ವಿಧಾನಸಭೆ: ನನ್ನ ಕ್ಷೇತ್ರದ ಮೇಲೆ ದೇವರಿಗೂ ಕೋಪ, ಸರ್ಕಾರಕ್ಕೂ ಕೋಪ. ಸರ್ಕಾರ ಇನ್ನು ಒಂದು ತಿಂಗಳು ಮಾತ್ರ ಇರಲಿದ್ದು, ಈ ಅವಧಿಯಲ್ಲಾದರೂ ಪ್ರೀತಿ ತೋರಿಸಿ ಎಂದು ಶಾಸಕಿ ಅಂಜಲಿ ನಿಂಬಾಳ್ಕರ್ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ಮನವಿ ಮಾಡಿದ್ದಾರೆ. ನನ್ನ ಕ್ಷೇತ್ರದಲ್ಲಿ ಅತಿವೃಷ್ಟಿಯಿಂದ ರಸ್ತೆ ಹಾಳಾಗಿದ್ದು ದುರಸ್ತಿ ಆಗಬೇಕಿದೆ. ನೆರೆ ತಡೆ ಗೋಡೆ ನಿರ್ಮಾಣ ಮಾಡುವುದು ಸೇರಿದಂತೆ ಕರ್ನಾಟಕ ನೀರಾವರಿ ನಿಗಮದ ವ್ಯಾಪ್ತಿಯಲ್ಲಿನ ರಸ್ತೆ ಮತ್ತಿತರ ಮೂಲಸೌಕರ್ಯಗಳ …
Read More »ಮಗುವಿನ ಚಿಕಿತ್ಸೆಗೆ ₹11.6 ಕೋಟಿ ನೀಡಿ, ಹೆಸರು ಬಹಿರಂಗಪಡಿಸಬೇಡಿ ಎಂದ ಪುಣ್ಯಾತ್ಮ!
ಮುಂಬೈ: ಬೆನ್ನುಮೂಳೆಯ ಸ್ನಾಯು ಕ್ಷೀಣತೆ (Spinal Muscular Atrophy) ರೋಗದಿಂದ ಬಳಲುತ್ತಿರುವ 15 ತಿಂಗಳ ಮಗುವಿನ ಚಿಕಿತ್ಸೆ 17.5 ಕೋಟಿ ರೂಪಾಯಿಗಳು ಅವಶ್ಯಕತೆಯಿದೆ. ಅದಕ್ಕಾಗಿ ಕುಟುಂಬ ಸರ್ಕಾರ ಹಾಗೂ ಕ್ರೌಡ್ ಫಂಡಿಂಗ್ (Crowd Funding) ಮೂಲಕ ನೆರವು ಕೋರಿದ್ದರು. ಇದೀಗ ಮಾನವೀಯ ಮನೋಭಾವನೆಯುಳ್ಳ (Humanitarian Spirit) ಅನಾಮಧೇಯ ವ್ಯಕ್ತಿಯೊಬ್ಬರು ಬರೋಬ್ಬರಿ 11.6 ಕೋಟಿ (1.4 ಮಿಲಿಯನ್ ಡಾಲರ್) ರೂಪಾಯಿಗಳನ್ನು ದೇಣಿಗೆ ನೀಡಿ ಔದಾರ್ಯ ಮೆರೆದಿದ್ದಾರೆ. ಮಗುವಿನ ಜೀವ ಉಳಿಸಿಕೊಳ್ಳಲು ಹಣ …
Read More »ರೋಹಿಣಿ, ರೂಪಾ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್ : ಮತ್ತೊಂದು ‘ವಾಟ್ಸಾಪ್ ಚಾಟ್’ ಲಿಸ್ಟ್ ಫೋಟೋ ವೈರಲ್
ಬೆಂಗಳೂರು : ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಇಬ್ಬರ ವರ್ಗಾವಣೆ ನಡುವೆಯೇ ಮತ್ತೊಂದು ‘ವಾಟ್ಸಾಪ್ ಚಾಟ್’ ವೈರಲ್ ಆಗಿದೆ. ಈಗಾಗಲೇ ರೋಹಿಣಿ ಸಿಂಧೂರಿಯ ಹಲವು ವಾಟ್ಸಾಪ್ ಚಾಟ್ ಲಿಸ್ಟ್ ಗಳನ್ನ ಐಪಿಎಸ್ ಅಧಿಕಾರಿ ಡಿ ರೂಪ ಬಿಡುಗಡೆ ಮಾಡಿದ್ದರು. ಇದೀಗ ಇಬ್ಬರು ಅಧಿಕಾರಿಗಳ ವರ್ಗಾವಣೆಗೂ ಮುನ್ನ ಡಿ ರೂಪ-ಸಿ ಎಸ್ ವಂದಿತಾ ಶರ್ಮಾ ಜೊತೆ ನಡೆಸಿದ್ದರು ಎನ್ನಲಾದ …
Read More »ಜಾಮೀನು ಸಿಕ್ಕ ತಕ್ಷಣ ಕ್ರಿಕೆಟಿಗ ಪೃಥ್ವಿ ಶಾ ವಿರುದ್ಧ ಪ್ರಕರಣ ದಾಖಲಿಸಿದ ಸಪ್ನಾ ಗಿಲ್!
ಕ್ರಿಕೆಟಿಗ ಪೃಥ್ವಿ ಶಾ ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವಿ ಮತ್ತು ಭೋಜ್ಪುರಿ ನಟಿ ಸಪ್ನಾ ಗಿಲ್ ನಡುವಿನ ಜಗಳ ಸಾಕಷ್ಟು ಸುದ್ದಿ ಮಾಡಿತ್ತು. ಕ್ರಿಕೆಟಿಗ ಪೃಥ್ವಿ ಶಾ ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವಿ ಮತ್ತು ಭೋಜ್ಪುರಿ ನಟಿ ಸಪ್ನಾ ಗಿಲ್ ನಡುವಿನ ಜಗಳ ಸಾಕಷ್ಟು ಸುದ್ದಿ ಮಾಡಿತ್ತು. ಈ ಸಂಬಂಧ ಪೃಥ್ವಿ ಶಾ ಸ್ನೇಹಿತರು ಓಶಿವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಸಪ್ನಾ ಗಿಲ್ ಅನ್ನು …
Read More »ಮತದಾನ ಸಮಯ ಕಾಯ್ದಿರಿಸಿ!- ಮೊಬೈಲ್ ಆಯಪ್ ಅಭಿವೃದ್ಧಿಪಡಿಸಿದ ಚು. ಆಯೋಗ
ಬೆಂಗಳೂರು: ಸಿನೆಮಾ, ರೈಲ್ವೇ ಟಿಕೆಟ್‌ಗಳನ್ನು ಮುಂಚಿತವಾಗಿಯೇ ಕಾಯ್ದಿರಿಸುವಂತೆ ಈಗ ನೀವು ಮತದಾನ ಮಾಡುವ ಸಮಯವನ್ನೂ ಮೊದಲೇ ನಿಗದಿ ಮಾಡಿಕೊಳ್ಳಬಹುದು! ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣ ವಿಭಾಗ ನೂತನ ಮೊಬೈಲ್ ಅಪ್ಲಿಕೇಷನ್ ಸಿದ್ಧಪಡಿಸುತ್ತಿದೆ. ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿಯಿದ್ದು, ಆಯೋಗ ಈಗಿನಿಂದಲೇ ಸಿದ್ಧತೆ ನಡೆಸಿದೆ. ಇದು ಯಶಸ್ವಿಯಾದರೆ ಮುಂದಿನ ಹಂತಗಳಲ್ಲಿ ರಾಜ್ಯದೆಲ್ಲೆಡೆ ವಿಸ್ತರಿಸುವ ಆಲೋಚನೆ ಆಯೋಗಕ್ಕಿದೆ. ಮತದಾನ ಮಾಡಲು ಮತಗಟ್ಟೆಗಳಲ್ಲಿ ಸರತಿ ಸಾಲಿನಲ್ಲಿ …
Read More »ಇನ್ನೊಂದು ವಾರದಲ್ಲ ‘15,000 ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ’ ಪ್ರಕಟ – ಸಚಿವ ಬಿ.ಸಿ ನಾಗೇಶ್
ಬೆಂಗಳೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8 ತರಗತಿ) ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ( Karnataka Teacher Recruitment 2023 ) ಇನ್ನೊಂದು ವಾರದಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ( Minister BC Nagesh ) ತಿಳಿಸಿದರು. ಇಲಾಖೆ ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪ ವ್ಯಕ್ತಪಡಿಸಿ ಕೆಲವು ವಿವಾಹಿತ …
Read More »ಸರ್ಕಾರಿ ನೌಕರರು ಮಾರ್ಚ್ 1 ರಿಂದ ಕರ್ತವ್ಯಕ್ಕೆ ಗೈರಾಗುವುದಕ್ಕೆ ಕರೆ ಕೊಟ್ಟ ರಾಜ್ಯ ಸರ್ಕಾರಿ ನೌಕರರ ಸಂಘ
ಬೆಂಗಳೂರು: ಏಳನೇ ವೇತನ ಆಯೋಗ ಜಾರಿ ಸೇರಿದಂತೆ ಹಲವು ಸೌಲಭ್ಯಗಳನ್ನು ಜಾರಿಗೆ ತರುವುದರಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿರುವ ರಾಜ್ಯ ಸರ್ಕಾರಿ ನೌಕರರ ಸಂಘವು ಮಾರ್ಚ್ 1 ರಿಂದ ಕರ್ತವ್ಯಕ್ಕೆ ಗೈರಾಗುವ ಹೋರಾಟ ನಡೆಸಲು ಕರೆ ನೀಡಿದೆ. ಇಂದು ನಡೆದ ಸರ್ಕಾರಿ ನೌಕರರ ಸಂಘದ ಸುಮಾರು 8 ಸಾವಿರ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಈ ಬಗ್ಗೆ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಸರ್ಕಾರಿ …
Read More »ಬೆಳಗಾವಿಗೆ ಪ್ರಧಾನಿ ಭೇಟಿ: ಸಕಲ ಸಿದ್ಧತೆಗೆ ಸೂಚನೆ
ಬೆಳಗಾವಿ: ‘ಪ್ರಧಾನಿ ನರೇಂದ್ರ ಮೋದಿ ಫೆ.27ರಂದು ನಗರದ ನವೀಕೃತ ರೈಲು ನಿಲ್ದಾಣ ಲೋಕಾರ್ಪಣೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ರೈಲ್ವೆ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದು, ಫಲಾನುಭವಿಗಳು …
Read More »20 ಪ್ರಕರಣಗಳಲ್ಲಿ ಬೇಕಾಗಿದ್ದ ನಾಲ್ವರ ಬಂಧನ
ಬೆಳಗಾವಿ: ಅಪಹರಣ, ದರೋಡೆ, ಕೊಲೆ ಸೇರಿದಂತೆ ಜಿಲ್ಲೆಯ ವಿವಿಧೆಡೆ 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿದ್ದ ನಾಲ್ವರು ಆರೋಪಿಗಳ ತಂಡವನ್ನು ಹಾರೂಗೇರಿ ಪೊಲೀಸರ ತಂಡ ಸೋಮವಾರ ಬಂಧಿಸಿದೆ. ರಾಯಬಾಗ ತಾಲ್ಲೂಕಿನ ಖಣದಾಳ ಗ್ರಾಮದ ಭುಜಂಗ ತುಕಾರಾಮ್ ಜಾಧವ, ವಾಸುದೇವ ಸಹದೇವ ನಾಯಕ, ಚಿಕ್ಕೋಡಿ ತಾಲ್ಲೂಕಿನ ಕೇರೂರ ಗ್ರಾಮದ ಈರಯ್ಯ ಸಾತಯ್ಯ ಹಿರೇಮಠ, ಅಥಣಿ ತಾಲ್ಲೂಕಿನ ನಂದಗಾಂವದ ಶಿವಾನಂದ ನಾಣಪ್ಪ ಸಲಾಖನ್ ಬಂಧಿತರು. ಫೆ.11ರಂದು ನಾಲ್ವರೂ ಸೇರಿಕೊಂಡು ಖಣದಾಳದ ಶಾಂತವ್ವ ಆಜೂರೆ …
Read More »ಮೂವರು ಅಂತರರಾಜ್ಯ ಕಳ್ಳರ ಬಂಧನ
ಕಾಗವಾಡ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕೃಷ್ಣಾನದಿ ಹಾಗೂ ಬಾವಿಗಳಲ್ಲಿ ಅಳವಡಿಸಿದ್ದ ನೀರೆತ್ತುವ ಪಂಪ್‌ಸೆಟ್, ಮೋಟಾರುಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರದ ಮೂವರು ಆರೋಪಿಗಳನ್ನು ಸ್ಥಳೀಯ ಪೋಲಿಸರು ಸೋಮವಾರ ಬಂಧಿಸಿದ್ದಾರೆ. ಯೋಗೇಶ ಕರೋಲಿ, ಸತೀಶ್ ಸೂರ್ಯವಂಶಿ, ವಿಜಯ ಬಿಷೆ ಬಂಧಿತರು. ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಪಿ ಡಾ.ಸಂಜೀವ್ ಪಾಟೀಲ, ‘ಅಥಣಿ ಡಿವೈಎಸ್ಪಿ ಶ್ರೀಪಾದ ಜಲ್ದೆ, ಸಿಪಿಐ ರವೀಂದ್ರ ನಾಯ್ಕೋಡಿ ಮತ್ತು ಕಾಗವಾಡ ಪಿಎಸ್‌ಐ ಎಚ್.ಕೆ. …
Read More »