ನವದೆಹಲಿ : ಕೇಂದ್ರದ ಬಿಜೆಪಿ ನೇತೃತ್ವದ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೇಶದಲ್ಲಿ ವಾಕ್ ಸ್ವಾತಂತ್ರ್ಯವಿಲ್ಲ ಎಂದು ಶನಿವಾರ ಆರೋಪಿಸಿದ್ದಾರೆ. ಜಾರ್ಖಂಡ್‌ನ ಸಾಹೇಬ್‌ಗಂಜ್ ಜಿಲ್ಲೆಯಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಸಂಸತ್ತಿನಲ್ಲಿ ಮಾಡಿದ ಭಾಷಣದ ಭಾಗಗಳನ್ನು ತೆಗೆದುಹಾಕಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ”ಸಂಸತ್ತಿನ ಒಳಗೆ ಅಥವಾ ಹೊರಗೆ ವಾಕ್ ಸ್ವಾತಂತ್ರ್ಯವಿಲ್ಲ. ಯಾರಾದರೂ ಸತ್ಯವನ್ನು ಮಾತನಾಡಿದರೆ, ಅದರ ಬಗ್ಗೆ ಬರೆದರೆ, ತೋರಿಸಿದವರನ್ನು ಬಿಜೆಪಿಯವರು ಕಂಬಿ ಹಿಂದೆ …
Read More »2 ವಿಭಾಗಗಳ 33 ಕ್ಷೇತ್ರಗಳನ್ನು ಗೆಲ್ಲಲು ಅಮಿತ್ ಶಾ ಸೂತ್ರ ; ಮಂಗಳೂರಿನಲ್ಲಿ ಮಹತ್ವದ ಸಭೆ
ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಭರ್ಜರಿ ರಣತಂತ್ರಗಳನ್ನು ರೂಪಿಸಿರುವ ಬಿಜೆಪಿ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಿ ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದೆ. ಬಿಜೆಪಿಯ ಶಿವಮೊಗ್ಗ, ಮಂಗಳೂರು ವಿಭಾಗಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸಿ, ನಾಯಕರಿಗೆ ಚುನಾವಣೆ ಸಂಬಂಧಿಸಿ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ , ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ …
Read More »ನಮ್ಮ ಮೈತ್ರಿ ಸರಕಾರ ನ್ಯಾಯಸಮ್ಮತವಾಗಿದ್ದು, ಅವಧಿ ಪೂರೈಸುತ್ತದೆ: ಫಡ್ನವೀಸ್
ನಾಸಿಕ್: ಏಕನಾಥ್ ಶಿಂಧೆ-ಬಿಜೆಪಿ ಸರಕಾರವು ನ್ಯಾಯಸಮ್ಮತವಾಗಿದೆ ಮತ್ತು ಅಧಿಕಾರದಲ್ಲಿ ಮುಂದುವರಿಯುತ್ತದೆ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಶನಿವಾರ ಹೇಳಿದ್ದಾರೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣವು ಅದರ ಪತನದ ಬಗ್ಗೆ ಭವಿಷ್ಯ ನುಡಿದ ಬೆನ್ನಲ್ಲೇ, ಜೂನ್ 2022 ರಲ್ಲಿ ಅಧಿಕಾರಕ್ಕೆ ಬಂದ ಸರಕಾರವು ಸಂವಿಧಾನದ ನಿಯಮಗಳ ಪ್ರಕಾರ ರಚನೆಯಾಗಿದೆ ಎಂದು ಫಡ್ನವೀಸ್ ಹೇಳಿದ್ದಾರೆ. ನಾಸಿಕ್ ನಗರದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿಯನ್ನುದ್ದೇಶಿಸಿ ಮಾತನಾಡಿದ ಫಡ್ನವೀಸ್, ಏಕನಾಥ್‌ಅ ಶಿಂಧೆ ಅವರ ಬಣದ …
Read More »ಹಿರಿಯ I,A,S,ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ.: ರಾಜ್ಯ ಸರ್ಕಾರ
ಬೆಂಗಳೂರು: ಚುನಾವಣ ಹೊಸ್ತಿಲಲ್ಲಿ ರಾಜ್ಯ ಸರಕಾರ ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಡಾ| ರಮಣ್ ರೆಡ್ಡಿ-ಅಭಿವೃದ್ಧಿ ಆಯುಕ್ತರು, ಬೆಂಗಳೂರು. ಕಪಿಲ್ ಮೋಹನ್- ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆ. ಜಿ.ಕುಮಾರ್ ನಾಯಕ್ – ಬಿಡಿಎ ಆಯುಕ್ತ. ಎಸ್.ಆರ್.ಉಮಾಶಂಕರ್-ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ. ರಶ್ಮಿ ವಿ.ಮಹೇಶ್ – ಪ್ರಧಾನ ಕಾರ್ಯದರ್ಶಿ ಕಂದಾಯ ಇಲಾಖೆ ( ವಿಕೋಪ ನಿರ್ವಹಣೆ, ಭೂಮಿ). ಡಾ| ಸೆಲ್ವಕುಮಾರ್ – ಪ್ರಧಾನ ಕಾರ್ಯದರ್ಶಿ, ವಾಣಿಜ್ಯ …
Read More »ರಾಜ್ಯಕ್ಕೆ ಕೇಂದ್ರ ಕೊಟ್ಟಿದ್ದೆಷ್ಟು ಮೋದಿ ಅವರೇ: ಎಚ್‌ಡಿಕೆ ಪ್ರಶ್ನೆ
ಬೆಂಗಳೂರು: ಜಿಎಸ್‌ಟಿ ಸೇರಿ ರಾಜ್ಯದಿಂದ ಕೇಂದ್ರ ಸರಕಾರದ ಬೊಕ್ಕಸಕ್ಕೆ ತೆರಿಗೆ ಹಣ ಹರಿದು ಹೋಗುತ್ತಿದ್ದರೂ ರಾಜ್ಯಕ್ಕೆ ಕೊಟ್ಟಿದ್ದು ಎಷ್ಟು ಎಂಬುದು ರಾಜ್ಯಕ್ಕೆ ಬಂದಾಗ ಲೆಕ್ಕ ಕೊಡಿ ಮೋದಿ ಅವರೇ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ಕೇಂದ್ರ ಸರಕಾರದ ಪಾಲಿಗೆ ಕರ್ನಾಟಕವು ಕಾಮಧೇನು. ಅದರ ಖಜಾನೆ ತುಂಬುವಲ್ಲಿ ನಮ್ಮದು ದೊಡ್ಡ ಪಾಲಿದೆ. ದುರದೃಷ್ಟವಶಾತ್, ದೇಶದ ಪ್ರಮುಖ ಆರ್ಥಿಕ ಶಕ್ತಿಯಾಗಿ ಬೆಳೆದಿರುವ ರಾಜ್ಯಕ್ಕೆ ತೆರಿಗೆ, ಜಿಎಸ್‌ಟಿಯಲ್ಲಿ ಸಮರ್ಪಕ ಪಾಲು ಸಿಗುವುದಿಲ್ಲ. …
Read More »“ಕಾಂಗ್ರೆಸ್‌ಗೆ ಪ್ರಜಾಧ್ವನಿ ಬಸ್‌ನಲ್ಲಿರುವಷ್ಟೇ ಸ್ಥಾನ’: ಅಶ್ವತ್ಥ ನಾರಾಯಣ
ಕಾಂಗ್ರೆಸ್‌ನ ಪ್ರಜಾಧ್ವನಿ ಯಾತ್ರೆಯ ಬಸ್‌ನಲ್ಲಿ ಎಷ್ಟು ಜನ ಪ್ರಯಾಣಿಸುತ್ತಾರೋ ಅಷ್ಟೇ ಸೀಟು ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸಿಗಲಿದೆ ಎಂದು ಸಚಿವ ಡಾ| ಅಶ್ವತ್ಥ ನಾರಾಯಣ ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ರಾಜ್ಯದಲ್ಲಿ ಈ ಬಾರಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬರಲಿದೆ. ಇಡೀ ದೇಶದಲ್ಲೇ ಕಾಂಗ್ರೆಸ್ ಮುಕ್ತವಾಗಿದೆ. ಎಲ್ಲ ರಾಜ್ಯಗಳೂ ಕಾಂಗ್ರೆಸ್ ಮುಕ್ತವಾಗುತ್ತಿದೆ. ನಮ್ಮ ರಾಜ್ಯವೂ ಈ ಚುನಾವಣೆಯಲ್ಲಿ ಕಾಂಗ್ರೆಸ್ ಮುಕ್ತವಾಗಲಿದೆ ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ …
Read More »ಮಂಗಳನಲ್ಲಿ ನೀರು: ಮತ್ತೊಂದು ಸಾಕ್ಷ್ಯ
ವಾಷಿಂಗ್ಟನ್: ಮಂಗಳ ಗ್ರಹದಲ್ಲಿದ್ದ ಸರೋವರದ ಅಲೆಗಳೇ ಕಲ್ಲುಗಳಾಗಿ ಮಾರ್ಪಾಡಾಗಿರುವ ಚಿತ್ರವನ್ನು ನಾಸಾದ ರೋವರ್ ಒಂದು ಸೆರೆ ಹಿಡಿದಿದೆ. ಈ ಮೂಲಕ ಶತಕೋಟಿ ವರ್ಷಗಳ ಹಿಂದೆ ಮಂಗಳ ಗ್ರಹದಲ್ಲಿ ನೀರಿತ್ತು ಎನ್ನುವ ವಾದಗಳಿಗೆ ಮತ್ತೊಂದು ಪುಷ್ಟಿ ಸಿಕ್ಕಿದಂತಾಗಿದೆ. ಮಂಗಳನಲ್ಲಿ ಸಂಚರಿಸುತ್ತಿರುವ ನಾಸಾದ “ಕ್ಯೂರಿಯಾಸಿಟಿ ರೋವರ್’, “ಸಲ್ಫೆಟ್-ಬಿಯರಿಂಗ್ ಯೂನಿಟ್’ ಎನ್ನುವ ಪ್ರದೇಶದಲ್ಲಿ ಸಂಚರಿಸುತ್ತಿರುವ ವೇಳೆ ಕೆಲವು ಚಿತ್ರಗಳನ್ನು ಸೆರೆ ಹಿಡಿದೆ. ಇದು ಪರ್ವತ ಸಾಲಿನಲ್ಲಿರುವ ಪ್ರದೇಶವಾಗಿದ್ದು,ಚಿತ್ರಗಳು ಆ ಪ್ರದೇಶದಲ್ಲಿ ಪುರಾತನ ಸರೋವರವಿತ್ತು ಎನ್ನುವುದಕ್ಕೆ …
Read More »ಕುಂದರಗಿ ಮಹಾಲಕ್ಷ್ಮಿ ಜಾತ್ರೆಗೆ ಭೇಟಿ ನೀಡಿ ಆಶೀರ್ವಾದ ಪಡೆದ ವಿಧಾನ ಪರಿಷತ್ ಸದಸ್ಯರಾದಲಖನ ಜಾರಕಿಹೊಳಿ
ಗೋಕಾಕ: ಗೋಕಾಕ ತಾಲೂಕಿನ ಕುಂದರಗಿ ಗ್ರಾಮದ ಮಹಾಲಕ್ಷ್ಮಿ ದೇವಿ ಜಾತ್ರೆಗೆ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಭೇಟಿ ನೀಡಿದ್ದಾರೆ. ಜಾತ್ರೆಯ ಸಂಭ್ರಮ ಜಿಲ್ಲೆ ಯಾದ್ಯಂತ ಸುಮಾರ ಕಡೆ ಗ್ರಾಮ ದೇವಿಯ ಜಾತ್ರೆಗಳು ನಡಿತಿವೆ. ಲಖನ ಜಾರಕಿಹೊಳಿ ಅವರು ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದು ದೇವರ ಕೃಪೆಗೆ ಪಾತ್ರ ರಾಗಿದ್ದಾರೆ. ಗ್ರಾಮದ ವಿಶೇಷ ಕುಂದು ಕೊರತೆಗಳ ಹಾಗೂ ದೇವಿಯ ಜಾತ್ರೆಗೆ ಬೇಕಾಗುವು ವ್ಯವಸ್ಥೆ ಬಗ್ಗೆ ಗಮನ ಹರಿಸಿ …
Read More »ಅಧಿಕಾರವಿದ್ದಾಗ ಖಾನಾಪುರದ ಜನರಿಗಾಗಿ ಏನನ್ನೂ ಮಾಡದ ಕಾಂಗ್ರೆಸ್ ಮತ್ತು ಜೆಡಿಎಸ್ : ಸೋನಾಲಿ ಸರ್ನೋಬತ್
ಬೆಳಗಾವಿ : ಅಧಿಕಾರವಿದ್ದಾಗ ಖಾನಾಪುರದ ಜನರಿಗಾಗಿ ಏನನ್ನೂ ಮಾಡದ ಕಾಂಗ್ರೆಸ್ ಮತ್ತು ಜೆಡಿಎಸ್ ಈಗ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಯಾತ್ರೆಯ ನೆಪ ಮಾಡಿಕೊಂಡು ಜನರ ಬಳಿ ಬರುತ್ತಿವೆ ಎಂದು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ, ಗ್ರಾಮೀಣ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಡಾ. ಸೋನಾಲಿ ಸರ್ನೋಬತ್ ಟೀಕಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಖಾನಾಪುರ ಕ್ಷೇತ್ರದಲ್ಲಿ ಯಾವುದೇ ಕೆಲಸ ಮಾಡದ ಕಾಂಗ್ರೆಸ್ ಶಾಸಕರು ಹಾಥ್ ಸೇ ಹಾಥ್ ಜೋಡೋ ಎನ್ನುತ್ತ …
Read More »ಜಾರಕಿಹೊಳಿ ಸಾಮ್ರಾಜ್ಯ ನಿರ್ಮಿಸುವಲ್ಲಿ ಕಲಾಲ ಸಮಾಜದ ಕೊಡುಗೆ ಅಪಾರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಕಳೆದ ಐದು ದಶಕಗಳ ಹಿಂದೆ ನಮ್ಮ ಕುಟುಂಬ ಸ್ಥಾಪಿಸಿರುವ ಸಾಮ್ರಾಜ್ಯದಲ್ಲಿ ಕಲಾಲ ಸಮಾಜದವರ ಪರಿಶ್ರಮ ಅಪಾರವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ತಾಲೂಕಿನ ಕಲ್ಲೋಳಿ ಪಟ್ಟಣದ ನಿಯೋಜಿತ ಬಲಭೀಮ ದೇವರ ಕಲ್ಯಾಣ ಮಂಟಪದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ಸೂರ್ಯವಂಶ ಕ್ಷತ್ರೀಯ ಕಲಾಲ ಸಮಾಜದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಲಾಲ ಸಮಾಜದವರು ತಮ್ಮ ಕುಟುಂಬದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದಾರೆ …
Read More »