Breaking News

ಬೈಲಹೊಂಗಲ: ಇಂದು ಚನ್ನಬಸವೇಶ್ವರರ ವೈಭವದ ಜಾತ್ರೆ

ಬೈಲಹೊಂಗಲ: ಸವದತ್ತಿ ತಾಲ್ಲೂಕಿಗೆ ಒಳಪಟ್ಟ, ಬೈಲಹೊಂಗಲ ಸಮೀಪದ ಹಾರೂಗೊಪ್ಪ ಗ್ರಾಮದಲ್ಲಿ ಈಗ ಜಾತ್ರೆ ಸಡಗರ ಮನೆ ಮಾಡಿದೆ. 12ನೇ ಶತಮಾನದ ಮಹಾಶರಣ ಚನ್ನಬಸವೇಶ್ವರರು ಉಳವಿಗೆ ಹೋಗುವ ಸಂದರ್ಭದಲ್ಲಿ ಈ ಊರಿಗೆ ಬಂದು ತಂಗಿದ್ದರು. ಅಂದಿನಿಂದ ಇಲ್ಲಿ ಜಾತ್ರೆ ನಡೆಸಿಕೊಂಡು ಬರಲಾಗಿದೆ.   ಈ ಬಾರಿ ನಡೆಯುತ್ತಿರುವುದು 18ನೇ ವರ್ಷದ ಜಾತ್ರಾ ಮಹೋತ್ಸವ. ಜ.5ರಂದು ಸಂಜೆ 5ಕ್ಕೆ ರಥೋತ್ಸವ ನೆರವೇರಲಿದೆ. ಜಿಲ್ಲೆಯ ವಿವಿಧೆಡೆಯಿಂದ ಇಲ್ಲಿಗೆ ಭಕ್ತಾದಿಗಳು ಬರುತ್ತಾರೆ. ಭಾನುವಾರ ನಸುಕಿನಿಂದಲೇ ಚನ್ನಬಸವೇಶ್ವರ …

Read More »

ಅಥಣಿ| ವೃದ್ಧೆ ಸಾವು, 9 ಮಂದಿಗೆ ಗಾಯ

ಅಥಣಿ: ತಾಲ್ಲೂಕಿನ ಘಟನಟ್ಟಿ ಕ್ರಾಸ್‌ ಸಮೀಪ ಶನಿವಾರ ಕ್ರೂಸರ್‌ ಹಾಗೂ ಗೂಡ್ಸ್‌ ಲಾರಿ ಮಧ್ಯೆ ಮುಖಾ-ಮುಖಿ ಡಿಕ್ಕಿ ಸಂಭವಿಸಿ, ಒಬ್ಬ ವೃದ್ಧೆ ಮೃತಪಟ್ಟಿದ್ದು, 9 ಮಂದಿ ಗಾಯಗೊಂಡಿದ್ದಾರೆ. ವಿಜಯ‍ಪುರ ಜಿಲ್ಲೆಯ ಸಿಂದಗಿಯವರಾದ ದೇವಕಿ ನಿಂಗಣ್ಣ ಕಿಚಡಿ (65) ಮೃತಪಟ್ಟವರು. ಈ ಕ್ರೂಸರ್‌ನಲ್ಲಿ 10 ಮಂದಿ ಯಲ್ಲಮ್ಮನ ಗುಡ್ಡಕ್ಕೆ ದರ್ಶನಕ್ಕೆ ಬಂದಿದ್ದರು. ಶನಿವಾರ ದೇವಿ ದರ್ಶನ ಮಾಡಿಕೊಂಡು ಮರಳಿ ಸಿಂದಗಿ ಕಡೆಗೆ ಹೊಟರಿದ್ದರು. ಅಥಣಿ ಮಾರ್ಗವಾಗಿ ಬರುತ್ತಿದ್ದ ಗೂಡ್ಸ್‌ ಲಾರಿ ಹಾಗೂ …

Read More »

ಬೆಳಗಾವಿ: ‘ದಂಡ ಪಾವತಿಗೆ ಶೇ 50 ರಿಯಾಯಿತಿ’

ಬೆಳಗಾವಿ: ‘ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿ ದಂಡದ ಮೊತ್ತ ಪಾವತಿಸಲು ಫೆ.11ರವರೆಗೆ ಶೇ 50ರಷ್ಟು ರಿಯಾಯಿತಿ ನೀಡಲಾಗಿದೆ. ವಾಹನ ಸವಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಮುಸ್ತಫಾ ಹುಸೇನ್ ಎಸ್.ಎ. ಹೇಳಿದರು. ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ 6.28 ಲಕ್ಷ ಪ್ರಕರಣಗಳಲ್ಲಿ ₹26 ಕೋಟಿ ದಂಡ ಪಾವತಿಯಾಗಬೇಕಿದೆ. ವಾಹನ ಸವಾರರು ತಮಗೆ ವಿಧಿಸಿದ ದಂಡದ …

Read More »

ಐಗಳಿ: ಭೈರವನಾಥ ಜಾತ್ರೆ ಇಂದಿನಿಂದ

ಐಗಳಿ : ಇಲ್ಲಿಯ ಭೈರವನಾಥ ದೇವರ ಜಾತ್ರೆ ಫೆ. 5 ಹಾಗೂ 6ರಂದು ನಡೆಯಲಿದ್ದು, ಇದರ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಭ್ರಮದಿಂದ ಜರುಗಲಿವೆ. ಫೆ.5ರಂದು ಬೆಳಿಗ್ಗೆ ದೇವರಿಗೆ ವಿಶೇಷ ಪೂಜೆ, ನಂತರ ಹಂದರ ಹಾಕುವುದು. ಮಧ್ಯಾಹ್ನ ದೇವರಿಗೆ ಮಹಾ ನೈವೇದ್ಯ ಅರ್ಪಿಸುವುದು, ಸಂಜೆಯಲ್ಲಿ ಕಕಮರಿಯ ಗುರುದೇವ ಆಶ್ರಮದ ಆತ್ಮಾರಾಮ ಸ್ವಾಮೀಜಿ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಲಿದೆ. ನಂತರ ಪಲ್ಲಕ್ಕಿ ಉತ್ಸವವು ವಿವಿಧ ವಾದ್ಯಗಳ ಮೂಲಕ ನಡೆಯಲಿದೆ. ರಾತ್ರಿ ಇಂಗಳಿ ಹಾಗೂ ಸತ್ತಿ …

Read More »

ಬೋಧಕರ ಕೊರತೆ: ಹಾವೇರಿ ಹಿಮ್ಸ್‌ನ 150 ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಹಾವೇರಿ: ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಹೊಸದಾಗಿ ಆರಂಭವಾಗಿರುವ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಹಿಮ್ಸ್‌) ಕಾಲೇಜಿನಲ್ಲಿ ಬೋಧಕರ ಕೊರತೆಯಿಂದ ಒಂದೂವರೆ ತಿಂಗಳು ಕಳೆದರೂ ಪಾಠಗಳೇ ಆರಂಭವಾಗಿಲ್ಲ. ಇದರಿಂದ 150 ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.   ಈ ಸರ್ಕಾರಿ ಮೆಡಿಕಲ್‌ ಕಾಲೇಜಿಗೆ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕರು ಸೇರಿದಂತೆ ಒಟ್ಟು 79 ಮಂದಿಯನ್ನು ಕಾಯಂ ನೇಮಕಾತಿ ಮಾಡಿಕೊಳ್ಳಲು 2022ರ ಜನವರಿಯಲ್ಲಿ ಸಂದರ್ಶನ ನಡೆಸಲಾಗಿತ್ತು. ಸಂದರ್ಶನ ದಲ್ಲಿ ಆಯ್ಕೆಯಾದವರ ತಾತ್ಕಾಲಿಕ ಪಟ್ಟಿಯನ್ನು …

Read More »

ಬೆಳಗಾವಿ: ರಾಷ್ಟ್ರಮಟ್ಟದ ಅಂಧರ ಕ್ರಿಕೆಟ್‌ ನಾಳೆ

ಬೆಳಗಾವಿ: ‘ಸಮರ್ಥನಂ’ ಅಂಗವಿಕಲರ ಸಂಸ್ಥೆ ಆಯೋಜಿಸಿದ ರಾಷ್ಟ್ರಮಟ್ಟದ ಅಂಧರ ಕ್ರಿಕೆಟ್‌ ಟೂರ್ನಿ ಹಾಗೂ ‘ಪ್ರಜಾವಾಣಿ’ ಅಮೃತ ಮಹೋತ್ಸವಕ್ಕೆ ಸಿದ್ಧತೆಗಳು ಪೂರ್ಣಗೊಂಡಿವೆ. ಇಲ್ಲಿನ ಆಟೊ ನಗರದಲ್ಲಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ಫೆ.5ರಿಂದ 9ರವರೆಗೆ ಟಿ-20 ಲೀಗ್‌ ಪಂದ್ಯಗಳು ನಡೆಯಲಿವೆ.   ದೇಶದ ಏಳು ನಗರಗಳಲ್ಲಿ ಈ ಲೀಗ್‌ ಪಂದ್ಯಗಳು ನಡೆಯಲಿವೆ. ಆ ಪೈಕಿ ‘ಬಿ’ ಗುಂಪಿನ 10 ಪಂದ್ಯಗಳನ್ನು ಬೆಳಗಾವಿಯಲ್ಲಿ ಅಯೋಜಿಸಲಾಗಿದೆ. ಕರ್ನಾಟಕ, ಮಹಾರಾಷ್ಟ್ರ, ಗೋವಾ, ಪಶ್ಚಿಮ ಬಂಗಾಳ …

Read More »

ಬಿಜೆಪಿಗೆ 130 ಸ್ಥಾನ ಖಚಿತ, ಗೆಲುವು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಿಎಸ್‌ವೈ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ 130ರಿಂದ 140 ಸ್ಥಾನಗಳನ್ನು ಪಡೆಯಲಿದೆ. ಗೆಲುವು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ (ಬಿಜೆಪಿ) 130ರಿಂದ 140 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರುತ್ತೇವೆ. ನಮ್ಮ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್‌ನಲ್ಲಿ …

Read More »

ನಿಪ್ಪಾಣಿ: ‘ಹೆಚ್ಚು ಅಂಕ ಗಳಿಕೆಗೆ ಒತ್ತಡ ಹೇರದಿರಿ’

ನಿಪ್ಪಾಣಿ: ‘ಮಕ್ಕಳು ಶಾರೀರಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಿರಬೇಕು. ಆಗ ದೇಶ-ವಿದೇಶಗಳಲ್ಲಿ ಗುರುತಿಸಿಕೊಳ್ಳುವಂತಹ ಕಾರ್ಯ ಮಾಡಲು ಸಶಕ್ತರಾಗುವರು’ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.   ಸ್ಥಳೀಯ ಶಿವಶಂಕರ ಜೊಲ್ಲೆ ಪಬ್ಲಿಕ್ (ಸಿಬಿಎಸ್‍ಇ) ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಮಕ್ಕಳಿಗೆ ಅತಿ ಹೆಚ್ಚು ಅಂಕ ಪಡೆಯುವಂತೆ ಒತ್ತಡ ಹೇರಬಾರದು. ಮಕ್ಕಳಿಗೆ ನಿತ್ಯ ಯೋಗ, ಪ್ರಾಣಾಯಮ ಮಾಡುವಂತೆ ಹೇಳಬೇಕು ಹಾಗೂ ಅವರು …

Read More »

ಬೈಲಹೊಂಗಲ: “ಅನ್ಯಭಾಷೆಗಳ ಆಕ್ರಮಣ ತಡೆಯಲಿ”

ಬೈಲಹೊಂಗಲ: ‘ಬೆಳಗಾವಿ ಅಪ್ಪಟ ಕನ್ನಡ ಕೇಂದ್ರ. ಈ ನಾಡಿನ ಸಾಂಸ್ಕೃತಿಕ ಇತಿಹಾಸದಲ್ಲಿ ಮಹತ್ವದ ಸ್ಥಾನ ಪಡೆದಿದೆ. ಕನ್ನಡ ಭಾಷೆಯ ಉಳಿವು, ಪ್ರಸಾರ ಬೆಳವಣಿಗೆಯಲ್ಲಿ ಈ ನಾಡಿನ ಜನತೆ ಸದಾ ಮುಂಚೂಣಿಯಲ್ಲಿದ್ದಾರೆ. ವಿಶೇಷವಾಗಿ ಗಡಿ ಪ್ರದೇಶಗಳಲ್ಲಿರುವ ಕನ್ನಡ ಶಾಲೆಗಳ ಸ್ಥಿತಿ ಸುಧಾರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಅನ್ಯಭಾಷೆಗಳ ಆಕ್ರಮಣವನ್ನು ತಗ್ಗಿಸಬೇಕು’ ಎಂದು ಸಮ್ಮೇಳನದ ಅಧ್ಯಕ್ಷ ಡಾ.ಶಾಂತಿನಾಥ ದಿಬ್ಬದ ಹೇಳಿದರು. ತಾಲ್ಲೂಕಿನ ದೇವಲಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶುಕ್ರವಾರ …

Read More »

ಬೆಳಗಾವಿ: ಎಸ್ಪಿ ಅಧಿಕಾರ ಸ್ವೀಕಾರ

ಬೆಳಗಾವಿ: ಜಿಲ್ಲೆಯ ನೂತನ ಹೆಚ್ಚುವರಿ ಎಸ್ಪಿ ಆಗಿ ಎಂ.ವೇಣುಗೋಪಾಲ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು. 1994ರ ಬ್ಯಾಚ್‌ನ ಅಧಿಕಾರಿ ಆಗಿರುವ ವೇಣುಗೋಪಾಲ ಅವರು, ಇದಕ್ಕೂ ಮುನ್ನ ಮಂಡ್ಯ ಜಿಲ್ಲಾ ಹೆಚ್ಚುವರಿ ಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಲೋಕಾಯುಕ್ತ, ಸಿಸಿಆರ್‌ಬಿ ಗುಪ್ತಚರ ವಿಭಾಗಗಳಲ್ಲೂ ಕೆಲಸ ಮಾಡಿದ ಅನುಭವ ಅವರಿಗಿದೆ.

Read More »