Breaking News

ಬಿಸಿಲಿನಿಂದ ರಕ್ಷಿಸಲು ಪಾರ್ಕಿಂಗ್ ಸ್ಥಳದಲ್ಲಿ ಮಗು ಮಲಗಿಸಿದ ತಾಯಿ: ಕಾರು ಹರಿದು ಪ್ರಾಣಬಿಟ್ಟ ಬಾಲಕಿ

ಹೈದರಾಬಾದ್: ತೆಲಂಗಾಣ ರಾಜಧಾನಿ ಹೈದರಾಬಾದ್​ನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಅಪಾರ್ಟ್‌ಮೆಂಟ್​ನ ಪಾರ್ಕಿಂಗ್ ಪ್ರದೇಶದಲ್ಲಿ ಮಲಗಿದ್ದ ಮೂರು ವರ್ಷದ ಪುಟ್ಟ ಬಾಲಕಿಯ ಮೇಲೆ ಕಾರು ಹರಿದಿದ್ದು, ಮಗು ಸ್ಥಳದಲ್ಲೇ ಪ್ರಾಣ ಬಿಟ್ಟಿದೆ. ದಾರುಣ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಯತ್‌ನಗರದ ಟೀಚರ್ಸ್ ಕಾಲೋನಿಯಲ್ಲಿರುವ ಅಪಾರ್ಟ್‌ಮೆಂಟ್ ಕಟ್ಟಡದಲ್ಲಿ ಬುಧವಾರ ಘಟನೆ ನಡೆದಿದೆ. ಕಾರು ಚಾಲನೆ ಮಾಡುತ್ತಿದ್ದ ವ್ಯಕ್ತಿಯನ್ನು ಹರಿರಾಮ ಕೃಷ್ಣ ಎಂದು ಗುರುತಿಸಲಾಗಿದೆ. ಪಾರ್ಕಿಂಗ್ ಮಾಡುವಾಗ ನೆಲದ ಮೇಲೆ …

Read More »

ಪಾಲಿಕೆ ಸ್ಮಾರ್ಟ್ ಸಿಟಿ ನಡುವೆ ಹಗ್ಗಜಗ್ಗಾಟ: ಕಾಮಗಾರಿ ಮುಗಿದರೂ ಇನ್ನೂ ಹಸ್ತಾಂತರವಾಗದೇ ಉಳಿದ ಪ್ರಾಜೆಕ್ಟ್​ಗಳು

ಹುಬ್ಬಳ್ಳಿ: ಅದು ಹುಬ್ಬಳ್ಳಿ-ಧಾರವಾಡ ಅವಳಿನಗರದ ಮಹತ್ವದ ಯೋಜನೆ. ಈ ಯೋಜನೆ ಪ್ರಾರಂಭವಾದಾಗಿನಿಂದಲೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಯೋಜನೆ ಕಾಮಗಾರಿ ವಿಳಂಬ ಒಂದು ಕಡೆಯಾದರೆ ಮತ್ತೊಂದು ಕಡೆಯಲ್ಲಿ ಪೂರ್ಣಗೊಂಡಿದ್ದರೂ ಪಾಲಿಕೆಗೆ ಹಸ್ತಾಂತರ ಮಾಡಿಲ್ಲ. ಇದು ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ. 2018ರಲ್ಲಿ ಅಸ್ತಿತ್ವಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಸ್ಮಾರ್ಟ್‌ಸಿಟಿ ಯೋಜನೆಗಳಲ್ಲಿ ಪೂರ್ಣಗೊಂಡ ಕಾಮಗಾರಿಗಳ ಹಸ್ತಾಂತರ ವಿಚಾರ ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್‌ಸಿಟಿ ಮಧ್ಯೆ ಮುಸುಕಿನ …

Read More »

ಕಾಂಗ್ರೆಸ್​ ಗ್ಯಾರಂಟಿ ಯೋಜನೆ ಪ್ರತಿ ಮನೆಗೂ ತಲುಪಿಸಲು ವಿನೂತನ ಪ್ಲಾನ್

ಬಾಗಲಕೋಟೆ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮ್ಯಾಜಿಕ್​ ನಂಬರ್​ಗಿಂತಲೂ ಅಧಿಕ ಸ್ಥಾನಗಳನ್ನು ಗೆದ್ದು ಕಾಂಗ್ರೆಸ್​ ಅಧಿಕಾರ ಗದ್ದುಗೆ ಏರಿದೆ. ತನ್ನ ಗೆಲುವಿಗೆ ತಾನು ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳೇ ಪ್ರಮುಖ ಕಾರಣ ಎನ್ನುವುದು ಕಾಂಗ್ರೆಸ್​ ನಂಬಿಕೆ. ಹಾಗಾಗಿ ಕಾಂಗ್ರೆಸ್ ಪಕ್ಷದ ಸರ್ಕಾರ ಜಾರಿಗೆ ತರುವ ಗ್ಯಾರಂಟಿ ಯೋಜನೆಯನ್ನು ಜನರಿಗೆ ತಲುಪಿಸುವ ಬಗ್ಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ವಿನೂತ ಯೋಜನೆ ರೂಪಿಸಿಕೊಂಡು ಗಮನ ಸೆಳೆಯಲು ಮುಂದಾಗಿದೆ. ಕಾಂಗ್ರೆಸ್ ಪಕ್ಷದ ಐದು …

Read More »

ಬೆಳಗಾವಿಯಲ್ಲಿ ಸುರಿದ ಬಿರುಗಾಳಿ ಸಹಿತ ಮಳೆಗೆ ಧರೆಗುರುಳಿದ 47 ವಿದ್ಯುತ್ ಕಂಬಗಳು

ಬೆಳಗಾವಿ : ಕಳೆದ ಎರಡು ದಿನಗಳಿಂದ ಸುರಿದ ಮಳೆ ರಾಜ್ಯದೆಲ್ಲೆಡೆ ಸಾಕಷ್ಟು ಹಾನಿಯುಂಟು ಮಾಡಿದೆ. ಅದರಂತೆ ಬೆಳಗಾವಿಯಲ್ಲಿ ಸೋಮವಾರ ಮತ್ತು ಮಂಗಳವಾರ ನಗರದಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ಮಳೆ ಹಲವು ಅವಾಂತರ ಸೃಷ್ಟಿಸಿದೆ. ಅನೇಕ ಕಡೆಗಳಲ್ಲಿ ಮರಗಳು ಬಿದ್ದಿದ್ದರಿಂದ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಇದರ ಪರಿಣಾಮ‌ ನಗರದ ಬಹಳಷ್ಟು ಪ್ರದೇಶಗಳಲ್ಲಿನ ವಿದ್ಯುತ್ ವ್ಯತ್ಯಯದಿಂದ ಜನರು ಪರದಾಡುವಂತಾಯಿತು. ವಿಶ್ವೇಶ್ವರಯ್ಯ ನಗರ, ಹನುಮಾನ್​ ನಗರ,‌ ಸದಾಶಿವ ನಗರ, ರಾಮತೀರ್ಥ ನಗರ, ಸರ್ಕಾರಿ ಸರ್ದಾರ್ಸ್‌ ಪ್ರೌಢಶಾಲೆ …

Read More »

ದೆಹಲಿಯಲ್ಲಿ ಸಿಎಂ, ಡಿಸಿಎಂ: ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್​ ಜೊತೆ ಚರ್ಚೆ

ನವದೆಹಲಿ: ವಿಶೇಷ ಅಧಿವೇಶನದಲ್ಲಿ ಎಲ್ಲಾ ಶಾಸಕರ ಪ್ರಮಾಣ ವಚನ ಸ್ವೀಕಾರವಾಗುತ್ತಿದ್ದಂತೆ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದೆ. ಮಧ್ಯಾಹ್ನ 3 ಗಂಟೆಯಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಮತ್ತು ಸಂಜೆ ಆರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರ ರಾಜಧಾನಿಗೆ ಪ್ರಯಾಣ ಬೆಳೆಸಿದ್ದರು. ಶಿವಕುಮಾರ್​ ಮೊದಲೇ ದೆಹಲಿ ತಲುಪಿದ್ದರು. ಸಿದ್ದರಾಮಯ್ಯ ಈಗ ದೆಹಲಿ ತಲುಪಿದ್ದು, ಕಾಂಗ್ರೆಸ್ ಉನ್ನತ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಈ ನಾಯಕರ ಜೊತೆ ಬೆಂಬಲಿಗರು ಸಹ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಮಂತ್ರಿಗಿರಿಗಾಗಿ …

Read More »

ಬೆಂಗಳೂರಿನ ಅಂಡರ್​ಪಾಸ್​ಗಳನ್ನು ಮುಚ್ಚುವ ಪರಿಸ್ಥಿತಿ ಬಂದಿಲ್ಲ: ತುಷಾರ್ ಗಿರಿನಾಥ್

ಬೆಂಗಳೂರು : “ಕೆ.ಆರ್.ಸರ್ಕಲ್‌ನಲ್ಲಿ ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅಂಡರ್‌ಪಾಸ್‌ಗಳ ಸುರಕ್ಷತೆಯ ಕುರಿತಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಯಾವ ಅಂಡರ್​ಪಾಸ್​ಗಳೂ ಸದ್ಯಕ್ಕೆ ಮುಚ್ಚುವಂತ ಸ್ಥಿತಿಯಲ್ಲಿ ಇಲ್ಲ. ಕೆ.ಆರ್.ಸರ್ಕಲ್ ಹತ್ತಿರ ಕೆಲಸ ಶುರು ಮಾಡಿದ್ದೇವೆ. ಇತರೆ ಕಡೆಗಳಲ್ಲಿಯೂ ಅಗತ್ಯ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು. ಪಾಲಿಕೆ ಮುಖ್ಯ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸೈರನ್ ಅಳವಡಿಸುವ ಕ್ರಮದ ಕುರಿತು ಸರ್ಕಾರದಿಂದ ವರದಿ …

Read More »

ಉದ್ಯೋಗದಾತರು – ಉದ್ಯೋಗಿಗಳು ರಾಜಿ ಸಂಧಾನದ ನಿರ್ಧಾರಕ್ಕೆ ಬದ್ಧರಾಗಿರಬೇಕು: ಹೈಕೋರ್ಟ್

ಬೆಂಗಳೂರು: ಉದ್ಯೋಗದಾತರು ಮತ್ತು ಉದ್ಯೋಗಿಗಳು ರಾಜಿ ಸಂಧಾನದ ಮೂಲಕ ಕೈಗೊಂಡ ನಿರ್ಧಾರಕ್ಕೆ ಬದ್ಧರಾಗಿರಬೇಕು ಎಂದು ಹೈಕೋರ್ಟ್​ ಆದೇಶ ನೀಡಿದೆ. ಇಂಡಿಯನ್ ಟೆಲಿಫೋನ್ ಲಿಮಿಟೆಡ್‌ನಲ್ಲಿ (ಐಟಿಐ) ಹಲವು ವರ್ಷಗಳ ಕಾಲ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿದ್ದ 80 ನೌಕರರ ಮರು ನೇಮಕಾತಿಗೆ ಸಂಬಂಧಿಸಿದಂತೆ ಮತ್ತೊಂದು ಬಾರಿ ರಾಜಿ ಸಂಧಾನ ನಡೆಸಲು ಕೋರ್ಟ್‌ ಸೂಚನೆ ನೀಡಿದೆ. ಕರ್ನಾಟಕ ಜನರಲ್ ಲೇಬರ್ ಯೂನಿಯನ್‌ನ ಐಟಿಐ ಘಟಕ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ ವಿಚಾರಣೆ …

Read More »

ಸತೀಶ್‌ ಜಾರಕಿಹೊಳಿ ಅವರನ್ನು ಆಶೀರ್ವದಿಸಿದ ಶ್ರೀ ಬಸವಜಯ ಮೃತುಂಜ್ಯಯ ಮಹಾಸ್ವಾಮೀಜಿ

ಬೆಂಗಳೂರು: ನೂತನ ಸಚಿವರಾಗಿ ಆಯ್ಕೆಯಾದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರನ್ನು ಪಂಚಮಸಾಲಿ ಗುರುಪೀಠದ ಪ್ರಥಮ ಜಗದ್ಗುರುಗಳಾದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಬೆಂಗಳೂರಿನಲ್ಲಿ ಸತ್ಕರಿಸಿ ಆಶೀರ್ವದಿಸಿದ್ದಾರೆ. ಇದೇ ವೇಳೆ ಪಂಚಮಸಾಲಿ ಸಮಾಜದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತುಂಜ್ಯಯ ಮಹಾಸ್ವಾಮೀಜಿ ಅವರನ್ನು ಸಚಿವ ಸತೀಶ್‌ ಜಾರಕಿಹೊಳಿ ಅವರು ಸತ್ಕರಿಸಿ ಆಶೀರ್ವಾದ ಪಡೆದರು. ಈ ಸಂಧರ್ಭದಲ್ಲಿ ಹುಕ್ಕೇರಿ ತಾಲೂಕು ಪಂಚಮಸಾಲಿ ಕಾರ್ಯಾಧ್ಯಕ್ಷ ರವೀಂದ್ರ ಜಿಂಡ್ರಾಲಿ, ಹುಕ್ಕೇರಿ ತಾಲೂಕಿನ ಯುವ ಘಟಕದ …

Read More »

ಯಾದಗಿರಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

ಸಾಲಬಾಧೆ ತಾಳಲಾರದೆ 65 ವರ್ಷದ ರೈತನೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಉಡುವೆಪುರ ಗ್ರಾಮದಲ್ಲಿ ನಡೆದಿದೆ. ಯಾದಗಿರಿ: ಸಾಲಬಾಧೆ ತಾಳಲಾರದೆ 65 ವರ್ಷದ ರೈತನೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಉಡುವೆಪುರ ಗ್ರಾಮದಲ್ಲಿ ನಡೆದಿದೆ. ಯಲ್ಲಕಿ ಗೌಡ (65) ಆತ್ಮಹತ್ಯೆಗೆ ಶರಣಾದ ರೈತ. ಯಲ್ಲಕಿ ಗೌಡ ಪಿರಿಯಾಪಟ್ಟಣದ ಬ್ಯಾಂಕ್ನಲ್ಲಿ ರೂ.15 ಲಕ್ಷ ಸಾಲ ಪಡೆದಿದ್ದಲ್ಲದೆ, ಸಹ ಗ್ರಾಮಸ್ಥರಿಂದಲೂ ರೂ.6 …

Read More »

ಪಂಚಮಸಾಲಿ ಲಿಂಗಾಯತ ಸಮುದಾಯದ ಐವರಿಗೆ ಸಚಿವ ಸ್ಥಾನ ನೀಡಬೇಕು: ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹ

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಸಂಬಂಧ ಕೂಡಲಸಂಗಮ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯ 3 ಪ್ರಮುಖ ನಿರ್ಣಯ ಕೈಗೊಂಡಿದೆ. ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಸಂಬಂಧ ಕೂಡಲಸಂಗಮ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯ 3 ಪ್ರಮುಖ ನಿರ್ಣಗಳನ್ನು ಕೈಗೊಂಡಿದೆ. ಲಿಂಗಾಯತ ಪಂಚಮಸಾಲಿ ಸಮುದಾಯದ ನೂತನ ಶಾಸಕರುಗಳ ಅಭಿನಂದನಾ ಸಮಾರಂಭ ಕುರಿತು ಚರ್ಚಿಸುವ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ಪೂರ್ವಭಾವಿ …

Read More »