ಬೈಲಹೊಂಗಲ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದ ವೃತ್ತದಲ್ಲಿ ಪ್ರತಿಷ್ಠಾಪಿಸಿದ ಅಶ್ವಾರೂಢ ಕಂಚಿನ ಪ್ರತಿಮೆ ಅನಾವರಣ ಸಂಬಂಧವಾಗಿ ಮಂಗಳವಾರ ರಾತ್ರಿ ಗ್ರಾಮದಲ್ಲಿ ತೀವ್ರ ವಾಗ್ವಾದ ನಡೆಯಿತು. ಬೆಳವಡಿ ಮಲ್ಲಮ್ಮನ ಉತ್ಸವ ಮೆರವಣಿಗೆ ಬೆಳಿಗ್ಗೆಯೇ ನಡೆಯಿತು. ಇದಕ್ಕೂ ಮುನ್ನ ಪ್ರತಿಮೆ ಅನಾವರಣ ಕಾರ್ಯಕ್ರಮ ಇತ್ತು. ಆದರೆ, ಜಿಲ್ಲಾ ಉಸ್ತುವಾರಿ ಸಚಿವರೂ ಸೇರಿದಂತೆ ಯಾವೊಬ್ಬ ಜನಪ್ರತಿನಿಧಿ, ಅಧಿಕಾರಿಯೂ ಬರಲಿಲ್ಲ. ಇದರಿಂದ ಅನಾವರಣ ಕಾರ್ಯಕ್ರಮವನ್ನು ಮುಂದಕ್ಕೆ ಹಾಕುತ್ತ ಬರಲಾಯಿತು. ರಾತ್ರಿ 8ರ ನಂತರ ಸಂಸದೆ …
Read More »ಬೆಳಗಾವಿ: ಮಾರ್ಚ್ 1ರಂದು ಸಿದ್ದರಾಮಯ್ಯ ‘ಪ್ರಜಾಧ್ವನಿ’ ಯಾತ್ರೆ
ಬೆಳಗಾವಿ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ‘ಪ್ರಜಾಧ್ವನಿ’ ಯಾತ್ರೆಯ ಅಂಗವಾಗಿ ಮಾರ್ಚ್ 1ರಂದು ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಪಂತಬಾಳೆಕುದ್ರಿಯಲ್ಲಿ ಸಮಾವೇಶ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಶಿಂಧೋಳಿಯಿಂದ ಮೆರವಣಿಗೆ ನಡೆಯಲಿದೆ. 5 ಸಾವಿರ ಬೈಕುಗಳ ಸಮೇತ ಯುವಜನರು ಮೆರವಣಿಗೆಯಲ್ಲಿ ಪಾಲ್ಗೊಳ್ಳುವರು. ಅಲ್ಲಿಂದ ಪಂತಬಾಳೆಕುಂದ್ರಿಯ ವೈರ್‌ಲೆಸ್ ಮೈದಾನಕ್ಕೆ ತೆರಳಿ ಅಲ್ಲಿ ಸಮಾವೇಶ ನಡೆಸಲಾಗುವುದು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, …
Read More »ಕೊಡಲಿಯಿಂದ ಹೊಡೆದು ಮಗನ ಕೊಲೆ ಮಾಡಿದ ತಂದೆ
ಕಾಗವಾಡ: ತಾಲ್ಲೂಕಿನ ಉಗಾರ ಬಿ.ಕೆ. ಗ್ರಾಮದಲ್ಲಿ ಮಂಗಳವಾರ ತಂದೆ ಮಗನನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಭರತೇಶ ಉರೂಫ್ ಚೇತನ್ ಖಾಂಜೆ (30) ಕೊಲೆಯಾದ ಯುವಕ. ಜಿನ್ನಪ್ಪ ಪಾಯಪ್ಪ ಖಾಂಜೆ (64) ಕೊಲೆ ಆರೋಪಿ. ‘ಭರತೇಶ ಯಾವುದೇ ಕೆಲಸ ಮಾಡುತ್ತಿರಲಿಲ್ಲ. ತಂದೆ- ತಾಯಿಯನ್ನು ಕಾಳಜಿಯಿಂದ ನೋಡಿಕೊಳ್ಳುತ್ತಿರಲಿಲ್ಲ. ಕುಡಿತದ ಚಟ ಬೆಳೆಸಿಕೊಂಡಿದ್ದ. ಮದ್ಯಕ್ಕಾಗಿ ಹಣ ಕೊಡುವಂತೆ ಪದೇ ಪದೇ ಹೆತ್ತವರೊಂದಿಗೆ ಜಗಳವಾಡುತ್ತಿದ್ದ. ಮಂಗಳವಾರ ಕೂಡ ಇದೇ ಕಾರಣಕ್ಕೆ ಜಗಳ ನಡೆದಿದ್ದು, ಆವೇಶದಲ್ಲಿ ಕೊಲೆಯಾಗಿದೆ’ …
Read More »10 ಲಕ್ಷ ನೌಕರರನ್ನು ಸರಕಾರ ಜೈಲಿಗೆ ಹಾಕುವುದಾದರೆ ಹಾಕಲಿ ಎಂದು ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಸ
ಬೆಂಗಳೂರು – 7ನೇ ವೇತನ ಆಯೋಗದ ವರದಿ ಜಾರಿ ಮತ್ತು ಹಳೆ ಪಿಂಚಣಿ ಯೋಜನೆ ಜಾರಿ ಬೇಡಿಕೆಗಳನ್ನು ಮುಂದಿಟ್ಟು ಸರಕಾರಿ ನೌಕರರು ಬುಧವಾರದಿಂದ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಕೆಲಸಕ್ಕೆ ಗೈರಾಗುವ ಮೂಲಕ ಪ್ರತಿಭಟನೆ ನಡೆಸಲು ನೌಕರರ ಸಂಘ ನಿರ್ಧರಿಸಿದೆ. ತುರ್ತು ಸೇವೆ ಹೊರತುಪಡಿಸಿ ಯಾವುದೇ ನೌಕರರು ಕೆಲಸಕ್ಕೆ ಹಾಜರಾಗಬಾರದೆಂದು ತಿಳಿಸಿದೆ. ಇದರ ಬೆನ್ನಲ್ಲೆ ಮಂಗಳವಾರ ಸರಕಾರಿ ಕಠಿಣ ಎಚ್ಚರಿಕೆ ನೀಡುವ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರಕಾರದ ವಿಶೇಷಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರಿ ಆದಿತ್ಯ …
Read More »ಚೆನ್ನೈ ಆಸ್ಪತ್ರೆಗೆ ದಾಖಲಾದ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ
ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಕಿಡ್ನಿ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ದಾಮೋದರ ದಾಸ್ ಮೋದಿ ಮತ್ತು ಹೀರಾಬೆನ್ ಗೆ ಜನಿಸಿದ ಐದು ಮಕ್ಕಳಲ್ಲಿ ಪ್ರಹ್ಲಾದ್ ಮೋದಿ ನಾಲ್ಕನೆಯವರು. ಅವರು ಗುಜರಾತ್ ನ ಅಹಮದಾಬಾದ್ ನಲ್ಲಿ ಕಿರಾಣಿ ಅಂಗಡಿ ಮತ್ತು ಟೈರ್ ಶೋರೂಮ್ ಹೊಂದಿದ್ದಾರೆ. ಕಳೆದ ವರ್ಷ ಡಿಸೆಂಬರ್ 27 ರಂದು …
Read More »ಶಿರಸಿ: ಡೀಲ್ ನಿಮ್ದು, ಕಮಿಷನ್ ನಮ್ದು- ಆಹಾರದ ಕಿಟ್ ಸ್ಕ್ಯಾಮ್ ಆರೋಪದ ಪೋಸ್ಟರ್ ವೈರಲ್
ಶಿರಸಿ: ಮಂಗಳವಾರ ಫೆ.28 ರಂದು ತಾಲೂಕಿನ ಬನವಾಸಿಗೆ ಕದಂಬೋತ್ಸವ ಉದ್ಘಾಟನೆಗೆ ಆಗಮಿಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸ್ಥಳೀಯ ಶಾಸಕ, ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಅಣಕಿಸುವ ಪೇ ಸಿ.ಎಂ. ಪೋಸ್ಟರ್ ಸೋಮವಾರ ರಾತ್ರಿ ಅಂಟಿಸಲಾಗಿದ್ದು, ಸಖತ್ ವೈರಲ್ ಆಗಿದೆ. ರಾಜ್ಯದ ಹಲವೆಡೆ ನಡೆಯುತ್ತಿದ್ದ ಪೇ ಸಿಎಂ ಪೋಸ್ಟರ್ ಅಭಿಯಾನ ಈಗ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಕ್ಷೇತ್ರಕ್ಕೂ ಕಾಲಿಟ್ಟಿದ್ದು, ಪೇ ಸಿಎಂ ಎಂದು ಹೆಬ್ಬಾರ ಅವರ ಪೊಟೋ ಹಾಕಲಾಗಿದೆ. …
Read More »ಆ ಬ್ರ್ಯಾಂಡ್ ನ ಬಿಯರ್ ಎಲ್ಲಾ ಕಡೆ ಸಿಗುವಂತೆ ಮಾಡಿ: ಜಿಲ್ಲಾಧಿಕಾರಿಗೆ ಪತ್ರ ಬರೆದ ವ್ಯಕ್ತಿ
ಹೈದರಾಬಾದ್: ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಲು ಸರ್ಕಾರದ ಪ್ರತಿನಿಧಿಗಳು ನಾನಾ ಬಗೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾರೆ. ಶಾಸಕರು, ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಸೇರಿದಂತೆ ಸರ್ಕಾರ ಸಾರ್ವಜನಿಕರ ಸಮಸ್ಯೆಗಳನ್ನು ಕೇಳಲು ಗ್ರಾಮ ವಾಸ್ತವ್ಯದಂಥ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತದೆ. ಇಲ್ಲೊಬ್ಬ ಜಿಲ್ಲಾಧಿಕಾರಿಕರಿಗೆ ಬರೆದಿರುವ ಪತ್ರ ಸುದ್ದಿಯಾಗಿದೆ. ತೆಲಂಗಾಣದ ಜಗ್ತಿಯಾಲ್ ಜಿಲ್ಲೆಯ ಬಿ.ರಾಜೇಶ್ ಎಂಬಾತ ಜಿಲ್ಲಾಧಿಕಾರಿಗೆ ಪತ್ರ ಬರೆದು, ತಾನು ಕುಡಿಯುವ ಮದ್ಯದ ಬ್ರ್ಯಾಂಡ್ ನಮ್ಮ ಊರಿನಲ್ಲಿ ಸಿಗುತ್ತಿಲ್ಲ. ಅದನ್ನು ಎಲ್ಲಾ ಕಡೆ ಅದು ಸಿಗುವಂತೆ ಮಾಡಿ ಎಂದು ಬರೆದು …
Read More »ಐತಿಹಾಸಿಕ ವಿಶೇಷ ಕಾರಿಡಾರ್ ನಿರ್ಮಾಣಕ್ಕೆ ಅನುದಾನ: ಬನವಾಸಿಯಲ್ಲಿ ಸಿಎಂ ಬೊಮ್ಮಾಯಿ
ಕಾರವಾರ(ಬನವಾಸಿ): ಕನ್ನಡ ರಾಜ್ಯವನ್ನು ಆಳಿದ ರಾಜ್ಯ ಮನೆತನಗಳಾದ ಕದಂಬರು, ಚಾಲುಕ್ಯರು, ರಾಷ್ಟ್ರಕೂಟರ ಗತವೈಭವನ್ನು ಸಾರುವ ಕಾರ್ಯಕ್ರಮಗಳಿಗೆ ಬಜೆಟ್ ನಲ್ಲಿ ವಿಶೇಷ ಅನುದಾನ ನೀಡಲಾಗಿದ್ದು, ಐತಿಹಾಸಿಕ ವಿಶೇಷ ಕಾರಿಡಾರ್ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು. ಪಂಪನ ಆಶಯದಂತೆ ಈ ಭಾಗದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿರಸಿ ತಾಲೂಕಿನ ಬನವಾಸಿಯಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಬನವಾಸಿ ಅಭಿವೃದ್ಧಿ ಪ್ರಾಧಿಕಾರ ಸಂಯುಕ್ತ ಆಶ್ರಯದಲ್ಲಿ …
Read More »ಸರ್ಕಾರಿ ನೌಕರರಿಗೆ ಬಿಜೆಪಿ ನೀಡಿದಷ್ಟು ಸೌಲಭ್ಯವನ್ನು ಬೇರೆ ಯಾರೂ ನೀಡಿಲ್ಲ: ಈಶ್ವರಪ್ಪ
ಮೈಸೂರು: ಯಡಿಯೂರಪ್ಪ- ಬಸವರಾಜ ಬೊಮ್ಮಾಯಿ ಅಣ್ಣ ತಮ್ಮನಂತೆ ಇದ್ದಾರೆ. ಷಡಕ್ಷರಿಯನ್ನು ಯಡಿಯೂರಪ್ಪ ಎತ್ತಿಕಟ್ಟಿದ್ದಾರೆ ಎಂದು ಹೇಳುವುದು ಕುತಂತ್ರ ಎಂದು ಕಾಂಗ್ರೆಸ್ ಟ್ವೀಟ್ ಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದರು. ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಡುವೆ ಕಿತ್ತಾಟವಿದೆ. ಅದೇ ರೀತಿ ಬಿಜೆಪಿಯವರೂ ಕಿತ್ತಾಡಲಿ ಎಂದು ಈ ರೀತಿ ಹೇಳುತ್ತಿದ್ದಾರೆ. ಸರ್ಕಾರಿ ನೌಕರರಿಗೆ ಬಿಜೆಪಿಯವರು ನೀಡಿದಷ್ಟು ಸೌಲಭ್ಯವನ್ನು ಬೇರೆ ಯಾರೂ ನೀಡಲಿಲ್ಲ. ಹೀಗಿದ್ದರೂ ಮುಷ್ಕರ ಮಾಡುತ್ತೇವೆ ಎಂದರೆ …
Read More »ಬನವಾಸಿಗೆ ಆಗಮಿಸಿದ ಸಿಎಂ ಬೊಮ್ಮಾಯಿ: ಸಿದ್ದರಾಮಯ್ಯ ಪರ ಘೋಷಣೆ ಕೂಗಿದ ಕಾಂಗ್ರೆಸ್ ಪ್ರಮುಖರು
ಶಿರಸಿ: ಕನ್ನಡ ಪ್ರಥಮ ರಾಜಧಾನಿ ಬನವಾಸಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಎದುರು ಸ್ಥಳೀಯ ಕಾಂಗ್ರೆಸ್ ಪ್ರಮುಖರು ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಅವರ ಪರ ಘೋಷಣೆ ಕೂಗಿದ ಘಟನೆ ಮಂಗಳವಾರ ನಡೆದಿದೆ. ಜನರ ಉತ್ಸವವನ್ನಾಗಿ ಕದಂಬೋತ್ಸವವನ್ನು ಆಚರಿಸಬೇಕಿತ್ತು. ಇದು ಬಿಜೆಪಿ ಉತ್ಸವದಂತೆ ನಡೆಸಲಾಗುತ್ತಿದೆ. ಬಿಜೆಪಿ ಚಿಹ್ನೆಯ ಟಿಶರ್ಟ್ ಹಂಚಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ತಾವು ಕಾಂಗ್ರೆಸ್ ಶಾಲು ಹಾಕಿ ಬಂದಿದ್ದು ಕೆಲ ಕಾಲ ಗೊಂದಲ ಉಂಟಾಗಿತ್ತು. ಸಿಎಂ ತೆರಳುವ ಮಾರ್ಗದಲ್ಲಿ …
Read More »