Breaking News

ಚಿಕ್ಕೋಡಿ: ಮದ್ಯ ಅಂಗಡಿ ಸ್ಥಳಾಂತರಕ್ಕೆ ಒತ್ತಾಯಿಸಿ ಮಹಿಳೆಯರ ಪ್ರತಿಭಟನೆ

ಚಿಕ್ಕೋಡಿ (ಬೆಳಗಾವಿ): ಗ್ರಾಮದ ಪಕ್ಕದಲ್ಲಿ ಮದ್ಯದ ಅಂಗಡಿ ಇರುವುದರಿಂದ ಗ್ರಾಮದ ಮಹಿಳೆಯರಿಗೆ ಮತ್ತು ಶಾಲಾ ಹೆಣ್ಣು ಮಕ್ಕಳಿಗೆ ಮದ್ಯ ಪ್ರಿಯರು ತೊಂದರೆ ಕೊಡುತ್ತಿದ್ದಾರೆ ಇಲ್ಲಿಂದ ಅಂಗಡಿಯನ್ನು ಸ್ಥಳಾಂತರ ಮಾಡುವಂತೆ ಆಗ್ರಹಿಸಿ ಗ್ರಾಮದ ಮಹಿಳೆಯರು ಬೀಗ ಜಡಿದು ಪ್ರತಿಭಟನೆ ನಡೆಸಿದರು.   ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಂದಿಕುರಳಿ ಗ್ರಾಮದಲ್ಲಿ ಶ್ರೀ ಲಕ್ಷ್ಮೀ ವೈನ್ಸ್‌ ಸ್ಥಳಾಂತರ ಮಾಡುವಂತೆ ಗ್ರಾಮದ ಮಹಿಳೆಯರು ಪಟ್ಟು ಹಿಡಿದು ಮದ್ಯ ಮಾರಾಟ ಅಂಗಡಿ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. …

Read More »

ಜುಲೈ 7ಕ್ಕೆ 3.25 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆಗೆ ಸಿದ್ಧತೆ.. ಪಂಚ ಗ್ಯಾರಂಟಿಗಾಗಿ ರಾಜಸ್ವ ಸಂಗ್ರಹದ ಟಾರ್ಗೆಟ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪಂಚ ಗ್ಯಾರಂಟಿ ಯೋಜನೆಗಳ ಕೇಂದ್ರೀಕೃತ ಬಜೆಟ್ ಮಂಡನೆಗೆ ಸಿದ್ಧತೆ ನಡೆಸುತ್ತಿದ್ದಾರೆ. ನಿರ್ಗಮಿತ ಬಿಜೆಪಿ ಸರ್ಕಾರ ಮಂಡಿಸಿದ ಬಜೆಟ್​ ಅನ್ನು ಅಲ್ಪ ಪರಿಷ್ಕೃರಣೆಯೊಂದಿಗೆ ಸಿಎಂ ಸಿದ್ದರಾಮಯ್ಯ ಅಂದಾಜು 3.25 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲು ತಯಾರಿ ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ ಮಂಡನೆಗೆ ಸಕಲ ಸಿದ್ಧತೆ ನಡೆಸುತ್ತಿದ್ದಾರೆ. ಜುಲೈ 7ಕ್ಕೆ ನೂತನ ಕಾಂಗ್ರೆಸ್ ಸರ್ಕಾರದ ಬಜೆಟ್ ಮಂಡನೆಯಾಗಲಿದೆ. ಈಗಾಗಾಲೇ ನಿರ್ಗಮಿತ ಬಿಜೆಪಿ ಸರ್ಕಾರ …

Read More »

ಊರಿಗೆ ತೆರಳಲು ನಿಲ್ಲಿಸದ ಬಸ್​ಗೆ ಕಲ್ಲೆಸೆದ ಮಹಿಳೆ.. 5000 ದಂಡ,

ಕೊಪ್ಪಳ: ತನ್ನ ಊರಿಗೆ ತೆರಳಲು ಯಾವುದೊಂದು ಬಸ್​ ನಿಲ್ಲಿಸದ ಕಾರಣ, ಕೊಪ್ಪಳದಿಂದ – ಹೊಸಪೇಟೆಗೆ ಹೊರಟಿದ್ದ ನಾನ್ ಸ್ಟಾಪ್ ಬಸ್​ಗೆ ಮಹಿಳೆಯೊಬ್ಬರು ಕಲ್ಲೆಸೆದ ಘಟನೆ ಕೊಪ್ಪಳದಲ್ಲಿ ಜರುಗಿದೆ. ಕೊಪ್ಪಳದ ಹೊಸಲಿಂಗಾಪುರ ಬಳಿ ಈ ಘಟನೆ ನಡೆದಿದೆ. ಇಲಕಲ್ಲ ಬಳಿಯ ಪಾಪನಳ್ಳಿ ನಿವಾಸಿ ಲಕ್ಷ್ಮಿ ಎಂಬಾಕೆ ಕೊಪ್ಪಳದ ಹುಲಿಗಿಯ ಹುಲಿಗೆಮ್ಮ ದೇವಿ ದರ್ಶನಕ್ಕೆ ಬಂದಿದ್ದರು. ಹುಲಿಗೆಮ್ಮನ ದರ್ಶನ ಪಡೆದು ಲಿಂಗಾಪುರ ಬಳಿ ಬಸ್​ಗಾಗಿ ಮಳೆಯಲ್ಲಿ ಕಾದು ಕುಳಿತಿದ್ದ ಲಕ್ಷ್ಮಿಗೆ ತನ್ನ ಊರಿಗೆ ತೆರಳಲು …

Read More »

ಜುಲೈ 2 ರಂದು ಜಿಲ್ಲಾ ಮಟ್ಟದ ಪತ್ರಿಕಾ ದಿನಾಚಾರಣೆ: ದೀಲಿಪ ಕುರಂದವಾಡೆ

ಜುಲೈ 2 ರಂದು ಬೆಳಗಾವಿ ನಗರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚಾರಣೆ ಆಚರಿಸಲಾಗುವದು ಎಂದು ಜಿಲ್ಲಾ ಅದ್ಯಕ್ಷ ದೀಲಿಪ ಕುರಂದವಾಡೆ ಹೇಳಿದರು.  ಬೆಳಗಾವಿ ನಗರದಲ್ಲಿ ಜರುಗಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಣಿ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡುತ್ತಾ ಬೆಳಗಾವಿ ನಗರದಲ್ಲಿ ಅಂತರಾಷ್ಟ್ರೀಯ ಮಟ್ಟದ ಪತ್ರಕರ್ತರ ಸಮ್ಮೇಳನ ಮತ್ತು ಜಿಲ್ಲಾ ಮಟ್ಟದ ಪತ್ರಿಕಾ ದಿನಾಚಾರಣೆ ಆಚರಿಸುವ ಕುರಿತು ರೂಪ ರೆಷೆಗಳಂತೆ ಜಿಲ್ಲಾ ಮಟ್ಟದ …

Read More »

ಟೌನ್ ಪ್ಯಾಲೇಸ್ ಎದುರು ಲಾರಿ ಹಾಗೂ ಬೈಕ್ ಮುಖಾಮುಖಿ: ಬೈಕ್ ಸವಾರನ ದುರ್ಮರಣ

ಲಾರಿ ಹಾಗೂ ಬೈಕ್ ಮಧ್ಯೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ದುರ್ಘಟನೆ ವಿಜಯಪುರ ನಗರದ ಟೌನ್ ಪಾಲೇಸ್ ಹೋಟೆಲ್ ಎದುರು ನಡೆದಿದೆ. ಮೃತಪಟ್ಟಿರುವ ಬೈಕ್ ಸವಾರನ ಹೆಸರು ಹಾಗೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ಕಠಿಣ ಶ್ರಮದಿಂದ ಜೀವನದಲ್ಲಿ ಯಶಸ್ಸನ್ನು ಸಾಧಿಸಬಹುದು: ಸಿಪಿಐ ಬಡಿಗೇರ್

ದೃಢಸಂಕಲ್ಪ, ಪರಿಶ್ರಮ ಮತ್ತು ಕಠಿಣ ಶ್ರಮದಿಂದ ಜೀವನದಲ್ಲಿ ಯಶಸ್ಸನ್ನು ಸಾಧಿಸಬಹುದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರಯತ್ನಿಸಿ ಯಶಸ್ವಿಗೊಳಿಸುವಂತೆ ಸಾರಿಗೆ ಇಲಾಖೆಯ ಸಿಪಿಐ ವಿನಾಯಕ ಬಡಿಗೇರ್ ಮನವಿ ಮಾಡಿದರು. ಬೆಳಗಾವಿಯ ಕಾಳಿ ಅಮರಾಯಿಯಲ್ಲಿರುವ ಬೆಳಗಾವಿ ಜಿಲ್ಲಾ ವಿಶ್ವಕರ್ಮ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ಭಾನುವಾರ ಸಂಘದ ವತಿಯಿಂದ ವಿಶ್ವಕರ್ಮ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿತ್ತು. ಈ ವೇಳೆ ಮುಖ್ಯ ಅತಿಥಿಯಾಗಿ ಆಗಮಿಸಿರುವ ಸಿಪಿಐ ಬಡಿಗೇರ್ ಮಾತನಾಡಿ, ಯಶಸ್ಸಿನ ಶಿಖರವೇರಿದರೂ ವಿದ್ಯಾರ್ಥಿಯು …

Read More »

ಕೇಂದ್ರದಿಂದ ಅಕ್ಕಿ ಸಿಗದಿರೋದಕ್ಕೆ ರಾಜ್ಯ ಬಿಜೆಪಿ ನಾಯಕರೇ ಕಾರಣ: ರಾಮಲಿಂಗಾರೆಡ್ಡಿ

ಹುಬ್ಬಳ್ಳಿ: ರಾಜ್ಯಕ್ಕೆ ಕೇಂದ್ರದಿಂದ ಅಕ್ಕಿ ಸಿಗದಿರೋದಕ್ಕೆ ರಾಜ್ಯ ಬಿಜೆಪಿ ನಾಯಕರೇ ಕಾರಣ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ಕಿ ವಿಷಯದಲ್ಲಿ ಕೇಂದ್ರ ಸರ್ಕಾರದವರು ಮಲತಾಯಿ ಧೋರಣೆ ತೋರಿಸುತ್ತಿದ್ದಾರೆ. ನಾವು ಕೇಂದ್ರದಿಂದ ಉಚಿತವಾಗಿ ಅಕ್ಕಿ ಕೇಳುತಿಲ್ಲ. ನಮ್ಮ ರಾಜ್ಯದ ಬಿಜೆಪಿ ಮುಖಂಡರೇ ಹೇಳಿಕೊಟ್ಟ ಕಾರಣಕ್ಕೆ ರಾಜ್ಯಕ್ಕೆ ಅಕ್ಕಿ ಕೊಡುತ್ತಿಲ್ಲ. ಇದಕ್ಕೆ ನೇರವಾಗಿ ರಾಜ್ಯ ಬಿಜೆಪಿ ನಾಯಕರೇ ಕಾರಣ ಎಂದು ಕಿಡಿಕಾರಿದರು. ಕೇಂದ್ರಕ್ಕೆ ನಾವೇನು …

Read More »

4 ಸಾವಿರ ಬಸ್‌ಗಳ ಖರೀದಿ, ಬೆಳಗಾವಿ ಜಿಲ್ಲೆಗೆ ಹೆಚ್ಚು ಹೊಸ ಬಸ್ ಬಿಡುತ್ತೇವೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ: ಈ‌ ಹಿಂದೆಯೂ ಸಚಿವನಾಗಿದ್ದಾಗ ಬೆಳಗಾವಿ ನಗರ ಸಾರಿಗೆ ಆರಂಭಿಸಿದ್ದು ಕೂಡ ನಾನೇ. ಬೆಳಗಾವಿ ದೊಡ್ಡ ಜಿಲ್ಲೆ ಆಗಿರುವ ಹಿನ್ನೆಲೆ ಹೆಚ್ಚು ಹೊಸ ಬಸ್​ಗಳನ್ನು ಬಿಡುವ ಜವಾಬ್ದಾರಿ ನಮ್ಮದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದರು. ಬೆಳಗಾವಿ ನೂತನ ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಇಲ್ಲಿನ ವ್ಯವಸ್ಥೆ ಪರಿಶೀಲಿಸಿ, ಈ ವೇಳೆ ಪ್ರಯಾಣಿಕರನ್ನು ಮಾತನಾಡಿಸಿ ಮಾಹಿತಿ ಪಡೆದರು. ಬಳಿಕ ಮಾಧ್ಯಮದವರ ಜೊತೆ ಸಚಿವರು ಮಾತನಾಡಿ, 2016ರಲ್ಲಿ ಬಸ್ ನಿಲ್ದಾಣ …

Read More »

ಕರಾವಳಿ ಭಾಗದಲ್ಲಿ ಮುಂದಿನ ಐದು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಕರಾವಳಿಯಲ್ಲಿ ಮುಂದಿನ ಐದು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ 26ರಿಂದ ಜೂ 30ರವರೆಗೆ ಭಾರೀ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದಿದೆ. ಮಲೆನಾಡು, ದಕ್ಷಿಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆ ಸುರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. …

Read More »

ಕೇಂದ್ರದಿಂದ ಅಕ್ಕಿ ಸಿಗದಿರೋದಕ್ಕೆ ರಾಜ್ಯ ಬಿಜೆಪಿ ನಾಯಕರೇ ಕಾರಣ: ರಾಮಲಿಂಗಾರೆಡ್ಡಿ

ಹುಬ್ಬಳ್ಳಿ: ರಾಜ್ಯಕ್ಕೆ ಕೇಂದ್ರದಿಂದ ಅಕ್ಕಿ ಸಿಗದಿರೋದಕ್ಕೆ ರಾಜ್ಯ ಬಿಜೆಪಿ ನಾಯಕರೇ ಕಾರಣ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ಕಿ ವಿಷಯದಲ್ಲಿ ಕೇಂದ್ರ ಸರ್ಕಾರದವರು ಮಲತಾಯಿ ಧೋರಣೆ ತೋರಿಸುತ್ತಿದ್ದಾರೆ. ನಾವು ಕೇಂದ್ರದಿಂದ ಉಚಿತವಾಗಿ ಅಕ್ಕಿ ಕೇಳುತಿಲ್ಲ. ನಮ್ಮ ರಾಜ್ಯದ ಬಿಜೆಪಿ ಮುಖಂಡರೇ ಹೇಳಿಕೊಟ್ಟ ಕಾರಣಕ್ಕೆ ರಾಜ್ಯಕ್ಕೆ ಅಕ್ಕಿ ಕೊಡುತ್ತಿಲ್ಲ. ಇದಕ್ಕೆ ನೇರವಾಗಿ ರಾಜ್ಯ ಬಿಜೆಪಿ ನಾಯಕರೇ ಕಾರಣ ಎಂದು ಕಿಡಿಕಾರಿದರು. ಕೇಂದ್ರಕ್ಕೆ ನಾವೇನು …

Read More »