Breaking News

ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು, ಮೂರು ಉಚಿತ ಸಿಲಿಂಡರ್ ನೀಡಲಿದೆ B.JP.?

ರಾಜ್ಯದಲ್ಲಿ ವಸತಿ ರಹಿತರಿಗೆ 10 ಲಕ್ಷ ಮನೆ, ಬಿಪಿಎಲ್ ಕುಟುಂಬಗಳಿಗೆ ದಿನಕ್ಕೆ ಅರ್ಧ ಲೀಟರ್ ನಂದಿನಿ ಹಾಲು, ವರ್ಷಕ್ಕೆ ಮೂರು ಎಲ್ಪಿಜಿ ಸಿಲಿಂಡರ್ಗಳು ಸೇರಿದಂತೆ ವಿವಿಧ ಭರವಸೆಗಳನ್ನು ನೀಡುವ 6 ಅಂಶಗಳ ಪ್ರಣಾಳಿಕೆಯನ್ನು ಬಿಜೆಪಿ ಇಂದು ಪ್ರಕಟಿಸಿದೆ. ಇದು ಏಕರೂಪ ನಾಗರಿಕ ಸಂಹಿತೆ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿಯ ಅನುಷ್ಠಾನದ ಭರವಸೆಯನ್ನೂ ನೀಡುತ್ತದೆ. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪ. ನಡ್ಡಾ ಅವರು ಇಂದು ಪಕ್ಷದ ಪ್ರಣಾಳಿಕೆಯನ್ನು …

Read More »

ಗಾಂಧಿ ಕುಟುಂಬದ ಬಗ್ಗೆ ನಾಲಿಗೆ ಹರಿ ಬಿಟ್ಟ ಯತ್ನಾಳ್

ಕುಂದಗೋಳ: ವಿಧಾನಸಭಾ ಚುನಾವಣಾ ಅಖಾಡದಲ್ಲಿ ರಾಜಕೀಯ ಪಕ್ಷಗಳ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಪರಸ್ಪರ ವಾಗ್ದಾಳಿ ನಡೆಸುವ ಬರದಲ್ಲಿ ಬಾಯಿಗೆ ಬಂದಂತೆ ಪದ ಪ್ರಯೋಗ ಮಾಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ವಾಕ್ಪ್ರಹಾರ ನಡೆಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಗಾಂಧಿ ಕುಟುಂಬದ ಬಗ್ಗೆ ನಾಲಿಗೆ ಹರಿ ಬಿಟ್ಟಿದ್ದಾರೆ. ಕುಂದಗೋಳದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಯತ್ನಾಳ್, ಕಾಂಗ್ರೆಸ್ ಪಕ್ಷದಲ್ಲಿ ಮೂರು ಬಿಟ್ಟವರು ಇದ್ದಾರೆ. ಊರ ಬದ್ಮಾಷ್ ಗಳು ಇದ್ದಾರೆ ಎಂದು ಕಿಡಿಕಾರಿದ್ದಾರೆ. …

Read More »

ಕಾಂಗ್ರೆಸ್​​ಗೆ ಧಮ್​ ಇದ್ದರೆ ಜಗದೀಶ್​ ಶೆಟ್ಟರ್​​ರನ್ನು ಸಿಎಂ ಎಂದು ಘೋಷಿಸಲಿ: ಯತ್ನಾಳ್

ಹುಬ್ಬಳ್ಳಿ: ಕಾಂಗ್ರೆಸ್​ನವರಿಗೆ ಧಮ್ ಇದ್ದರೆ ಲಿಂಗಾಯತ ಶೆಟ್ಟರ್‌ ಅವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಲಿ ಎಂದು ಕಾಂಗ್ರೆಸ್​ ಪಕ್ಷಕ್ಕೆ ಬಸನಗೌಡ ಪಾಟೀಲ್​ ಯತ್ನಾಳ್​ ಸವಾಲೆಸೆದಿದ್ದಾರೆ. ನಗರದಲ್ಲಿಂದು ಮಾತನಾಡಿದ ಬಸನಗೌಡ, ಲಿಂಗಾಯುತ ವಿಚಾರ ಮಾತನಾಡುತ್ತ ಶಾಸಕ ಬಸನಗೌಡ ಅವರು ಕಾಂಗ್ರೆಸ್​ ವಿರುದ್ಧ ಹರಿಹಾಯ್ದರು. ಲಿಂಗಾಯತ ಜಪ ಮಾಡುತ್ತಿರುವುದು ಕಾಂಗ್ರೆಸ್, ಅವರಿಗೆ ಈಗ ಲಿಂಗಾಯತರ ಮೇಲೆ ಪ್ರೀತಿ ಬಂದಿದೆ. ಕಾಂಗ್ರೆಸ್​ನವರಿಗೆ ಧಮ್ ಇದ್ದರೆ ಲಿಂಗಾಯತ ಶೆಟ್ಟರ್‌ ಅವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಲಿ ಎಂದು …

Read More »

ಎಲೆಕ್ಷನ್, ಸೆಲೆಕ್ಷನ್, ಕರೆಕ್ಷನ್ ನಮ್ಮ ಸೂತ್ರ.. 110 ಕ್ಷೇತ್ರದಲ್ಲಿ ಪ್ರಜಾಕೀಯ ಸ್ಪರ್ಧೆ – ಉಪೇಂದ್ರ ಮಾಹಿತಿ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರ ರಂಗೇರಿದೆ. ಮೇ 10ರಂದು ಮತದಾನ ನಡೆಯಲಿದ್ದು, ರಾಜ್ಯದ ಮೂರು ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ರಾಜ್ಯ ಚುನಾವಣೆಗೆ ಇನ್ನು 9 ದಿನ ಮಾತ್ರ ಬಾಕಿ ಇದೆ. ಈಗ ಬುದ್ಧಿವಂತ ನಟ ಹಾಗು ನಿರ್ದೇಶಕ ಉಪೇಂದ್ರ ತಮ್ಮ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳ ಜೊತೆ ಬೆಂಗಳೂರಿನ ಪ್ರೆಸ್​ಕ್ಲಬ್​ನಲ್ಲಿ ಮಾಧ್ಯಮಗೋಷ್ಟಿ ನಡೆಸಿದರು. ತಮ್ಮ ಉತ್ತಮ ಪ್ರಜಾಕೀಯ ಪಕ್ಷದ 110 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳನ್ನು ಪರಿಚಯಿಸಿದರು. ಪಕ್ಷವು …

Read More »

ರಾಮರಾಜ್ಯ ಕಟ್ಟಲು ರಾವಣನಿಗೆ ಬಿಜೆಪಿಯ ಟಿಕೆಟ್ ಎಂದು ಕಿಡಿ:ವಿವಾದ ಸೃಷ್ಟಿಸಿದ ಪ್ರಿಯಾಂಕ್ ಖರ್ಗೆ

ಕಲಬುರ್ಗಿ: ವಿಧಾನಸಭಾ ಚುನಾವಣೆಗೆ ಕೇವಲ 9 ದಿನಗಳು ಮಾತ್ರ ಬಾಕಿಯಿದ್ದು, ರಾಜಕೀಯ ಪಕ್ಷಗಳ ಮುಖಂಡರು ಪರಸ್ಪರ ವಾಗ್ದಾಳಿ ನಡೆಸುವ ಬರದಲ್ಲಿ ಮಾತಿನ ಎಲ್ಲೆ ಮೀರುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿ ಕಾರುವ ಬರದಲ್ಲಿ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿವಾದ ಸೃಷ್ಟಿಸಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ಪ್ರಿಯಾಂಕ ಖರ್ಗೆ, ಪ್ರಧಾನಿ ಮೋದಿ ಚುನಾವಣಾ ಪ್ರಚಾರ, ಬಂಜಾರಾ ಸಮುದಾಯದ ಮೀಸಲಾತಿ ವಿಚಾರದ ಬಗ್ಗೆ ಭಾಷಣ ಕುರಿತು ಪ್ರಸ್ತಾಪಿಸುತ್ತಾ ಪ್ರಧಾನಿ ಮೋದಿಯವರನ್ನು ನಾಲಾಯಕ್ ಎಂದು …

Read More »

ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಉಚ್ಛಾಟನೆ

ಬೆಂಗಳೂರು: ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ಪ್ರಮುಖ ರಾಜಕೀಯ ಪಕ್ಷಗಳಿಂದ ಟಿಕೆಟ್ ಕೈತಪ್ಪಿದ ಆಕಾಂಕ್ಷಿಗಳು ಪಕ್ಷದ ವಿರುದ್ಧ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈ ನಡುವೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿಯನ್ನು ಉಚ್ಛಾಟನೆ ಮಾಡಲಾಗಿದೆ. ಶಿರಹಟ್ಟಿ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿ ಅವರನ್ನು ಕಾಂಗ್ರೆಸ್ ನಿಂದ ಉಚ್ಛಾಟನೆ ಮಾಡಿ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಆದೇಶ ಹೊರಡಿಸಿದೆ. ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ರಾಮಕೃಷ್ಣ ವಿರುದ್ಧ ವಿಪಕ್ಷ ನಾಯಕ …

Read More »

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಬಿಜೆಪಿ ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಿದರು. ಪ್ರಣಾಳಿಕೆಯಲ್ಲಿನ ಮಹತ್ವದ ಘೋಷಣೆ: ಸಿರಿಧಾನ್ಯ ಉತ್ಪಾದನೆಗೆ ಆದ್ಯತೆ ಮೀನುಗಾರಿಕೆ ಉತ್ಪಾದನೆಗೆ ಆದ್ಯತೆ 5ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ BPL ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ಹಾಲು ಬಿಪಿಎಲ್ ಕುಟುಂಬಕ್ಕೆ ಉಚಿತ 3 …

Read More »

ವಾಣಿಜ್ಯ ಬಳಕೆಯ ಸಿಲಿಂಡರ್ ದರ 171.50 ರೂ ನಷ್ಟು ಕಡಿತ,ಗೃಹ ಬಳಕೆಯ ಅಡುಗೆ ಅನಿಲದಲ್ಲಿ ಪ್ರಸ್ತುತ ಯಾವುದೇ ಬದಲಾವಣೆಯಾಗಿಲ್ಲ.

ನವದೆಹಲಿ: ಕಮರ್ಷಿಯಲ್ ಸಿಲಿಂಡರ್ ದರ ಕಡಿಮೆ ಮಾಡುವ ಮೂಲಕ ತೈಲ ಮಾರುಕಟ್ಟೆ ಕಂಪನಿ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದೆ. ವಾಣಿಜ್ಯ ಬಳಕೆಯ ಎಲ್ ಪಿ ಜಿ ಸಿಲಿಂಡರ್ ದರ ಕಡಿಮೆಯಾಗಿದ್ದು, ಹೊಸ ದರ ಇಂದಿನಿಂದಲೇ ದೇಶಾದ್ಯಂತ ಜಾರಿಗೆ ಬರಲಿದೆ. ವಾಣಿಜ್ಯ ಬಳಕೆಯ ಸಿಲಿಂಡರ್ ದರ 171.50 ರೂ ನಷ್ಟು ಕಡಿತಗೊಳಿಸಲಾಗಿದೆ. ಇದು 19 ಕೆಜಿಯ ವಾಣಿಜ್ಯ ಬಳಕೆ ಸಿಲಿಂಡರ್ ಗೆ ಮಾತ್ರ ಅನ್ವಯವಾಗಲಿದೆ. 14.2 ಕೆಜಿಯ ಗೃಹ ಬಳಕೆಯ ಅಡುಗೆ ಅನಿಲದಲ್ಲಿ …

Read More »

ಬೆಳಗಾವಿ ಗ್ರಾಮೀಣದಲ್ಲಿ ಏರ್ಪಡಿಸಲಾಗಿದ್ದ ನಟ ಕಿಚ್ಚ ಸುದೀಪ್ ಅವರ ರೋಡ್ ಶೋ ದಿಢೀರ್ ರದ್ದಾಗಿದೆ.

ಬೆಳಗಾವಿ: ಬೆಳಗಾವಿ ಗ್ರಾಮೀಣದಲ್ಲಿ ಏರ್ಪಡಿಸಲಾಗಿದ್ದ ನಟ ಕಿಚ್ಚ ಸುದೀಪ್ ಅವರ ರೋಡ್ ಶೋ ದಿಢೀರ್ ರದ್ದಾಗಿದೆ. ನಟ ಕಿಚ್ಚ ಸುದೀಪ್ ಇಂದು ಬೆಳಗಾವಿಯ 5 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಚುನಾವಣಾ ಪ್ರಚಾರ ನಡೆಸುತ್ತಿದ್ದು, ಬೆಳಗಾವಿ ಗ್ರಾಮೀಣದ ರೋಡ್ ಶೋ ಕೊನೇ ಕ್ಷಣದಲ್ಲಿ ರದ್ದಾಗಿದೆ. ತಾರಿಹಾಳ ಗ್ರಾಮದಲ್ಲಿ ಯುವಕನ ಕೊಲೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ತಾರಿಹಾಳ ಗ್ರಾಮದಲ್ಲಿ ನಿಗದಿಯಾಗಿದ್ದ ಕಿಚ್ಚ ಸುದೀಪ್ ರೋಡ್ ಶೋ ರದ್ದು ಮಾಡಲಾಗಿದೆ. ಬಿಜೆಪಿ …

Read More »

ರಾತ್ರಿ ಪಾನಮತ್ತಳಾಗಿ ಓಲಾಡುತ್ತಯುವಕನ ಇರಿದು ಕೊಲೆಗೈದ ಯುವತಿ

ಬೆಳಗಾವಿ: ರಾತ್ರಿ ಪಾನಮತ್ತಳಾಗಿ ಓಲಾಡುತ್ತ ಚಾಕು ಹಿಡಿದು ರಸ್ತೆಯಲ್ಲಿ ಹೊರಟಿದ್ದ ಯುವತಿಯೊಬ್ಬಳು ಯುವಕನೊಬ್ಬನಿಗೆ ಇರಿದು ಕೊಲೆಗೈದಿದ್ದಾಳೆ. ನಗರದ ಹಳೆ ಪಿಬಿ ರಸ್ತೆಯಲ್ಲಿ ರಾತ್ರಿ 2 ಗಂಟೆಗೆ ಈ ಘಟನೆ ನಡೆದಿದೆ. ನಾಗರಾಜ ಭೀಮಸಿ ಪಾಟೀಲ (28) ಕೊಲೆಯಾದ ಯುವಕ. ಕೈಯ್ಯಲ್ಲಿ ಚಾಕು ಹಿಡಿದುಕೊಂಡು ಮಹಿಳೆ ಕುಡಿದ ಮತ್ತಿನಲ್ಲಿ ಓಲಾಡುತ್ತ ರಸ್ತೆಯಲ್ಲಿ ಸಾಗುತ್ತಿದ್ದಳು. ಈ ವೇಳೆ ಬೈಕ್ ನಲ್ಲಿ ಸಾಗುತ್ತಿದ್ದ ನಾಗರಾಜ ಆಕೆಯನ್ನು ವಿಚಾರಿಸಿದಾಗ ಕೆರಳಿದ ಯುವತಿ ಮಾತಿಗೆ ಮಾತು ಬೆಳೆಸಿ ಯುವಕನಿಗೆ …

Read More »