ಬೆಳಗಾವಿ: ಒಂದೂವರೆ ವರ್ಷದ ನಂತರ ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರಿಗೆ ಅಧಿಕಾರಿ ಸಿಗುವ ಯೋಗ ಕೂಡಿ ಬಂದಿದೆ. ಫೆ. 6ರಂದು ಮೇಯರ್- ಉಪ ಮೇಯರ್ ಚುನಾವಣೆ ನಡೆಯಲಿದ್ದು, ಆಕಾಂಕ್ಷಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಆದರೆ ಸ್ಮಾರ್ಟ್‌ಟಿಸಿಯ ಪ್ರಥಮ ಪ್ರಜೆ ಯಾರಾಗಲಿದ್ದಾರೆ ಎಂಬುದು ಮಾತ್ರ ಇನ್ನೂ ನಿಗೂಢವಾಗಿದೆ. ಚುನಾವಣಾ ಪ್ರಕ್ರಿಯೆಗೆ ಕೋರ್ಟ್ ಅನುಮತಿ ನೀಡಿ ಎರಡು ವಾರಗಳಾಗಿದ್ದು, ಅಂದಿನಿಂದಲೂ ತೆರೆಮರೆಯಲ್ಲಿ ಇನ್ನಿಲ್ಲದ ಕಸರತ್ತುಗಳು ನಡೆದಿವೆ. ಯಾರಿಗೆ ಕುರ್ಚಿ ಎಂಬುದನ್ನು ಈಗಲೇ ಘೋಷಣೆ …
Read More »ಬೆಳಗಾವಿ: ಜಿ.ಪಂ ಕಚೇರಿ ಮುಂದೆ ಹಿರಿಯರ ಧರಣಿ
ಬೆಳಗಾವಿ: ಸರ್ಕಾರಿ ಶಾಲೆಗಳಲ್ಲಿ ಕೆಲಸ ಮಾಡಿ ನಿವೃತ್ತರಾದ ಆಯಾಗಳ ಬೇಸಿಗೆ ರಜೆಯ ಬಾಕಿ ವೇತನ ನೀಡಬೇಕು ಹಾಗೂ ತಡೆಹಿಡಿಯಲಾದ ಆರು ತಿಂಗಳ ವೇತನವನ್ನೂ ಕೊಡಮಾಡಬೇಕು ಎಂದು ಆಗ್ರಹಿಸಿ, ಜಿಲ್ಲೆಯ ವಿವಿಧೆಡೆಯಿಂದ ಬಂದಿದ್ದ ಹಿರಿಯರು ಜಿಲ್ಲಾ ಪಂಚಾಯಿತಿ ಮುಂದೆ ಶುಕ್ರವಾರ ಇಡೀ ದಿನ ಧರಣಿ ನಡೆಸಿದರು. ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳ ಆಯಾಗಳ ಸಂಘದ ನೇತೃತ್ವದಲ್ಲಿ ಸೇರಿದ ಹಲವು ಮಹಿಳೆಯರು ಧರಣಿ ಕುಳಿತರು. ರಾಜ್ಯ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ …
Read More »ದ.ರಾ.ಬೇಂದ್ರೆ ಕಾವ್ಯದಲ್ಲಿದೆ ಹಲವು ವೈಶಿಷ್ಟ್ಯ; ಪ್ರೊ.ಎನ್.ಬಿ. ಝರೆ
ಕಾಗವಾಡ: ಬೇಂದ್ರೆಯವರ ಕಾವ್ಯ ಹಲವು ವೈಶಿಷ್ಟ್ಯ ಗಳಿಂದ ಕೂಡಿದೆ. ಅದನ್ನು ಸುಲಭವಾಗಿ ಅರ್ಥೈಸಲು ಸಾಧ್ಯವಿಲ್ಲ. ಬೇಂದ್ರೆಯವರ ಕಾವ್ಯದಲ್ಲಿ ತಾಯಿ, ಅಜ್ಜಿ, ಹೆಂಡತಿ, ಪರಿಸರ, ಸಾಹಿತ್ಯದ ಹಲವು ಪ್ರಕಾರಗಳು ಪ್ರಭಾವವನ್ನು ಬೀರಿವೆ ಎಂದು ಕೆ.ಎ.ಲೋಕಾಪೂರ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ.ಎನ್.ಬಿ. ಝರೆ ಅಭಿಪ್ರಾಯ ವ್ಯಕ್ತಪಡಿಸಿದರು. ಶುಕ್ರವಾರ ಸ್ಥಳೀಯ ಶಿವಾನಂದ ಮಹಾ ವಿದ್ಯಾಲಯದ ಐಕ್ಯೂಎಸಿ ಪ್ರಾಯೋಜಿತ ಕಾಲೇಜು ಒಕ್ಕೂಟ ಹಾಗೂ ಕನ್ನಡ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಡಾ|ದ.ರಾ.ಬೇಂದ್ರೆಯವರ 127ನೆ ಜನ್ಮದಿನಾಚರಣೆಯ ಪ್ರಯುಕ್ತ …
Read More »ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಕೊಡಲು ಚಿಂತನೆ: ಸಿಎಂ ಬೊಮ್ಮಾಯಿ
ವಿಜಯಪುರ: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡಲು ಅಗತ್ಯದ ಅನುದಾನ ನೀಡುತ್ತೇನೆ. ನಿವೃತ್ತ ಪತ್ರಕರ್ತರ ಮಾಸಾಶನ ಹೆಚ್ಚಳಕ್ಕೂ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಶನಿವಾರ ಐತಿಹಾಸಿಕ ವಿಜಯಪುರ ಮಹಾನಗರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಕರ್ತರ ರಾಜ್ಯ ಮಟ್ಟದ 37ನೇ ಸಮ್ಮೇಳನಕ್ಕೆ ಚಾಲನೆ ಮಾತನಾಡಿದ ಅವರು, ಆದರೆ ನಕಲಿ ಪತ್ರಕರ್ತರಿಗೆ ಕಡಿವಾಣ ಅಗತ್ಯ ಎಂದರು. ಪತ್ರಕರ್ತರನ್ನು ಕಾರ್ಮಿಕರನ್ನಾಗಿ ಪರಿಗಣಿಸಿ ಕಾರ್ಮಿಕ ಇಲಾಖೆಯ ಮೂಲಕ …
Read More »ರಾಜ್ಯದ ರೈಲು ಯೋಜನೆಗೆ ದಾಖಲೆ ಅನುದಾನ ಹಂಚಿಕೆ
ಹುಬ್ಬಳ್ಳಿ: ಕೇಂದ್ರ ಬಜೆಟ್ನಲ್ಲಿ ಈ ಬಾರಿ ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಅಂದಾಜು 7,561 ಕೋಟಿ ರೂ. ದಾಖಲೆ ಪ್ರಮಾಣದ ಅನುದಾನ ನೀಡಲಾಗಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತಿರುವುದಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. 2014ರಲ್ಲಿನ 835 ಕೋಟಿ ರೂ.ಗೆ ಹೋಲಿಸಿದರೆ 9 ಪಟ್ಟು ಹೆಚ್ಚಾಗಿದೆ. ರಾಜ್ಯದಲ್ಲಿ ಅಂದಾಜು 49,536 ಕೋಟಿ ರೂ. ಮೊತ್ತದ ಯೋಜನೆಗಳು ಪ್ರಗತಿಯಲ್ಲಿವೆ ಎಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ …
Read More »ಕರ್ತವ್ಯದಲ್ಲಿರುವಾಗಲೇ ಪೊಲೀಸ್ ಸಿಬ್ಬಂದಿಯಿಂದ ಭರ್ಜರಿ ಎಣ್ಣೆ ಪಾರ್ಟಿ!
ಹೈದರಬಾದ್: ಕರ್ತವ್ಯನಿರತ ಇಬ್ಬರು ಪೊಲೀಸ್ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಇಬ್ಬರು ಸಹ ಗಸ್ತು ವಾಹನದ ಸಿಬ್ಬಂದಿ ಎಂದು ತಿಳಿದುಬಂದಿದೆ. ವಾಹನವನ್ನು ಪಕ್ಕದಲ್ಲಿ ಪಾರ್ಕ್ ಮಾಡಿ ಮನೆಯ ಮುಂದಿನ ಸಣ್ಣದಾಗ ಗೋಡೆಯ ಮೇಲೆ ಕುಳಿತು ಇಬ್ಬರು ಮದ್ಯ ಸೇವನೆ ಮಾಡಿದ್ದಾರೆ. ಇಬ್ಬರು ಕೂಡ ಹೈದರಾಬಾದ್ನ ಪಂಜಗುಟ್ಟ ಠಾಣಾ ಪೊಲೀಸರು ಎಂದು …
Read More »ಕಲಾವಿದರನ್ನೂ ಬಿಡದ ಪರ್ಸೆಂಟೇಜ್; ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿ ಅಮಾನತು
ಬಳ್ಳಾರಿ: ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಸರ್ಕಾರದ ಶೇ. 40 ಕಮಿಷನ್ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಇನ್ನಷ್ಟು ಅಕ್ರಮ ಹೊರಬಿದ್ದಿದೆ. ಈ ಹಿಂದೆ ಗುತ್ತಿಗೆದಾರರ ವಿಷಯದಲ್ಲಿ ಕಮಿಷನ್ ವಿರುದ್ಧ ಕೂಗೆದ್ದಿತ್ತು, ಈಗ ಕಲಾವಿದರೂ ಕಮಿಷನ್ ವಿರುದ್ಧ ದನಿ ಎತ್ತಿದ್ದಾರೆ. ಪರಿಣಾಮವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಯೊಬ್ಬರು ಅಮಾನತುಗೊಂಡಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಯಾಗಿರುವ ಸಿದ್ದಲಿಂಗೇಶ್ವರ್ ರಂಗಣ್ಣನವರ್ ಅಮಾನತು ಆದವರು. ಇವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ …
Read More »ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮುಗಿದ ಮಾತ್ರೆ-ಇಂಜೆಕ್ಷನ್; ಲೋಕಾಯುಕ್ತ ಭೇಟಿ ವೇಳೆ ಬಯಲಾದ ಸಂಗತಿ
ಹುಬ್ಬಳ್ಳಿ: ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಅವಧಿ ಮುಗಿದ ಮಾತ್ರೆ ಹಾಗೂ ಚುಚ್ಚುಮದ್ದು ಪತ್ತೆಯಾಗಿರುವ ಆತಂಕಕಾರಿ ಸಂಗತಿಯೊಂದು ಹೊರಬಂದಿದೆ. ಲೋಕಾಯುಕ್ತ ತಂಡ ಆಸ್ಪತ್ರೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕು ಆಸ್ಪತ್ರೆಯಲ್ಲಿ ಅವಧಿ ಮುಗಿದ ಮಾತ್ರೆಗಳು ಮತ್ತು ಇಂಜೆಕ್ಷನ್ಗಳು ಪತ್ತೆಯಾಗಿವೆ. ಈ ತಾಲೂಕಾಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾಗ ಕೆಲವು ಮಾತ್ರೆ-ಇಂಜೆಕ್ಷನ್ಗಳ ಅವಧಿ ಮುಗಿದಿರುವುದು ಕಂಡುಬಂದಿತ್ತು. ಲೋಕಾಯುಕ್ತ ಅಧಿಕಾರಿಗಳು ಆಸ್ಪತ್ರೆ ಸಿಬ್ಬಂದಿಯನ್ನು ಪ್ರಶ್ನಿಸಿದಾಗ …
Read More »ಚುನಾವಣೆಯಲ್ಲಿ ಕರ್ನಾಟಕದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ: ಕೋಡಿಮಠದ ಶ್ರೀ
ಜಮಖಂಡಿ ಫೆಬ್ರವರಿ 4: ಈ ಬಾರಿಯ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ತಯಾರಿ ಭರದಿಂದ ಸಾಗುತ್ತಿದೆ. ಇನ್ನೇನು ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆಯಾಗುತ್ತಿದ್ದಂತೆ ಪ್ರಬಲ ಪಕ್ಷಗಳು ಪ್ರಚಾರ ಕಾರ್ಯಯವನ್ನು ಚುರುಕುಗೊಳಿಸಲಿವೆ. ಈ ನಡುವೆ ರಾಜಕೀಯ ಭವಿಷ್ಯ ನುಡಿಯುವುದರಲ್ಲಿ ಮುಂಚುಣಿಯಲ್ಲಿರುವ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಜಿಗಳು ಮತ್ತೊಂದು ರಾಜಕೀಯ ಭವಿಷ್ಯ …
Read More »ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಾರಕ್ಕೆ 5 ದಿನ ಮೊಟ್ಟೆ..!
ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯ ತಂದಿರುವ ರಾಜ್ಯ ಸರ್ಕಾರ ವಾರಕ್ಕೆ ಒಂದು ದಿನ ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ನೀಡಲು ಆದೇಶಿಸಿತ್ತು. ಮಕ್ಕಳು ಏನನ್ನು ಬಯಸುತ್ತಾರೋ ಅದನ್ನೇ ನೀಡಬೇಕೆಂದು ಕಟ್ಟುನಿಟ್ಟಾಗಿ ಸೂಚಿಸಲಾಗಿತ್ತು. ಅಲ್ಲದೆ ಸಮೀಕ್ಷೆ ಒಂದರಲ್ಲಿ ಶೇಕಡ 70ಕ್ಕೂ ಅಧಿಕ ಮಕ್ಕಳು ಮೊಟ್ಟೆ ನೀಡಲು ಬೇಡಿಕೆ ಇಟ್ಟಿದ್ದು, ಕಂಡುಬಂದಿತ್ತು. ಇದರ ಮಧ್ಯೆ ಆಡಳಿತ ಸುಧಾರಣಾ ಆಯೋಗ ಮತ್ತೊಂದು ಮಹತ್ವದ ಶಿಫಾರಸ್ಸು ಮಾಡಿದ್ದು ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಾರಕ್ಕೆ 5 ದಿನ …
Read More »