Breaking News

ಖಾನಾಪುರ: ಕ್ರೀಡಾ ವಿಜೇತರಿಗೆ ನಗದು ಬಹುಮಾನ

ಖಾನಾಪುರ: ಪಟ್ಟಣದಲ್ಲಿ ಆಯೋಜಿಸಿದ್ದ ಲಿಂಗನಮಠ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ನಲ್ಲಿ ವಿಜೇತ ತಂಡಗಳಿಗೆ ಬಿಜೆಪಿ ನಾಯಕಿ ಡಾ.ಸೋನಾಲಿ ಸರ್ನೋಬತ್‌ ಭಾನುವಾರ ನಗದು ಬಹುಮಾನ ವಿತರಿಸಿದರು. ಚಾಂಪಿಯನ್‌ ತಂಡಕ್ಕೆ ₹50 ಸಾವಿರ, ದ್ವಿತೀಯ ಸ್ನಾನ ಪಡೆದ ತಂಡಕ್ಕೆ ₹ 25 ಸಾವಿರ, ತೃತೀಯ ಸ್ಥಾನದ ಆಟಗಾರರಿಗೆ ₹ 10 ಸಾವಿರದ ಚೆಕ್‌ಗಳನ್ನು ಅವರು ನೀಡಿದರು.   ನಂತರ ಮಾತನಾಡಿ, ‘ಮುಂದಿನ ವರ್ಷದಿಂದ ಈ ನಗದು ಬಹುಮಾನ ಮೊತ್ತವನ್ನು ₹ 5 ಲಕ್ಷಕ್ಕೆ ಏರಿಸಲಾಗುವುದು. …

Read More »

ವಿದ್ಯಾರ್ಥಿಗಳಿಗೆ ವಿಎಸ್‍ಎಂ ಫೌಂಡೇಷನ್ ನೆರವು

ನಿಪ್ಪಾಣಿ: ಸ್ಥಳೀಯ ವಿದ್ಯಾ ಸಂವರ್ಧಕ ಮಂಡಳದ ಕಾರ್ಯಾಧ್ಯಕ್ಷ ಚಂದ್ರಕಾಂತ ಕೋಠಿವಾಲೆ ಅವರು ತಮ್ಮ ಸಂಸ್ಥೆಗಳಲ್ಲಿ ಓದುತ್ತಿರುವ, ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ಬಡ ವಿದ್ಯಾರ್ಥಿಗಳ ಮನೆಗಳಿಗೆ ಶನಿವಾರ ತೆರಳಿ ಆರೋಗ್ಯ ವಿಚಾರಿಸಿ, ವಿಎಸ್‍ಎಂ ಫೌಂಡೇಷನ್‍ನಿಂದ ₹21 ಸಾವಿರ ಧನಸಹಾಯ ಮಾಡಿದರು.   5ನೇ ತರಗತಿಯ ಅಭಿಷೇಕ ವಿಕ್ರಮ ಕದಮ, 6ನೇ ತರಗತಿ ಆರ್ಯನ್ ಕುಂದನ್ ಖೋತ ಶಸ್ತ್ರಚಿಕಿತ್ಸೆಗೆ ಒಳಗಾದವರು.

Read More »

ಚಿಕ್ಕೋಡಿ: ಆಲಿಸಿದ ಪಾಠ ಅರಿತು ಬಾಳಿರಿ

ಚಿಕ್ಕೋಡಿ: ‘ಸುಮಂಗಲಮ್ ಪಂಚಮಹಾಭೂತ ಲೋಕೋತ್ಸವ ಕೇವಲ ಉತ್ಸವವಾಗದೇ, ಇಲ್ಲಿ ಆಲಿಸಿದ, ವೀಕ್ಷಿಸಿದ ಎಲ್ಲ ಪಾಠವನ್ನು ಜೀವನದಲ್ಲಿ ಅಳವಡಿಸಿಕೊಂಡು ಪರಿಸರ ಸಮತೋಲನ ಕಾಪಾಡುವ ಮೂಲಕ ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರ ಉಳಿಸಬೇಕು’ ಎಂದು ಕೊಲ್ಹಾಪುರದ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಹೇಳಿದರು.   ಮಠದಲ್ಲಿ ಭಾನುವಾರ ಉತ್ಸವದ ಸಮಾರೋಪದ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ‘ಮನುಷ್ಯನಿಗಿಂತ ಮರೆಗುಳಿತನ ಹೊಂದಿರುವ ಜೀವಿ ಇನ್ನೊಂದಿಲ್ಲ. ವಿನಾಶ ಕಾಲ ಸಮೀಪಿಸುತ್ತಿದೆ ಎಂಬುದು ಮನುಕುಲ …

Read More »

ನಿಪ್ಪಾಣಿ: ‘ನಿರ್ಲಕ್ಷಿತ ಗ್ರಾಮದಲ್ಲಿ ಅಭಿವೃದ್ಧಿ’

ನಿಪ್ಪಾಣಿ: ‘ರಾಜ್ಯದ ಕಟ್ಟಕಡೆಯ ಗಾಯಕವಾಡಿ ಗ್ರಾಮ ನಿರ್ಲಕ್ಷ್ಯಕ್ಕೆ ಒಳಗಾಗಿತ್ತು. ನನ್ನ ಆಡಳಿತಾವಧಿಯಲ್ಲಿ ಗ್ರಾಮದಲ್ಲಿ ಈವರೆಗೆ ₹8.4 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ’ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.   ತಾಲ್ಲೂಕಿನ ಗಾಯಕವಾಡಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಅನುಮೋದನೆಗೊಂಡ ₹ 85 ಲಕ್ಷ ಅನುದಾನದ ಗಾಯಕವಾಡಿ-ಕೋಡಣಿ ಗ್ರಾಮಗಳ ನಡುವಿನ ಹಳ್ಳದ ಬ್ರಿಜ್ ಕಂ ಬ್ಯಾರೇಜ್ ಮತ್ತು ಲೋಕೋಪಯೋಗಿ ಇಲಾಖೆಯಿಂದ ವಿವೇಕ ಶಾಲಾ ಯೋಜನೆಯಡಿ ಅನುಮೋದನೆಗೊಂಡ ₹15 …

Read More »

ಬೆಳಗಾವಿಗರ ಪ್ರೀತಿ ಬಡ್ಡಿ ಸಮೇತ ವಾಪಸ್‌ : ಪ್ರಧಾನಿ ನರೇಂದ್ರ ಮೋದಿ

ಬೆಳಗಾವಿ: ‘ಬೆಳಗಾವಿ ಜನ ತೋರಿದ ಪ್ರೀತಿ, ಮಾಡಿದ ಆಶೀರ್ವಾದ ನನಗೆ ಸ್ಫೂರ್ತಿ ನೀಡಿದೆ. ಬೆಳಗಾವಿ ಕುಂದಾ, ಬೆಳಗಾವಿ ಮಂದಿ ಎರಡೂ ಬಹಳ ಸಿಹಿ. ನಿಮ್ಮ ಈ ಪ್ರೀತಿಯನ್ನು ಬಡ್ಡಿ ಸಮೇತ ವಾಪಸ್‌ ಕೊಡುತ್ತೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾನ ಮಾಡಿದರು.   ನಗರದಲ್ಲಿ ಸೋಮವಾರ ₹2,240 ಕೋಟಿ ವೆಚ್ಚದ ರೈಲ್ವೆ ಕಾಮಗಾರಿ, ಜಲಜೀವನ್ ಮಿಷನ್ ಯೋಜನೆಗಳ ಉದ್ಘಾಟನೆ- ಶಂಕುಸ್ಥಾಪನೆ ನೆರವೇರಿಸಿ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ₹16 ಸಾವಿರ ಕೋಟಿಯನ್ನು …

Read More »

2023 | ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ಸಜ್ಜು

ಬೆಂಗಳೂರು: ರಾಜ್ಯದಲ್ಲಿ ಪಕ್ಷದ ಪರ ಅಲೆ ಎಬ್ಬಿಸಲು ಬಿಜೆಪಿಯು ಮಾರ್ಚ್‌ 1 ರಿಂದ ‘ವಿಜಯ ಸಂಕಲ್ಪ ಯಾತ್ರೆ’ ಆರಂಭಿಸಲಿದೆ. ಮಾ.1 ರಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಾ. 2 ರಂದು ಬೆಳಗಾವಿ ಜಿಲ್ಲೆಯ ನಂದಗಢದಲ್ಲಿರುವ ಸಂಗೊಳ್ಳಿ ರಾಯಣ್ಣ ಸ್ಮಾರಕದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಮಾ.3 ರಂದು ಬೀದರ್‌ ಜಿಲ್ಲೆ ಬಸವಕಲ್ಯಾಣ ಅನುಭಮಂಪಟದ ಸ್ಥಳದಿಂದ ಕೇಂದ್ರ ಗೃಹ ಸಚಿವ ಅಮಿತ್‌ …

Read More »

ಚಾಮುಂಡೇಶ್ವರಿ ಆಶೀರ್ವಾದ ಇದೆ, ಮತ್ತೆ ನಾನೇ ಮುಖ್ಯಮಂತ್ರಿ: H.D.K.

ಚನ್ನಪಟ್ಟಣ: ನಾಡಿನ ಅಧಿದೇವತೆ ಚಾಮುಂಡೇಶ್ವರಿ ಆಶೀರ್ವಾದವಿದ್ದು, ಈ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರರಷ್ಟು ಖಚಿತ. ನಾನೇ ಮುಖ್ಯಮಂತ್ರಿ ಆಗಲಿದ್ದೇನೆ ಎಂದು ಎಚ್‌.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.   ಬೊಂಬೆನಗರಿ ಚನ್ನಪಟ್ಟಣದಲ್ಲಿ ನಡೆದ ಬಮೂಲ್‌ ಉತ್ಸವದಲ್ಲಿ ಬೃಹತ್‌ ವೇದಿಕೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ತರುವ ಉದ್ದೇಶದಿಂದ ಈಗಾಗಲೇ ರಾಜ್ಯಾದ್ಯಂತ 73ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ 15ರಿಂದ 18 ಗಂಟೆಗಳ ಕಾಲ ನಿರಂತರ ಪಂಚರತ್ನ ಯಾತ್ರೆ …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರ ಈಗ ಇಡೀ ರಾಜ್ಯದ ಗಮನ ಸೆಳೆದಿದೆ.

ಬೆಳಗಾವಿ: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ತಮ್ಮ ರಾಜಕೀಯ ವೈರಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ನೇರವಾಗಿ ಅಖಾಡಕ್ಕೆ ಇಳಿದಿರುವ ಪರಿಣಾಮ ಬೆಳಗಾವಿ ಗ್ರಾಮೀಣ ಕ್ಷೇತ್ರ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ರಮೇಶ್‌ ಈ ಕ್ಷೇತ್ರದ ಅಭ್ಯರ್ಥಿಯಲ್ಲ. ಆದರೆ ಹೆಬ್ಟಾಳ್ಕರ್‌ಅವರನ್ನು ಸೋಲಿಸಲೇಬೇಕು ಎಂದು ಪಣ ತೊಟ್ಟಿರುವ ಕಾರಣ ಚುಣಾವಣ ಕಣ ರಣರಂಗವಾಗಿ ಬದಲಾಗಿದೆ. ಆರೋಪ-ಪ್ರತ್ಯಾರೋಪ ಪರಾಕಾಷ್ಠೆ ಮುಟ್ಟಿದೆ. ಕ್ಷೇತ್ರ ಪುನರ್‌ ವಿಂಗಡಣೆಯಿಂದ 2008ರಲ್ಲಿ ಉದಯವಾದ ಬೆಳಗಾವಿ ಗ್ರಾಮೀಣ ಕ್ಷೇತ್ರ …

Read More »

ಮನಸ್ಸಿಗೆ ಬಂದಂತೆ ಇತಿಹಾಸ ಬದಲಿಸಲಾಗದು: ಸುಪ್ರೀಂಕೋರ್ಟ್‌

ನವದೆಹಲಿ:“ಭಾರತದ ಮೇಲೆ ವಿದೇಶಿಗರು ಆಕ್ರಮಣ ನಡೆಸಿ, ಆಳಿದ್ದರು ಎಂಬುದು ಇತಿಹಾಸದ ಸತ್ಯ. ನಮಗೆ ಬೇಕಾದಂತೆ ಇತಿಹಾಸವನ್ನು ಬದಲಿಸಲು ಸಾಧ್ಯವಿಲ್ಲ. ಯಾವುದೇ ದೇಶದ ಇತಿಹಾಸವು ಆ ದೇಶದ ವರ್ತಮಾನ ಹಾಗೂ ಭವಿಷ್ಯದ ಪೀಳಿಗೆಯನ್ನು ಕಾಡುವಂತಿರಬಾರದು’ ಎಂದು ಸುಪ್ರೀಂಕೋರ್ಟ್‌ ಅಭಿಪ್ರಾಯ ಪಟ್ಟಿದೆ.   ವಿದೇಶಿ ಆಕ್ರಮಣಕಾರರಿಂದ ಹೆಸರು ಬದಲಾಗಿರುವ ದೇಶದ ಸಾಂಸ್ಕೃತಿಕ, ಪ್ರಾಚೀನ ಹಾಗೂ ಧಾರ್ಮಿಕ ಕ್ಷೇತ್ರಗಳ ಮೂಲ ಹೆಸರನ್ನೇ ಮತ್ತೆ ಇಡಲು ಮರು ನಾಮಕರಣ ಆಯೋಗ ರಚಿಸಬೇಕು ಎಂದು ಕೋರಿ ವಕೀಲ …

Read More »

ಅಸಾಧ್ಯವನ್ನು ಸಾಧ್ಯವಾಗಿಸಿದ ಮೋದಿ: ಸಿಎಂ ಬೊಮ್ಮಾಯಿ

ಬೆಳಗಾವಿ: ಪ್ರಧಾನಿ ಮೋದಿ ದೇಶವನ್ನು ಅಸಾಧ್ಯದಿಂದ ಸಾಧ್ಯದ ಕಡೆಗೆ, ಅನಿಶ್ಚಿತತೆಯಿಂದ ನಿಶ್ಚಿತತೆಯೆಡೆಗೆ ತೆಗೆದುಕೊಂಡು ಹೋಗಿದ್ದಾರೆ. ಸಂಶಯವನ್ನು ಸಂಕಲ್ಪ ಮಾಡಿದ್ದಾರೆ. ಸಂಕಲ್ಪವನ್ನು ಸಿದ್ಧಿ ಮಾಡಿ ತೋರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು.   ನಗರದ ಮಾಲಿನಿ ಸಿಟಿ ಮೈದಾನದಲ್ಲಿ ಸೋಮವಾರ ನಡೆದ 2,240 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿ, ಮೋದಿ ಆಸೆಯಂತೆ ನವ ಭಾರತ ಮತ್ತು ನವ ಕರ್ನಾಟಕ ನಿರ್ಮಾಣಕ್ಕೆ ನಾವು ಸಿದ್ಧರಾಗಿದ್ದೇವೆ. …

Read More »