Breaking News

ಕೇಂದ್ರ ಬಜೆಟ್; ಕರ್ನಾಟಕಕ್ಕೆ ಬಂಪರ್ ಗಿಫ್ಟ್* ಭದ್ರಾಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ಘೋಷಣೆ

ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಭರ್ಜರಿ ಗಿಫ್ಟ್ ನೀಡಲಾಗಿದೆ. ಭದ್ರಾಮೇಲ್ದಂಡೆ ಯೋಜನೆಗಾಗಿ ಅನುದಾನ ಘೋಷಿಸಲಾಗಿದೆ. ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬರಗಾಲಪೀಡಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಭದ್ರಾಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ಘೋಷಿಸಲಾಗಿದೆ ಎಂದುತಿಳಿಸಿದ್ದಾರೆ.

Read More »

ಕೇಂದ್ರ ಬಜೆಟ್‌ – 2023; ಮುಖ್ಯಾಂಶಗಳು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು ಬಜೆಟ್‌ ಮಂಡನೆ ಮಾಡಿದ್ದು, ಅದರ ಮುಖ್ಯಾಂಶಗಳು ಕೆಳಕಂಡಂತಿವೆ. * ಐದನೇ ಬಾರಿಗೆ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವ ನಿರ್ಮಲಾ ಸೀತಾರಾಮನ್ * ಮಹಿಳೆಯರು, ಯುವಕರು, ರೈತರು, ಎಸ್ಸಿ/ಎಸ್ಟಿ ಸಮುದಾಯಗಳಿಗೆ ಮನ್ನಣೆ * ಆಧಾರ್, ಯುಪಿಐ, ಕೋವಿನ್ ಡಿಜಿಟಲೀಕರಣದ ಮೂರು ಸಾಧನೆಗಳಿಗೆ ವಿಶ್ವ ಮಾನ್ಯತೆ * ಪ್ರಸಕ್ತ ವರ್ಷದಲ್ಲಿ ಆರ್ಥಿಕತೆ ಶೇಕಡ 7 ರಷ್ಟು ವೃದ್ಧಿ * ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ …

Read More »

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 76 ತಹಶೀಲ್ದಾರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಮುಂಬರುವಂತ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಅಧಿಕಾರಿಗಳ ವರ್ಗಾವಣೆಗೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು 76 ತಹಶೀಲ್ದಾರ್ ಅವರನ್ನು ವರ್ಗಾವಣೆ ( Tahsildar Transfer ) ಮಾಡಿ ಆದೇಶಿಸಿದೆ.   ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ಕಂದಾಯ …

Read More »

ಸಾಮಾನ್ಯ ಗುರುತಿನ ಚೀಟಿಯಾಗಿ ಇನ್ನು ಮುಂದೆ ‘ಪ್ಯಾನ್ ಕಾರ್ಡ್’ ಪರಿಗಣನೆ

ನವದೆಹಲಿ: ಇನ್ನು ಮುಂದೆ ವ್ಯಾಪಾರಸ್ಥರು ಡಿಜಿಟಲ್ ವ್ಯವಹಾರಗಳಿಗೆ ಪ್ಯಾನ್​ ಕಾರ್ಡ್​ನ್ನು ಸಾಮಾನ್ಯ ಗುರುತಿನ ಕಾರ್ಡ್​ ಆಗಿ ಪರಿಗಣನೆಗೆ ತೆಗೆದುಕೊಳ್ಳಬಹುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕೇಂದ್ರ ಸರ್ಕಾರದ 2023-24ನೇ ಸಾಲಿನ ಬಜೆಟ್​ನಲ್ಲಿ ಘೋಷಿಸಿದ್ದಾರೆ.   ವಿತ್ತ ಸಚಿವೆಯಾಗಿ ಇಂದು 5ನೇ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್​​, ಪಾನ್​ ಕಾರ್ಡ್​ನ್ನು ಸಾಮಾನ್ಯ ಕಾರ್ಡ್​ ಆಗಿ ಬಳಕೆ ಮಾಡುವುದರಿಂದ ಬಂಡವಾಳದಾರರಿಗೆ ಮತ್ತಷ್ಟು ಸಹಕಾರಿಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಪ್ರಸ್ತುತ, ಕೇಂದ್ರ ಮತ್ತು ರಾಜ್ಯ …

Read More »

ಶಿವಾಜಿ ಮಹಾರಾಜರಿಗೆ ಅಪಮಾನ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖ

ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಶಿವಾಜಿ ಮಹಾರಾಜರಿಗೆ ಅಪಮಾನ ಹಿನ್ನೆಲೆ ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ವಿರುದ್ಧ ಮಂಗಳವಾರ ಕೇಸ್ ದಾಖಲಾಗಿದೆ. ವಾಟ್ಸಾಪ್ ನಲ್ಲಿ ಹರಿಬಿಟ್ಟ ಶಿವಾಜಿ ಮಹಾರಾಜರ ಕುರಿತು ಅವಾಚ್ಯ ಶಬ್ದದಿಂದ ನಿಂದಿಸಿದ್ದನ್ನು. ಅದಕ್ಕಾಗಿ ಕ್ಷತ್ರಿಯ ಮರಾಠಾ ಪರಿಷತ್ ಅಧ್ಯಕ್ಷ ಅಂಬಾದಾಸ ಸಿಂದಗಿ ದೂರಿನ ಮೇಲೆ ಕಾನೂನಿನ ಸಂಘರ್ಷಕ್ಕೆ ಒಳಗಾದ ಬಾಲಕನ ಮೇಲೆ ಕೇಸ್ ದಾಖಲಾಗಿದೆ. ಅಲ್ಲದೇ, ಕಲಂ 153A, 295A ಅಡಿಯಲ್ಲಿ ಚಡಚಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಕುಡಿದ ಮತ್ತಿನಲ್ಲಿ ಹೆಂಡತಿ- ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ

ಹುಬ್ಬಳ್ಳಿ: ಗಂಡನೊಬ್ಬ ಕುಡಿದ ಮತ್ತಿನಲ್ಲಿ ಹೆಂಡತಿ ಹಾಗೂ ಮೂವರು ಮಕ್ಕಳ ಮೇಲೆ ಕೊಡಲಿ, ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ತಾನು ಕೂಡ ನೇಣಿಗೆ ಶರಣಾದ ಘಟನೆ ತಾಲೂಕಿನ ಸುಳ್ಳ ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ. ಸುಳ್ಳ ಗ್ರಾಮದ ಪಕ್ಕೀರಪ್ಪ ಮಾದರ ಎಂಬಾತ ಇಂದು ಬೆಳಗಿನ ನಾಲ್ಕು ಗಂಟೆ ಸುಮಾರಿಗೆ ಮನೆಯಲ್ಲಿನ ಟಿವಿ ಸೌಂಡ್ ಜಾಸ್ತಿ ಮಾಡಿ ಮಾರಕಾಸ್ತ್ರದಿಂದ ಹೆಂಡತಿ ಮುದಕವ್ವನ ಮೇಲೆ ಹಲ್ಲೆ ನಡೆಸಿದಾಗ ಜೋರಾಗಿ ಕಿರುಚಿದ್ದಾಳೆ. ಆಗ …

Read More »

ಧಾರವಾಡದ ಕಸೂತಿ ಕಲೆಯ ಸೀರೆಯುಟ್ಟು ಬಜೆಟ್ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್

ಧಾರವಾಡ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 5ನೇ ಬಜೆಟ್ ಮಂಡನೆ ಮಾಡುತ್ತಿದ್ದು ಧಾರವಾಡ ಜಿಲ್ಲೆಯ ನವಲಗುಂದ ಕಸೂತಿ ಕಲೆ ಇರುವ ಕೆಂಪು (ಮರೂನ್ ಕಲರ್) ಬಣ್ಣದ ಸೀರೆಯುಟ್ಟಿರುವುದು ವಿಶೇಷ. ಈ ಸೀರೆಗೆ ಕಸೂತಿ ಹಾಕಿ ವಿಶೇಷವಾಗಿ ರೂಪಿಸಿದ್ದು ಧಾರವಾಡ ನಗರದ ನಾರಾಯಣಪುರದಲ್ಲಿ ಇರುವ ಆರತಿ ಹಿರೇಮಠ ಮಾಲೀಕತ್ವದ ಆರತಿ ಕ್ರಾಪ್ಟ್ಸ್ ನ ಮಹಿಳಾಮಣಿಗಳು ಅನ್ನುವುದು ಇನ್ನೂ ವಿಶೇಷ.   ಜಿಲ್ಲೆಯ ಸಂಸದರು, ಕೇಂದ್ರ ಸಚಿವರು ಆಗಿರುವ …

Read More »

ತಾಂತ್ರಿಕ ಸಮಸ್ಯೆ: ವಿದ್ಯಾರ್ಥಿಗಳು ಅತಂತ್ರ

ಬೆಳಗಾವಿ: ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (ಯುಯುಸಿಎಂಎಸ್)‌ ಸ್ಟೂಡೆಂಟ್‌ ಪೋರ್ಟಲ್‌ನಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿರುವ ತಾಂತ್ರಿಕ ಸಮಸ್ಯೆ ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ (ಆರ್‌ಸಿಯು) ವಿದ್ಯಾರ್ಥಿಗಳನ್ನು ಹೈರಾಣಾಗಿಸಿದೆ.   ಆರ್‌ಸಿಯು ವ್ಯಾಪ್ತಿಯಲ್ಲಿ 400 ಪದವಿ ಕಾಲೇಜುಗಳಿದ್ದು, 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬಿ.ಎ, ಬಿಬಿಎ, ಬಿಸಿಎ, ಬಿ.ಎಸ್ಸಿ, ಬಿಎಸ್‌ಡಬ್ಲ್ಯು 1, 3 ಮತ್ತು 5ನೇ ಸೆಮಿಸ್ಟರ್‌ ವಿದ್ಯಾರ್ಥಿಗಳಿಂದ ಪರೀಕ್ಷಾ ಅರ್ಜಿ ಆಹ್ವಾನಿಸಲಾಗಿದ್ದು, ಜ.6ರಿಂದ 31ರವರೆಗೆ ಈ …

Read More »

ಕಾಂಗ್ರೆಸ್‌ ಟಿಕೆಟ್: 130 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿ ಸಿದ್ಧ?

ಬೆಂಗಳೂರು: ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆ ಗುರುವಾರ (ಫೆ. 2) ನಡೆಯಲಿದ್ದು, ಅದಕ್ಕೂ ಮೊದಲೇ 120ರಿಂದ 130 ಕ್ಷೇತ್ರಗಳಿಗೆ ಪಕ್ಷದ ಸಂಭವನೀಯ ಅಭ್ಯರ್ಥಿಗಳನ್ನು ಗುರುತಿಸಿ, ಪಟ್ಟಿ ಸಿದ್ಧಪಡಿಸಲು ರಾಜ್ಯ ಕಾಂಗ್ರೆಸ್‌ ನಿರ್ಧರಿಸಿದೆ.   ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬುಧವಾರ ಚರ್ಚೆ ನಡೆಸಲಿದ್ದಾರೆ. ‘ಸುರ್ಜೇವಾಲಾ ಅವರು ಬೆಳಿಗ್ಗೆ …

Read More »

ಮತದಾರರೇ ಭ್ರಷ್ಟರಾಗಿದ್ದಾರೆ ನಾನು ಚುನಾವಣೆಗೆ ನಿಲ್ಲಲಾರೆ: ಹಳ್ಳಿ ಹಕ್ಕಿ

ಧಾರವಾಡ: ಇಂದು ಸ್ಥಿತಿವಂತರೂ ಮತ ಮಾರಿಕೊಳ್ಳುವ ಕೆಟ್ಟ ಪರಿಸ್ಥಿತಿಗೆ ಬಂದಿದ್ದೇವೆ. ರಾಜಕಾರಣ ಹಾಗೂ ರಾಜಕಾರಣಿಗಳು ಇಂದಿನ ಜನರನ್ನು ಭ್ರಷ್ಟಗೊಳಿಸಿದೆ. ಜನರೂ ಭ್ರಷ್ಟರಾಗಿದ್ದಾರೆ. ಚುನಾವಣೆಗೆ ಬೆಲೆಯೇ ಇಲ್ಲದಂತಾಗಿದೆ. ಹೀಗಾಗಿ ಇಂತಹ ಸಂದರ್ಭದಲ್ಲಿ ನಾನು ಚುನಾವಣೆಗೆ ಸ್ಪರ್ಧಿಸಲಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು. ನಗರದ ಬೇಂದ್ರೆ ಭವನದಲ್ಲಿ ಮಂಗಳವಾರ ಸಂಜೆ ಜರುಗಿದ ಕಾರ್ಯಕ್ರಮದಲ್ಲಿ ವರಕವಿ ಡಾ.ದ.ರಾ.ಬೇಂದ್ರೆ ಅವರ 127 ನೇ ಜನ್ಮದಿನಾಚರಣೆ ಪ್ರಯುಕ್ತ ಡಾ.ದ.ರಾ.ಬೇಂದ್ರೆ ರಾಷ್ಟೀಯ ಸ್ಮಾರಕ ಟ್ರಸ್ಟ ವತಿಯಿಂದ ಕೊಡ …

Read More »