ಹೈದರಾಬಾದ್: ಸಂವಿಧಾನ ಶಿಲ್ಫಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಹಮಾರಾ ಪ್ರಸಾದ್ ಬಂಧಿತ ವ್ಯಕ್ತಿ. ಹಮಾರಾ ಪ್ರಸಾದ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ. ವಿಡಿಯೋದಲ್ಲಿ ಏನಿದೆ? : ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಪುಸ್ತಕವೊಂದನ್ನು ಹಿಡಿದುಕೊಂಡು ಹಮಾರಾ ಪ್ರಸಾದ್ ಗಾಂಧೀಜಿಯನ್ನು ಗೋಡ್ಸೆ ಕೊಂದಂತೆ, ಒಂದು ವೇಳೆ ಅಂಬೇಡ್ಕರ್ ಈಗ ಜೀವಂತವಾಗಿ ಇದ್ದಿದ್ದರೆ …
Read More »ಚುನಾವಣಾ ಪೂರ್ವ ತಯಾರಿ: ರಾಜ್ಯಕ್ಕೆ ಆಯೋಗದ ಹಿರಿಯ ಅಧಿಕಾರಿಗಳ ನೇತೃತ್ವದ ಮೂರು ತಂಡಗಳು ಭೇಟಿ
ಬೆಂಗಳೂರು: ಮುಂಬರುವ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ-2023 ರ ಕುರಿತಂತೆ ಜಿಲ್ಲಾಮಟ್ಟದಲ್ಲಿ ನಡೆಯುತ್ತಿರುವ ಪೂರ್ವತಯಾರಿಗಳ ಪರಿಶೀಲನೆಗಾಗಿ ಭಾರತ ಚುನಾವಣಾ ಆಯೋಗದ ಮೂರು ತಂಡಗಳು ರಾಜ್ಯದ ವಿವಿಧ 5 ಕ್ಕೂ ಹೆಚ್ಚು ಜಿಲ್ಲೆಗಳಿಗೆ ನೇರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳೀಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು. ಭಾರತ ಚುನಾವಣಾ ಆಯೋಗದ ಉಪ ಮುಖ್ಯ ಆಯುಕ್ತರಾದ ಅಜಯ್ ಬಾಡು ಅವರ ನೇತೃತ್ವದ ತಂಡ ಯಾದಗಿರಿ ಜಿಲ್ಲೆಗೆ ಬೇಟಿ ನೀಡಿ ಇವಿಎಮ್ ಮತ್ತು ವಿವಿಪ್ಯಾಟ್ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಈ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ ರಾಮದುರ್ಗ ತಾಲೂಕಿನ ಪಂಚಗಾವ ಗ್ರಾಮದಲ್ಲಿ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಪಂಚಾಗಾವ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ …
Read More »ವಿಧಾನಸೌಧಕ್ಕೆ ಪೇಶ್ವೆ ನಾಯಕ; ಬಿಜೆಪಿ ಉತ್ತರಿಸಲಿ -ಕುಮಾರಸ್ವಾಮಿ
ಬೆಂಗಳೂರು: ‘ವಿಧಾನಸೌಧದಲ್ಲಿ ಪೇಶ್ವೆ ವಂಶದ ನಾಯಕನ ಪ್ರತಿಷ್ಠಾಪನೆ ಮಾಡಲು ಹೊರಟಿರುವ ಬಿಜೆಪಿ ನನ್ನ ಪ್ರಶ್ನೆಗೆ ಉತ್ತರ ಕೊಡುವ ದಮ್ಮು, ತಾಕತ್ತು ತೋರಿಸುತ್ತಿಲ್ಲ ಏಕೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಸರಣಿ ಟ್ವೀಟ್ ಮಾಡಿ, ‘ಶೃಂಗೇರಿ ಮಠದ ಮೇಲೆ ದಾಳಿ ನಡೆಸಿದ್ದ ಪೇಶ್ವೆಗಳ ವಂಶದ ವ್ಯಕ್ತಿಯನ್ನು ಸಿ.ಎಂ ಮಾಡಲು ಬಿಜೆಪಿ ಹುನ್ನಾರ ನಡೆಸಿದೆ ಎಂಬ ನನ್ನ ಹೇಳಿಕೆಯಲ್ಲಿ ಗೊಂದಲವಿಲ್ಲ, ಬ್ರಾಹ್ಮಣ ಸಮೂಹವನ್ನು ನಿಂದಿಸಿಲ್ಲ. ಗರ್ಭಗುಡಿಯಲ್ಲಿ …
Read More »K,S,R,T,C ನೇಮಕಾತಿ : ಅಭ್ಯರ್ಥಿ ಒಳ ಉಡುಪಿನಲ್ಲಿ 5 ಕೆ.ಜಿ ಕಬ್ಬಿಣದ ಕಲ್ಲು!
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ(ಕೆಕೆಆರ್‌ಟಿಸಿ) ಚಾಲಕ ಕಂ ನಿರ್ವಾಹಕ ನೇಮಕಾತಿಯ ದೇಹದಾರ್ಢ್ಯ ಪರೀಕ್ಷೆಯಲ್ಲಿ ನಿಗದಿತ ತೂಕ ತೋರಿಸಲು ಒಳ ಉಡುಪುಗಳಲ್ಲಿ ಕಬ್ಬಿಣದ ಕಲ್ಲು, ಕಬ್ಬಿಣದ ತುಂಡುಗಳು, ಸೈಕಲ್ ಚೈನ್ ಇರಿಸಿಕೊಂಡ ಬಂದ ಅಭ್ಯರ್ಥಿಗಳನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ. ಕೆಕೆಆರ್‌ಟಿಸಿಯು 1,619 ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಸುಮಾರು 39 ಸಾವಿರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಸಂಸ್ಥೆಯ ಕೇಂದ್ರ ಕಚೇರಿ ಸಮೀಪ ಡಿಸೆಂಬರ್‌ನಿಂದ ದೇಹದಾರ್ಢ್ಯ ಪರೀಕ್ಷೆ …
Read More »ಹುಡುಗಿ ಜೊತೆ ಅಸಭ್ಯ ವರ್ತನೆ: ಸಹೋದರರ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ
ವಿಜಯಪುರ: ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಹುಡುಗಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ಅವಳಿ ಸಹೋದರರ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರುವ ಘಟನೆ ತಾಲ್ಲೂಕಿನ ಹೆಗಡಿಹಾಳ ಲಂಬಾಣಿ ತಾಂಡಾದ ಬಸವ ನಗರದಲ್ಲಿ ಶುಕ್ರವಾರ ನಡೆದಿದೆ. ಹೆಗಡಿಹಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಸಿಂಗ್ ಹಾಗೂ ತಾಂಡಾದ ಪಂಚರ ಸಮ್ಮುಖದಲ್ಲಿ ತೇಜು ಚವ್ಹಾಣ, ರಾಜು ಚವ್ಹಾಣ ಎಂಬುವರ ತಲೆ ಬೋಳಿಸಿ, ಸುಣ್ಣ ಬಳಿದು, ಚಪ್ಪಲಿ ಹಾರ ಹಾಕಿ …
Read More »ಮಾಜಿ ಸಚಿವ ಟಿ.ಜಾನ್ ನಿಧನ
ಬೆಂಗಳೂರು: ಮಾಜಿ ಸಚಿವ ಟಿ.ಜಾನ್(92) ಅವರು ಇಂದಿರಾನಗರದ ತಮ್ಮ ನಿವಾಸದಲ್ಲಿ ಶುಕ್ರವಾರ ನಿಧನರಾದರು. ಜಾನ್ ಅವರಿಗೆ ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಅಂತ್ಯಕ್ರಿಯೆ ಶನಿವಾರ ಬೆಂಗಳೂರಿನಲ್ಲೇ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಕೇರಳದಲ್ಲಿ ಜನಿಸಿದ್ದ ಇವರು, ಮಡಿಕೇರಿಯಲ್ಲಿ ನೆಲೆಸಿದ್ದರು. ಬೆಂಗಳೂರಿನಲ್ಲಿ ಟಿ.ಜಾನ್ ಶಿಕ್ಷಣ ಸಂಸ್ಥೆ ಕಟ್ಟಿದ ಬಳಿಕ ಬೆಂಗಳೂರಿನಲ್ಲೇ ನೆಲೆ ಊರಿದರು. ಕಾಂಗ್ರೆಸ್‌ನಿಂದ ವಿಧಾನ ಪರಿಷತ್ತಿನ ಸದಸ್ಯರಾಗಿ ಎಸ್.ಎಂ.ಕೃಷ್ಣ ನೇತೃತ್ವದ ಸಂಪುಟದಲ್ಲಿ ಮೂಲಸೌಕರ್ಯ ಮತ್ತು ವಿಮಾನಯಾನ …
Read More »ಕಣಬರ್ಗಿ ಸಿದ್ದೇಶ್ವರ ಮಂದಿರದ ಭವ್ಯ ಕಳಸಾರೋಹಣ ಕಾರ್ಯಕ್ರಮ
ಬೆಳಗಾವಿ-: ಜಿಲ್ಲೆಯ ಕಣಬರ್ಗಿ ಗ್ರಾಮದ ಆರಾಧ್ಯ ದೇವರಾದ ಶ್ರೀ ಸಿದ್ದೇಶ್ವರ ಮಂದಿರದ ಪುರಾತನ ಕಟ್ಟಡವನ್ನು ಜಿರ್ಣೋದ್ದಾರ ಮಾಡಿ ನವೀಕೃತ ಕಟ್ಟಡ ನಿರ್ಮಿಸಲಾಗಿದೆ. ಕಟ್ಟಡ ಕಾಮಗಾರಿಗೆ ಅನೇಕ ಭಕ್ತರು ಸಹ ಉದಾರವಾಗಿ ದೇಣಿಗೆಯನ್ನು ನೀಡಿದ್ದಾರೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ದೇವಾಲಯದ ನವೀಕೃತ ಭವ್ಯ ಕಟ್ಟಡದ ಭವ್ಯ ಉದ್ಘಾಟನಾ, ವಾಸ್ತುಶಾಂತಿ ಹಾಗೂ ಕಳಸಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಶ್ರೀ ಸಿದ್ಧೇಶ್ವರ ವ್ಯವಸ್ಥಾಪಕ ಮಂಡಳಿ ಕಣಬರ್ಗಿ ಹಾಗೂ ಶ್ರೀ ಸಿದ್ದೇಶ್ವರ …
Read More »ಮದುವೆಗೆ ಮುನ್ನವೇ ಕಿಯಾರಾ ಅಡ್ವಾಣಿ ಗರ್ಭಿಣಿ.!?
ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಇತ್ತೀಚೆಗೆ ಜೈಸಲ್ಮೇರ್‌ನ ಅರಮನೆಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮದುವೆಯಾದ ಕೆಲವೇ ದಿನಗಳಲ್ಲಿ, ಕಿಯಾರಾ ಅಡ್ವಾಣಿ ಗರ್ಭಧಾರಣೆಯ ವದಂತಿಗಳು ಹರಡಲು ಪ್ರಾರಂಭಿಸಿವೆ. ವಾಸ್ತವವಾಗಿ, ಮದುವೆಯ ನಂತರ ಜೈಸಲ್ಮೇರ್‌ನಿಂದ ದೆಹಲಿಗೆ ಹಿಂದಿರುಗುವಾಗ, ಕಿಯಾರಾ ಅಡ್ವಾಣಿ ಕಪ್ಪು ಬಟ್ಟೆಯನ್ನು ಧರಿಸಿದ್ದರು. ಇದರೊಂದಿಗೆ, ನಟಿ ಬೂದು-ಕಪ್ಪು ಬಣ್ಣದ ಶಾಲು ಧರಿಸಿದ್ದರು. ಕಿಯಾರಾ ಅಡ್ವಾಣಿ ಫೋಟೋಗಳಿಗೆ ಪೋಸ್ ನೀಡುವಾಗ ಶಾಲು ಹೊದ್ದುಕೊಂಡು ಮತ್ತೆ ಮತ್ತೆ ಅಡ್ಜಸ್ಟ್ ಮಾಡಿಕೊಂಡು ಹೊಟ್ಟೆ ಮುಚ್ಚಿಕೊಳ್ಳುತ್ತಿದ್ದ …
Read More »ಬೆಳಗಾವಿ ಜಿಲ್ಲಾ ಕೋರ್ಟ್ ನೇಮಕಾತಿ : ಜವಾನ, ಪ್ರೊಸೆಸ್ ಸರ್ವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಇಲ್ಲಿದೆ ಮಾಹಿತಿ
ಬೆಳಗಾವಿ: ಇಲ್ಲಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ 68 ಸ್ಟೆನೋಗ್ರಾಫರ್ ಗ್ರೇಡ್ 3, ಜವಾನ, ಪ್ರೊಸೆಸ್ ಸರ್ವರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಬೆಳಗಾವಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2023 ಗೆ ಅಧಿಕೃತ ವೆಬ್ಸೈಟ್ ಬೆಳಗಾವಿ ಕೋರ್ಟ್ ಜಾಬ್ಸ್ ಮೂಲಕ ಮಾರ್ಚ್ 3, 2023 ರೊಳಗೆ ಅರ್ಜಿ ಸಲ್ಲಿಸಬಹುದುವಿದ್ಯಾರ್ಹತೆ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರಗಳನ್ನು …
Read More »