Breaking News

ಗಡಿ ಭಾಗದವರಿಗೆ ಮಹಾರಾಷ್ಟ್ರ ಸರ್ಕಾರದ ವಿಮೆ; ಹೇಗೆ ತಡೆಯಬೇಕು ಯೋಚಿಸುತ್ತೇನೆ:ಸಿಎಂ

ಬೆಳಗಾವಿ: ‘ಕರ್ನಾಟಕ ಗಡಿ ಭಾಗದ 865 ಹಳ್ಳಿಗಳಿಗೂ ಅನ್ವಯ ಆಗುವಂತೆ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ನೀಡಿದ್ದರೆ, ಅದನ್ನು ಪರಿಶೀಲಿಸಿ ಹೇಗೆ ತಡೆಯಬೇಕು ಯೋಚಿಸುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.   ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ನೀಡಿದ್ದಕ್ಕೆ ನಾನೇಕೆ ರಾಜೀನಾಮೆ ಕೊಡಬೇಕು. ನಾಡು, ನುಡಿ, ಗಡಿ ಜನರ ರಕ್ಷಣೆ ವಿಚಾರದಲ್ಲಿ ನಾನು ಡಿ.ಕೆ.ಶಿವಕುಮಾರ ಅವರಿಂದ ಪಾಠ ಕಲಿಯಬೇಕಾಗಿಲ್ಲ’ ಎಂದರು. ‘ನಾವು ಕೂಡ …

Read More »

ಕೆಕೆ ಕೊಪ್ಪ ಕ್ರಾಸ್ ಬಳಿ ಅಪರಿಚಿತ ವಾಹನವೊಂದು ಬೈಕ್ ಸವಾರನನ್ನು ಬಲಿತೆಗೆದುಕೊಂಡಿದೆ.

ಬೆಳಗಾವಿ: ಇಲ್ಲಿನ ಕೆಕೆ ಕೊಪ್ಪ ಕ್ರಾಸ್ ಬಳಿ ಅಪರಿಚಿತ ವಾಹನವೊಂದು ಬೈಕ್ ಸವಾರನನ್ನು ಬಲಿತೆಗೆದುಕೊಂಡಿದೆ. ಸುಳೇಬಾವಿ ಗ್ರಾಮದ ರಾಮು ನಾರಾಯಣ ಬಂಗೋಡಿ (54) ಮೃತಪಟ್ಟವರು. ಅವರು ವಡಗಾವಿ ದೇವಾಂಗನಗರ ನಿವಾಸಿ, ಗೋಪಾಲ ಬಸಪ್ಪ ತಾಳೂಕರ (58) ಅವರೊಂದಿಗೆ ಬುಧವಾರ ಮಧ್ಯಾಹ್ನ ಹಿರೇಬಾಗೇವಾಡಿಯಿಂದ ಬೈಕ್ ನಲ್ಲಿ ಬರುತ್ತಿದ್ದಾಗ ಹಿಂಬದಿಯಿಂದ ಅಪರಿಚಿತ ವಾಹನ ಗುದ್ದಿದೆ. ಗೋಪಾಲ ತಾಳೂಕರ ಅವರಿಗೆ ಗಾಯಗಳಾಗಿದ್ದು ತಲೆ ಹಾಗೂ ಮುಖಕ್ಕೆ ತೀವ್ರ ಏಟು ತಗುಲಿದ ರಾಮು ಬಂಗೋಡಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. …

Read More »

ಬರೊಬ್ಬರಿ 56 !ಬ್ಲೇಡುಗಳನ್ನು ನುಂಗಿದಮಹಾನುಭಾವ

ಜೈಪುರ: ಚಿತ್ರ ವಿಚಿತ್ರ ವರ್ತನೆಗಳ ಜನ ನಮ್ಮಲ್ಲಿ ನೋಡಸಿಗುತ್ತಾರೆ. ಇಂಥವರಲ್ಲೂ ಕೆಲವರ ವಿಲಕ್ಷಣ ಗುಣಗಳು ಅಸಾಧ್ಯವನ್ನೂ ಸಾಧ್ಯವಾಗಿಸಿರುತ್ತವೆ. ಇದಕ್ಕೆ ಇಲ್ಲೊಬ್ಬ ಮಹಾನುಭಾವ ಜ್ವಲಂತ ಉದಾಹರಣೆಯಾಗಿದ್ದಾನೆ. ಇವನ ಘನಕಾರ್ಯವೇನೆಂದರೆ ಶೇವಿಂಗ್ ಬ್ಲೇಡುಗಳನ್ನು ನುಂಗಿದ್ದು. ಅದು ಒಂದೆರಡಲ್ಲ… ಬರೊಬ್ಬರಿ 56 ! ರಾಜಸ್ಥಾನದ ಸಂಚೋರ್ ಪಟ್ಟಣದ ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಯಶಪಾಲ್ ಸಿಂಗ್ (25) ಹೊಟ್ಟೆಯಿಂದ ವೈದ್ಯರು 56 ಬ್ಲೇಡುಗಳನ್ನು ಹೊರತೆಗೆದಿದ್ದಾರೆ. ತನ್ನ ಸಹವರ್ತಿಗಳೊಂದಿಗೆ ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದ ಈತ …

Read More »

ಮುಖ್ಯಮಂತ್ರಿ ಭೇಟಿಗಾಗಿ ಒಂದು ಗಂಟೆ ಕಾದು ವಾಪಸ್‌ ಆದ ಶಾಸಕಿ ಕುಸುಮಾವತಿ ಶಿವಳ್ಳಿ

ಹುಬ್ಬಳ್ಳಿ: ಕುಂದಗೋಳ ಶಾಸಕಿ ಕುಸುಮಾವತಿ ಶಿವಳ್ಳಿ ಅವರು ಮುಖ್ಯಮಂತ್ರಿಗಳ ಭೇಟಿಗಾಗಿ ಸುಮಾರು ಒಂದು ಗಂಟೆ ಕಾದರೂ ಭೇಟಿಯಾಗದ ಹಿನ್ನೆಲೆಯಲ್ಲಿ ವಾಪಸ್ಸು ತೆರಳಿದ ಘಟನೆ ನಡೆಯಿತು. ಇಲ್ಲಿನ ಆದರ್ಶ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಶಾಸಕಿ ಕುಸುಮಾವತಿ ತೆರಳಿದ್ದರು. ಸುಮಾರು ಒಂದು ಗಂಟೆ ಕಾಲ ಕಾದರು ಕುಳಿತರು. ಆದರೆ ಬೆಳಗಾವಿಗೆ ತೆರಳುವ ಭರದಲ್ಲಿ ಭೇಟಿಯಾಗದೆ ಸಿಎಂ ಬೊಮ್ಮಾಯಿ ಹೊರಟು ಹೋದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕಿ ಕುಸುಮಾವತಿ ಶಿವಳ್ಳಿ, ಕ್ಷೇತ್ರದ …

Read More »

ಮಹಾರಾಷ್ಟ್ರದಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ;ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಲಿ:ಸಿದ್ದರಾಮಯ್ಯ

ಹುಬ್ಬಳ್ಳಿ: ಮಹಾರಾಷ್ಟ್ರದವರು ಗಡಿ ಭಾಗದ ರಾಜ್ಯಕ್ಕೆ ಸುಮಾರು 865 ಗ್ರಾಮಗಳಲ್ಲಿ ಆರೋಗ್ಯ ವಿಮೆ ಜಾರಿ ಘೋಷಣೆ ಮಾಡಿದ್ದು, ಇದು ಒಕ್ಕೂಟ ವ್ಯವಸ್ಥೆ ಗೆ ಧಕ್ಕೆಯಾಗಿದ್ದು,ಕೇಂದ್ರ ಸರಕಾರ ತಕ್ಷಣ ಮಧ್ಯ ಪ್ರವೇಶಿಸಬೇಕು. ವಿಚಾರ ಬಗ್ಗೆ ಮೌನ ತಾಳಿರುವ ಮುಖ್ಯಮಂತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು.   ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದ ಏಕನಾಥ ಶಿಂಧೆ ಸರಕಾರದ ಹಿರಿಯ ನಾಯಕರೊಬ್ಬರು 865 ವಿವಾದಾತ್ಮಕ ಗಡಿ ಹಳ್ಳಿಗಳಲ್ಲಿ …

Read More »

ನೀರು ಕೊಟ್ಟ ಶಾಸಕನಿಗೆ ಹಾಲು ಕುಡಿಸಿದ ರೈತ!

ವಿಜಯಪುರ: ನೀರಾವರಿ ಸೇರಿದಂತೆ ಇತರೆ ಯೋಜನೆ, ಸೌಲಭ್ಯ ನೀಡಿದ ಜನಪ್ರತಿನಿಧಿಗಳಿಗೆ ವೈವಿಧ್ಯಮಯ ವಸ್ತುಗಳ ಹಾರ, ತುರಾಯಿ ಹಾಕುವುದು ಸಾಮಾನ್ಯವಾಗಿದೆ. ಆದರೆ ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಯುವರೈತರೊಬ್ಬರು ತಮ್ಮ ಜಮೀನಿಗೆ ನೀರು ಹರಿಸಿದ ಶಾಸಕನಿಗೆ ತಾನೇ ಸಾಕಿದ ಆಕಳ ಹಾಲು ಕುಡಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಕೃತಜ್ಞತೆ ಸಲ್ಲಿಸಿ ಗಮನ ಸೆಳೆದಿದ್ದಾರೆ.   ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸಿದ್ದಾಪುರ ಕೆ. ಗ್ರಾಮದ ಯುವ ರೈತ ವೃಷಭನಾಥ ಯಶವಂತ ಘೋಸರವಾಡ ಬುಧವಾರ …

Read More »

ಗೋವಾದಲ್ಲಿ ಅಪರಿಚಿತರಿಂದ ಕರ್ನಾಟಕ ಮೂಲದ ಅರ್ಚಕನ ಮೇಲೆ ಹಲ್ಲೆ, ಜೀವ ಬೆದರಿಕೆ

ಪಣಜಿ: ಗೋವಾ ವಾಸ್ಕೊದ ಮುರಗಾಂವ ಕೇಸರವಾಲ್ ಗಣೇಶ ಮಂದಿರದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಬಸವರಾಜ್ ಹೊಸ್ಮಠ ಎಂಬ ಕರ್ನಾಟಕದ ವಿಜಯಪುರ ಜಿಲ್ಲೆಯ ಮೂಲದ ಅರ್ಚಕರ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಅರ್ಚಕ ಬಸವರಾಜ್ ಹೊಸ್ಮಠ ರವರು ಸ್ಥಳೀಯ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.   ಕರ್ನಾಟಕದ ವಿಜಯಪುರ ಮೂಲದ ಅರ್ಚಕರಾದ ಬಸವರಾಜ್ ರವರು ಕಳೆದ ಅನೇಕ ವರ್ಷಗಳಿಂದ ಗೋವಾದ ಮುರಗಾಂವ ಗಣೇಶ ಮಂದಿರದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ …

Read More »

ಗೋವಾಕ್ಕೆ ಬರುವ ಪ್ರವಾಸಿಗರು ಕೂಡ ಕಾನೂನು ಪಾಲಿಸಬೇಕು : ಸಿಎಂ ಸಾವಂತ್

ಪಣಜಿ: ”ಗೋವಾದ ಹಣಜುಣದಲ್ಲಿ ಪ್ರವಾಸಿ ಕುಟುಂಬದ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಹಾಗೂ ಪೊಲೀಸರ ನಿರ್ಲಕ್ಷ್ಯದಿಂದ ರಾಜ್ಯಕ್ಕೆ ದೇಶಾದ್ಯಂತ ಅಪಖ್ಯಾತಿಯಾಗುತ್ತಿದೆ. ಗೋವಾ ರಾಜ್ಯವು ಪ್ರವಾಸಿಗರಿಗೆ ಸುರಕ್ಷಿತವಾಗಿದೆ ಮತ್ತು ಪ್ರವಾಸೋದ್ಯಮಕ್ಕೆ ಧಕ್ಕೆ ತರುವವರ ಕೃತ್ಯ ಸಹಿಸಲಾಗುವುದಿಲ್ಲ. ಪ್ರವಾಸಿಗರು ಕೂಡ ಕಾನೂನು ಪಾಲಿಸಬೇಕು” ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದ್ದಾರೆ. ಮುಖ್ಯಮಂತ್ರಿಗಳು ಪೊಲೀಸ್ ಪ್ರಧಾನ ಕಚೇರಿಯಲ್ಲಿ ಗೃಹ, ಕಾರ್ಮಿಕ ಮತ್ತು ಪ್ರವಾಸೋದ್ಯಮ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಘಟನೆಯ ಸಂಪೂರ್ಣ ತನಿಖೆಯ ನಂತರ ದಾಳಿಕೋರನ …

Read More »

5 ಮತ್ತು 8 ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ಬುಧವಾರ ಮಧ್ಯಂತರ ಆದೇಶದ ಮೂಲಕ ಎರಡು ವಾರಗಳ ನಂತರ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ರಾಜ್ಯ ಮಂಡಳಿಗೆ ಅನುಮತಿ ನೀಡಿ, ರಾಜ್ಯ ಸರಕಾರದ ಮೂರು ಸುತ್ತೋಲೆಗಳನ್ನು ರದ್ದುಗೊಳಿಸಿದ ಏಕ ಪೀಠದ ಆದೇಶಕ್ಕೆ ತಡೆ ನೀಡಿದೆ.   ನ್ಯಾಯಮೂರ್ತಿ ಜಿ ನರೇಂದರ್ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರ ವಿಭಾಗೀಯ ಪೀಠವು ಮಾರ್ಚ್ 10 ರ ಆದೇಶಕ್ಕೆ ತಡೆ …

Read More »

ನೌಕರರ ಮುಷ್ಕರ: ನಾಳೆಯಿಂದ ಕೆಪಿಟಿಸಿಎಲ್​, ಎಸ್ಕಾಂ, ಬೆಸ್ಕಾಂ ಎಲ್ಲವೂ ಬಂದ್!

ಬೆಂಗಳೂರು: ಸರ್ಕಾರಿ ನೌಕರರ ಸಂಘದ ಬಳಿಕ ವೇತನ ಪರಿಷ್ಕರಣೆಗೆ ಸಿಡಿದೆದ್ದ KPTCL ನೌಕರರ ಸಂಘ ನಾಳೆಯಿಂದ ಕೆಪಿಟಿಸಿಎಲ್​, ಎಸ್ಕಾಂ, ಬೆಸ್ಕಾಂ ಎಲ್ಲವೂ ಬಂದ್​ ಮಾಡಿ ಮುಷ್ಕರ ಮಾಡಲಿದೆ. ಇದೀಗ ಮಾರ್ಚ್​ 21ರಿಂದ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಹೂಡಲಿದ್ದು ಅದರ ಜತೆಗೆ ಈಗ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಹಾಗೂ ಒಕ್ಕೂಟ ಅನಿರ್ದಿಷ್ಟವಧಿ ಮುಷ್ಕರ ಮಾಡುವುದಾಗಿ ಕರೆ ಕೊಟ್ಟು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.   ‘ನಾಳೆಯಿಂದ ರಾಜ್ಯಾದ್ಯಂತ ಕೆಲಸಕ್ಕೆ …

Read More »