Breaking News

ಬೊಮ್ಮಾಯಿ, ಮೋದಿಯಿಂದ ಕುರುಬರಿಗೆ ಎಸ್‌ಟಿ ಮೀಸಲು ಕೊಡಿಸಲಿ: ಸಿದ್ದರಾಮಯ್ಯ

(ವಿಜಯನಗರ ಜಿಲ್ಲೆ) : ‘ಕುರುಬ ಸಮುದಾಯವನ್ನು ಎಸ್‌ಟಿ ಮೀಸಲು ಪಟ್ಟಿಗೆ ಸೇರಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ. ಡಬಲ್ ಎಂಜಿನ್ ಸರ್ಕಾರ ಎಂದು ಬೀಗುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ ಬಳಿ ಕುಳಿತು ಕುರುಬರಿಗೆ ಎಸ್‌ಟಿ ಮೀಸಲಾತಿ ಕೊಡಿಸಲಿ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದರು.   ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದಲ್ಲಿ ಭಾನುವಾರ ಕಾಗಿನೆಲೆ ಕನಕಗುರುಪೀಠದ ಶಾಖಾ ಮಠದಲ್ಲಿ ನೂತನ ಗಂಗಮಾಳಮ್ಮ ಯಾತ್ರಿ …

Read More »

ನೀವು ಈಗ ನೋಡಿರುವುದು ʼಕಾಂತಾರ-2″ ಮುಂದೆ ಬರುವುದು ʼಕಾಂತಾರ -1″ : ರಿಷಬ್‌ ಶೆಟ್ಟಿ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿದ ರಿಷಬ್‌ ಶೆಟ್ಟಿ ಅವರ ʼಕಾಂತಾರʼ ಸಿನಿಮಾದ 100 ದಿನದ ಸಂಭ್ರಮದ ಕಾರ್ಯಕ್ರಮ ಬೆಂಗಳೂರಿನ ವಿಜಯನಗರದಲ್ಲಿರುವ ಬಂಟರ ಭವನದಲ್ಲಿ ನಡೆಯಿತು. ಕಾರ್ಯಕ್ರಮಕ್ಕಾಗಿ ಬಂಟರ ಭವನ ʼಕಾಂತಾರʼದ ಸೆಟ್ ನ ಹಾಗೆ ಬದಲಾಗಿತ್ತು. ಇಡೀ ಬಂಟರ ಭವನವನ್ನು ತುಳುನಾಡಿನ ಸಂಪ್ರದಾಯದಂತೆ ಶೃಂಗರಿಸಲಾಗಿತ್ತು. ಸಿನಿಮಾದ ಯಶಸ್ವಿಗಾಗಿ ದುಡಿದ ಪ್ರತಿಯೊಬ್ಬ ಕಲಾವಿದ, ತಾಂತ್ರಿಕ ತಂಡದವರಿಗೆ ಚಿತ್ರ ತಂಡ ಸ್ಮರಣಿಕೆಯನ್ನು ನೀಡಿತು. ಕನ್ನಡ ಸಿನಿಮಾ ರಂಗದಲ್ಲಿ 100 ಡೇಸ್‌ …

Read More »

ಬಿಜೆಪಿ ನಾಯಕನಿಗೆ ಜೆಡಿಎಸ್ ಟಿಕೆಟ್ ಎಲ್ಲಿ ಗೊತ್ತಾ?

ಹಾಸನ ಜಿಲ್ಲೆಯ ಅರಕಲಹೊಳೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಮಾಜಿ ಸಚಿವ ಎ ಮಂಜು ಅವರಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದೆ. ಹಾಲಿ ಶಾಸಕ, ಪಕ್ಷದ ಮುಖಂಡ ಎಟಿ ರಾಮಸ್ವಾಮಿ ಅವರಿಗೆ ಪಕ್ಷದಿಂದ ಟಿಕೆಟ್ ನಿರಾಕರಿಸಲಾಗಿದೆ.   ಇಷ್ಟು ವರ್ಷ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಕುಟುಂಬದ ಪಿತಾಮಹ ಎಂದು ಪರಿಗಣಿಸಲ್ಪಟ್ಟಿರುವ ಜೆಡಿಎಸ್ ನಡೆ ದೊಡ್ಡ ಆಶ್ಚರ್ಯವನ್ನುಂಟು ಮಾಡಿದೆ. ಇದೇ ವೇಳೆ ರಾಮಸ್ವಾಮಿ ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ. ಅವರು ಕಾಂಗ್ರೆಸ್‌ಗೆ …

Read More »

ದಂಡ ಕಟ್ಟಿದ ಮೈಸೂರಿನ ಶಾಸಕ ಎಲ್.ನಾಗೇಂದ್ರ

ಮೈಸೂರು: ರಾಜ್ಯ ಸಾರಿಗೆ ಇಲಾಖೆ, ಬಾಕಿ ಇರುವ ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತವನ್ನು ಫೆ.11೧ರ ಒಳಗೆ ಪಾವತಿಸಿದರೆ ಶೇ.50 ವಿನಾಯಿತಿ ನೀಡುವುದಾಗಿ ಗುರುವಾರ ಆದೇಶ ಹೊರಡಿಸಿದೆ. ಬಹುತೇಕ ವಾಹನ ಸವಾರರು ಈ ಆದೇಶ ಸದುಪಯೋಗಪಡಿಸಿಕೊಳ್ಳುತ್ತಿದ್ದು, ಬಾಕಿ ಇರಿಸಿಕೊಂಡಿದ್ದ ದಂಡ ಕಟ್ಟುತ್ತಿದ್ದಾರೆ. ಇದೀಗ ಮೈಸೂರಿನ ಚಾಮರಾಜ ವಿಧಾಸಭಾ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಶೇ.50 ರಿಯಾಯಿತಿಯಲ್ಲಿ ದಂಡ ಕಟ್ಟಿದ್ದಾರೆ. ವೇಗದ ಕಾರು ಚಾಲನೆಗೆ ಶಾಸಕ ಎಲ್.ನಾಗೇಂದ್ರ 7ಸಾವಿರ ರೂ. ದಂಡ ಕಟ್ಟಬೇಕಾಗಿತ್ತು. ಶೇ.50ರಷ್ಟು …

Read More »

ರೀಲ್ಸ್‌ನಲ್ಲಿ ಪರಿಚಯವಾದವನ ಜತೆ ಪತ್ನಿ ಪರಾರಿ

ಬೆಂಗಳೂರು: ಇತ್ತೀಚೆಗೆ ಚಿಕ್ಕಮಕ್ಕಳಿಂದ ವೃದ್ಧವರೆಗಿನ ಎಲ್ಲ ವಯಸ್ಸಿನವರು ರೀಲ್ಸ್‌ (ಮನರಂಜನೆ ಮೊಬೈಲ್‌ ಆಯಪ್‌)ನಲ್ಲಿ ಹೆಚ್ಚು ಸಕ್ರಿಯವಾಗಿದ್ದಾರೆ. ಆದರೆ, ಇಲ್ಲೊಂದು ಪ್ರಕರಣದಲ್ಲಿ ಮಹಿಳೆ ಪತಿಯನ್ನು ತೊರೆದು ರೀಲ್ಸ್‌ನಲ್ಲಿ ಪರಿಚಯವಾದ ವ್ಯಕ್ತಿ ಜತೆ ನಾಪತ್ತೆಯಾಗಿರುವ ಪ್ರಸಂಗ ಬೆಳಕಿಗೆ ಬಂದಿದೆ.   ಈ ಘಟನೆಯಿಂದ ವಿಚಲಿತಗೊಂಡಿರುವ ಪತಿ, ಸುಬೇದಾರಪಾಳ್ಯ ನಿವಾಸಿ ಜೋಸೆಫ್ ಆಂಟೋನಿ ಎಂಬುವರು ಪತ್ನಿ ನಮಿತಾ ಕುಮಾರಿ ಮತ್ತು ನಾಲ್ಕು ವರ್ಷದ ಮಗನನ್ನು ಹುಡುಕಿಕೊಡುವಂತೆ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಿಸಿ ಕ್ಯಾಮೆರಾ …

Read More »

ದ.ರಾ.ಬೇಂದ್ರೆ ಕಾವ್ಯದಲ್ಲಿದೆ ಹಲವು ವೈಶಿಷ್ಟ್ಯ; ಪ್ರೊ.ಎನ್‌.ಬಿ. ಝರೆ

ಕಾಗವಾಡ: ಬೇಂದ್ರೆಯವರ ಕಾವ್ಯ ಹಲವು ವೈಶಿಷ್ಟ್ಯ ಗಳಿಂದ ಕೂಡಿದೆ. ಅದನ್ನು ಸುಲಭವಾಗಿ ಅರ್ಥೈಸಲು ಸಾಧ್ಯವಿಲ್ಲ. ಬೇಂದ್ರೆಯವರ ಕಾವ್ಯದಲ್ಲಿ ತಾಯಿ, ಅಜ್ಜಿ, ಹೆಂಡತಿ, ಪರಿಸರ, ಸಾಹಿತ್ಯದ ಹಲವು ಪ್ರಕಾರಗಳು ಪ್ರಭಾವವನ್ನು ಬೀರಿವೆ ಎಂದು ಕೆ.ಎ.ಲೋಕಾಪೂರ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ.ಎನ್‌.ಬಿ. ಝರೆ ಅಭಿಪ್ರಾಯ ವ್ಯಕ್ತಪಡಿಸಿದರು. ಶುಕ್ರವಾರ ಸ್ಥಳೀಯ ಶಿವಾನಂದ ಮಹಾ ವಿದ್ಯಾಲಯದ ಐಕ್ಯೂಎಸಿ ಪ್ರಾಯೋಜಿತ ಕಾಲೇಜು ಒಕ್ಕೂಟ ಹಾಗೂ ಕನ್ನಡ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಡಾ|ದ.ರಾ.ಬೇಂದ್ರೆಯವರ 127ನೆ ಜನ್ಮದಿನಾಚರಣೆಯ ಪ್ರಯುಕ್ತ …

Read More »

ಮೇಯರ್‌ ದಕ್ಷಿಣಕ್ಕೆ-ಉಪಮೇಯರ್‌ ಉತ್ತರಕ್ಕೆ

ಬೆಳಗಾವಿ: ಸರಿಸುಮಾರು ಒಂದೂವರೆ ವರ್ಷಗಳಬಳಿಕ ಮಹಾನಗರ ಪಾಲಿಕೆಗೆ ಮೇಯರ್‌ ಹುದ್ದೆ ಭಾಗ್ಯ ಲಭಿಸುತ್ತಿದ್ದು, ಪೂರ್ಣ ಬಹುಮತ ಹೊಂದಿರುವ ಕಮಲ ಪಾಳಯದವರು ಮೇಯರ್‌-ಉಪಮೆಯರ್‌ ಹುದ್ದೆ ಅಲಂಕರಿಸಲಿದ್ದಾರೆ. ದಕ್ಷಿಣ ಕ್ಷೇತ್ರಕ್ಕೆ ಮೇಯರ್‌, ಉತ್ತರ ಕ್ಷೇತ್ರಕ್ಕೆ ಉಪಮೇಯರ್‌ ಸಿಗುವುದು ಗ್ಯಾರಂಟಿಯಾಗಿದೆ.   ಫೆ. 6ರಂದು ಮಹಾನಗರ ಪಾಲಿಕೆ ಸಭಾಭವನದಲ್ಲಿ ನಡೆಯಲಿರುವ ಮೇಯರ್‌-ಉಪಮೇಯರ್‌ ಚುನಾವಣೆಗಾಗಿ ತೀವ್ರ ಕಸರತ್ತು ನಡೆದಿದೆ. ಬೆಳಗಾವಿ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಬೆಳಗಾವಿ ಮಹಾನಗರ ಪಾಲಿಕೆಗೆ ಪಕ್ಷದ ಚಿಹ್ನೆ ಮೇಲೆ ಚುನಾವಣೆ ನಡೆದಿದ್ದು, …

Read More »

ಖಾನಾಪುರ: ಸುವರ್ಣ ಮಹೋತ್ಸವ ಇಂದಿನಿಂದ

ಖಾನಾಪುರ: ತಾಲ್ಲೂಕಿನ ಗಾಡಿಕೊಪ್ಪ ಗ್ರಾಮದ ರಾಘವೇಂದ್ರ ಸ್ವಾಮಿ ಮಠದಲ್ಲಿ ಗುರುರಾಯರ ಬೃಂದಾವನ ಪ್ರತಿಷ್ಠಾಪನೆ ಸುವರ್ಣ ಮಹೋತ್ಸವ ಆಚರಣೆಗೆ ಅಂಗವಾಗಿ ಫೆ.5 ರಿಂದ 11ರವರೆಗೆ ವಿವಿಧ ಧಾರ್ಮಿಕ ಕಾರ್ಯಗಳನ್ನು ಆಯೋಜಿಸಲಾಗಿದೆ ಎಂದು ಮಠದ ಅರ್ಚಕ ಅಚ್ಯುತ ಪಾಟೀಲ ತಿಳಿಸಿದ್ದಾರೆ.   ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಫೆ.5ರಂದು ನವಗ್ರಹ ಹೋಮ, ಅಷ್ಟೋತ್ತರ ಪಾರಾಯಣ, ರಾಯರ ಬೃಂದಾವನಕ್ಕೆ ವಿಶೇಷ ಪೂಜೆ ಮತ್ತು ಮಧ್ಯಾಹ್ನ ಅನ್ನ ಸಂತರ್ಪಣೆ, ಸಂಜೆ ವಿಶೇಷ ಉಪನ್ಯಾಸ, …

Read More »

ಸವದತ್ತಿ: ಯಲ್ಲಮ್ಮನ ಗುಡ್ಡದಲ್ಲಿ ಭಾರತ ಹುಣ್ಣಿಮೆ ಸಡಗರ

ಸವದತ್ತಿ: ಇಲ್ಲಿನ ಯಲ್ಲಮ್ಮನಗುಡ್ಡದ ಭಾರತ ಹುಣ್ಣಿಮೆ ಜಾತ್ರೆ ದಕ್ಷಿಣ ಭಾರತದಲ್ಲಿಯೇ ಪ್ರಸಿದ್ಧ. ಐತಿಹಾಸಿಕ, ಪೌರಾಣಿಕ ಹಾಗೂ ಜನಪದೀಯ ಸಂಸ್ಕೃತಿಯ ತ್ರಿವೇಣಿ ಸಂಗಮವಾಗಿರುವ ಈ ನೆಲದಲ್ಲಿ ಭಾನುವಾರ (ಫೆ.5) ಅದ್ದೂರಿ ಜಾತ್ರೆ ಜರುಗಲಿದ್ದು ‘ಸಪ್ತ ಕೊಳ್ಳಗಳ ನಾಡು’ ಸಂಭ್ರಮದಲ್ಲಿ ಮುಳುಗಿದೆ.   ಎತ್ತ ಕಣ್ಣು ಹಾಯಿಸಿದರೂ ಜನಸಾಗರ, ಕಣ್ಮನ ಸೆಳೆಯುತ್ತಿರುವ ಚಕ್ಕಡಿಗಳ ಸಾಲು, ಭಕ್ತರನ್ನು ರಂಜಿಸುತ್ತಿರುವ ಜೋಗತಿಯರ ಚೌಡಕಿ ನಿನಾದ ಹೀಗೆ. ಹಲವು ವಿಶೇಷಗಳ ಮೂಲಕ ಜಾತ್ರೆ ಭಕ್ತರನ್ನು ತನ್ನತ್ತ ಸೆಳೆಯುತ್ತಿದೆ. …

Read More »

ಕಕಮರಿ: ‘ಪರೀಕ್ಷೆಗೆ ಭಯ ಪಡುವ ಅಗತ್ಯವಿಲ್ಲ

ಕಕಮರಿ: ‘ಮನಸ್ಸಿನ ಶಕ್ತಿ ದೇಹದ ಶಕ್ತಿಗಿಂತ ಬಲಿಷ್ಠ. ಅದು ಇದ್ದರೆ ಜಗತ್ತಿನಲ್ಲಿ ಎಲ್ಲವನ್ನೂ ಸಾಧಿಸಬಹುದು. ಅದಕ್ಕೆ ಬಡವ- ಶ್ರೀಮಂತ ಎನ್ನುವ ಭೇದಭಾವ ಇಲ್ಲ’ ಎಂದು ಕಕಮರಿ ಗುರುದೇವಾಶ್ರಮದ ಆತ್ಮಾರಾಮ್ ಸ್ವಾಮೀಜಿ ಹೇಳಿದರು. ಸಮೀಪದ ಕೊಟ್ಟಲಗಿ ಸಿದ್ಧೇಶ್ವರ ಆಂಗ್ಲ ಮಾಧ್ಯಮ ಶಾಲೆಯ 11ನೇ ವಾರ್ಷಿಕ ಸ್ನೇಹ ಸಮ್ಮಿಲನ ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೋಡುಗೆ ಸಮಾರಂಭ ಮತ್ತು ಮಕ್ಕಳಿಂದ ತಂದೆ- ತಾಯಿಗಳ ಪಾದಪೂಜೆ ಕಾರ್ಯಕ್ರಮದದಲ್ಲಿ ಅವರು ಮಾತನಾಡಿದರು.   ‘ವಿದ್ಯಾರ್ಥಿಗಳಿಗೆ ಅಂಕಗಳು …

Read More »