Breaking News

ಬೆಂಗಳೂರು- ಮೈಸೂರು ಹೈವೇಮೋದಿ ಅಪ್ಪನ ಮನೆಯಿಂದ ಹಣ ತಂದು ನಿರ್ಮಾಣ ಮಾಡಿಲ್ಲ‌: ಎಚ್ ವಿಶ್ವನಾಥ್ ಕಿಡಿ

ಮೈಸೂರು: ಬೆಂಗಳೂರು- ಮೈಸೂರು ಹೈವೇಯನ್ನು ಮೋದಿ ಅಪ್ಪನ ಮನೆಯಿಂದ ಹಣ ತಂದು ನಿರ್ಮಾಣ ಮಾಡಿಲ್ಲ‌. ಪ್ರತಾಪ್ ಸಿಂಹ ಅಪ್ಪನ ಮನೆಯಿಂದ ಹಣ ತಂದು ಮಾಡಿಲ್ಲ. ಜನರ ತೆರಿಗೆ ಹಣದಿಂದ ನಿರ್ಮಾಣ ಮಾಡಲಾಗಿದೆ. ಆದರೂ ಹೈವೇಗೆ ದುಬಾರಿ ಟೋಲ್ ನಿಗದಿ ಮಾಡಿರೋದು ಸರಿಯಲ್ಲ ಎಂದು ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಕಿಡಿಕಾರಿದರು.   ಬೆಂಗಳೂರು ಮೈಸೂರು ಹೈವೇ ಕಾಮಗಾರಿ ಅವೈಜ್ಞಾನಿಕವಾಗಿದೆ. ಹೈವೇ ನಿರ್ಮಾಣದಿಂದ ಮಂಡ್ಯ ಜಿಲ್ಲೆಯ ಜನರಿಗೆ ತೀವ್ರ ತೊಂದರೆಯಾಗಿದೆ. ಹೈವೇ ಕಾಮಗಾರಿ …

Read More »

ಸಿಎಂ ಭೇಟಿ: ಅಂಜನಾದ್ರಿಯಲ್ಲಿ ಅಂಗಡಿ ಬಂದ್

ಆಂಜನಾದ್ರಿ (ಗಂಗಾವತಿ): ಅಂಜನಾದ್ರಿಗೆ ಮುಖ್ಯಮಂತ್ರಿ ಭೇಟಿ ನೀಡುವ ಕಾರ್ಯಕ್ರಮ ಮಂಗಳವಾರ ನಿಯೋಜನೆಯಾಗಿದ್ದರಿಂದ ಬೆಟ್ಟದ ಕೆಳಗಿನ ಅಂಗಡಿಗಳನ್ನು ಬಂದ್ ಮಾಡಲಾಗಿತ್ತು. ಅಂಜನಾದ್ರಿ ಬೆಟ್ಟದ ಕೆಳಗೆ ಎರಡೂ ಬದಿಗಳಲ್ಲಿ ಪೂಜಾ ಸಾಮಗ್ರಿಗಳ, ತಂಪು ಪಾನೀಯ ಮಾರುವ ಅಂಗಡಿಗಳು ಇವೆ. ಬೆಟ್ಟಕ್ಕೆ ಬರುವ ಸ್ಥಳೀಯರು ಹಾಗೂ ಪ್ರವಾಸಿಗರಿಗೆ ಈ ಅಂಗಡಿಗಳೇ ಆಸರೆಯಾಗಿದ್ದವು. ಬಿರು‌ಬಿಸಿಲಿನ ನಡುವೆ ಪ್ರವಾಸಿಗರು ಪರದಾಡಬೇಕಾಯಿತು. ಪೂರ್ಣಕುಂಭ ಸ್ವಾಗತ: ಮುಖ್ಯಮಂತ್ರಿ ಬಸವರಾಜ ‌ಬೊಮ್ಮಾಯಿ ಅವರಿಗೆ ಸಾಂಸ್ಕೃತಿಕ ಕಲಾ ತಂಡಗಳ ಮೂಲಕ ಪೂರ್ಣಕುಂಭ ಸ್ವಾಗತ‌ ನೀಡಲಾಯಿತು. ಪುರೋಹಿತರಾದ …

Read More »

ಜಿಎಸ್‌ಟಿ ಕಳ್ಳಲೆಕ್ಕ: ಕರ್ನಾಟಕಕ್ಕೆ 2ನೇ ಸ್ಥಾನ

ಹೊಸದಿಲ್ಲಿ: ಜಿಎಸ್‌ಟಿಯನ್ನು ಸರಿಯಾಗಿ ಪಾವತಿಸದೇ ಕಳ್ಳಲೆಕ್ಕ ತೋರಿಸಿದವರ ಪಟ್ಟಿಯಲ್ಲಿ ಮಹಾರಾಷ್ಟ್ರ ರಾಜ್ಯ ಅಗ್ರಸ್ಥಾನ ಪಡೆದುಕೊಂಡಿದ್ದರೆ, ಕರ್ನಾಟಕ 2ನೇ ಸ್ಥಾನಿಯಾಗಿದೆ. ಕಳೆದ 5 ವರ್ಷದಲ್ಲಿ ವಂಚಿಸಿದ್ದ 3.11ಲಕ್ಷ ಕೋಟಿ ರೂ. ಜಿಎಸ್‌ಟಿಯಲ್ಲಿ, 1.03 ಲಕ್ಷ ಕೋಟಿ ರೂ.ಗಳನ್ನು ಹಿಂಪಡೆಯಲು ಸರಕಾರ ಯಶಸ್ವಿಯಾಗಿದೆ ಎಂದು ಲೋಕಸಭೆಗೆ ಹಣಕಾಸು ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.   ಮಹಾರಾಷ್ಟ್ರದಲ್ಲಿ 60 ಸಾವಿರ ಕೋಟಿ ರೂ., ಕರ್ನಾಟಕದಲ್ಲಿ 40,507 ಕೋಟಿ ರೂ., ಜಿಎಸ್‌ಟಿಯನ್ನು ವಂಚಿಸಲಾಗಿದೆ. ಇನ್ನು ಗುಜರಾತ್‌ನಲ್ಲಿ 26,156 …

Read More »

ಮಾ.17ಕ್ಕೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ?

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಪಟ್ಟಿ ಇದೇ ತಿಂಗಳ 17ರಂದು ಹೊರಬೀಳುವ ಸಾಧ್ಯತೆ ಇದೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಮಾ.16ರಂದು ನಗರದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಒಂದು ಸಭೆ ಕರೆಯಲಾಗಿದೆ. ಮರುದಿನ ಅಂದರೆ ಮಾ.17ರಂದು ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಅಲ್ಲಿ ಅಂತಿಮ ತೀರ್ಮಾನ ಆಗಲಿದೆ’ ಎಂದು ತಿಳಿಸಿದರು. ಇತ್ತೀಚೆಗೆ ನಿಧನರಾದ ಮಾಜಿ ಸಂಸದ ಧ್ರುವನಾರಾಯಣ ಅವರ ಪುತ್ರನಿಗೆ ಟಿಕೆಟ್‌ …

Read More »

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾ.16ರಿಂದ ವಿದ್ಯುತ್‌ ನೌಕರರ ಮುಷ್ಕರ

ಬೆಂಗಳೂರು: ನೌಕರರು ಮತ್ತು ಅಧಿಕಾರಿ ವರ್ಗದ ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ (ಕೆಪಿಟಿಸಿಎಲ್‌) ಮತ್ತು ಎಲ್ಲ ವಿದ್ಯುತ್‌ ಸರಬರಾಜು ಕಂಪನಿ (ಎಸ್ಕಾಂ)ಗಳ ಉದ್ಯೋಗಿಗಳು ಮಾರ್ಚ್‌ 16ರಂದು ಕೆಲಸಕ್ಕೆ ಗೈರುಹಾಜರಾಗಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಇದರಿಂದ ವಿದ್ಯುತ್‌ ಪೂರೈಕೆ ಮತ್ತಿತರ ಸಂಬಂಧಪಟ್ಟ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಈಗಾಗಲೇ ವಿದ್ಯುತ್‌ ಪ್ರಸರಣ ನಿಗಮ ನೌಕರರ ಸಂಘ ಮತ್ತು ಅಧಿಕಾರಿಗಳ ಸಂಸ್ಥೆ ಸಲ್ಲಿಸಿದ …

Read More »

ಪವರ್‌ ಸ್ಟಾರ್‌ ಅಪ್ಪು ʼಗಂಧದ ಗುಡಿʼ ಓಟಿಟಿ ಎಂಟ್ರಿಗೆ ಡೇಟ್‌ ಫಿಕ್ಸ್

ಬೆಂಗಳೂರು: ಪವರ್‌ ಸ್ಟಾರ್‌ ಡಾ.ಪುನೀತ್‌ ರಾಜ್‌ ಕುಮಾರ್‌ ಕನಸಿನ ಪ್ರಾಜೆಕ್ಟ್‌ ʼಗಂಧದ ಗುಡಿʼ ಓಟಿಟಿ ಪ್ರಿಮಿಯರ್‌ ಗೆ ದಿನಾಂಕ ನಿಗದಿಯಾಗಿದೆ. ಕರ್ನಾಟಕದ ವನ್ಯಜೀವನ ಯಾನವನ್ನು ಸುಂದರವಾಗಿ ಕಟ್ಟಿಕೊಟ್ಟ ʼಗಂಧದ ಗುಡಿʼ ಯಲ್ಲಿ ಅಮೋಘ ವರ್ಷ, ಅಪ್ಪು ಅವರ ಪ್ರವಾಸಿ ಪಯಣದ ಕನಸಿಗೆ ಜೊತೆಯಾಗಿದ್ದರು. ʼಗಂಧದ ಗುಡಿʼ ಯಲ್ಲಿ ಅಪ್ಪು ಕರುನಾಡಿನ ಪ್ರಾಣಿ ಸಂಕುಲದ ಪರಿಸರದಲ್ಲಿ ಸರಳವಾಗಿ ಸಂಚರಿಸಿದ್ದರು. ಥಿಯೇಟರ್‌ ನಲ್ಲಿ 2022 ರ ಅಕ್ಟೋಬರ್‌ 28 ಬಿಡುಗಡೆಯಾದ ಸಾಕ್ಷ್ಯಚಿತ್ರಕ್ಕೆ ಅದ್ದೂರಿ ರೆಸ್ಪಾನ್ಸ್‌ …

Read More »

ಕಾಂಗ್ರೆಸ್‌ ತೆಕ್ಕೆಗೆ ‘ಆಪರೇಷನ್‌ ಕಮಲ’ ರೂವಾರಿ ಕದಲೂರು ಉದಯ್‌ಗೌಡ

ಬೆಂಗಳೂರು: ‘ಆಪರೇಷನ್‌ ಕಮಲ’ದ ಮೂಲಕ ಕಾಂಗ್ರೆಸ್‌- ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಉರುಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ‌ ಉದ್ಯಮಿ, ಮದ್ದೂರು ವಿಧಾನಸಭೆ ಕ್ಷೇತ್ರದ ಮುಖಂಡ ಕದಲೂರು ಉದಯ್‌ಗೌಡ ಅವರು ತಮ್ಮ ಬೆಂಬಲಿಗರ ಜೊತೆ ಸೋಮವಾರ ಕಾಂಗ್ರೆಸ್‌ ಸೇರಿದರು.   ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಕಾಂಗ್ರೆಸ್‌ ಮುಖಂಡರಾದ ಚಲುವರಾಯಸ್ವಾಮಿ, ನರೇಂದ್ರಸ್ವಾಮಿ ಅವರು ಉದಯ್ ಗೌಡ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್‌, ‘ಉದಯ್ ಯಾವುದೇ ಷರತ್ತು ಇಲ್ಲದೆ ಪಕ್ಷ …

Read More »

ಮಾರ್ಚ್ 17ರ ಮಧ್ಯರಾತ್ರಿಯಿಂದ ಲಾರಿ ಮಾಲೀಕರ ಮುಷ್ಕರ

ಬೆಂಗಳೂರು: ವಾಣಿಜ್ಯ ವಾಹನಗಳ ಎಫ್‌.ಸಿ ನವೀಕರಣಕ್ಕೆ ಕ್ಯೂಆರ್‌ ಕೋಡ್‌ ಇರುವ ರೆಟ್ರೋ ರಿಫ್ಲೆಕ್ಟರ್‌ ಟೇಪ್ ಅಳವಡಿಸಿಕೊಂಡು ಬರುವಂತೆ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ.   ‘ಬೆಂಗಳೂರು ನಗರದಲ್ಲಿ ಸರಕು-ಸಾಗಣೆ ವಾಹನಗಳ ಪ್ರವೇಶ ರದ್ದು ಪಡಿಸಿರುವುದನ್ನು ಖಂಡಿಸಿ ಇದೇ 17ರ ಮಧ್ಯರಾತ್ರಿಯಿಂದ ಅಗತ್ಯ ವಸ್ತುಗಳ ಪೂರೈಕೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಲಾಗುವುದು’ ಎಂದು ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಜಿ.ಆರ್. ಷಣ್ಮುಖಪ್ಪ, …

Read More »

ಕಾಳ್ಗಿಚ್ಚು ನಿಯಂತ್ರಣಕ್ಕೆ ಪರಿಸರ ತಜ್ಞರಿಂದ ಮುಖ್ಯಮಂತ್ರಿಗೆ ಪತ್ರ

ಶಿರಸಿ: ಮಲೆನಾಡು ಹಾಗೂ ಕರಾವಳಿಯಲ್ಲಿ‌ ವ್ಯಾಪಕವಾಗಿ ಹಬ್ಬುತ್ತಿರುವ ಕಾಳ್ಗಿಚ್ಚು ನಿಯಂತ್ರಿಸಲು ಜಿಲ್ಲೆಯ ಪರಿಸರ ಹಾಗೂ ಜೀವಶಾಸ್ತ್ರ ತಜ್ಞರು ಕೆಲವು ನಿಯಂತ್ರಣಾ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.   ಪರಿಸರ ತಜ್ಞರಾದ ಅನಂತ ಹೆಗಡೆ ಅಶೀಸರ, ಪ್ರೊ. ಬಿ.ಎಂ.ಕುಮಾರಸ್ವಾಮಿ, ಬಿ.ಎಚ್.ರಾಘವೇಂದ್ರ, ವೆಂಕಟೇಶ ವರದಾಮೂಲ, ಡಾ. ಕೇಶವ ಎಚ್. ಕೊರ್ಸೆ, ನಾರಾಯಣ ಗಡಿಕೈ, ಡಾ. ಪ್ರಕಾಶ ಮೇಸ್ತ, ಡಾ. ಮಹಾಬಲೇಶ್ವರ ಸಾಯಿಮನೆ, ಗಣಪತಿ ಬಿಸಲಕೊಪ್ಪ ಅವರನ್ನು …

Read More »

ಶಿರಸಿ-ಸಿದ್ದಾಪುರ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ: ಕಾಗೇರಿ

ಶಿರಸಿ: ‘ಶಿರಸಿ-ಸಿದ್ದಾಪುರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ನಾನೇ ಅಭ್ಯರ್ಥಿ. ಯಾರಿಗೂ ಅನುಮಾನ ಬೇಡ’ ಎಂದು ವಿಧಾನಸಭಾಧ್ಯಕ್ಷ ಹಾಗೂ ಸ್ಥಳೀಯ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಸಿದ್ದಾಪುರದಲ್ಲಿ ಕೆಲವರಿಂದ ವಿರೋಧ ವ್ಯಕ್ತವಾದರೂ ಅದು ಸಾಮಾನ್ಯ. ಅದನ್ನು ಶಮನ ಮಾಡು ವುದು ನನಗೆ ತಿಳಿದಿದೆ’ ಎಂದು ಹೇಳಿದರು. ‘ವಿಧಾನಸಭಾಧ್ಯಕ್ಷನಾದ ನಂತರ ಪಕ್ಷದ ಚಟುವಟಿಕೆಯಿಂದ ದೂರ ಉಳಿದಿದ್ದೆ. ಇದರಿಂದ ಕ್ಷೇತ್ರದಲ್ಲಿ ಹೆಚ್ಚಿನ ವ್ಯತ್ಯಾಸ ಆಗದಿದ್ದರೂ ಪಕ್ಷದ ವಲಯದಲ್ಲಿ …

Read More »