ಬೆಳಗಾವಿ: ‘ಚುನಾವಣೆ ಸಮೀಪಿಸಿದ ಸಂದರ್ಭದಲ್ಲೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಲ್ಪಾವಧಿ ಟೆಂಡರ್ ಮತ್ತು ಕಾರ್ಯಾದೇಶ ನೀಡುತ್ತಿದ್ದಾರೆ. ಇದು ಲೂಟಿ ಮಾಡುವ ತಂತ್ರ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು. ‘ಚುನಾವಣೆ ನೀತಿ ಸಂಹಿತೆ ಬರುವುದಕ್ಕೂ ಮುನ್ನ ಹಣ ಸಂಗ್ರಹಿಸಿಡಲು ಬಿಜೆಪಿ ಸರ್ಕಾರ ಈ ಉಪಾಯ ಮಾಡಿದೆ. ಮುಂದೆ ಕಾಂಗ್ರೆಸ್ ಸರ್ಕಾರ ಬರುವುದು ನಿಶ್ಚಿತ. 15 ದಿನಗಳಲ್ಲಿ ಈ ಎಲ್ಲ ಟೆಂಡರ್, ಕಾರ್ಯಾದೇಶಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸುತ್ತೇವೆ. ಅಧಿಕಾರಿ, …
Read More »ಶೇ 39ರಷ್ಟು ದೇಶಗಳಲ್ಲಿ ಮಾತ್ರ ಲೈಂಗಿಕ ಶಿಕ್ಷಣ ಕುರಿತು ರಾಷ್ಟ್ರೀಯ ನೀತಿ- UNESCO
ನವದೆಹಲಿ: ಲೈಂಗಿಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ವಿಶ್ವದಲ್ಲಿ ಶೇ 20ರಷ್ಟು ದೇಶಗಳು ಮಾತ್ರ ಕಾನೂನುಗಳನ್ನು ಹೊಂದಿದ್ದು, ಶೇ 39ರಷ್ಟು ರಾಷ್ಟ್ರಗಳು ಮಾತ್ರ ರಾಷ್ಟ್ರೀಯ ನೀತಿಯನ್ನು ಹೊಂದಿವೆ ಎಂದು ಯುನೆಸ್ಕೊದ ‘ಗ್ಲೋಬಲ್ ಎಜುಕೇಷನ್ ಮಾನಿಟರಿಂಗ್’ನ ವರದಿ ತಿಳಿಸಿದೆ. ಲೈಂಗಿಕ ಶಿಕ್ಷಣವು ಶೇ 68 ದೇಶಗಳಲ್ಲಿ ಪ್ರಾಥಮಿಕ ಶಿಕ್ಷಣದಲ್ಲಿ ಹಾಗೂ ಶೇ 76ರಷ್ಟು ದೇಶಗಳಲ್ಲಿ ಪ್ರೌಢಶಿಕ್ಷಣದಲ್ಲಿ ಕಡ್ಡಾಯವಾಗಿದೆ ಎಂದೂ ವರದಿ ಹೇಳಿದೆ. ಪ್ರತಿ 10 ದೇಶಗಳ ಪೈಕಿ ಆರಕ್ಕೂ ಹೆಚ್ಚು ದೇಶಗಳಲ್ಲಿ ಹೆಣ್ಣು-ಗಂಡಿನ …
Read More »ಶನಿವಾರ ಕಾಂಗ್ರೆಸ್ ಕಾರ್ಯಕರ್ತರ ಪ್ರಚಾರ ಕಚೇರಿ ಉದ್ಘಾಟಿಸಿದ: ಸತೀಶ ಜಾರಕಿಹೊಳಿ
ಬೆಳಗಾವಿ: ‘ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಆದರೆ, ಪಕ್ಷ ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರ ಗೆಲುವಿಗೆ ಎಲ್ಲರೂ ಶ್ರಮಿಸಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ವಡಗಾವಿಯಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕರ್ತರ ಪ್ರಚಾರ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ‘ಈ ಮೊದಲು ದಕ್ಷಿಣ ಕ್ಷೇತ್ರದಲ್ಲಿ ನಮ್ಮ ಪಕ್ಷದ ಸಂಘಟನೆ ಕಡಿಮೆ ಇದೆ ಎಂಬ ಭಾವನೆ ಇತ್ತು. ಆದರೆ, ಈಗ ಇಲ್ಲಿಯೂ ಪಕ್ಷದ …
Read More »ತಂದೆಯಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದ: ನಟಿ ಖುಷ್ಬೂ
ಚೆನ್ನೈ: ನಟಿ ಹಾಗೂ ತಮಿಳುನಾಡು ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಅವರು ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆಯೊಂದನ್ನು ಬಹಿರಂಗ ಮಾಡಿದ್ದಾರೆ. ‘ನಾನು ಎಂಟು ವರ್ಷದವಳಿದ್ದಾಗ ನನ್ನ ತಂದೆ ನನ್ನ ಮೇಲೆ ಲೈಂಗಿಕ ಶೋಷಣೆ ಮಾಡುತ್ತಿದ್ದರು’ ಎಂದು ಹೇಳಿದ್ದಾರೆ. ಪತ್ರಕರ್ತೆ ಬರ್ಕಾ ದತ್ ಅವರ ದಿ ಮೋಜೊ ಸ್ಟೋರಿಯ ‘ವಿ ದಿ ವುಮನ್’ ಸಂದರ್ಶನದಲ್ಲಿ ಖುಷ್ಬೂ ಈ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ಖುಷ್ಬೂ ಇತ್ತೀಚೆಗಷ್ಟೇ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ಅಧಿಕಾರ …
Read More »ಮಾಡಾಳ್ ವಿರುದ್ಧ ಕ್ರಮಕ್ಕೆ ವರದಿ ಸಲ್ಲಿಕೆ: B,S.Y
ಕಲಬುರಗಿ: ‘ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ(ಕೆಎಸ್‌ಡಿಎಲ್) ಅಧ್ಯಕ್ಷರೂ ಆಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ವಿರುದ್ಧ ಕ್ರಮಕ್ಕೆ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಗೆ ವರದಿ ಸಲ್ಲಿಸಲಾಗಿದೆ’ ಎಂದು ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು. ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು, ‘ಕ್ಷಮಿಸಲಾರದಂತಹ ಅಕ್ರಮ ಎಸಗಿ ತಪ್ಪು ಮಾಡಿದ್ದಾರೆ. ಹೀಗಾಗಿ ಅವರ …
Read More »ಲೋಕಾಯುಕ್ತಕ್ಕೆ ಯಾವುದೇ ತಡೆ ಇಲ್ಲ : ಬೊಮ್ಮಾಯಿ
ಬೆಂಗಳೂರು: ‘ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಪ್ರಕರಣದಲ್ಲಿ ಕಾನೂನಿನಲ್ಲಿ ಏನೆಲ್ಲ ಮಾಡಬೇಕೊ ಅದಕ್ಕೆ ಲೋಕಾಯುಕ್ತ ಸ್ವತಂತ್ರವಾಗಿದೆ. ಲೋಕಾಯುಕ್ತ ಎಲ್ಲವನ್ನೂ ಮಾಡಬಹುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಲೋಕಾಯುಕ್ತಕ್ಕೆ ಯಾವುದೇ ತಡೆ ಇಲ್ಲ’ ಎಂದರು. ಮಂಡ್ಯದಲ್ಲಿ ಪ್ರಧಾನಿ ಕಾರ್ಯಕ್ರಮದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಇನ್ನೂ ಯಾವುದೂ ಅಂತಿಮ ಆಗಿಲ್ಲ’ ಎಂದರು. ‘ಮಂಡ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಯೋಜನೆ ಮಾಡಲಾಗಿದೆ. ಪ್ರಧಾನಿ ಕಚೇರಿ ಜೊತೆ …
Read More »ಡಿಕೆಶಿ ತಾಲಿಬಾನ್ ಬೆಂಬಲಿಗರೇ? -ಪ್ರಲ್ಹಾದ ಜೋಶಿ
ಹೊಸಪೇಟೆ (ವಿಜಯನಗರ): ‘ಕುಕ್ಕರ್ ಬಾಂಬ್ ಸ್ಫೋಟವನ್ನು ನಾವೇ ಮಾಡಿದ್ದೇವೆ ಎಂದು ಐಎಸ್‌ಐಎಸ್ ಸಂಘಟನೆಯವರು ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೇ ಈಗ ಐಎಸ್‌ಐಎಸ್‌ಗೆ ಸಪೋರ್ಟ್ ಮಾಡ್ತಿರಾ? ತಾಲಿಬಾನ್‌ಗೆ ಸಪೋರ್ಟ್ ಮಾಡ್ತಿರಾ? ಅಥವಾ ರಾಜ್ಯದ ಕ್ಷಮೆ ಕೇಳ್ತಿರಾ ಎನ್ನುವುದನ್ನು ತಿಳಿಸಬೇಕು’ ಎಂದು ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು. ನಗರದಲ್ಲಿ ಸೋಮವಾರ ಏರ್ಪಡಿಸಿದ್ದ ವಿಜಯನಗರ ಜಿಲ್ಲಾಮಟ್ಟದ ಫಲಾನುಭವಿಗಳ ಸಮ್ಮೇಳನದಲ್ಲಿ ಭಾಗವಹಿಸಿದ ನಂತರ ಪತ್ರಕರ್ತರೊಂದಿಗೆ …
Read More »‘ಕೋಡಿಮಠದ ಶ್ರೀ’ ಭೇಟಿಯಾದ ಸಿದ್ದರಾಮಯ್ಯ : ರಾಜಕೀಯ ಭವಿಷ್ಯ ಕೇಳಿದ್ರಾ ಮಾಜಿ ಸಿಎಂ..?
ಹಾಸನ : ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕೋಡಿಮಠಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಿ ಕೋಡಿಮಠದ ಶ್ರೀಗಳನ್ನು ಭೇಟಿಯಾಗಿದ್ದಾರೆ. ರಾಜಕೀಯ ಭವಿಷ್ಯ ನುಡಿಯುವ ಶಿವಾನಂದ ಶಿವಯೋಗಿ ಶ್ರೀಗಳನ್ನು ಸಿದ್ದರಾಮಯ್ಯ ಭೇಟಿ ಮಾಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸ್ವಾಮೀಜಿ ಬಳಿ ಸಿದ್ದರಾಮಯ್ಯ ಏನಾದರೂ ರಾಜಕೀಯ ಭವಿಷ್ಯ ಕೇಳಿದ್ರಾ..? ಎಂಬ ಪ್ರಶ್ನೆ ಮೂಡಿದೆ.ಸುಮಾರು 1 ಗಂಟೆಗಳ ಕಾಲ ಕೋಡಿಮಠದ ಶ್ರೀ ಗಳ ಜೊತೆ ಸಿದ್ದರಾಮಯ್ಯ ಮಾತುಕತೆ ನಡೆಸಿದರು. ಶ್ರೀಗಳು ಕೂಡ ಸಿದ್ದರಾಮಯ್ಯಗೆ …
Read More »26ರಂದು ದೇವೇಗೌಡ ರೋಡ್ ಶೋ: H,D,K,
ಬೆಂಗಳೂರು: ಜೆಡಿಎಸ್ ಹಮ್ಮಿಕೊಂಡಿರುವ ಪಂಚರತ್ನ ರಥಯಾತ್ರೆಯ ಸಮಾರೋಪ ಮಾರ್ಚ್ 26ರಂದು ನಡೆಯಲಿದ್ದು, ಆ ದಿನ ಕುಂಬಳಗೋಡಿನಿಂದ ಆರಂಭವಾಗುವ ರೋಡ್‌ಶೋದಲ್ಲಿ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರು ಭಾಗವಹಿಸಲಿದ್ದಾರೆ. ನಾಗಮಂಗಲ ಕ್ಷೇತ್ರದ ಶಾಸಕ ಸುರೇಶ್ ಗೌಡ ಅವರು ನಗರದಲ್ಲಿ ಭಾನುವಾರ ನಗರದಲ್ಲಿ ಆಯೋಜಿಸಿದ್ದ ಕ್ಷೇತ್ರದ ನಿವಾಸಿಗಳ ಸಭೆಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಈ ವಿಷಯ ತಿಳಿಸಿದರು. ‘ಮಂಡ್ಯ ಮತ್ತು ಮೈಸೂರು ನಡುವಿನ ಸ್ಥಳವೊಂದರಲ್ಲಿ ಯಾತ್ರೆಯ ಸಮಾರೋಪ ನಡೆಯಲಿದೆ. ಸಮಾರೋಪದ …
Read More »ಚುನಾವಣಾ ಆಯೋಗವು ಅಧಿಕಾರದಲ್ಲಿರುವ ‘ಗುಲಾಮ’; ಉದ್ಧವ್ ಠಾಕ್ರೆ ಟೀಕೆ
ಮುಂಬೈ: ಪಕ್ಷದ ಚಿಹ್ನೆ ಮತ್ತು ಹೆಸರನ್ನು ಕಳೆದುಕೊಂಡು ಕೆರಳಿರುವ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ, ಮತ್ತೊಮ್ಮೆ ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದ್ದಾರೆ. ಚುನಾವಣಾ ಆಯೋಗವನ್ನು ಅಧಿಕಾರದಲ್ಲಿರುವವರ ‘ಗುಲಾಮ’ ಎಂದು ಕರೆದಿದ್ದಾರೆ. “ನೀವು (ಚುನಾವಣಾ ಆಯೋಗ) ನಮ್ಮಿಂದ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಕಿತ್ತುಕೊಂಡಿದ್ದೀರಿ, ಆದರೆ ನೀವು ನನ್ನಿಂದ ಶಿವಸೇನೆಯನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ” ಎಂದು ರತ್ನಗಿರಿ ಜಿಲ್ಲೆಯ ಖೇಡ್‌ನಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಉದ್ಧವ್ ಹೇಳಿದರು. ಭಾರತೀಯ ಜನತಾ ಪಕ್ಷವು …
Read More »