ಬೆಂಗಳೂರು: 5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆಯನ್ನು ಹೈಕೋರ್ಟ್ ಏಕಸದಸ್ಯಪೀಠ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಮಾರ್ಚ್ 13ರಿಂದ 5 ಹಾಗೂ 8ನೇ ತರಗತಿಗಳಿಗೆ ಪರೀಕ್ಷೆಗಳು ಆರಂಭವಾಗಬೇಕಿತ್ತು. ಆದರೆ ಪಬ್ಲಿಕ್ ಪರೀಕ್ಷೆ ನಡೆಸದಂತೆ ಹೈಕೋರ್ಟ್ ಸರ್ಕಾರಕ್ಕೆ ಆದೇಶ ನೀಡಿದೆ. 5 ಹಾಗೂ 8ನೇ ತರಗತಿಯ ವಾರ್ಷಿಕ ಪರೀಕ್ಷೆ ವಿರೋಧಿಸಿ ಪೋಷಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ ಪರೀಕ್ಷೆಗೆ ತಡೆ ನೀಡಿದೆ. ನಿಯಮಗಳಿಗೆ ಅನುಸಾರವಾಗಿ …
Read More »ಸಂಜಯ್ ಗೂಡಾವತ್ ಗ್ರೂಪ್ ವತಿಯಿಂದ ಉಚಿತ ಅಡಿಗೆ ಎಣ್ಣೆ ಪೂರೈಕೆ
ಸಂಜಯ ಗೂಡಾವಥ ಗ್ರೂಪ್ 2013 ರಿಂದ ಪ್ರಾರಂಭವಾಗಿದ್ದು ತನ್ನ ಗ್ರಾಹಕ ಕೇಂದ್ರ ವ್ಯಾಪಾರ ನೀತಿಗಳ ಮೂಲಕ ಸಂಸ್ಥೆ ಲಕ್ಷಾಂತರ ಜನರಿಗೆ ಪ್ರೀಯವಾಗಿದೆ. ಈ ಸಂಸ್ಥೆಯಿಂದ ಕರ್ನಾಟಕ ದಲ್ಲಿ ಕಿರಾಣಿ ಅಂಗಡಿಗಳ ಸಮಕಾಲೀನ ವ್ಯಾಪಾರಿಗಳು ಹಾಗೂ ಲೇಔಟ್ ಮೂಲಕ ತನ್ನ ಉತ್ಪನ್ನಗಳ ಲಾಭ ಆಗುವಂತೆ ಮಾಡುವ ಜಿಸಿಎಲ್ ತನ್ನ ಗ್ರಾಹಕರ ಮಾರುಕಟ್ಟೆ ವ್ಯಾಪ್ತಿಯನ್ನು ಹೆಚ್ಚಿಸಲು ಉದ್ದೇಶಿಸಿದೆ, ಜಿ ಸಿ ಎಲ್ ನಿರಂತರ ಉತ್ಪನ್ನ ನಾಮಿನೇತೇ ಸ್ಪರ್ಧಾತಕ ಬೆಲೆ ಮತ್ತು ಗುಣಮಟ್ಟವನ್ನು ಸೃಷ್ಟಿಸುವ …
Read More »ಸಾರಿಗೆ ನೌಕರರ ವೇತನ ಶೇ10 ರಷ್ಟು ಹೆಚ್ಚಿಸಲು ಕ್ರಮ: ಸಚಿವ ಬಿ.ಶ್ರೀರಾಮುಲು
ರಾಯಚೂರು: ಆರ್ಥಿಕ ಇಲಾಖೆ ಮತ್ತು ಮುಖ್ಯಮಂತ್ರಿಯೊಂದಿಗೆ ಸಮಾಲೋಚಿಸಿ ಸಾರಿಗೆ ನೌಕರರ ವೇತನವನ್ನು ಶೇ 10 ರಷ್ಟು ಹೆಚ್ಚಿಸಲು ಕ್ರಮ ವಹಿಸಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ನೌಕರರ ಸಂಘದೊಂದಿಗೆ ಮಾತುಕತೆ ನಡೆಸಿದ್ದು, ಶೀಘ್ರದಲ್ಲೆ ಸಿಹಿ ಸುದ್ದಿ ನೀಡಲಾಗುವುದು ಎಂದರು. ಬೆಂಗಳೂರಿನಲ್ಲಿ ಸಜೀವವಾಗಿ ದಹನವಾಗಿರುವ ಬಸ್ ಚಾಲಕನ ಕುಟುಂಬಕ್ಕೆ ತಕ್ಷಣ ₹5 ಲಕ್ಷ ಪರಿಹಾರ ನೀಡಬೇಕು, ವಿಮಾ ಪರಿಹಾರ …
Read More »ಕುಮಟಳ್ಳಿಗೆB,J,P. ಟಿಕೆಟ್ ಸಿಗದಿದ್ದರೆ ನಾನು ಗೋಕಾಕ ನಲ್ಲಿ ಸ್ಪರ್ಧಿಸಲ್ಲ: ರಮೇಶ್ ಜಾರಕಿಹೊಳಿ
ವಿಜಯಪುರ: ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ಸ್ಪರ್ಧಿಸಲು ಮಹೇಶ ಕುಮಟಳ್ಳಿ ಅವರಿಗೆ ಬಿಜೆಪಿ ಟಿಕೆಟ್ ಸಿಗದಿದ್ದರೆ ನಾನು ಗೋಕಾಕ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ನಡೆಯುತ್ತಿರುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳಲು ಶುಕ್ರವಾರ ವಿಜಯಪುರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅಥಣಿ ಕ್ಷೇತ್ರದಿಂದ ಮಹೇಶ ಕುಮಟಳ್ಳಿ ಟಿಕೆಟ್ ನೀಡಲೇಬೇಕು ಎಂದು ಪರೋಕ್ಷವಾಗಿ ಕೇಸರಿ ವರಿಷ್ಠರಿಗೆ ಸಂದೇಶ …
Read More »ಬೆಳಗಾವಿ: ಮೂರು ಹೆಣ್ಣುಮಕ್ಕಳ ಹೆತ್ತಿದ್ದೇ ತಪ್ಪಾಯಿತೇ…
ಬೆಳಗಾವಿ: ‘ಗಂಡ ಸಾಲ ಮಾಡಿ ಓಡಿಹೋದ. ಸಾಲ ಕೊಟ್ಟವರು ದಿನವೂ ಕಾಡತೊಡಗಿದರು. ಎಳೆಯ ಮಕ್ಕಳು ಹಸಿವಿನಿಂದ ಅಳುತ್ತಿದ್ದವು. ಹೆಣ್ಣು ಹೆತ್ತಿದ್ದೇನೆ ಎಂಬ ಕಾರಣಕ್ಕೆ ಅತ್ತೆ-ಮಾವನೂ ದೂರ ಮಾಡಿದ್ದಾರೆ. ತವರಿನಲ್ಲೂ ಕಷ್ಟವಿದೆ. ಬದುಕು ಬೀದಿಗೆ ಬಿತ್ತು. ಈ ಜೀವ ಇಟ್ಟು ಇನ್ನೇನು ಮಾಡುವುದು ಎಂದು ಸಾಯಲು ಹೊರಟೆ. ನಾನು ಹೋದ ಮೇಲೆ ಮಕ್ಕಳು ಹಸಿವಿನಿಂದ ಸಾಯಬಾರದು ಎಂದು ಅವರಿಗೂ ಫಿನೈಲ್ ಕುಡಿಸಿದೆ…’ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿರುವ ಸರಸ್ವತಿ ಅದೃಶ್ಯಪ್ಪ ಹಂಪಣ್ಣವರ (40) ತಮ್ಮ …
Read More »ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ರಚನೆ: ಬೊಮ್ಮಾಯಿ ಅಧ್ಯಕ್ಷ, ಬಿಎಸ್‌ವೈ ಸದಸ್ಯ
ಬೆಂಗಳೂರು: ಬಿಜೆಪಿ ವಿಧಾನಸಭಾ ಚುನಾವಣಾ ಪ್ರಚಾರ ಸಮಿತಿಯನ್ನು ರಚಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಧ್ಯಕ್ಷರನ್ನಾಗಿ ಮತ್ತು ಚುನಾವಣಾ ನಿರ್ವಹಣಾ ಸಮಿತಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರನ್ನು ಸಂಚಾಲಕರನ್ನಾಗಿ ನೇಮಿಸಲಾಗಿದೆ. ಚುನಾವಣಾ ಪ್ರಚಾರ ಸಮಿತಿಯ ಸದಸ್ಯರು: ಬಿ.ಎಸ್.ಯಡಿಯೂರಪ್ಪ, ನಳಿನ್‌ಕುಮಾರ್ ಕಟೀಲ್, ಡಿ.ವಿ.ಸದಾನಂದಗೌಡ, ಜಗದೀಶಶೆಟ್ಟರ್, ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಕೆ.ಎಸ್.ಈಶ್ವರಪ್ಪ, ಗೋವಿಂದ ಕಾರಜೋಳ,ಬಿ.ಶ್ರೀರಾಮುಲು, ಆರ್.ಅಶೋಕ, ಶಶಿಕಲಾ ಜೊಲ್ಲೆ, ಸಿ.ಸಿ.ಪಾಟೀಲ, ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್, ಪ್ರಭು ಚವ್ಹಾಣ, ಡಾ.ಸಿ.ಎನ್.ಅಶ್ವತ್ಥನಾರಾಯಣ, ಸಿ.ಟಿ.ರವಿ, ವಿ.ಶ್ರೀನಿವಾಸಪ್ರಸಾದ್, …
Read More »ಮಾಡಾಳು ಬಂಧನಕ್ಕೆ ರಚಿಸಿದ್ದ 7 ತಂಡ ಸಿಎಂ ಮನೆಯಲ್ಲಿ ಠಿಕಾಣಿ ಹೂಡಿದ್ದವೇ: ಕಿಮ್ಮನೆ
ಶಿವಮೊಗ್ಗ: ಶಾಸಕ ಮಾಡಾಳು ವಿರೂಪಾಕ್ಷಪ್ಪ ಬಂಧನಕ್ಕೆ ನಿಯೋಜಿಸಿದ್ದ ಲೋಕಾಯುಕ್ತ ಪೊಲೀಸರ ಏಳು ತಂಡಗಳು ಸಿಎಂ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಮನೆಯಲ್ಲಿ ಠಿಕಾಣಿ ಹೂಡಿದ್ದವೇ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಪ್ರಶ್ನಿಸಿದರು. ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಶುಕ್ರವಾರ ಇಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಾಮೀನು ಸಿಕ್ಕ ಅರ್ಧ ಗಂಟೆಯಲ್ಲಿ ಮಾಡಾಳು ವಿರೂಪಾಕ್ಷಪ್ಪ ಮೆರವಣಿಗೆಯಲ್ಲಿ ಬರುತ್ತಾರೆ. ಪ್ರಕರಣದಲ್ಲಿ ಎ1 ಆರೋಪಿ ಅವರು. ಆದರೂ ಜಾಮೀನು …
Read More »ಕಿಡ್ನಿ ಆರೋಗ್ಯಕ್ಕೆ ಕಾಳಜಿ ವಹಿಸಿ: ಡಾ.ನಿತಿನ್ ಗಂಗಾನೆ
ಬೆಳಗಾವಿ: ‘ಇಡೀ ದೇಹದ ಅಂಗಾಗಂಗಳಲ್ಲಿ ಕಿಡ್ನಿ ಅತ್ಯಂತ ಹೆಚ್ಚು ಕೆಲಸಗಳನ್ನು ಮಾಡುತ್ತದೆ. ಕಿಡ್ನಿ ಆರೋಗ್ಯವಾಗಿ ಇಟ್ಟುಕೊಳ್ಳಬೇಕು. ಇಲ್ಲದಿದ್ದರೆ ಜೀವನಪೂರ್ತಿ ಅನಾರೋಗ್ಯ ಕಾಡುತ್ತದೆ’ ಎಂದು ಕಾಹೆರ್‌ನ ಕುಲಪತಿ ಡಾ.ನಿತಿನ್ ಗಂಗಾನೆ ಹೇಳಿದರು. ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ನೆಪ್ರೊಲಾಜಿ ವಿಭಾಗವು ಗುರುವಾರ ಏರ್ಪಡಿಸಿದ್ದ ವಿಶ್ವ ಮೂತ್ರಪಿಂಡ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಕಿಡ್ನಿ ಆರೋಗ್ಯದ ಕುರಿತು ಸಾಮಾನ್ಯರಿಗೂ ತಿಳಿಯುವ ರೀತಿಯಲ್ಲಿ ಜಾಗೃತಿ ಮೂಡಿಸಬೇಕು. …
Read More »ಮಿಶ್ರ ಬೇಸಾಯದತ್ತ ಒಲವು ಬೆಳೆಸಿಕೊಂಡ ನೇಸರಗಿ ರೈತ ಈಶಪ್ರಭು ಬಾಬಾಗೌಡ ಪಾಟೀಲ, ‘ಬೆವರು ಹರಿಸಿದರೆ, ಒಕ್ಕಲುತನ ಕೈಹಿಡಿಯುತ್ತದೆ’ ಎಂದ
ನೇಸರಗಿ: ಮಿಶ್ರ ಬೇಸಾಯದತ್ತ ಒಲವು ಬೆಳೆಸಿಕೊಂಡ ನೇಸರಗಿ ಹೋಬಳಿ ವ್ಯಾಪ್ತಿಯ ಚಿಕ್ಕಬಾಗೇವಾಡಿ ಗ್ರಾಮದ ರೈತ ಈಶಪ್ರಭು ಬಾಬಾಗೌಡ ಪಾಟೀಲ, ತಮ್ಮ ಜಮೀನಿನಲ್ಲಿ ವಿವಿಧ ಬೆಳೆ ಬೆಳೆದು ಉತ್ತಮ ಆದಾಯ ಗಳಿಸುತ್ತಿದ್ದಾರೆ. ‘ಬೆವರು ಹರಿಸಿದರೆ, ಒಕ್ಕಲುತನ ಕೈಹಿಡಿಯುತ್ತದೆ’ ಎಂದು ಸಾರುತ್ತಿದ್ದಾರೆ. 14 ಎಕರೆ ಜಮೀನಿನ ಪೈಕಿ 3 ಎಕರೆಯಲ್ಲಿ ಗೋವಿನಜೋಳ, ಕಡಲೆ, 8 ಎಕರೆ ತೋಟದಲ್ಲಿ ಅಲ್ಫಾನ್ಸೋ ಮಾವು ಬೆಳೆದಿದ್ದಾರೆ. 3 ಎಕರೆಯಲ್ಲಿ ಕಾಜು(ಗೇರು), ಪೇರಲ, ನೆಲ್ಲಿಕಾಯಿ, ಅಂಜೂರ, ದಾಳಿಂಬೆ, …
Read More »ಹಿಂಡಲಗಾ: ಸ್ಮಾರ್ಟ್‌ಕ್ಲಾಸ್ ಉದ್ಘಾಟನೆ
ಬೆಳಗಾವಿ: ‘ಜಗತ್ತು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದಂತೆ ಅದಕ್ಕೆ ಪೂರಕವಾಗಿ ನಾವೂ ನಮ್ಮನ್ನು ಹೊಂದಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೂ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಮೂಲಕ ಶಿಕ್ಷಣ ಒದಗಿಸಲು ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ’ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ಹಿಂಡಲಗಾ ಗ್ರಾಮದ ಸರ್ಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆಗೆ ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ಹಣ ಮಂಜೂರು ಮಾಡಿಸಿದ ಅನುದಾನದಲ್ಲಿ ನಿರ್ಮಿಸಲಾದ ನೂತನ ಸ್ಮಾರ್ಟ್ ಕ್ಲಾಸ್ …
Read More »