Breaking News

ಜೈನ್‌ ವಿಶ್ವವಿದ್ಯಾಲಯದಲ್ಲಿ ಅಂಬೇಡ್ಕರ್‌ಗೆ ಅವಮಾನ ಪ್ರಕರಣ:7 ಜನ ವಿದ್ಯಾರ್ಥಿಗಳು ಅರೆಸ್ಟ್‌

ಬೆಂಗಳೂರು:ಜೈನ್‌ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಂದ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರಿಗೆ ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ವಿದ್ಯಾರ್ಥಿಗಳನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ಸುಜಲ್, ಗೌರವ್ ಪವಾರ್, ನೈಮಾ ನಾಗ್ರಿಯಾ, ಪ್ರಣವ್ ಪಲ್ಲಿಯಿಲ್, ರಿಷಬ್ ಜೈನ್, ಸ್ಮೃತಿ ಆರ್.ಬಿ, ಆಸಿಶ್ ಅಗರ್ವಾಲ್ ಬಂಧಿತ ವಿದ್ಯಾರ್ಥಿಗಳು.ವಿದ್ಯಾರ್ಥಿಗಳೆಲ್ಲ ಬಿಬಿಎ 5 ನೇ ಸೆಮಿಸ್ಟರ್​​ನಲ್ಲಿ ಓದುತ್ತಿದ್ದಾರೆ ಎಂದು ತಿಳಿದುಬಂದಿದೆ. ಫೆಬ್ರವರಿ 8ರಂದು ಕಾಲೇಜ್ ಫೆಸ್ಟ್ ಒಂದರ ಮ್ಯಾಡ್ ಆಯಡ್ ಸ್ಪರ್ಧೆಯಲ್ಲಿ ಜಾತಿ ವ್ಯವಸ್ಥೆಯನ್ನ ಖಂಡಿಸುವ ಸಂದೇಶ …

Read More »

ಕಲಬುರಗಿ ಕಲಾವಿದರ ಗುಂಪಿನಿಂದ “ಕ್ರಿಯೇಟಿವ್ ಕಾಂಟೋರ್ಸ”ಶೀರ್ಷಿಕೆ ಅಡಿ ಸಮೂಹ ಕಲಾ ಪ್ರದರ್ಶನ

ದಾವಣಗೆರೆ: ಕಲಬುರಗಿಯ ಚಿತ್ರ ಕಲಾವಿದ ರಾಮಗಿರಿ ಪೊಲೀಸ್ ಪಾಟೀಲ್ ರವರ ಸಂಯೋಜನೆ-ಸಂಚಾಲಕತ್ವದಲ್ಲಿ ಕಳೆದ9,10,11-2-2023 ರವರೆಗೆ ದಾವಣಗೆರೆಯ ದೃಶ್ಯ ವಿಶ್ವ ಕಲಾಗ್ಯಾಲರಿಯಲ್ಲಿ ಕಲಬುರಗಿ ಕಲಾವಿದರ ಗುಂಪಿನಿಂದ “ಕ್ರಿಯೇಟಿವ್ ಕಾಂಟೋರ್ಸ”ಶೀರ್ಷಿಕೆ ಅಡಿ ಸಮೂಹ ಕಲಾ ಪ್ರದರ್ಶನ ನಡೆಯಿತು. ಇದರಲ್ಲಿ ಅಶೋಕ ಚಿತ್ಕೋಟಿ, ಬಿ.ಎನ್. ಪಾಟೀಲ್, ಭಾಗ್ಯ ಶ್ರೀ ಕುಲಕರ್ಣಿ, ಗಾಯತ್ರಿ ಕುಲಕರ್ಣಿ, ನಂದಿನಿ ಮುಸಿಗಿ,ಕೆ.ಎಸ್. ಕಾಮತಗೌಡರ್, ರಾಮಗಿರಿ ಪೋಲೀಸ್ ಪಾಟೀಲ್, ಸೂರ್ಯ ಕಾಂತ ನಂದೂರ,ಅಶ್ವಿನಿ ಭರತ್ ಗೋಮತಂ, ಜನನಿ ಮನೋಹರ್, ಪ್ರಮೀಳಾ ನಿಟ್ಟೂರ,ಶಿವಲೀಲಾ ಉಪ್ಪಿನ, …

Read More »

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಜೈಲುಶಿಕ್ಷೆ

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನಯಯಾಲಯ ಆದೇಶ ಹೊರಡಿಸಿದೆ. ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಹೂವಪ್ಪಗೌಡ ಅವರಿಗೆ 1,38,65,000 ರೂಪಾಯಿ ಹಣ ನೀಡಬೇಕಿತ್ತು. ಆದರೆ ಹಣ ಕೊಡದೇ ಸಮಸ್ಯೆ ಮಾಡಿದ್ದರು. ಇದರಿಂದ ಬೇಸತ್ತ ಹೂವಪ್ಪ ಗೌಡ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣ ಸಂಬಂಧ ಕೋರ್ಟ್, ಶಾಸಕ ಎಂ.ಪಿ ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ …

Read More »

ಹಿಡಕಲ್ ಡ್ಯಾಂ ಭೂ ಸ್ವಾಧೀನಾಧಿಕಾರಿ ರೇಷ್ಮಾ ತಾಳಿಕೋಟಿ ಅವರ ಪತಿ ಜಾಫರ್ ಫಿರ್ಜಾದೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಳಗಾವಿ: ಹಿಡಕಲ್ ಡ್ಯಾಂ ಭೂ ಸ್ವಾಧೀನಾಧಿಕಾರಿ ರೇಷ್ಮಾ ತಾಳಿಕೋಟಿ ಅವರ ಪತಿ ಜಾಫರ್ ಫಿರ್ಜಾದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ 40 ವರ್ಷ ವಯಸ್ಸಾಗಿತ್ತು. ರೇಷ್ಮಾ ತಾಳಿಕೋಟೆ ಬೆಂಗಳೂರಿಗೆ ತೆರಳಿದ್ದ ಸಂದರ್ಭದಲ್ಲಿ ಬಳಗಾವಿಯ ಆಜಂ ನಗರದ ಮನೆಯಲ್ಲೇ ನೇಣು ಹಾಕಿಕೊಂಡು ಅವರು ಸೋಮವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆಎಎಸ್ ಅಧಿಕಾರಿಯಾಗಿರುವ ರೇಷ್ಮಾ ತಾಳಿಕೋಟೆ ಹುಕ್ಕೇರಿ, ಖಾನಾಪುರ ಸೇರಿದಂತೆ ವಿವಿಧೆಡೆ ತಹಸಿಲ್ದಾರರಾಗಿ ಕಾರ್ಯನಿರ್ವಹಿಸಿದ್ದರು. ಪತಿ ಜಾಫರ್ ಜಿಲ್ಲಾ ತರಬೇತಿ ಕೇಂದ್ರದಲ್ಲಿ  ಎಫ್ ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದರು. …

Read More »

ಗಂಡನ ಕೊಲೆಗೆ ಪತ್ನಿಯಿಂದಲೇ ಸುಪಾರಿ; ಹುಟ್ಟುಹಬ್ಬದಂದೇ ಕೊಲೆಗೈದು ಕೆರೆಗೆ ಎಸೆದ್ರು!

ತುಮಕೂರು: ನೂರು ವರ್ಷ ಒಬ್ಬರಿಗೊಬ್ಬರು ಜೊತೆಯಾಗಿ ಇರ್ತೀವಿ ಅಂತ ಹಿರಿಯ ಸಮ್ಮುಖದಲ್ಲಿ ಗಂಡನ (Husband) ಕೈ ಹಿಡಿದಿದ್ದ ಮಹಿಳೆಯೇ (Women) ಗಂಡನನ್ನು ಕೊಲೆ ಮಾಡಲು ಸುಪಾರಿ ನೀಡಿದ್ದ ಘಟನೆ ತುಮಕೂರು (Tumakuru) ಜಿಲ್ಲೆಯ ಕುಣಿಗಲ್ (Kunigal)​​ನಲ್ಲಿ ಬೆಳಕಿಗೆ ಬಂದಿದೆ. ಹೆಂಡತಿಯೇ ಗಂಡನ (Wife) ಕೊಲೆಗೆ ಸುಪಾರಿ ಕೊಟ್ಟು ಆತನನ್ನು ಪರಲೋಕಕ್ಕೆ ಕಳುಹಿಸಿದ್ದಾಳೆ. ಇದರೊಂದಿಗೆ ಹುಟ್ಟುಹಬ್ಬದ ದಿನವೇ ಅನುಮಾನಸ್ಪದಾಗಿ ಸಾವನ್ನಪ್ಪಿದ್ದ ವ್ಯಕ್ತಿಯ ಪ್ರಕರಣವನ್ನು ಕುಣಿಗಲ್​​ ಪೊಲೀಸರು (Police) ಬೇದಿಸಿದ್ದು, ಪ್ರಕರಣದಲ್ಲಿ ಕೊಲೆದ …

Read More »

ಸಿದ್ದರಾಮಯ್ಯ’ ವಿರುದ್ಧ ಸ್ಪರ್ಧಿಸಲು ಕೃಷ್ಣಾರೆಡ್ಡಿಗೆ ಬಿಜೆಪಿಯಿಂದ ಟಿಕೆಟ್ ಆಫರ್ : ಶಾಸಕ ಶ್ರೀನಿವಾಸ ಗೌಡ ಹೊಸ ಬಾಂಬ್

ಕೋಲಾರ : ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಹಲವು ಭಾರಿ ಘೋಷಣೆ ಮಾಡಿದ್ದಾರೆ. ಇದೀಗ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವಂತೆ ಬಿಜೆಪಿ ಕೃಷ್ಣಾರೆಡ್ಡಿಗೆ ಆಫರ್ ನೀಡಿದೆ ಎನ್ನಲಾಗಿದೆ. ನಾವೇ ದುಡ್ಡು ಕೊಡುತ್ತೇವೆ, ನೀವು ಸಿದ್ದರಾಮಯ್ಯ ವಿರುದ್ಧ ಚುನಾವಣೆಗೆ ನಿಲ್ಲಿ ಎಂದು ಸಚಿವ ಸುಧಾಕರ್ ಆಫರ್ ನೀಡಿದ್ದಾರೆ ಎಂದು ಶಾಸಕ ಶ್ರೀನಿವಾಸ ಗೌಡ ಹೇಳಿದ್ದಾರೆ. ಕೋಲಾರ ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೃಷ್ಣಾರೆಡ್ಡಿ ಮನೆಗೆ ಜ.25 …

Read More »

ಜನಸೇವೆಗಾಗಿ ಜಡ್ಜ್ ಹುದ್ದೆಗೆ ರಾಜೀನಾಮೆ, ಜೆಡಿಎಸ್ ಸೇರ್ಪಡೆ!

ಕಲಬುರಗಿ, ಫೆಬ್ರವರಿ 13; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವು ಏರುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಕಣಕ್ಕಿಳಿದು, ಜನಸೇವೆ ಮಾಡಲು ಹಲವರು ಮುಂದಾಗಿದ್ದಾರೆ. ವಿವಿಧ ಪಕ್ಷಗಳ ಟಿಕೆಟ್‌ ಪಡೆಯಲು ಕಸರತ್ತು ನಡೆಸುತ್ತಿದ್ದಾರೆ. ಏಪ್ರಿಲ್ ಅಥವ ಮೇನಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದೆ.   ವಿಜಯಪುರದ ವ್ಯಕ್ತಿಯೊಬ್ಬರು ಜನಸೇವೆ ಮಾಡಲು ಜಡ್ಜ್ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ …

Read More »

ಸಿದ್ದರಾಮಯ್ಯ ಹೊಸ ಪ್ಲಾನ್: ‘ಬಂಡೆ’ ಬುಡಕ್ಕೆ ಡೈನಾಮೇಟ್- ಕುಮಾರಸ್ವಾಮಿಗೆ ಲಾಕ್; ಚನ್ನಪಟ್ಟಣದಿಂದ ಸ್ಯಾಂಡಲ್ ವುಡ್ ಕ್ವೀನ್?

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ರಾಜ್ಯ ರಾಜಕೀಯ ರಂಗೇರುತ್ತಿದೆ, ಮೂರು ಪಕ್ಷಗಳು ಬಹುಮತ ಪಡೆಯಲು ಹಲವು ತಂತ್ರಗಳನ್ನು ಬಳಸುತ್ತಿದ್ದಾರೆ. ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಹೆಚ್ಚು ಸ್ಥಾನ ಪಡೆಯಲು ಕಾಂಗ್ರೆಸ್, ಜೆಡಿಎಸ್ ಜೊತೆ ಬಿಜೆಪಿ ಕೂಡ ಹಣಾಹಣಿ ನಡೆಸುತ್ತಿದೆ. ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ರಾಜ್ಯ ರಾಜಕೀಯ ರಂಗೇರುತ್ತಿದೆ, ಮೂರು ಪಕ್ಷಗಳು ಬಹುಮತ ಪಡೆಯಲು ಹಲವು ತಂತ್ರಗಳನ್ನು ಬಳಸುತ್ತಿದ್ದಾರೆ. ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಹೆಚ್ಚು ಸ್ಥಾನ ಪಡೆಯಲು ಕಾಂಗ್ರೆಸ್, ಜೆಡಿಎಸ್ ಜೊತೆ ಬಿಜೆಪಿ …

Read More »

ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಸರಕಾರ ಪ್ರತ್ಯೇಕ ಬಜೆಟ್ ಮಂಡಿಸಲಿ:ಶ್ರೀ ಚಂದ್ರಶೇಖರ ಶಿವಾಚಾರ್ಯ

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಕಿತ್ತೂರು ಕರ್ನಾಟಕದ ಅಭಿವೃದ್ಧಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸಬೇಕು. ಇದಕ್ಕಾಗಿ ಈ ಭಾಗದ ಶಾಸಕರು, ಸಚಿವರು ಮುಖ್ಯಮಂತ್ರಿಗಳ ಮನವಿ ಮಾಡಬೇಕು ಎಂದು ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಶ್ರೀಗಳು, ರಾಜ್ಯದ ಆಡಳಿತವನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಕಾರ್ಯಕ್ಷಮತೆ, ನಾಡಿಗೆ ನೀಡಿದ ಕೊಡುಗೆಗಳು …

Read More »

(ಇವಿಎಂ) ಪ್ರಥಮ ಹಂತದ ಪರಿಶೀಲನಾಕಾರ್ಯ ಆರಂಭ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ : ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಹಂಚಿಕೆಯಾಗಿರುವ ಎಲೆಕ್ಟ್ರಾನಿಕ್ ಮತಯಂತ್ರಗಳ(ಇವಿಎಂ) ಪ್ರಥಮ ಹಂತದ ಪರಿಶೀಲನಾಕಾರ್ಯ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಇಲ್ಲಿನ ಹಿಂಡಲಗಾ ಗ್ರಾಮದಲ್ಲಿರುವ ಭಾರತ ಚುನಾವಣಾ ಆಯೋಗದ ಮತಯಂತ್ರಗಳ ಉಗ್ರಾಣದಲ್ಲಿ ಸೋಮವಾರ(ಫೆ.13) ಆರಂಭಿಸಲಾಗಿರುವ ಪ್ರಥಮ ಹಂತದ ಪರಿಶೀಲನಾ(ಎಫ್.ಎಲ್‌.ಸಿ)ಕಾರ್ಯವನ್ನು ವೀಕ್ಷಿಸಿದ ಬಳಿಕ ಈ ವಿಷಯ ತಿಳಿಸಿದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಳಕೆಗಾಗಿ ಜಿಲ್ಲೆಗೆ ನೀಡಲಾಗಿರುವ ಮತಯಂತ್ರಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ …

Read More »