Breaking News

ಆನ್​​ಲೈನ್​ ವಂಚಕರದ್ದು ಈಗ ಬೆಸ್ಕಾಂ ಬಿಲ್​ ಹೆಸರಲ್ಲೂ ಮೋಸ; ವಂಚನೆ ಹೇಗೆ?

ಬೆಂಗಳೂರು: ವಿದ್ಯುತ್ ಬಿಲ್ ವಸೂಲಿ ನೆಪದಲ್ಲಿ ಬೆಸ್ಕಾಂ ಅಧಿಕಾರಿಗಳ ಸೋಗಿನಲ್ಲಿ ಸಾರ್ವಜನಿಕರಿಗೆ ಕರೆ ಮಾಡಿ ವಂಚನೆ ಮಾಡುವ ಸೈಬರ್ ಕಳ್ಳರ ಹಾವಳಿ ತಪ್ಪಿಲ್ಲ. ವೃದ್ಧರೊಬ್ಬರಿಗೆ ಕರೆ ಮಾಡಿ ಬ್ಯಾಂಕ್ ಖಾತೆಗೆ 1.98 ಲಕ್ಷ ರೂ. ಕನ್ನ ಹಾಕಿರುವ ಸಂಬಂಧ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಸರಸ್ವತಿನಗರ ನಿವಾಸಿ ಎ.ಆರ್.ಕೃಷ್ಣಮೂರ್ತಿ ಎಂಬುವರು ವಂಚನೆಗೆ ಒಳಗಾದವರು. ಇವರು ಕೊಟ್ಟ ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಫೆ.2ರಂದು …

Read More »

ರಿಷಭ್ ಶೆಟ್ಟಿ, ಭೇಟಿ ಮಾಡಿದ ಪ್ರಧಾನಿ ಮೋದಿ!

ಬೆಂಗಳೂರು: ‘ಏರೋ ಇಂಡಿಯಾ-2023’ರ ಉದ್ಘಾಟನೆ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿದರು. ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತಲುಪಿದ ಅವರನ್ನು ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್​, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರಮಾಡಿಕೊಂಡರು.   ಇದಾದ ಮೇಲೆ ನಿನ್ನೆ ರಾತ್ರಿ ಬೆಂಗಳೂರಿನ ರಾಜಭವನದಲ್ಲಿ ಔತಣಕೂಟ ಆಯೋಜಿಸಲಾಗಿತ್ತು. ಈ ಸಂದರ್ಭ ಕನ್ನಡ ಸ್ಟಾರ್‌ಗಳನ್ನು ಪ್ರಧಾನಿ ಮೋದಿ ಭೇಟಿ ಮಾಡಿದ್ದರು. ಈ ಔತಣ ಕೂಟದಲ್ಲಿ ನಟರಾದ ಯಶ್, ರಿಷಭ್ ಶೆಟ್ಟಿ, ನಿರ್ಮಾಪಕ …

Read More »

‘ಏರೋ ಇಂಡಿಯಾ’ ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು: ಈ ಬಾರಿಯ ಏರೋ ಇಂಡಿಯಾ ಜನರಲ್ಲಿ ಭಾರೀ ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದು ಕುತೂಹಲ ಭರಿತರಾಗಿ ನೋಡುತ್ತಿದ್ದಾರೆ. ಇನ್ನೇನು ಚುನಾವಣೆಯೂ ಹತ್ತಿರದಲ್ಲಿದ್ದು ಪ್ರಧಾನಿ ಮೋದಿ ಎರಡನೇ ಬಾರಿಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಏರೋ ಇಂಡಿಯಾ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ್ದಾರೆ.   ನಿಗದಿಗಿಂತ ಮೊದಲೇ ರಾಜಭವನದಿಂದ ಹೊರಟ ಪ್ರಧಾನಿ ಮೋದಿ (ಬೆಳಗ್ಗೆ 8.35ರ ಹೊತ್ತಿಗೆ) ರಸ್ತೆ ಮಾರ್ಗವಾಗಿ ಮೇಖ್ರೀ ರಸ್ತೆಯಲ್ಲಿರುವ HQTC ಹೆಲಿಪ್ಯಾಡ್​ಗೆ ಆಗಮಿಸಿದರು. ಅಲ್ಲಿಂದ ಯಲಹಂಕ ವಾಯುನೆಲೆಗೆ ವಾಯು ಮಾರ್ಗವಾಗಿ Mi17 …

Read More »

ಕ್ರೂಜರ್, ದ್ವಿಚಕ್ರ ವಾಹನಗಳ ಮಧ್ಯೆ ಸರಣಿ ಅಪಘಾತ

ರಾಮದುರ್ಗ: ತಾಲೂಕಿನ ಕಡ್ಲಿಕೊಪ್ಪ ಗ್ರಾಮದ ಬಳಿ ಕ್ರೂಜರ್ ಹಾಗೂ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ಭಾಗ್ಯ ನಗರದ ಮಾಲಿಂಗ ನಂದಪ್ಪ ಆಚಮಟ್ಟಿ (25) ಹಾಗೂ ಬಸವನ ಬಾಗೇವಾಡಿಯ ರಫಿಕ್ ಚಲವಾದಿ (20) ಮೃತ ಪಟ್ಟವರು. ಗಂಭೀರ ಗಾಯಗೊಂಡಿರುವ ಆಶ್ರಯ ಪ್ಲಾಟ್ ನಿವಾಸಿ ಯುನೂಸ್ ಮಹ್ಮದ್‌ ಪಟೇಲ್ (25) ಅವರನ್ನು ಬಾಗಲಕೋಟೆ ಆಸ್ಪತ್ರೆಗೆ ಸಾಗಿಸಿದ್ದು, ಭಾಗ್ಯ …

Read More »

ಸುನಿಲ್ ಕುಮಾರ್ ವಿರುದ್ಧ ಸ್ಪರ್ಧೆಗೆ ಬಿಜೆಪಿ ಸಚಿವರಿಂದಲೇ ಸಹಕಾರ: ಪ್ರಮೋದ್ ಮುತಾಲಿಕ್

ಮಂಗಳೂರು: ಕಾರ್ಕಳದಲ್ಲಿ ಸ್ಪರ್ಧಿಸಲು ಬಿಜೆಪಿ ಸಚಿವರು, ಶಾಸಕರು ತನುಮನ ಧನದ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ, ಮಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುನಿಲ್ ಕುಮಾರ್ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಲ್ಪಡುತ್ತಿದ್ದು, ಮುಖ್ಯಮಂತ್ರಿ ರೇಸ್ ನಲ್ಲಿರುವ ಇತರ ಕೆಲವು ಬಿಜೆಪಿ ಮುಖಂಡರು ನನಗೆ ಸಹಕಾರದ ಭರವಸೆ ನೀಡಿದ್ದಾರೆ. ಕಾರ್ಕಳದಲ್ಲಿ ನನ್ನ ಗೆಲುವು ಖಚಿತ. ನಕಲಿ ಹಿಂದುತ್ವ ಮತ್ತು …

Read More »

ಹಳ್ಳಿಗೂ ಬಂತು ಐಟಿ ಕಂಪನಿ;

ಶಿರಸಿ: ಐಟಿ, ಬಿಟಿ ಎಂದರೆ ಬೃಹತ್ ನಗರಗಳಿಗಷ್ಟೇ ಸೀಮಿತ. ಅದು ಆ ನಗರದ ಹಾಗೂ ಕಂಪನಿಯ ಪ್ರತಿಷ್ಠೆಯ ಪ್ರಶ್ನೆಯೂ ಹೌದು ಎಂಬ ಭಾವನೆ ದೂರಗೊಳಿಸುವ ವಿದ್ಯಮಾನಕ್ಕೆ ಐಟಿ ಕಂಪನಿಯೊಂದು ಶ್ರೀಗಣೇಶ ಹಾಡಿದೆ. ದಟ್ಟಾರಣ್ಯಗಳ ತವರೆಂದೇ ಖ್ಯಾತವಾದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಂಗಳೆ ಗ್ರಾಮದ ಒಡ್ಡಿನಕೊಪ್ಪದ ಹಸಿರ ಹೊದಿರಿನ ಮಧ್ಯೆ ಆಲ್ಟ್ ಡಿಜಿಟಲ್ ಟೆಕ್ನಾಲಜೀಸ್ ಎಂಬ ಕಂಪನಿ ಪಾದಾರ್ಪಣೆ ಮಾಡುವ ಮೂಲಕ ಹೊಸ ಬೆಳವಣಿಗೆಗೆ ನಾಂದಿ ಹಾಡಿದೆ. ಐಟಿಯಲ್ಲಿ ಸಾಕಷ್ಟು ಹೆಸರುವಾಸಿಯಾಗಿರುವ ಈ …

Read More »

ಆಂಧ್ರದ ರಾಜ್ಯಪಾಲರಾಗಿ ಕನ್ನಡಿಗ ನಜೀರ್

ಬೆಂಗಳೂರು: ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ, ಕರ್ನಾಟಕದ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶ ರಾಜ್ಯದ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ಎಸ್. ಅಬ್ದುಲ್ ನಜೀರ್ ಅವರು ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.   ‘ನೂತನವಾಗಿ ಆಂಧ್ರ ಪ್ರದೇಶದ ರಾಜ್ಯಪಾಲರಾಗಿ ನಿಯುಕ್ತಿಗೊಂಡಿರುವ ಹೆಮ್ಮೆಯ ಕನ್ನಡಿಗ ಎಸ್‌. ಅಬ್ದುಲ್ ನಜೀರ್ ಅವರಿಗೆ ಹಾರ್ದಿಕ ಅಭಿನಂದನೆಗಳು. ಮೂಲತಃ ಮಂಗಳೂರಿನ ಬೆಳುವಾಯಿಯವರಾದ ಇವರು ಕರ್ನಾಟಕದ ಉಚ್ಛ ನ್ಯಾಯಾಲಯದಲ್ಲಿ …

Read More »

ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಮಕ್ಕಳನ್ನೇ ಕೊಂದ ತಂದೆ

ದೇವದುರ್ಗ (ರಾಯಚೂರು ಜಿಲ್ಲೆ): ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿದ ದೇವದುರ್ಗ ತಾಲ್ಲೂಕಿನ ಜಕ್ಲೇರದೊಡ್ಡಿ ಗ್ರಾಮದ ನಿಂಗಪ್ಪ ಎಂಬಾತ ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಶನಿವಾರ ಕೃತ್ಯ ನಡೆದಿದ್ದು, ಭಾನುವಾರ ಗೊತ್ತಾಗಿದೆ.   ಶಿವರಾಜ ನಿಂಗಪ್ಪ (5), ರಾಘವೇಂದ್ರ ನಿಂಗಪ್ಪ (3) ಕೊಲೆಯಾದ ಮಕ್ಕಳು. ಶನಿವಾರ ಮಧ್ಯರಾತ್ರಿಯೇ ದೇವದುರ್ಗ ಪೊಲೀಸ್‌ ಠಾಣೆಗೆ ತೆರಳಿ ಪತಿ ನಿಂಗಪ್ಪನ ವಿರುದ್ಧ ಪತ್ನಿ ಪ್ರಭಾವತಿ ದೂರು ಸಲ್ಲಿಸಿದ್ದಾರೆ. ಆರೋಪಿಯನ್ನು ಪೊಲೀಸರು …

Read More »

ಮಡಿವಾಳೇಶ್ವರ ಕಲ್ಮಠ ಚನ್ನಬಸವ ಸ್ವಾಮೀಜಿ ಲಿಂಗೈಕ್ಯ

ಧಾರವಾಡ: ತಾಲ್ಲೂಕಿನ ಐತಿ ಹಾಸಿಕ ಗರಗ ಮಡಿವಾಳೇಶ್ವರ ಕಲ್ಮಠದ ಪೀಠಾ ಧಿಪತಿ ಚನ್ನಬಸವ ಸ್ವಾಮೀಜಿ (88) ಅವರು ಭಾನುವಾರ ಲಿಂಗೈಕ್ಯರಾದರು. ಇವರು ವಯೋಸಹಜ ಕಾಯಿಲೆ ಬಳಲುತ್ತಿದ್ದರು. ಹಲವು ವರ್ಷಗಳಿಂದ ಕಲ್ಮಠದ ಜವಾಬ್ದಾರಿ ಹೊತ್ತಿದ್ದ ಸ್ವಾಮೀಜಿ, ಮಠದ ಏಳಿಗೆಗಾಗಿ ಶ್ರಮಿಸಿದ್ದರು. ಅನ್ನದಾನ, ವಿದ್ಯಾದಾನಕ್ಕೆ ಹೆಚ್ಚಿನ ಒತ್ತು ನೀಡಿದ್ದ ಅವರು, ಸಮಾಜ ಸೇವೆ ಯಲ್ಲಿಯೂ ತೊಡಗಿಸಿಕೊಂಡಿದ್ದರು. ಮಠದ ಆವರಣದಲ್ಲಿ ಮಧ್ಯಾಹ್ನ 12.30ರಿಂದ ಸೋಮವಾರ ಬೆಳಿಗ್ಗೆ 7.30ರವರೆಗೆ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ಭಕ್ತರಿಗೆ ಅವಕಾಶ …

Read More »

2.60 ಕೋಟಿ ರೂ. ಮೌಲ್ಯದ ವಜ್ರ ವಶಕ್ಕೆ ಪಡೆದ ಅಧಿಕಾರಿಗಳು

ಮಂಗಳೂರು: ಭಾರತ ದಿಂದ ದುಬಾೖಗೆ ಅಕ್ರಮವಾಗಿ ವಿಮಾನದಲ್ಲಿ 2.60 ಕೋಟಿ ರೂ. ಮೌಲ್ಯದ ವಜ್ರ ಸಾಗಿಸುತ್ತಿದ್ದ ಇಬ್ಬರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾರತೀಯ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದುಬಾೖಗೆ ತೆರಳುತ್ತಿದ್ದ ಭಟ್ಕಳದ ಅನಾಸ್‌ ಮತ್ತು ಅಮ್ಮರ್‌ ತಮ್ಮ ಶೂ ಮತ್ತು ಬ್ಯಾಗ್‌ ಅಡಿಯಲ್ಲಿ ಅನುಮಾನ ಬಾರದಂತೆ ವಜ್ರವನ್ನು ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದರು. ಮುಂಬಯಿಯಿಂದ ತಂದಿದ್ದರು ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಶನ್‌ ವಿಭಾಗದಲ್ಲಿ ತಪಾಸಣೆ ವೇಳೆ ಇದು …

Read More »