Breaking News

ಸನ್ಯಾಸಿಗಳೂ ಬಿಜೆಪಿ ಸೇರಬಹುದು: ಸಚಿವ ಡಾ|ಅಶ್ವತ್ಥನಾರಾಯಣ

ದಾವಣಗೆರೆ: ಭಾರತೀಯ ಜನತಾ ಪಾರ್ಟಿಗೆ ಸನ್ಯಾಸಿಗಳೂ ಸೇರಿದಂತೆ ಎಲ್ಲರಿಗೂ ಮುಕ್ತ ಆಹ್ವಾನವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ|ಅಶ್ವತ್ಥನಾರಾಯಣ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಜಾಪ್ರಭುತ್ವ ದಲ್ಲಿ ಎಲ್ಲರೂ ಭಾಗವಹಿಸಬೇಕಾಗುತ್ತೆ. ಅಂತಹ ಆಲೋಚನೆ-ವಿಚಾರ ಇರೋರು ಬಿಜೆಪಿ ಸೇರಬಹುದು. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸನ್ಯಾಸಿ ಆಗಿದ್ದವರು. ಸನ್ಯಾಸಿಗಳಾಗಿದ್ದವರು ಶಾಸಕ-ಮಂತ್ರಿಯಾಗಿದ್ದಾರೆ. ಲೋಕಸಭೆಗೂ ಆಯ್ಕೆಯಾಗಿದ್ದಾರೆ. ನಮ್ಮ ಪಕ್ಷದಲ್ಲಿ ಎಲ್ಲರೂ ಇದ್ದಾರೆ. ಹೀಗಾಗಿ ಎಲ್ಲರಿಗೂ ಮುಕ್ತ ಆಹ್ವಾನವಿದೆ ಎಂದರು. ಅರ್ಕಾವತಿ ಬಡಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ …

Read More »

ಸ್ವಾಮೀಜಿಗಳು ವಿಧಾನಸೌಧದಲ್ಲಿ ಕಾಣಿಸಿಕೊಳ್ಳುವುದು ಸರಿಯಲ್ಲ: ಹೊರಟ್ಟಿ

ಧಾರವಾಡ: ಸ್ವಾಮೀಜಿಗಳು ಸಮಾಜಕ್ಕೆ ಮಾದರಿ. ಅವರು ಮಠ ಬಿಟ್ಟು ವಿಧಾನಸೌಧದಲ್ಲಿ ಕಾಣಿಸಿಕೊಳ್ಳುವುದು ಸರಿಯಲ್ಲ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಾನು ನೋಡಿದಂತೆ ಬಹುತೇಕ ಸ್ವಾಮೀಜಿಗಳು ವಿಧಾನಸೌಧದಲ್ಲಿಯೇ ಇರುತ್ತಾರೆ. ಇದು ಸರಿಯಾದ ಬೆಳವಣಿಗೆಯಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸ್ವಾಮೀಜಿಗಳು ರಾಜಕಾರಣಕ್ಕೆ ಬರಲಿ ಎಂದು ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಚುನಾವಣೆಯಲ್ಲಿ ಮತ ಚಲಾವಣೆ ಮಾಡುವವರು ಬುದ್ಧಿವಂತರಾಗುವವರೆಗೂ ಒಳ್ಳೆಯ ಸರಕಾರ …

Read More »

ಅರ್ಕಾವತಿ ಪ್ರಕರಣದಲ್ಲಿ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆಂದ ಕಟೀಲು

ಲಿಂಗಸೂಗುರು: ಅರ್ಕಾವತಿ ಪ್ರಕರಣದ ತನಿಖೆ ಲೋಕಾಯುಕ್ತಕ್ಕೆ ವಹಿಸಿದ್ದು, ತನಿಖೆ ಬಳಿಕ ತಪ್ಪಿತಸ್ಥರು ಜೈಲು ಸೇರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲು ಹೇಳಿದರು. ಶನಿವಾರ ವಿಜಯ ಸಂಕಲ್ಪ ಯಾತ್ರೆ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಅರ್ಕಾವತಿ ಪ್ರಕರಣದಲ್ಲಿ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆಂದು ನಾನು ಹೇಳಿದ್ದೆ. ನ್ಯಾ| ಕೆಂಪಣ್ಣ ಕೊಟ್ಟ ವರದಿ ಲೋಕಾಯುಕ್ತಕ್ಕೆ ಕೊಟ್ಟು ಸಂಪೂರ್ಣ ತನಿಖೆ ಮಾಡಿಸಲಾಗುತ್ತಿದೆ. ಪ್ರಕರಣದಲ್ಲಿ ಭಾಗಿಯಾದ ನಾಯಕರ ವಿರುದ್ಧ ಕ್ರಮ ಜರಗಲಿದೆ. ತಪ್ಪಿತಸ್ಥರು ಜೈಲಿಗೆ ಹೋಗುತ್ತಾರೆ …

Read More »

ದೊಡ್ಡಗೌಡರ ಮಧ್ಯಪ್ರವೇಶ; ಇಂದಿನ ಸಭೆ ರದ್ದು

ಬೆಂಗಳೂರು:ಹಾಸನ ವಿಧಾನಸಭೆ ಕ್ಷೇತ್ರದ ಟಿಕೆಟ್‌ ವಿಚಾರ ಕಗ್ಗಂಟಾಗಿರುವ ನಡುವೆಯೇ, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಭಾನುವಾರ ನಡೆಯಬೇಕಾಗಿದ್ದ ಜೆಡಿಎಸ್‌ ಸಭೆಯೇ ರದ್ದಾಗಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.   ಎಚ್‌.ಡಿ.ರೇವಣ್ಣ ಅವರು ದೇವೇಗೌಡರ ಮೇಲೆ ಒತ್ತಡ ಹಾಕಿ ಸಭೆಯನ್ನು ಮುಂದೂಡುವಂತೆ ಮಾಡಿದ್ದು, ಈ ತಿಕ್ಕಾಟದಲ್ಲಿ ಎಚ್‌.ಡಿ ರೇವಣ್ಣ ಅವರೇ ಮೇಲುಗೈ ಸಾಧಿಸಿದ್ದಾರೆ ಎಂದು ಹೇಳಲಾಗಿದೆ. ತೀವ್ರ ಜಿದ್ದಾಜಿದ್ದಿ ಹಾಗೂ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಹಾಸನ ಕ್ಷೇತ್ರದ ಟಿಕೆಟ್‌ಗೆ ಸಂಬಂಧಿಸಿ ಶನಿವಾರ ಶೃಂಗೇರಿಯಲ್ಲಿ …

Read More »

7ನೇ ವೇತನ ಆಯೋಗ: ಲಿಖಿತ ಭರವಸೆ ಸಿಕ್ಕರೆ ಮುಷ್ಕರ ವಾಪಸ್: ಸಿ.ಎಸ್.ಷಡಾಕ್ಷರಿ

ಶಿವಮೊಗ್ಗ: ‘7ನೇ ವೇತನ ಆಯೋಗದ ಮಧ್ಯಂತರ ವರದಿ ಅನುಷ್ಠಾನದ ಬಗ್ಗೆ ಸರ್ಕಾರ ಆದೇಶ ಹೊರಡಿಸಿದರೆ ಮಾತ್ರ ಈಗ ಕರೆ ನೀಡಿರುವ ಮಾರ್ಚ್ 1ರಂದು ನಡೆಯುವ ಮುಷ್ಕರ ವಾಪಸ್ ಪಡೆಯಲಾಗುವುದು’ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.   ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘7 ನೇ ವೇತನ ಆಯೋಗದಿಂದ ಶೀಘ್ರ ಮಧ್ಯಂತರ ವರದಿ ಪಡೆದು ಜಾರಿ ಮಾಡುವಂತೆ ಈ ಹಿಂದಿನಿಂದಲೂ ಒತ್ತಾಯಿಸುತ್ತಲೇ ಬಂದಿದ್ದೇವೆ. ಬಜೆಟ್‌ನಲ್ಲಿ ಈ …

Read More »

47 ವರ್ಷದ ನಟಿಯ ಸೌಂದರ್ಯ ನೋಡಿದ ನೆಟ್ಟಿಗರು ಶಾಕ್‌

ರಾತ್ರಿ ಮುಂಬೈನಲ್ಲಿ ನಡೆದ ʼಬಿಗ್ ಇಂಪ್ಯಾಕ್ಟ್ಸ್ ಅವಾರ್ಡ್ಸ್‌ʼನಲ್ಲಿ ಮಲೈಕಾ ಅರೋರಾ, ರೋಹಿಣಿ ಅಯ್ಯರ್, ಹಿನಾ ಖಾನ್ ಮತ್ತು ಸೇರಿದಂತೆ ಹಲವಾರು ಬಿ-ಟೌನ್ ಸೆಲೆಬ್ರಿಟಿಗಳು ಕಾಣಿಸಿಕೊಂಡಿದ್ದರು. ತಾರೆಗಳು ಈವೆಂಟ್‌ನಲ್ಲಿ ಭಾಗವಹಿಸಿದ್ದ ನಟಿಯರ ಗ್ಲಾಮರ್‌ ಲುಕ್‌ ಹೆಚ್ಚಾಗಿ ಟಾಕ್‌ ಆಗುತ್ತಿದೆ. ತುಂಡು ತುಂಡು ಬಟ್ಟೆ ತೊಟ್ಟಿದ್ದ ನಟಿಯರ ಸೊಬಗಿಗೆ ಜನ ಫಿದಾ ಆಗಿದ್ದರು. ಇನ್ನು ಶಿಲ್ಪಾ ಶೆಟ್ಟಿ ಕೂಡಾ ತಮ್ಮದೇ ಸ್ಟೈಲ್‌ನಲ್ಲಿ ಮಿಂಚಿದರು. ಬಿಳಿ ಜಂಪ್‌ಸೂಟ್‌ನಲ್ಲಿ ಜಾಕೆಟ್ ಮತ್ತು ಶೀರ್ ಪ್ಯಾನೆಲಿಂಗ್‌ನೊಂದಿಗೆಶಿಲ್ಪಾ ಶೆಟ್ಟಿಕಾರ್ಯಕ್ರಮಕ್ಕೆ …

Read More »

ಮರ್ಯಾದೆಗೆ ಅಂಜಿ ಮಗಳ ರುಂಡ-ಮುಂಡ ಬೇರ್ಪಡಿಸಿದ ತಂದೆ!

ಆಂಧ್ರಪ್ರದೇಶ : ತಂದೆಯೊಬ್ಬ, ಬೇರೆ ಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದ ಮಗಳ ರುಂಡ-ಮುಂಡವನ್ನು ಕತ್ತರಿಸಿ ಕೊಲೆ ಮಾಡಿ ಕಾಡಿನಲ್ಲಿ ಎಸೆದಿದ್ದಾನೆ. ಈ ಮರ್ಯಾದಾ ಹತ್ಯೆ ಪ್ರಕರಣ ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಪಾಣ್ಯಂ ಮಂಡಲದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.   ಪ್ರಸನ್ನ (21) ಮೃತ ದುರ್ದೈವಿ. ಪಾಣ್ಯಂ ಮಂಡಲ ಆಲಮೂರಿನ ದೇವೇಂದ್ರ ರೆಡ್ಡಿ ಮಗಳನ್ನು ಕೊಂದ ಆರೋಪಿ. ರೆಡ್ಡಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಹಿರಿಯ ಮಗಳಾದ ಪ್ರಸನ್ನಗೆ ಎರಡು ವರ್ಷಗಳ ಹಿಂದೆ ಸಾಫ್ಟ್‌ವೇರ್ ಇಂಜಿನಿಯರ್ …

Read More »

ಇಲ್ಲಿದೆ 20 ವರ್ಷ ಚಿಕ್ಕವರಾಗಿ ಕಾಣುವ ಡಾ. ಮಾರ್ಕ್​ ಹೇಳಿದ ಆರೋಗ್ಯ ಗುಟ್ಟು

ವಯಸ್ಸಾಗುವುದು ಸಹಜ. ಆದರೆ ವಯಸ್ಸಾದರೂ ಯುವಕರಂತೆ ಕಾಣುವುದು ಕಷ್ಟ. ಆದರೆ ಬಹಳಷ್ಟು ಜನರು ತಮ್ಮ ಮೂಲ ವಯಸ್ಸಿಗಿಂತ ಹಲವಾರು ವರ್ಷ ಚಿಕ್ಕವರಂತೆ ಕಾಣುತ್ತಾರೆ ಮತ್ತು ಅವರಲ್ಲಿ ಒಬ್ಬರು 63 ವರ್ಷದ ಡಾ ಮಾರ್ಕ್ ಹೈಮನ್ ಅವರು ಸುಮಾರು 20 ವರ್ಷ ಚಿಕ್ಕವರಾಗಿ ಕಾಣುತ್ತಾರೆ. ಇದರ ರಹಸ್ಯವನ್ನು ಅವರು ಬಹಿರಂಗಪಡಿಸಿದ್ದಾರೆ. ಡಾ ಹೈಮನ್ Instagram ನಲ್ಲಿ 23 ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ ಮತ್ತು ಯಂಗ್ ಫಾರೆವರ್ ಪುಸ್ತಕದ ಲೇಖಕರಾಗಿದ್ದಾರೆ. ಒಬ್ಬ …

Read More »

ಬಹು ನಿರೀಕ್ಷಿತ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇ ಮಾರ್ಚ್ 11ರಂದು ಉದ್ಘಾಟನೆ

ಬೆಂಗಳೂರು ಹಾಗೂ ಮೈಸೂರು ನಗರಗಳ ಜನತೆ ಕಾತರದಿಂದ ಕಾಯುತ್ತಿದ್ದ, ಉಭಯ ನಗರಗಳ ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿ ಮಾರ್ಚ್ 11ರಂದು ಲೋಕಾರ್ಪಣೆಯಾಗಲಿದೆ. ಬೆಂಗಳೂರು: ಬೆಂಗಳೂರು ಹಾಗೂ ಮೈಸೂರು ನಗರಗಳ ಜನತೆ ಕಾತರದಿಂದ ಕಾಯುತ್ತಿದ್ದ, ಉಭಯ ನಗರಗಳ ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿ ಮಾರ್ಚ್ 11ರಂದು ಲೋಕಾರ್ಪಣೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಇದನ್ನು ಮಂಡ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಧೃಡಪಡಿಸಿದ್ದಾರೆ. ಇದರ ಜೊತೆಗೆ ಪ್ರಧಾನಿ …

Read More »

ಪಂಚಮಹಾಭೂತ ಲೋಕೋತ್ಸವದಲ್ಲಿ ಮಹಿಳೆಯರ ದಂಡು

ಚಿಕ್ಕೋಡಿ: ಕಣ್ಣು ಹಾಯಿಸಿದಷ್ಟು ಜನ ಜಂಗುಳಿ, ಎಲ್ಲಿ ನೋಡಿದರಲ್ಲಿ ವಾಹನಗಳ ಸಾಲು, ಕರ್ನಾಟಕ-ಮಹಾರಾಷ್ಟ್ರ ಬಾಂಧವ್ಯದ ಜೊತೆಗೆಯೇ ಇಡೀ ಭಾರತದ ಸಂತರು, ತಜ್ಞರು ಸಮಾಗಮದಲ್ಲಿ ಮಹಿಳೆಯರದ್ದೇ ಸಿಂಹಪಾಲು. ಕರ್ನಾಟಕ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಯ ಕನೇರಿ ಅದೃಶ್ಯ ಕಾಡಸಿದ್ದೇಶ್ವರ ಮಠದಲ್ಲಿ ಹಮ್ಮಿಕೊಂಡಿರುವ ಬೃಹತ್‌ ಪಂಚಮಹಾಭೂತ ಲೋಕೋತ್ಸವದಲ್ಲಿ ಶುಕ್ರವಾರ ನಡೆದ ಮಹಿಳಾ ಲೋಕೋತ್ಸವದಲ್ಲಿ ಕಂಡು ಬಂದ ಚಿತ್ರಣವಿದು. ಉತ್ತರ ಕರ್ನಾಟಕ ಮತ್ತು ದಕ್ಷಿಣ ಮಹಾರಾಷ್ಟ್ರದ ಲಕ್ಷಾಂತರ ಮಹಿಳೆಯರು ಕನೇರಿ ಮಠದತ್ತ …

Read More »