Breaking News

ಗೋಸಾಗಣೆ ವೇಳೆ ವ್ಯಕ್ತಿ ಅನುಮಾನಾಸ್ಪದ ಸಾವು ಪ್ರಕರಣ : ಪುನೀತ್ ಕೆರೆಹಳ್ಳಿ ಸೇರಿ ನಾಲ್ವರಿಗೆ ಜಾಮೀನು

ಬೆಂಗಳೂರು : ಗೋಸಾಗಣೆ ಆರೋಪದಲ್ಲಿ ಇದ್ರೀಶ್ ಪಾಷಾ ಎಂಬುವರು ಅನುಮಾನಾಸ್ಪದ ರೀತಿ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕುಮಾರ್‌ ಅಲಿಯಾಸ್‌ ಪುನೀತ್ ಕೆರೆಹಳ್ಳಿ ಹಾಗೂ ಇತರೆ ನಾಲ್ವರು ಆರೋಪಿಗಳಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳು ಪ್ರತ್ಯೇಕವಾಗಿ ಸಲ್ಲಿಸಿದ್ದ ಮೂರು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ. ಉಮಾ ಅವರ ನೇತೃತ್ವದ ರಜಾಕಾಲದ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದೆ. ಆರೋಪಿಗಳಾದ ಪುನೀತ್ ಕೆರೆಹಳ್ಳಿ, …

Read More »

ಪಿವಿಆರ್​ ಐನಾಕ್ಸ್ ದೇಶದೆಲ್ಲಡೆ 50 ಸ್ಕ್ರೀನ್​​ ಮುಚ್ಚುವ ನಿರ್ಧಾರ

ಪಿವಿಆರ್​ ಐನಾಕ್ಸ್ ದೇಶದೆಲ್ಲಡೆ 50 ಸ್ಕ್ರೀನ್​​ ಮುಚ್ಚುವ ನಿರ್ಧಾರಕ್ಕೆ ಬಂದಿದೆ. ಒಂದು ಕಡೆ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಸಂಖ್ಯೆ ಕಡಿಮೆ ಆಗಿದೆ ಅನ್ನುವ ಮಾತಿದೆ. ಆದರೆ ಚಿತ್ರರಂಗದವರು ಈ ಅಭಿಪ್ರಾಯವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಒಟಿಟಿಯಿಂದ ಎದುರಾಗ್ತಿರುವ ಸಮಸ್ಯೆಯ ಬಗ್ಗೆಯೂ ಆಲೋಚನೆ ಮಾಡ್ತಿಲ್ಲ. ಚಿತ್ರಮಂದಿರಗಳ ಸ್ಥಿತಿ ಗತಿಯ ಕುರಿತು ಚರ್ಚೆ ಮಾಡ್ತಿಲ್ಲ. ಚಿತ್ರಮಂದಿರಕ್ಕೆ ಪ್ರೇಕ್ಷಕರನ್ನ ಮರಳಿ ಕರೆತರುವ ಕುರಿತು ಚಿಂತನ ಮಂಥನ ನಡೆಯುತ್ತಿಲ್ಲ ಮಾಡ್ತಿಲ್ಲ ಎಂಬ ಮಾತುಗಳಿವೆ. ಇತ್ತ ಮಲ್ಟಿಪ್ಲೆಕ್ಸ್​ಗಳು ಭಾರಿ ನಷ್ಟ …

Read More »

ಬೆಂಗಳೂರು ನಗರದ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿಯಲ್ಲಿ ನಡೆದಿದ್ದ ಗಲಭೆ ಕುರಿತಂತೆ ಎನ್​ಐಎ ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ.

ಬೆಂಗಳೂರು : 2020ರ ಆಗಸ್ಟ್ 11ರಂದು ಬೆಂಗಳೂರು ನಗರದ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದಿದ್ದ ಗಲಭೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಎನ್‌ಐಎ ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ರದ್ದು ಪಡಿಸುವಂತೆ ಕೋರಿ ಗಲಭೆಗೆ ಕಾರಣರಾಗಿದ್ದ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ರದ್ದುಪಡಿಸಿದೆ.   ಸಾರ್ವಜನಿಕ ಆಸ್ತಿ ನಷ್ಟ ಆರೋಪ ಸಂಬಂಧ ಎನ್‌ಐಎ ವಿಶೇಷ ನ್ಯಾಯಾಲಯಲ್ಲಿ ನಡೆಯುತ್ತಿರುವ ತನಿಖೆ ಮತ್ತು ಈ ಸಂಬಂಧದ ಆರೋಪ ಪಟ್ಟಿಯನ್ನು ರದ್ದು ಪಡಿಸುವಂತೆ ಕೋರಿ ಮೊಹಮ್ಮದ್ …

Read More »

ಡಿಕೆಶಿ, ಸಿದ್ದರಾಮಯ್ಯ ಜೊತೆ ಖರ್ಗೆ ಚರ್ಚೆ; ನೂತನ ಸಿಎಂ ಘೋಷಣೆ ಸಾಧ್ಯತೆ..

ನವದೆಹಲಿ: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆ ಕುರಿತು ಕಾಂಗ್ರೆಸ್​ನಲ್ಲಿ ಭಾರಿ ಚರ್ಚೆಗಳು ನಡೆಸುತ್ತಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಬೆಂಗಳೂರಿನಲ್ಲಿ ರಾಜ್ಯದ ಮುಖ್ಯಮಂತ್ರಿ ಯಾರು ಎಂಬುದನ್ನು ಘೋಷಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಎಐಸಿಸಿ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಸಮಾಲೋಚಿಸಿದ ನಂತರ ಖರ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಕರ್ನಾಟಕ ಸಿಎಂ ಸ್ಥಾನದ ಕುರಿತು ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಕಾಂಗ್ರೆಸ್ ಅಧ್ಯಕ್ಷರು …

Read More »

ಸರ್ಕಾರಿ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ

(ಉತ್ತರಪ್ರದೇಶ): ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸರ್ಕಾರಿ ಶಾಲಾ ಶಿಕ್ಷಕನನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆರೋಪಿ ಶಿಕ್ಷಕನು ಕನಿಷ್ಠ 18 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ತಿಳಿದುಬಂದಿದೆ. ಘಟನೆಯ ನಂತರ ವಿದ್ಯಾರ್ಥಿನಿಯರು ಶಾಲೆಗೆ ಬರುವುದನ್ನು ನಿಲ್ಲಿಸಿದ್ದು, ಈ ಹಿನ್ನೆಲೆ ಸರ್ಕಾರಿ ಶಾಲೆಯ ಹಾಜರಾತಿ ಕನಿಷ್ಠ ಶೇ.35ಕ್ಕಿಂತ ಕಡಿಮೆಯಾಗಿದೆ ಎಂದು ತಿಳಿದುಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ಶಹಜಹಾನ್​ ಪುರದ ದಾದ್ರಾಲ್​ನಲ್ಲಿರುವ ಸರ್ಕಾರಿ ಶಾಲೆಯಲ್ಲಿ ಘಟನೆ ನಡೆದಿದೆ. …

Read More »

ಸಿಇಟಿ-2023 ಅರ್ಜಿ ತಿದ್ದುಪಡಿಗೆ ಕೊನೆಯ ಅವಕಾಶ

ಬೆಂಗಳೂರು: ಸಿಇಟಿ ಪರೀಕ್ಷೆ 2023ಕ್ಕೆ ಆನ್ ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿನ ಮಾಹಿತಿ ತಿದ್ದುಪಡಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಟ್ಟಕಡೆಯ ಅವಕಾಶ ನೀಡಿದೆ. ಕೆಇಎ ಕಾಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರು ಮಂಗಳವಾರ ಪತ್ರಿಕಾ ಹೇಳಿಕೆಯಲ್ಲಿ, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು 21-05-2023 ರ ಸಂಜೆ 6ರಿಂದ 24-05-2023 ರ ರಾತ್ರಿ 11.59 ರವರೆಗೆ ಮಾಹಿತಿ ತಿದ್ದುಪಡಿ ಮಾಡಬಹುದು ಎಂದಿದ್ದಾರೆ. ಸಿಇಟಿ-2023 ರ ಫಲಿತಾಂಶ ಪ್ರಕಟಿಸುವ ಮುನ್ನ ಇದು ತಿದ್ದುಪಡಿಗೆ ಕೊನೆಯ …

Read More »

ಸ್ಕೂಟರ್‌ ನಲ್ಲಿ ಅಪ್ಪಿಕೊಂಡು, ಮುದ್ದಾಡಿದ ಜೋಡಿ; ವಿಡಿಯೋ ವೈರಲ್

ದೆಹಲಿ: ದಿಲ್ಲಿ ಮೆಟ್ರೋದಲ್ಲಿ ಕಳೆದ ಕೆಲ ದಿನಗಳ ಹಿಂದೆ ಜೋಡಿಯೊಂದು ಲಿಪ್‌ ಲಾಕ್‌ ಮಾಡಿದ ವಿಡಿಯೋ ವೈರಲ್‌ ಆಗಿತ್ತು. ಇದೀಗ ದಿಲ್ಲಿ ಮತ್ತೊಂದು ಅಂಥದ್ದೇ ವಿಚಾರದಲ್ಲಿ ಸುದ್ದಿಯಾಗಿದೆ. ಆದರೆ ಈ ಬಾರಿ ಸ್ಕೂಟರ್‌ ನಲ್ಲಿ ಪ್ರಯಾಣಿಸಿದ ಜೋಡಿಯಿಂದಾಗಿ.   ದಿಲ್ಲಿಯ ರಸ್ತೆಯಲ್ಲಿ ಸ್ಕೂಟರ್‌ ನಲ್ಲಿ ಜೋಡಿಯೊಂದು ಹೋಗುವಾಗ ಹುಡುಗ ಒಂದು ಕೈಯಲ್ಲಿ ಸ್ಕೂಟರ್‌ ಚಲಾಯಿಸುತ್ತ ಇನ್ನೊಂದು ಕೈಯಲ್ಲಿ ಯುವತಿಯನ್ನು ಅಪ್ಪಿಕೊಂಡು ಮುದ್ದಾಡಿದ್ದಾನೆ. ಈ ವಿಡಿಯೋವನ್ನು ಕಾರಿನಲ್ಲಿ ಹೋಗುತ್ತಿದ್ದವರು ಸೆರೆ ಹಿಡಿದ್ದಾರೆ. ಶಾಲು …

Read More »

ಐಟಿ ವೆಬ್‌ಸೈಟ್‌ಗೆ ಕನ್ನ ಹಾಕಿ ಭಾರೀ ವಂಚನೆ

ಬೆಂಗಳೂರು: ಆದಾಯ ತೆರಿಗೆ ಇಲಾಖೆಯ(ಐಟಿ) ವೆಬ್‌ಸೈಟ್‌ ಹ್ಯಾಕ್‌ ಮಾಡಿಕೊಂಡು ತೆರಿಗೆದಾರರ ಆದಾಯ ತೆರಿಗೆ ಮರುಪಾವತಿಯನ್ನು ನಕಲಿ ಖಾತೆ ತೆರೆದು ತನ್ನ ಖಾತೆಗೆ ವರ್ಗಾವಣೆ ಮಾಡಿಕೊಳ್ಳುತ್ತಿದ್ದ ಆರೋಪಿಯನ್ನು ಸಿಐಡಿ ಸೈಬರ್‌ ಕ್ರೈಂ ಪೊಲೀಸರು ಬಂಧಿಸಿದ್ದಾರೆ.   ಹಾಸನ ಜಿಲ್ಲೆ ಹಿರಿಸಾವೆ ಮೂಲದ ದಿಲೀಪ್‌ ರಾಜೇಗೌಡ (32) ಬಂಧಿತ ಆರೋಪಿ. ಈತನ ವಿರುದ್ಧ ಕರ್ನಾಟಕ, ಮಹಾರಾಷ್ಟ್ರ, ಗೋವಾ, ತೆಲಂಗಾಣದಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಧಾರವಾಡದಲ್ಲಿ ಬಂಧಿಸಲಾಗಿದೆ. ಈತನಿಂದ ಕೆಲ ಡಿಜಿಟಲ್‌ ಹಾಗೂ ಇತರೆ ಸಾಕ್ಷ್ಯಗಳನ್ನು …

Read More »

ಸಂವಹನ ಕೌಶಲ ಅತೀ ಮುಖ್ಯ: ಸಲೀಂ ಹವಾಲ್ದಾರ

ಉಗರಗೋಳ: ಎಸ್‌ಎಸ್‌ಎಲ್‌ಸಿ ನಂತರ ಅನೇಕ ಆಯ್ಕೆಗಳಿವೆ. ಸಮರ್ಪಕ ಮಾರ್ಗದರ್ಶನ ಮತ್ತು ಜ್ಞಾನದ ಕೊರತೆಯಿಂದ ಮಕ್ಕಳು ಗೊಂದಲದಲ್ಲಿ ತಮ್ಮ ಭವಿಷ್ಯ ಹಾಳು ಮಾಡಿಕೊಳ್ಳದಂತೆ ಪಾಲಕರು ಎಚ್ಚರವಹಿಸಬೇಕು ಎಂದು ಇಸ್ರೋ ವಿಜ್ಞಾನಿ ಸಲೀಮ್‌ ಹವಾಲ್ದಾರ ಹೇಳಿದರು.   ಇಲ್ಲಿನ ಬಸವಜ್ಯೋತಿ ಪ್ರಾಥಮಿಕ ಶಾಲಾ ಆವರಣದಲ್ಲಿ ರವಿವಾರ ಜರುಗಿದ ಎಸ್‌ಎಸ್‌ ಎಲ್‌ಸಿ ಆಯ್ತು, ಮುಂದೆ- ಎಂಬ ವಿಷಯ ಕುರಿತ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಅವರು ಮಾತನಾಡಿದರು. ತಂತ್ರಜ್ಞಾನ ಯುಗದಲ್ಲಿ ಸಂವಹನ ಕೌಶಲ ಅತಿ ಮುಖ್ಯವಾಗಿದೆ. …

Read More »

ಸುಳ್ಳು ಸುದ್ದಿ ಹರಡುವವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದಡಿ.ಕೆ.ಶಿ

ನವದೆಹಲಿ: ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರ ಕ್ಷಣ ಕ್ಷಣಕ್ಕೂ ಕಗ್ಗಂಟಾಗುತ್ತಿದ್ದು, ಸಿಎಂ ಹುದ್ದೆಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ತೀವ್ರ ಪೈಪೋಟಿ ನಡೆದಿದೆ. ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ನ ಎಲ್ಲಾ ನಾಯಕರನ್ನು ಭೆಟಿಯಾಗುತ್ತೇನೆ. ಮೊದಲು ಖರ್ಗೆ ಅವರನ್ನು ಭೇಟಿಯಾಗುತ್ತೇನೆ ಎಂದರು. ಕಾಂಗ್ರೆಸ್ ಪಕ್ಷ ನನಗೆ ತಾಯಿಯಿದ್ದಂತೆ. ಹೈಕಮಾಂಡ್ ಇದೆ, 135 ಶಾಸಕರು ಆಯ್ಕೆಯಾಗಿದ್ದೇವೆ. …

Read More »