Breaking News

ಕಾನೂನು ಅರಿವಿನಿಂದ ಮಾತ್ರ ಮಹಿಳೆಯರು ಮುಖ್ಯವಾಹಿನಿಗೆ ಬರಲು ಸಾಧ್ಯ : ನ್ಯಾಯವಾದಿ ಪ್ರೀತಿ ಕುಕಡೆ

ಕಾನೂನು ಅರಿವಿನಿಂದ ಮಾತ್ರ ಮಹಿಳೆಯರು ಮುಖ್ಯವಾಹಿನಿಗೆ ಬರಲು ಸಾಧ್ಯ : ನ್ಯಾಯವಾದಿ ಪ್ರೀತಿ ಕುಕಡೆ ಬದಲಾಗುತ್ತಿರುವ ಸಾಮಾಜಿಕ ವ್ಯವಸ್ಥೆಯಲ್ಲಿ ಕಾನೂನಿನ ಅರಿವು ಇಲ್ಲದೆ ವಿವಿಧ ರೀತಿಯ ದೌರ್ಜನ್ಯಕ್ಕೆ ಮಹಿಳೆಯರು ಒಳಗಾಗುತ್ತಿದ್ದಾರೆ.ಆದ್ದರಿಂದ ಮಹಿಳೆಯರಲ್ಲಿ ಕಾನೂನು ಅರಿವು ಮೂಡಿದರೆ ಉತ್ತಮ ಬದುಕು ಕಟ್ಟಿಕೊಳ್ಳಬಹುದು.ಜೊತೆಗೆ ಮುಖ್ಯವಾಹಿನಿಗೆ ಬರಲು ಸಾಧ್ಯವಾಗಬಹುದು ಎಂದು ಸಮಾಜ ಸೇವಕಿ ಹಾಗೂ ನ್ಯಾಯವಾದಿ ಪ್ರೀತಿ ಕುಕಡೆ ಹೇಳಿದರು. ಮೇದಾರ ಓಣಿ ಬೆಳಗಾವಿಯಲ್ಲಿ ಇಂದು ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ …

Read More »

ಲಂಚ ಪ್ರಕರಣ: ಪ್ರಶಾಂತ್‌ ಮಾಡಾಳ್‌ ವಿರುದ್ಧ ಮತ್ತೆರಡು ಎಫ್‌ಐಆರ್‌

ಬೆಂಗಳೂರು: ಖಾಸಗಿ ಕಚೇರಿಯಲ್ಲಿ ₹ 1.62 ಕೋಟಿ ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಜಲಮಂಡಳಿ ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್‌ ಮಾಡಾಳ್‌ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್‌) ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಬುಧವಾರ ಎರಡು ಎಫ್‌ಐಆರ್‌ ದಾಖಲಿಸಿದ್ದಾರೆ.   ಕೆಎಸ್‌ಡಿಎಲ್‌ ಕಚ್ಚಾವಸ್ತು ಖರೀದಿ ಟೆಂಡರ್‌ ಅಂತಿಮಗೊಳಿಸುವ ಸಂಬಂಧ ₹ 40 ಲಕ್ಷ ಲಂಚ ಪಡೆಯುತ್ತಿದ್ದಾಗ ಮಾರ್ಚ್‌ 2ರಂದು ಪ್ರಶಾಂತ್‌ ಮಾಡಾಳ್‌ ಅವರನ್ನು ಬಂಧಿಸಲಾಗಿತ್ತು. ಕೆಎಸ್‌ಡಿಎಲ್‌ ಅಧ್ಯಕ್ಷರೂ …

Read More »

ಕಬಡ್ಡಿ ಸ್ಪರ್ಧೆ ವೇಳೆ ಮೈದಾನದಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದು

ಬೆಂಗಳೂರು: ಪ್ರಥಮ ವರ್ಷದ ಫಾರ್ಮಸಿ ವಿದ್ಯಾರ್ಥಿಯೊಬ್ಬ ಕಾಲೇಜಿನ ಮೈದಾನದಲ್ಲಿ ನಡೆದ ಕಬಡ್ಡಿ ಸ್ಪರ್ಧೆ ವೇಳೆ ಮೈದಾನದಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾನೆ. ಶ್ರೀ ಸತ್ಯಸಾಯಿ ಜಿಲ್ಲೆಯ ಮಡಕಶಿರಾ ಮೂಲದ, ಬಾಲಾಜಿ ಕಾಲೇಜ್ ಆಫ್ ಫಾರ್ಮಸಿಯ ಪ್ರಥಮ ವರ್ಷದ ಫಾರ್ಮಸಿ ವಿದ್ಯಾರ್ಥಿ ತನುಜ್ ಕುಮಾರ್ ನಾಯಕ್ (18) ಮೃತಪಟ್ಟವ. ಇತ್ತೀಚೆಗಷ್ಟೇ ಕಾಲೇಜಿಗೆ ಸೇರಿದ್ದ ಈತ ತನ್ನ ಸ್ನೇಹಿತರೊಂದಿಗೆ ಕಬಡ್ಡಿ ಆಡುತ್ತಿದ್ದ. ಕಬಡ್ಡಿ ಅಂಕಣದಲ್ಲಿ ಎದುರಾಳಿ ತಂಡದವರು ಬಂದಾಗ ಅವರನ್ನು …

Read More »

ವಿಕಲಚೇತನರು ದೃಢ ಸಂಕಲ್ಪ, ಅವಿರತ ದುಡಿಮೆಯಿಂದ ಜೀವನದಲ್ಲಿ ಮುನ್ನಡೆಯಬೇಕು: ಕಿರಣ ಜಾಧವ

ಬೆಳಗಾವಿ: “ಅನೇಕ ವಿಕಲಚೇತನರು ಅಂಗವೈಕಲ್ಯಕ್ಕೆ ಹೆದರದೆ ಪರಿಸ್ಥಿತಿಯನ್ನು ಮೆಟ್ಟಿನಿಂತು ಯಶಸ್ಸಿನ ಉತ್ತುಂಗಕ್ಕೇರಿದ್ದಾರೆ. ಇಂಥವರ ಮಾದರಿಯನ್ನು ಕಣ್ಣೆದುರು ಇಟ್ಟುಕೊಂಡು ಸಾಮಾನ್ಯ ವಿಕಲಚೇತನರು ದೃಢ ಸಂಕಲ್ಪ, ಅವಿರತ ದುಡಿಮೆಯಿಂದ ಜೀವನದಲ್ಲಿ ಮುನ್ನಡೆಯಬೇಕು” ಎಂದು ಬಿಜೆಪಿ ರಾಜ್ಯ ಒಬಿಸಿ ಮೋರ್ಚಾ ಕಾರ್ಯದರ್ಶಿ ಹಾಗೂ ಸಕಲ ಮರಾಠ ಸಮಾಜದ ಸಂಚಾಲಕ ಕಿರಣ ಜಾಧವ ಹೇಳಿದರು. ಶಹಾಪುರದ ಅಳವಾನ ಗಲ್ಲಿಯಲ್ಲಿರುವ ಎಪಿಎಚ್ ಸ್ಪೋರ್ಟ್ಸ್ ಕ್ಲಬ್ ಆಫ್ ದಿ ಅಸೋಸಿಯೇಷನ್ ​​ಆಫ್ ಫಿಸಿಕಲಿ ಹ್ಯಾಂಡಿಕ್ಯಾಪ್ಡ್ ನಲ್ಲಿ ವಿಕಲಚೇತನ ಟೇಬಲ್ ಟೆನ್ನಿಸ್ …

Read More »

ನಾಳೆ ಕಿಡ್ನಿ ತಪಾಸಣಾ ಶಿಬಿರ K.L.E. ಆಸ್ಪತ್ರೆಯಲ್ಲಿ ಏರ್ಪಡಿಸಲಾಗಿದೆ.

ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ವಿಶ್ವ ಕಿಡ್ನಿ ದಿನಾಚರಣೆ ಅಂಗವಾಗಿ ಮೂತ್ರಪಿಂಡ ತಪಾಸಣಾ ಶಿಬಿರವನ್ನು ನಾಳೆ (ಮಾ.9) ಬೆಳಗ್ಗೆ 9 ರಿಂದ ಸಂಜೆ 1 ಗಂಟೆಯವರೆಗೆ ಆಸ್ಪತ್ರೆಯಲ್ಲಿ ಏರ್ಪಡಿಸಲಾಗಿದೆ. ಇದೇ ಸಂದರ್ಭದಲ್ಲಿ ಜಾಗೃತಿ ನಡಿಗೆ ಕಾರ್ಯಕ್ರಮ ಕೂಡ ಆಯೋಜಿಸಲಾಗಿದೆ. ಶಿಬಿರದಲ್ಲಿ ತಪಾಸಣೆಗೊಳಪಡುವ ಕಿಡ್ನಿ ರೋಗಿಗಳ ರಕ್ತ ಪರೀಕ್ಷೆಯಲ್ಲಿ ಶೇ. 20ರಷ್ಟು ರಿಯಾಯತಿಯನ್ನು ನೀಡಲಾಗುವುದು. ಮೂತ್ರಪಿಂಡವನ್ನು ಸಮಗ್ರವಾಗಿ ಪರೀಕ್ಷಿಸಿ ಸೂಕ್ತ ಸಲಹೆಯನ್ನು ತಜ್ಞವೈದ್ಯರು …

Read More »

ಅಂಕೋಲಾ ಹಾಗೂ ಭಟ್ಕಳ ನಿಲ್ದಾಣಗಳಲ್ಲಿ ಎಕ್ಸ್ ಪ್ರೆಸ್ ರೈಲುಗಳ ನಿಲುಗಡೆಗೆ ರೈಲ್ವೆ ಇಲಾಖೆ ಅನುಮತಿ

ಶಿರಸಿ: ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಅವರ ಕೋರಿಕೆಯ ಮೇರೆಗೆ ಅಂಕೋಲಾ ಹಾಗೂ ಭಟ್ಕಳ ನಿಲ್ದಾಣಗಳಲ್ಲಿ ಎಕ್ಸ್ ಪ್ರೆಸ್ ರೈಲುಗಳ ನಿಲುಗಡೆಗೆ ರೈಲ್ವೆ ಇಲಾಖೆ ಅನುಮತಿ ನೀಡಿದೆ. ಅಂಕೋಲಾ ನಿಲ್ದಾಣದಲ್ಲಿ ನಾಳೆ(ಮಾ.9)ಯಿಂದ ಕೊಚುವೆಲಿ- ಮುಂಬೈ ಎಕ್ಸ್ ಪ್ರೆಸ್ ರೈಲು ನಿಲುಗಡೆಯಾಗಲಿದೆ. ಭಟ್ಕಳ ನಿಲ್ದಾಣದಲ್ಲಿ ತಿರುವಂತನಪುರ-ಪನವೇಲ್ ನೇತ್ರಾವತಿ ಎಕ್ಸ್ ಪ್ರೆಸ್ ರೈಲು ನಿಲುಗಡೆಯಾಗಲಿದೆ. ಈ ಮೂಲಕ ಅಂಕೋಲಾ‌ ಹಾಗೂ ಭಟ್ಕಳ ಭಾಗದ ಜನರ ದೀರ್ಘ ಕಾಲದ ಬೇಡಿಕೆಯನ್ನು ರೈಲ್ವೆ ಇಲಾಖೆ ಈಡೇರಿಸಿದಂತಾಗಿದೆ. …

Read More »

ರಾಜ್ಯಾದ್ಯಂತ ಶಾಲಾ- ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ ಕರೆ ಹಿಂಪಡೆದ ಕಾಂಗ್ರೆಸ್

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಸೇರಿದಂತೆ ರಾಜ್ಯಾದ್ಯಂತ ಶಾಲಾ- ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಡದ ಮೇರೆಗೆ ನಾಳೆ ನಡೆಸಬೇಕಿದ್ದ ಸಾಂಕೇತಿಕ ಕರ್ನಾಟಕ ಬಂದ್ ಅನ್ನು ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ‘ಬಿಜೆಪಿ ಸರ್ಕಾರದ ಮಿತಿಮೀರಿದ ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ …

Read More »

BJP 40 ಕ್ಷೇತ್ರಕ್ಕೆ ಕುಸಿದರೂ ಅಚ್ಚರಿಯಿಲ್ಲ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಲೋಕಾಯುಕ್ತ ಸಂಸ್ಥೆಗೆ ನಾವು ಶಕ್ತಿ ತುಂಬಿದ್ದೇವೆ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿ ನಾಯಕರು, ಅಧಿಕಾರಕ್ಕೆ ಬಂದ ತಕ್ಷಣ ಎಸಿಬಿ ಕಿತ್ತುಹಾಕಿ ಲೋಕಾಯುಕ್ತರ ನೇಮಕ ಮಾಡಲಿಲ್ಲ ಯಾಕೆ? ಈ ವಿಚಾರವಾಗಿ ಹೈಕೋರ್ಟ್ ನಿರ್ದೇಶನ ನೀಡಿದ ನಂತರ ಎಸಿಬಿ ಸಂಸ್ಥೆ ರದ್ದುಗೊಳಿಸಿ ಲೋಕಾಯುಕ್ತರ ನೇಮಕ ಮಾಡಿದ್ದಾರೆ. ನ್ಯಾಯಾಲಯದ ನಿರ್ದೇಶನದ ಮೇರೆಗೆ ಕ್ರಮ ಕೈಗೊಂಡು ಈಗ ತಮ್ಮ ಸಾಧನೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ ಎಂದು ಜನರಿಗೆ ಸ್ಪಷ್ಟವಾಗಿ ತಿಳಿದಿದೆ ಎಂದು ಕೆಪಿಸಿಸಿ …

Read More »

ಡಿಸಿ ಕಚೇರಿಯಲ್ಲಿ ಮೂವರು ಹೆಣ್ಣುಮಕ್ಕಳಿಗೆ ಪಿನಾಯಿಲ್ ಕುಡಿಸಿ, ತಾನೂ ಕುಡಿದ ಮಹಿಳೆ

ಬೆಳಗಾವಿ: ಜೀವನ ನಿರ್ವಹಣೆ ಕಷ್ಟವಾದ ಕಾರಣಕ್ಕೆ ಮಹಿಳೆಯೊಬ್ಬರು ಬುಧವಾರ, ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲೇ ಮೂವರು ಹೆಣ್ಣುಮಕ್ಕಳಿಗೆ ಪಿನೈಲ್‌ ಕುಡಿಸಿ ತಾವೂ ಕುಡಿದು ಆತ್ಮಹತ್ಯೆಗೆ ಯತ್ನಿಸಿದರು. ತಕ್ಷಣ ಕಾರ್ಯ‍ಪ್ರವೃತ್ತರಾದ ಸಿಬ್ಬಂದಿ ನಾಲ್ವರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಿದರು.   ನಗರದ ಅನಗೋಳದ ನಿವಾಸಿ ಸರಸ್ವತಿ ಅದೃಶ್ಯಪ್ಪ ಹಂಪಣ್ಣವರ (40) ಆತ್ಮಹತ್ಯೆಗೆ ಯತ್ನಿಸಿದವರು. ಮಕ್ಕಳಾದ ಸೃಷ್ಟಿ (14), ಸಾಕ್ಷಿ (8) ಹಾಗೂ ಸಾನ್ವಿ (3) ಅವರಿಗೂ ಪಿನೈಲ್‌ ಕುಡಿಸಿದ್ದರಿಂದ ನಾಲ್ವರೂ ಅಸ್ವಸ್ಥಗೊಂಡಿದ್ದಾರೆ. ಬೈಲಹೊಂಗಲ ಜನತಾ ಪ್ಲಾಟ್‌ನಲ್ಲಿ …

Read More »

ರಾಜ್ಯಪಾಲರಿಗೆ ಡಾ.ಕೋರೆ ಪತ್ರ

ಬೆಳಗಾವಿ: ‘ಬೆಳಗಾವಿಯಿಂದ ದೆಹಲಿ, ಮುಂಬೈ, ಪುಣೆ ಮುಂತಾದ ಕಡೆಗೆ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ವಿಮಾನ ಸಂಸ್ಥೆಗಳು ಲಾಭದಾಯಕವಾಗಿ ನಡೆಯುತ್ತಿದ್ದರೂ ಹಾರಾಟ ನಿಲ್ಲಿಸಿದ್ದು ಸಮಂಜಸವಲ್ಲ. ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಮೊದಲಿದ್ದ ಎಲ್ಲ ವಿಮಾನಗಳನ್ನೂ ಮರು ಹಾರಾಟ ಆರಂಭಿಸಲು ಕ್ರಮ ವಹಿಸಬೇಕು’ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರು ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರಿಗೆ ಪತ್ರ ಬರೆದಿದ್ದಾರೆ.   ಬೆಳಗಾವಿಯನ್ನು ರಾಜ್ಯದ ಎರಡನೇ ರಾಜಧಾನಿ ಎಂದು ಪರಿಗಣಿಸಲಾಗಿದೆ. ಪ್ರತಿ ವರ್ಷ …

Read More »