ಬೆಳಗಾವಿ: ಇಲ್ಲಿನ ಅಂಜುಮನ್ ಪದವಿ ಕಾಲೇಜಿನಲ್ಲಿ ಮಂಗಳವಾರ ನಡೆದ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ಪರೀಕ್ಷೆಯಲ್ಲಿ, ಒಎಂಆರ್ ಶೀಟ್ ನೀಡಲು 15 ನಿಮಿಷ ವಿಳಂಬವಾಗಿದೆ. ಇದರಿಂದ ಸಿಟ್ಟಿಗೆದ್ದ ಅಭ್ಯರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು. ಬೆಳಿಗ್ಗೆ 10ಕ್ಕೆ ಸರಿಯಾಗಿ ಪರೀಕ್ಷೆ ಆರಂಭವಾಗಬೇಕಿತ್ತು. ತಡವಾದರೂ ಒಎಂಆರ್ ಸೀಟ್ ನೀಡಲಿಲ್ಲ. ಆಕ್ರೋಶಗೊಂಡ ಅಭ್ಯರ್ಥಿಗಳು ಕೊಠಡಿಯಿಂದ ಹೊರಬಂದು ಘೋಷಣೆ ಕೂಗತೊಡಗಿದರು. ಇದರಿಂದ ಪರೀಕ್ಷಾ ಕೇಂದ್ರದಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಯಿತು. …
Read More »ದಲಿತ ಯುವಕನ ಕೊಲೆ: ಸಿಪಿಐ(ಎಂ) ಖಂಡನೆ
ರಾಮದುರ್ಗ: ಕ್ಷೌರ ಮಾಡುವ ವಿಚಾರದಲ್ಲಿ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲ್ಲೂಕಿನ ಸಂಗನಾಳ ಗ್ರಾಮದಲ್ಲಿ ನಡೆದಿರುವ ಪರಿಶಿಷ್ಟ ಜಾತಿ ಯುವಕ ಯಮನೂರಪ್ಪ ಅವರ ಕೊಲೆ ಪ್ರಕರಣವನ್ನು ಖಂಡಿಸಿ ಸಿಪಿಐ(ಎಂ) ಪಕ್ಷದ ಕಾರ್ಯಕರ್ತರು ಪ್ರತಿಭಟಿಸಿ ತಹಶೀಲ್ದಾರ್ ಕಚೇರಿಗೆ ಸೋಮವಾರ ಮನವಿ ಸಲ್ಲಿಸಿದರು. ಈ ಕೊಲೆ ಪ್ರಕರಣವು ಜಾತಿ, ದೌರ್ಜನ್ಯ ಹಾಗೂ ಅಸ್ಪೃಶ್ಯತೆಗೆ ಕರಾಳ ಕಾರ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಘಟನೆಯನ್ನು ಖಂಡಿಸಿದರು. ಕೊಲೆ ಮಾಡಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಕೊಲೆಗೀಡಾದವರ ಕುಟುಂಬಕ್ಕೆ …
Read More »ಅಣೆಕಟ್ಟೆಯಿಂದ ನೀರು ಬಿಡುಗಡೆ, ಹಳೆ ಸೇತುವೆ ಮುಳುಗಡೆ
ಅಣೆಕಟ್ಟೆಯಿಂದ ನೀರು ಬಿಡುಗಡೆ, ಹಳೆ ಸೇತುವೆ ಮುಳುಗಡೆ ರಾಮದುರ್ಗ: ಸವದತ್ತಿಯ ನವೀಲು ತೀರ್ಥ ಅಣೆಕಟ್ಟೆಯಿಂದ 10 ಸಾವಿರಕ್ಕೂ ಹೆಚ್ಚಿನ ನೀರು ಹರಿಸಿದ್ದರಿಂದ ತಾಲ್ಲೂಕಿನ ಹಳೆ ಸೇತುವೆ ಸಂಪೂರ್ಣ ಮುಳುಗಡೆಯಾಗಿ ವಾಹನಗಳ ಸಂಚಾರ ಸ್ಥಗಿತವಾಗಿದೆ. ಹಳೇ ಸೇತುವೆ ಮೇಲೆ ನಾಲ್ಕು ಐದು ಅಡಿಯಷ್ಟು ನೀರು ಹರಿಯುತ್ತಿದ್ದು ಪಕ್ಕದಲ್ಲಿದ್ದ ಜಾನಕಿರಾಮ ದೇವಸ್ಥಾನ ಜಲಾವೃತವಾಗಿದೆ. ನವೀಲು ತೀರ್ಥ ಅಣೆಕಟ್ಟೆ ಒಟ್ಟು 2079.50 ಅಡಿ ಸಾಮರ್ಥ್ಯ ಹೊಂದಿದ್ದು, ಈಗಾಗಲೇ ಅಣೆಕಟ್ಟೆಯಲ್ಲಿ 2078.10 ಅಡಿ ನೀರು ಸಂಗ್ರಹವಾಗಿದೆ. ಒಳ …
Read More »ಬಳ್ಳಾರಿ ಸೆಂಟ್ರಲ್ ಜೈಲಿಗೆ ದರ್ಶನ್ ಶಿಫ್ಟ್
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ನಟ ದರ್ಶನ್ನ್ನು ಸ್ಥಳಾಂತರ ಮಾಡಲು ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಐಷರಾಮಿ ಸವಲತ್ತು ಮತ್ತು ರೌಡಿ ಸಹವಾಸ ಮಾಡಿದ್ದ ದರ್ಶನ್ ಫೋಟೋ, ವಿಡಿಯೋ ವೈರಲ್ ಆಗಿದ್ದವು. ಇದರಿಂದ ಸರ್ಕಾರಕ್ಕೆ ಮತ್ತು ಗೃಹ ಇಲಾಖೆಗೆ ಮುಜುಗರ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ರೇಣುಕಸ್ವಾಮಿ ಕೊಲೆ ಕೇಸಿನ ಆರೋಪಿಗಳನ್ನು ಸ್ಥಳಾಂತರ ಮಾಡಲು ಅನುಮತಿ ನೀಡುವಂತೆ ಪೊಲೀಸರು ಮತ್ತು ಜೈಲಾಧಿಕಾರಿಗಳು ಕೋರ್ಟ್ ಮೊರೆ ಹೋಗಿದ್ದರು. ಮನವಿಗೆ …
Read More »ಜಿಂದಾಲ್ ನಿಂದ 90 ಸಾವಿರ ಕೋಟಿ ರೂ. ಹೂಡಿಕೆ :ಸಚಿವ ಲಾಡ್ ಸಮರ್ಥನೆ
ಧಾರವಾಡ: ರಾಜ್ಯ ಸರಕಾರ ಜಿಂದಾಲ್ಗೆ ಅನುಕೂಲ ಮಾಡಿ ಜಾಗ ಕೊಡುತ್ತಿಲ್ಲ. 90 ಸಾವಿರ ಕೋಟಿ ರೂ.ಗಳನ್ನು ಜಿಂದಾಲ್ ಇಲ್ಲಿ ಹೂಡಿಕೆ ಮಾಡಿದೆ. ಯಾವುದೇ ಒಂದು ಸಂಸ್ಥೆಗೆ ಲೀಸ್ ಕೊಟ್ಟಾಗ ಕಾನೂನು ಪ್ರಕಾರ ಷರತ್ತು ಇರುತ್ತದೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿ ಜಿಂದಾಲ್ಗೆ ಭೂಮಿ ಕೊಡುತ್ತಿರುವುದನ್ನು ವಿರೋಧಿಸುತ್ತಿರುವ ಶಾಸಕ ಅರವಿಂದ ಬೆಲ್ಲದ ಅವರ ಕುರಿತು ಸುದ್ದಿಗಾರರುಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಲಾಡ್, ಬೆಲ್ಲದ್ ಕೈಗಾರಿಕೆ ಹೊಂದಿದವರು. ಕೆಐಎಡಿಬಿ ಜಾಗವನ್ನು …
Read More »ಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ:ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿ ಮಾದರಿಯನ್ನಾಗಿ ಮಾಡುವ ಸಂಕಲ್ಪ ಮಾಡುವಂತೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪಪಂ ನೂತನ ಆಧ್ಯಕ್ಷ- ಉಪಾಧ್ಯಕ್ಷರಿಗೆ ಕಿವಿ ಮಾತು ಹೇಳಿದರು. ಕಲ್ಲೊಳ್ಳಿ ಪಟ್ಟಣ ಪಂಚಾಯತಿಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ- ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಅವರು, ನಾಗರಿಕರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪಂಚಾಯತಿ ಕಮೀಟಿಯವರು ಶ್ರಮಿಸುವಂತೆ …
Read More »ಮಣ್ಣಿನ ಗಣಪನ ನಾನಾ ರೂಪ ಸಿದ್ಧ
ಹುಬ್ಬಳ್ಳಿ: ಗಣೇಶನ ಹಬ್ಬಕ್ಕೆ ದಿನಗಣನೆ ಶುರುವಾಗಿರುವಂತೆಯೇ ನಗರದಲ್ಲಿ ಕಲಾವಿದರು ಮಣ್ಣಿನ ಗಣೇಶ ಮೂರ್ತಿಗಳಿಗೆ ಅಂತಿಮ ರೂಪ, ಬಣ್ಣ ನೀಡುತ್ತಿದ್ದಾರೆ. ಹುಬ್ಬಳ್ಳಿ ಗಣೇಶೋತ್ಸವಕ್ಕೆ ಅದರದ್ದೇ ಆದ ವಿಶೇಷತೆ ಇದೆ. 3-4 ತಲೆಮಾರುಗಳಿಂದ ಮಣ್ಣಿನ ಗಣಪತಿಗಳನ್ನು ತಯಾರಿಸುವ ಹಲವು ಕುಟುಂಬಗಳು ಇಲ್ಲಿವೆ. ಹೊಸೂರು 2ನೇ ಕ್ರಾಸ್, ಬಮ್ಮಾಪುರ ಓಣಿ, ಹಳೇಹುಬ್ಬಳ್ಳಿಯ ಅರವಿಂದ ನಗರ ಹಾಗೂ ಮರಾಠ ಗಲ್ಲಿಗಳಲ್ಲಿ ಈಗ ಮಣ್ಣಿನ ಗಣೇಶ ಮೂರ್ತಿ ತಯಾರಿಸುವ ಕುಟುಂಬಗಳು ಹಗಲು ರಾತ್ರಿ ಕಾರ್ಯ ನಿರತವಾಗಿವೆ. ಹೊಸೂರು- 2ನೇ …
Read More »ಧಾರವಾಡ: ಕರ್ನಾಟಕ ವಿ.ವಿ ಪದವಿ ಪರೀಕ್ಷೆ ಮುಂದೂಡಿಕೆ
ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯವು ಆಗಸ್ಟ್ 27ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಿದೆ. ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ಪರೀಕ್ಷೆ ಆಗಸ್ಟ್ 27ಕ್ಕೆ ನಿಗದಿಯಾಗಿರುವುದರಿಂದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಿರುವ ಪದವಿ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿಯನ್ನು ವಿಶ್ವವಿದ್ಯಾಲಯದ www.kud.ac.in ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ ಎಂದು ಪರೀಕ್ಷಾಂಗ ಕುಲಸಚಿವ ಎನ್.ವೈ.ಮಟ್ಟಿಹಾಳ್ ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.
Read More »ಶಾಸಕ ರವಿಕುಮಾರ್ ವಿರುದ್ಧ ಮಾನನಷ್ಟ ಮೊಕದ್ದಮೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಹುಬ್ಬಳ್ಳಿ: ’ರಾಜ್ಯ ಸರ್ಕಾರ ಉರುಳಿಸಲು ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರಿಗೆ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿರುವ ಮಂಡ್ಯ ಶಾಸಕ ಪಿ.ರವಿಕುಮಾರ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ‘ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳನ್ನು ಮರೆ ಮಾಚಲು ಶಾಸಕರ ಖರೀದಿ ಕುರಿತು ಅಪಪ್ರಚಾರ ಮಾಡಲಾಗುತ್ತಿದೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು. ‘ಕಾಂಗ್ರೆಸ್ ಶಾಸಕರಿಗೆ ₹50 ರಿಂದ ₹100 ಕೋಟಿ ಆಮಿಷವೊಡ್ಡುತ್ತಿದ್ದಾರೆ ಎಂದು …
Read More »ಟಿ20 ವಿಶ್ವಕಪ್ಗೆ ಭಾರತ ತಂಡ ಪ್ರಕಟ; ಕನ್ನಡತಿ ಶ್ರೇಯಾಂಕಾ ಪಾಟೀಲ್ಗೆ ಸ್ಥಾನ
ಅಕ್ಟೋಬರ್ 3ರಿಂದ ಆರಂಭವಾಗಲಿರುವ ಮಹಿಳಾ ಟಿ20 ವಿಶ್ವಕಪ್ಗೆ ಬಿಸಿಸಿಐ ಭಾರತ ತಂಡವನ್ನು ಆಯ್ಕೆ ಮಾಡಿದೆ. ಬಾಂಗ್ಲಾದೇಶದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಪಂದ್ಯಾವಳಿ ಅಲ್ಲಿ ದಂಗೆ ಶುರುವಾದ ಬಳಿಕ, ಯುಎಇಗೆ ಸ್ಥಳಾಂತರ ಮಾಡಿದೆ. ಭಾರತ ಬಲಿಷ್ಠ ತಂಡವನ್ನು ಆಯ್ಕೆ ಮಾಡಿದ್ದು, ಈ ಬಾರಿ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದೆ. ಕನ್ನಡತಿ ಶ್ರೇಯಾಂಕಾ ಪಾಟೀಲ್ ಕೂಡ ಟಿ20 ವಿಶ್ವಕಪ್ನಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಹರ್ಮನ್ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದಾರೆ. ಸ್ಮೃತಿ ಮಂದಾನಗೆ ತಂಡದ ಉಪನಾಯಕಿ ಪಟ್ಟ …
Read More »