ಹಾವೇರಿ: ‘ಶಾಸಕ ಮಾಡಾಳ್ ವಿರೂಪಾಕ್ಷಪ್ಪನ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದಾಗ ₹8 ಕೋಟಿ ಸಿಕ್ಕಿದೆ. ಕೃಷಿ ಸಚಿವ ಬಿ.ಸಿ.ಪಾಟೀಲ್ ಮನೆ ಮೇಲೆ ದಾಳಿ ಮಾಡಿದರೆ ಕನಿಷ್ಠ ₹1 ಸಾವಿರ ಕೋಟಿ ಸಿಗುತ್ತದೆ. ರೈತರ ಹೆಸರು ಹೇಳುವುದು ಲೂಟಿ ಹೊಡೆಯುವುದು ಇದೇ ಪಾಟೀಲರ ಕಸುಬಾಗಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಹಿರೇಕೆರೂರು ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ‘ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ’ ಸಮಾವೇಶದಲ್ಲಿ …
Read More »ತೇರದಾಳ ಮತಕ್ಷೇತ್ರಕ್ಕೆ ಸಿದ್ದು ಸವದಿ ಅಭ್ಯರ್ಥಿ – B.S.Y.
ರಬಕವಿ-ಬನಹಟ್ಟಿ: ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಮತಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಅನೇಕ ಉತ್ತಮ ಕಾರ್ಯಗಳನ್ನು ಮಾಡಿದ್ದು, ಅವರೇ ತೇರದಾಳ ಮತಕ್ಷೇತ್ರದ ಅಭ್ಯರ್ಥಿಯಾಗಿ ಮುಂದುವರೆಯಲಿದ್ದಾರೆ ಮತ್ತು ಈ ಬಾರಿಯೂ ಕೂಡಾ ಭಾರಿ ಅಂತರದಿಂದ ಜಯ ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಮಂಗಳವಾರ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಟಹಟಿ ತಾಲೂಕಿನ ಬನಹಟ್ಟಿಯ ನಿರೀಕ್ಷಣಾ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವವೇ ಇಲ್ಲ. ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ …
Read More »ಸಾದಾ ಹೊಟೇಲ್‌ನಲ್ಲಿ ಜನರ ಮಧ್ಯ ಭರಪೂರ ನ್ಯಾರಿ ಮಾಡಿದ ಸಚಿವರು !
ರಬಕವಿ-ಬನಹಟ್ಟಿ : ಹಾ.. ನಿಮ್ಗೇನ್ ಬೇಕ್ರಿ..? ಕೊಡ್ತೀನಿ ತಡ್ರೀ.. ಹೀಗೆ ಸಾಮಾನ್ಯ ಹೊಟೇಲ್‌ನಲ್ಲಿ ಗ್ರಾಹಕರನ್ನು ಕೇಳುವುದು ರೂಢಿ. ಇಂತಹ ಹೊಟೇಲ್‌ನಲ್ಲಿ ನೀರಾವರಿ ಸಚಿವ ಗೋವಿಂದ ಕಾರಜೋಳ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಶಾಸಕ ಸಿದ್ದು ಸವದಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ, ಮನೋಹರ ಶಿರೋಳ ಸೇರಿದಂತೆ ಅನೇಕರು ಸಾಮಾನ್ಯ ಹೊಟೇಲ್‌ನಲ್ಲಿ ಸಾಮಾನ್ಯರಂತೆ ಯಾವದೇ ಬಿಗುಮಾನವಿಲ್ಲದೆ ಜನರ ಮಧ್ಯದಲ್ಲಿಯೇ ಖಾರದ ಚಪಾತಿ, …
Read More »ಮಾ.20ರಂದುಬೆಳಗಾವಿಗೆ ಆಗಮಿಸಲಿದ್ದಾರೆ ರಾಹುಲ್ ಗಾಂಧಿ
ಬೆಳಗಾವಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾ.20ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ. ರಾಹುಲ್ ಗಾಂಧಿ ಭೇಟಿ ಹಿನ್ನೆಲೆಯಲ್ಲಿ, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ದಿನಾಂಕ 16-03-2023 ರಂದು ಬೆಳಿಗ್ಗೆ 10 ಗಂಟೆಗೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಬೆಳಗಾವಿ ವಿಭಾಗದ ಕಾಂಗ್ರೆಸ್ ಮುಖಂಡರುಗಳ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಈ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಚಿಕ್ಕೋಡಿ, ಬೆಳಗಾವಿ …
Read More »ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲುವ ಕ್ಷೇತ್ರಗಳ ಸಂಖ್ಯೆ ತಿಳಿಸಿದ ಡಿ.ಕೆ.ಶಿ
ಬೆಂಗಳೂರು: ನಂಬಿಕೆಗೆ ಮತ್ತೊಂದು ಸಮಾಜ ಎಂದರೆ ತಿಗಳರ ಸಮಾಜ, ಸೂರ್ಯ ಹಾಗೂ ಅಗ್ನಿಯಿಂದ ಉದ್ಭವಿಸಿದ ಸಮಾಜ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ತಿಗಳರ ಸಮಾಜದ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಈ ಸಮಾಜದ ಕಾರ್ಯಕ್ರಮದಲ್ಲಿ ತಪ್ಪದೇ ಭಾಗವಹಿಸಬೇಕು ಎಂದು ಪ್ರಜಾಧ್ವನಿ ಯಾತ್ರೆಯನ್ನು ಮುಂದೂಡಿ ಇಲ್ಲಿಗೆ ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಮರಕ್ಕೆ ಬೇರು ಎಷ್ಟು ಮುಖ್ಯವೋ, ಮನುಷ್ಯನಿಗೆ ನಂಬಿಕೆ ಕೂಡ ಅಷ್ಟೇ ಮುಖ್ಯ. ಈ ದೇಶದಲ್ಲಿ ಹಿಂದೂ, ಮುಸಲ್ಮಾನರು, ಕ್ರೈಸ್ತರು, ಸಿಖ್ಖರು ಸೇರಿದಂತೆ …
Read More »ರಾಜ್ಯದಲ್ಲಿ ಇಂದಿನಿಂದ 5 ದಿನ ಮಳೆ?
ಬೆಂಗಳೂರು: ರಾಜ್ಯ ಸೇರಿ ದೇಶಾದ್ಯಂತ ತಾಪಮಾನ ಏರಿಕೆಯಾಗುತ್ತಲೇ ಇದೆ. ಬಿಸಿಲ ಧಗೆ ರಾಜ್ಯದಲ್ಲಿ ನಿಧಾನವಾಗಿಯೇ ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಸಮುದ್ರಗಳಲ್ಲಿ ಮೆಲ್ಮೈ ಸುಳಿ ಕಾಣಿಸಿಕೊಂಡಿರೋ ಕಾರಣ ರಾಜ್ಯದ ನಾನಾ ಕಡೆ ಇಂದಿನಿಂದ 5 ದಿನ ಮಳೆಯಾಗುವ ಸಾಧ್ಯತೆ ಎಂದು ಮಾಹಿತಿ ನೀಡಿದೆ. ಮಾರ್ಚ್ 14 ರಿಂದ 18 ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಹಾಗೂ ಮಾರ್ಚ್ 16 ರಿಂದ 18 ರವರೆಗೆ …
Read More »ಟೋಲ್ ಸಂಗ್ರಹ: ಮೊದಲ ದಿನವೇ ಸೆನ್ಸಾರ್ ವೈಫಲ್ಯ, ಕಾರುಗಳಿಗೆ ಡ್ಯಾಮೇಜ್, ಆಕ್ರೋಶ
ಮೈಸೂರು, ಮಾರ್ಚ್, 14: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇ ಅನ್ನು ಭಾನುವಾರ ನರೇಂದ್ರ ಮೋದಿಯವರು ಉದ್ಘಾಟನೆ ಮಾಡಿದ್ದರು. ಇದರ ಬೆನ್ನಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಧಿಕಾರವು ಮಂಗಳವಾರ ಬೆಳಗ್ಗೆ 8 ಗಂಟೆಯಿಂದಲೇ ಟೋಲ್ ಸಂಗ್ರಹ ಮಾಡಲು ಮುಂದಾಗಿದೆ. ಆದರೆ ಶುಲ್ಕ ಸಂಗ್ರಹಕ್ಕೆ ಮುಂದಾಗಿದ್ದ ಮೊದಲ ದಿನವೇ ಟೋಲ್‌ನ ಸೆನ್ಸಾರ್‌ಗಳಲ್ಲಿ ವೈಫಲ್ಯ ಕಾಣಿಸಿಕೊಂಡಿದೆ. ಟೋಲ್ ಸೆನ್ಸಾರ್‌ಗಳು ಕಾರ್ಯನಿರ್ವಹಿಸದ ಹಿನ್ನೆಲೆ, ಮೂರ್ನಾಲ್ಕು ಕಾರುಗಳು ಡ್ಯಾಮೇಜ್ ಆಗಿವೆ. ಇದರಿಂದ ರೊಚ್ಚಿಗೆದ್ದ ವಾಹನ ಸವಾರರು ರಾಷ್ಟ್ರೀಯ ಹೆದ್ದಾರಿ …
Read More »ಸಿಎಂ ಇಬ್ರಾಹಿಂ ಮೇಲೆ ಕುಮಾರಸ್ವಾಮಿ ಗರಂ!
ಹಾಸನ,ಮಾರ್ಚ್14: ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಜೋರಾಗಿದೆ. ಇತ್ತ ತಮ್ಮ ತಮ್ಮ ರಾಜಕೀಯ ಭವಿಷ್ಯಕ್ಕಾಗಿ ರಾಜಕೀಯ ನಾಯಕರು ಪಕ್ಷಾಂತರ ಪರ್ವ ಶುರು ಮಾಡಿದ್ದು, ಈಗಾಗಲೇ ಕಾಂಗ್ರೆಸ್ ನತ್ತ ಮುಖ ಮಾಡಿರುವ ಗುಬ್ಬಿ ಶ್ರಿನಿವಾಸರನ್ನ ಮತ್ತೆ ಜೆಡಿಎಸ್ ಗೆ ಕರೆತರುವ ಪ್ರಯತ್ನ ನಡೆದಿದೆ ಎಂದು ಹೇಳಲಾಗಿದೆ. ಗುಬ್ಬಿ ಕ್ಷೇತ್ರದ ಶ್ರೀನಿವಾಸ ಗೌಡ ಅವರು ಜೆಡಿಎಸ್‌ಗೆ ಬಂದ್ರೆ ಸ್ವಾಗತ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆ ನೀಡಿದ್ದು, …
Read More »ಟೋಲ್ ಕಟ್ಟುವುದಿಲ್ಲವೆಂದು ಕೆ ಎಸ್ ಆರ್ ಟಿ ಸಿ ಚಾಲಕ ಆಕ್ರೋಶ
ಮೈಸೂರು : ಬೆಂಗಳೂರು-ಮೈಸೂರು ನೂತನ ಹೆದ್ದಾರಿಯ ಬಿಡದಿ ಟೋಲ್ ಪ್ಲಾಜಾ ಯುದ್ಧಭೂಮಿಯಾಗಿ ಮಾರ್ಪಟ್ಟಿದೆ. ಪ್ರತಿಯೊಬ್ಬ ವಾಹನ ಚಾಲಕ ಟೋಲ್ ಪ್ಲಾಜಾ ಸಿಬ್ಬಂದಿ ವಿಧಿಸುತ್ತಿರುವ ದುಬಾರಿ ಶುಲ್ಕದಿಂದ ಸಿಟ್ಟಿಗೇಳುತ್ತಿದ್ದಾರೆ. ಬೆಂಗಳೂರು-ಮೈಸೂರು ನಡುವೆ ಓಡುವ ಕೆಎಸ್ ಆರ್ ಟಿಸಿ ಬಸ್ಸಿನ ಚಾಲಕರೊಬ್ಬರು ಸುತಾರಾಂ ಟೋಲ್ ಶುಲ್ಕ ನೀಡುವುದಿಲ್ಲ ಎಂದು ಜಗಳಕ್ಕೆ ಬಿದ್ದಿದ್ದಾರೆ. ಟೋಲ್ ಸಿಬ್ಬಂದಿ ಸಾರ್ ‘ನೀವು ಶುಲ್ಕ ಪಾವತಿಸದಿದ್ದರೆ ನಮ್ಮ ಸಂಬಳದಿಂದ ಕಿತ್ತುಕೊಳ್ಳುತ್ತಾರೆ’ ಎಂದು ಹೇಳಿದರೂ ಬಸ್ ಚಾಲಕನ ಮೇಲೆ ಯಾವುದೇ ಪರಿಣಾಮ …
Read More »ಅಪ್ಪು ಪುತ್ಥಳಿ ಮೆರವಣಿಗೆ ವೇಳೆ ಜೆಡಿಎಸ್ ಕಾರ್ಯಕರ್ತರು – ಪೊಲೀಸರ ಮಧ್ಯೆ ವಾಗ್ವಾದ; ಪಿಎಸ್‌ಐ ಕಾಲರ್ ಎಳೆದು ಹಲ್ಲೆ ಮಾಡಿದ ಶಾಸಕರ ಪುತ್ರ
ರಾಯಚೂರು: ಸಿಂಧನೂರಿನಲ್ಲಿ ನಿರ್ಮಾಣವಾಗಿರುವ ನೂತನ ರಂಗಮಂದಿರಕ್ಕೆ ಪುನೀತ್ ರಾಜ್ಕುಮಾರ್ ಹೆಸರಿಡುವ ವಿಚಾರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಅಪ್ಪು ಪುತ್ಥಳಿ ಮೆರವಣಿಗೆ ವೇಳೆ ಜೆಡಿಎಸ್ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ತಳ್ಳಾಟ ನಡೆದಿದ್ದು, ಪಿಎಸ್‌ಐ ಮಣಿಕಂಠ ಥಳಿತಕ್ಕೊಳಗಾಗಿದ್ದಾರೆ. ಸಿಂಧನೂರು ನಗರದ ಸುಕಾಲಪೇಟೆ ರಸ್ತೆಯಲ್ಲಿ ನೂತನ ರಂಗ ಮಂದಿರ ನಿರ್ಮಾಣವಾಗಿದ್ದು, ಸಿಂಧನೂರು ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ ಪುತ್ರ ಅಭಿಷೇಕ ನಾಡಗೌಡ ಪುನೀತ್ ರಾಜಕುಮಾರ್ …
Read More »