನಾಪುರ ಪೊಲೀಸ್ ಠಾಣೆ ಪಿಎಸ್ಐ ಪ್ರಕಾಶ ರಾಠೋಡ ಅವರು ಬೈಲಹೊಂಗಲ ಡಿಎಸ್ಪಿ ರವಿ ಡಿ.ನಾಯ್ಕ, ಖಾನಾಪುರ ಪಿಐ ರಾಮಚಂದ್ರ ನಾಯಕ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ 8 ಜನರನ್ನು ವಶಕ್ಕೆ ಪಡೆದರು.ಆರೋಪಿತರಿಂದ ಹಣ ಹಾಗೂ ಇಸ್ಪೀಟ್ ಎಲೆಗಳನ್ನು ಜಪ್ತಿ ಮಾಡಿಕೊಂಡಿದ್ದು, ತನಿಖೆ …
Read More »ಬಿಜೆಪಿ ಸರಕಾರ ರಾಷ್ಟ್ರದ ಅತ್ಯಂತ ಭ್ರಷ್ಟ ಸರಕಾರ:ರಾಹುಲ್ ಗಾಂಧಿ
ಬೆಳಗಾವಿ: ಕರ್ನಾಟಕದ ಪ್ರಸ್ತುತ ಸರಕಾರ ದೇಶದ ಅತ್ಯಂತ ಭ್ರಷ್ಟ ಸರಕಾರವಾಗಿದೆ ಎಂದು ಕಾಗ್ರೆಸ್ ನಾಯಕ ರಾಹುಲ್ ಗಾಂಧಿ ನೇರವಾಗಿ ಹರಿಹಾಯ್ದಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಯುವಕ್ರಾಂತಿ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು. ಬಿಜೆಪಿ ಸರಕಾರ 40 ಪರ್ಸೆಂಟ್ ಸರಕಾರ. ಈ ಸರಕಾರದಿಂದ ಜನರು ಬೇಸತ್ತಿದ್ದಾರೆ. ಜನಸಾಮಾನ್ಯರ ಸರಕಾರವನ್ನು ಕರ್ನಾಟಕದ ಜನರು ಬಯಸಿದ್ದಾರೆ. ಹಾಗಾಗಿ ಈ ಬಾರಿ ಸ್ಪಷ್ಟ ಬಹುಮತದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಅವರು ಹೇಳಿದರು. ಕರ್ನಾಟಕದ ಸರಕಾರ ಭ್ರಷ್ಟ ಸರಕಾರ, …
Read More »ಕರ್ನಾಟಕದ ಇತಿಹಾಸದಲ್ಲಿ 25 ಸಿಎಂಗಳು ಬಂದರೂ ಸಹ, 5 ವರ್ಷ ಪೂರ್ಣಗೊಳಿಸಿದ್ದು ಮೂವರು ಮಾತ್ರ: ಯಾರವರು ಗೊತ್ತಾ?
ರ್ನಾಟಕದ ಇತಿಹಾಸದಲ್ಲಿ 25 ಮುಖ್ಯಮಂತ್ರಿಗಳು ಬಂದು ಹೋಗಿದ್ದಾರೆ. ಅದರಲ್ಲಿ ಸಂಪೂರ್ಣ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಲು ಸಮರ್ಥರಾಗಿದ್ದು ಕೇವಲ ಮೂವರಿಗೆ ಮಾತ್ರ. ಅವರೆಲ್ಲರೂ ಕಾಂಗ್ರೆಸ್’ನಿಂದ ಆಯ್ಕೆಯಾದವರು. ಎಸ್ ನಿಜಲಿಂಗಪ್ಪ (1962-68), ಡಿ ದೇವರಾಜ ಅರಸು (1972-77) ಮತ್ತು ಸಿದ್ದರಾಮಯ್ಯ (2013-2018) ತಮ್ಮ ಪೂರ್ಣಾವಧಿಯನ್ನು ಪೂರ್ಣಗೊಳಿಸಿದ ಕರ್ನಾಟಕದ ಮುಖ್ಯಮಂತ್ರಿಗಳು. ಬಿಜೆಪಿ ಮತ್ತು ಕುಮಾರಸ್ವಾಮಿಯವರ ಜೆಡಿಎಸ್‌ನಿಂದ ಯಾವುದೇ ಮುಖ್ಯಮಂತ್ರಿ ಕರ್ನಾಟಕದಲ್ಲಿ ಪೂರ್ಣಾವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಮೈಸೂರು ರಾಜ್ಯದ ಮುಖ್ಯಮಂತ್ರಿಗಳು ಮತ್ತು ಅವಧಿ: …
Read More »