ನಾಳೆ ಗುರುವಾರದಂದು ನಡೆಯಲಿರುವ ಭಗೀರಥ ಸಮಾಜದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಹಿಂದುಳಿದ ವರ್ಗಕ್ಕೆ ಸೇರಿದ ಸಮುದಾಯಕ್ಕೆ ಅವಹೇಳನಕಾರಿಯಾಗಿ ಕಮೆಂಟ್ ಮಾಡಿರುವ ಯೂ ಟ್ಯೂಬ್ ಸಂಪಾದಕನೋರ್ವನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಆ ಘಟನೆಗೂ ನನಗೂ ಯಾವುದೇ ಸಂಬಂಧವಿಲ್ಲವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಘಟಪ್ರಭಾದ ಯೂ ಟ್ಯೂಬ್ ಚಾನೇಲ್‍ನ ಸಂಪಾದಕರು ಸುದ್ಧಿ ವಿಮರ್ಶೆ ಮಾಡುವಾಗ …
Read More »ಬಿಜೆಪಿಗೆ ಸಿದ್ದಾಂತವಿಲ್ಲ, ಜೆ.ಪಿ.ನಡ್ಡಾಗೆ ರಾಜಕೀಯ ಜ್ಞಾನವೂ ಇಲ್ಲ: ಸಿದ್ದರಾಮಯ್ಯ
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟಿಲ್‌ಗೆ ರಾಜಕೀಯ ಪರಿಜ್ಞಾನ ಇಲ್ಲ ಅಂದುಕೊಂಡಿದ್ದೆ. ಆದರೆ ಈಗ ಅರ್ಥವಾಗುತ್ತಿದೆ ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೂ ರಾಜಕೀಯ ಜ್ಞಾನ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದರು. ‘ಕಾಂಗ್ರೆಸ್ ಪಕ್ಷಕ್ಕೆ ಸಿದ್ಧಾಂತ ಇಲ್ಲ. ಸಿದ್ದರಾಮಯ್ಯ ಕಡು ಭ್ರಷ್ಟ’ ಎಂಬ ಜೆ.ಪಿ.ನಡ್ಡಾ ಅವರ ಆರೋಪಕ್ಕೆ ಇಲ್ಲಿನ ಖಾಸಗಿ ಹೆಲಿಪ್ಯಾಡ್‌ನಲ್ಲಿ ಬುಧವಾರ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ‘ಬಿಜೆಪಿಗೆ ಸಿದ್ದಾಂತ …
Read More »ಮಾಂಸದೂಟ ಸೇವಿಸಿ ನಾಗಬನಕ್ಕೆ ಭೇಟಿ ನೀಡಿದ ಸಿ.ಟಿ.ರವಿ,
ಭಟ್ಕಳ: ಫೆ.19ರಂದು ಪಟ್ಟಣಕ್ಕೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಭಟ್ಕಳ ಶಾಸಕ ಸುನೀಲ ನಾಯ್ಕ ಅವರ ಮನೆಯಲ್ಲಿ ಮಾಂಸದೂಟ ಸೇವಿಸಿ ಸಂಜೆ ಪಟ್ಟಣದಲ್ಲಿ ಪುನರ್ ಸ್ಥಾಪಿಸಿದ ರಾಜಾಂಗಣ ನಾಗಬನಕ್ಕೆ ಭೇಟಿ ನೀಡಿ ನಾಗದೇವರ ದರ್ಶನ ಪಡೆದ ಫೋಟೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಂಸದೂಟ ಮಾಡಿ ಧರ್ಮಸ್ಥಳ ದರ್ಶನ ಮಾಡಿರುವ ದೃಶ್ಯ ರಾಜ್ಯಾದ್ಯಂತ ವ್ಯಾಪಕ …
Read More »ಬಿಜೆಪಿ ನಾಯಕರು ನೂರು ಸಲ ಬಂದರೂ ಪ್ರಯೋಜನ ಇಲ್ಲ: ಸಿದ್ದರಾಮಯ್ಯ
ಚಿತ್ರದುರ್ಗ: ಬಿಜೆಪಿ ನಾಯಕರು ರಾಜ್ಯಕ್ಕೆ ನೂರು ಸಲ ಬಂದರೂ ಪ್ರಯೋಜನ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನರಗುಂದಕ್ಕೆ ತೆರಳುವ ವೇಳೆ ಚಿತ್ರದುರ್ಗ ಹೊರವಲಯದಲ್ಲಿ ಮಾಜಿ ಎಂಎಲ್ಸಿ ರಘು ಆಚಾರ್ ನಿರ್ಮಿಸುತ್ತಿರುವ ಮನೆಗೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರ ಜೊತೆ ಮಾತನಾಡಿದರು. ಚಿತ್ರದುರ್ಗ ಹೊರವಲಯದಲ್ಲಿ ಹೆಲಿಕಾಪ್ಟರ್ ಗೆ ಇಂಧನ ತುಂಬಿಸಲು ಇಳಿಸಿದ್ದ ವೇಳೆ ಸುದ್ದಿಗಾರರ ಜೊತೆ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ ಅವರು …
Read More »ಕಾಂಗ್ರೆಸ್ ನಾಯಕರಿಗೆ ನಿದ್ದೆಯಲ್ಲೂ ಮೋದಿಯೇ ಕಾಣುತ್ತಾರೆ: ಮಾಜಿ ಸಿಎಂ ಎಚ್.ಡಿ.ಕೆ
ಶಿವಮೊಗ್ಗ: ಇಂದು ಕಾಂಗ್ರೆಸ್ ನಾಯಕರಿಗೆ ನಿದ್ದೆಯಲ್ಲೂ ಮೋದಿಯೇ ಕಾಣುತ್ತಾರೆ. ಅವರಿಗೆ ಮೋದಿ ಮುಖ ಬಿಟ್ಟರೆ ಮತ್ತೇನು ಕಾಣಲು ಸಾಧ್ಯ? ಎಂದು ಹೇಳುವ ಮೂಲಕ ಜೆಡಿಎಸ್ ಮುಖವಾಡ ಕಳಚಿದರೆ ಮೋದಿ ಮುಖ ಕಾಣುತ್ತದೆ ಎಂಬ ಸುರ್ಜೆವಾಲ ಹೇಳಿಕೆಗೆ ಮಾಜಿ ಸಿಎಂ ಎಚ್.ಕುಮಾರಸ್ವಾಮಿ ತಿರುಗೇಟು ನೀಡಿದರು. ನಗರದಲ್ಲಿ ಮಾತನಾಡಿದ ಅವರು, ನಾನು ಆಪರೇಷನ್ ಕಮಲದ ಬಳಿಕದ ಮೊದಲ ಚುನಾವಣೆಯಲ್ಲಿ ನಿಮ್ಮ ಪ್ರತಿಪಕ್ಷ ನಾಯಕ ಎಷ್ಟಕ್ಕೆ ಸುಪಾರಿ ಪಡೆದಿದ್ದರು ಎಂಬ ಬಗ್ಗೆ ಸುರ್ಜೆವಾಲ ಬಹಿರಂಗ …
Read More »ಸದನದಲ್ಲಿ ಬುಧವಾರ ವಿದಾಯ ಭಾಷಣ ಮಾಡಿ ಭಾವುಕರಾದ B.S.Y.
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸದನದಲ್ಲಿ ಬುಧವಾರ ವಿದಾಯ ಭಾಷಣ ಮಾಡಿ ಭಾವುಕರಾದರು. ವಿಧಾನಸಭೆಯಲ್ಲಿ ಮಾತನಾಡಿದ 79ರ ಹರೆಯದ ಹಿರಿಯ ನಾಯಕ ಯಡಿಯೂರಪ್ಪ ಅವರು, ಇದೊಂದು ಅಪರೂಪದ ಕ್ಷಣ, ನಾನು ಈಗಾಗಲೇ ಹೇಳಿದಂತೆ ಮತ್ತೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಇದು ನನ್ನ ವಿದಾಯ ಭಾಷಣ. ನನಗೆ ಮಾತನಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದಗಳು ಎಂದರು. ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ನೀಡಿದ ಸ್ಥಾನಮಾನ ನನ್ನ ಜೀವಮಾನದಲ್ಲಿ ಮರೆಯಲು ಸಾಧ್ಯವಿಲ್ಲ …
Read More »ಕಾವೇರಿದ ಕಣ; ಮೂರು ಪಕ್ಷಗಳಲ್ಲೂ ಬಿರುಸಿನ ರಾಜಕಾರಣ ಆರಂಭ
ಬೆಂಗಳೂರು: ರಾಜ್ಯ ವಿಧಾನ ಮಂಡಲದ ಅಧಿವೇಶನದ ಮಧ್ಯೆಯೂ ರಾಜಕೀಯ ವಿದ್ಯಮಾನಗಳು ಬಿರುಸಾಗುತ್ತಿವೆ. ಕಳೆದ ವಾರ ಕರಾವಳಿ ಜಿಲ್ಲೆಯ ನಾಯಕರಿಗೆ ಟಾಸ್ಕ್ ನಿಗದಿ ಮಾಡಿ ತೆರಳಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ. 23ರಂದು ಬೆಂಗಳೂರಿಗೆ ಆಗಮಿಸಲಿದ್ದು, ರಾಜಧಾನಿಯ ನಾಯಕರಿಗೆ ರಾಜಕೀಯ ಪಾಠ ಮಾಡಲಿದ್ದಾರೆ. ಎರಡು ದಿನಗಳಿಂದ ರಾಜ್ಯದಲ್ಲಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮಂಗಳವಾರ ಪ್ರವಾಸ ಮುಗಿಸಿ ದಿಲ್ಲಿಗೆ ತೆರಳಿದ್ದಾರೆ. ಇದರ ಬೆನ್ನಲ್ಲೇ ಅಮಿತ್ ಶಾ …
Read More »ಮಾ. 1ರಿಂದ ಮುಷ್ಕರ: ಸರಕಾರಿ ನೌಕರರ ಎಚ್ಚರಿಕೆ
ಬೆಂಗಳೂರು: ಹಳೆಯ ಪಿಂಚಣಿ ಯೋಜನೆ ಜಾರಿ ಸಹಿತ 2 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರಕಾರಿ ನೌಕರರ ಸಂಘ ಸರಕಾರಕ್ಕೆ ಒಂದು ವಾರದ ಗಡುವು ನೀಡಿದೆ. ಫೆ. 28ರ ಒಳಗೆ ಬೇಡಿಕೆ ಈಡೇರಿಸದೆ ಇದ್ದರೆ ಮಾ. 1ರಿಂದ ಸರಕಾರಿ ನೌಕರರು ರಾಜ್ಯ ವ್ಯಾಪಿಯಾಗಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಎಚ್ಚರಿಸಿದ್ದಾರೆ. ಕಬ್ಬನ್ ಪಾರ್ಕ್‌ನ ಸರಕಾರಿ ನೌಕರರ ಸಭಾಂಗಣದಲ್ಲಿ ಮಂಗಳವಾರ ನಡೆದ ಸರಕಾರಿ …
Read More »ಸವದತ್ತಿ: ಕಾಲೇಜಿನ ಪ್ರತಿಷ್ಠೆಗಾಗಿ ಪ್ರಾಚಾರ್ಯ ಹಾಗೂ ಸಿಬ್ಬಂದಿಗಳು ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟ
ಸವದತ್ತಿ: ಕಾಲೇಜಿನ ಪ್ರತಿಷ್ಠೆಗಾಗಿ ಪ್ರಾಚಾರ್ಯ ಹಾಗೂ ಸಿಬ್ಬಂದಿಗಳು ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟ ನಡೆಸಿದ್ದಾರೆ. ಪಿಯುಸಿ ಪ್ರಥಮ ವರ್ಷದ ಮಕ್ಕಳ ಹಾಜರಾತಿ ನೆಪವೊಡ್ಡಿ 72 ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ನಿಷೇಧಿಸಲಾಗಿದೆ. ಪ್ರತಿವರ್ಷ ಇದನ್ನು ಮುಂದುವರೆಸಿದೆ ಎಂದು ಕರ್ನಾಟಕ ಸಮತಾ ಸೈನಿಕ ದಳದ ಬೆಳಗಾವಿ ವಿಭಾಗೀಯ ಪ್ರಧಾನ ಕಾರ್ಯದರ್ಶಿ ಬಸವರಾಜ ತಳವಾರ ಆಕ್ರೋಶಿದರು. ಇಲ್ಲಿನ ಜಿ.ಜಿ. ಚೋಪ್ರಾ ಕಾಲೇಜಿನಲ್ಲಿ ಹಾಜರಾತಿ ನೆಪವೊಡ್ಡಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ನಿರಾಕರಿಸಿದ್ದನ್ನು ಖಂಡಿಸಿ ದಲಿತ ಮುಖಂಡರು ಹಾಗೂ ವಿದ್ಯಾರ್ಥಿಗಳಿಂದ …
Read More »24.93 ಲಕ್ಷ ಮೌಲ್ಯದ ಅಡುಗೆ ಎಣ್ಣೆ ಕಳ್ಳತನ ಪ್ರಕರಣ: ಮೂರೇ ದಿನದಲ್ಲಿ ಕಳ್ಳರು ಅಂದರ್
ಬೆಳಗಾವಿ: ಮಂಗಳೂರಿನಿಂದ ನಿಪ್ಪಾಣಿ ಕಡೆಗೆ ಲಾರಿಯಲ್ಲಿ ಅಡುಗೆ ಎಣ್ಣೆ ತೆಗೆದುಕೊಂಡು ಹೋಗುವಾಗ ತಡೆದು ಕಳ್ಳತನ ಮಾಡಿದ್ದ ಆರೋಪಿಗಳನ್ನು ಮೂರೇ ದಿನದಲ್ಲಿ ಪತ್ತೆ ಹಚ್ಚಿ 24.93 ಲಕ್ಷ ರೂ. ಮೌಲ್ಯದ ಅಡುಗೆ ಎಣ್ಣೆ ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇಬ್ಬರು ಆರೋಪಿಗಳನ್ನು ಮಂಗಳವಾರ ಬಂಧಿಸಿದ ಹಿರೇಬಾಗೇವಾಡಿ ಪೊಲೀಸರು ಬಂಧಿತರಿಂದ 23,93,560 ರೂ. ಮೌಲ್ಯದ 878 ಅಡುಗೆ ಎಣ್ಣೆ ಟನ್‌ಗಳು ಹಾಗೂ 14 ಬಾಕ್ಸ್ ಎಣ್ಣೆ ಪೌಚ್‌ಗಳು, ದ್ವಿಚಕ್ರ ವಾಹನ ಸೇರಿ ಒಟ್ಟು 24,23,560 …
Read More »