ಬೆಳಗಾವಿ – ಅಮಿತಾ ಶಾ ಬಂದು ಸಭೆ ಮಾಡಿದ್ದು ಬಹಳ ಒಳ್ಳೆಯದಾಗಿದೆ. ಫೆಬ್ರವರಿ 1ರಿಂದ ಬೆಳಗಾವಿ ಜಿಲ್ಲೆಯಲ್ಲಿ ಒಳ್ಳೆಯ ಬೆಳವಣಿಗೆ ಆಗಲಿದೆ. ಎಲ್ಲ ನಾಯಕರು ಭಿನ್ನಾಭಿಪ್ರಾಯ ಮರೆತು ಕೆಲಸ ಮಾಡಲಿದ್ದಾರೆ ಎಂದು ಮಾಜಿ ಸಚಿವ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯ ಖಾಸಗಿ ಹೊಟೆಲ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನಡೆಸಿದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಯಡಿಯೂರಪ್ಪ, ಪ್ರಹ್ಲಾದ ಜೋಶಿ, ನಳೀನ್ ಕುಮಾರ …
Read More »ಮೂರು ಮಕ್ಕಳನ್ನು ನೀರಿನ ಸಂಪ್ ಗೆ ಎಸೆದು ತಾಯಿ ಆತ್ಮಹತ್ಯೆ
ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮೂರು ಮಕ್ಕಳನ್ನು ನೀರಿನ ಸಂಪ್ ಗೆ ಎಸೆದು ತಾಯಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ಜರುಗಿದೆ. ಜಿಲ್ಲೆಯ ತಿಕೋಟಾ ತಾಲೂಕಿನ ಜಾಲಗೇರಿ ಗ್ರಾಮದ ಬಳಿಯ ವಿಠಲವಾಡಿ ತಾಂಡಾ ಗೀತಾ ರಾಮು ಚೌವ್ಹಾಣ (32) ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತಾಯಿ ಗೀತಾಳಿಂದ ಹತ್ಯೆಯಾದ ಮಕ್ಕಳನ್ನು ಸೃಷ್ಠಿ (6), ಸಮರ್ಥ (4), ಕಿಶನ್ (3) ಎಂದು ಗುರುತಿಸಲಾಗಿದೆ. …
Read More »ಸ್ಯಾಂಡಲ್ ವುಡ್ ಹಿರಿಯ ನಟ ಮಂದೀಪ್ ರಾಯ್ ಇನ್ನಿಲ್ಲ
ಬೆಂಗಳೂರು: ಕನ್ನಡದ ಹಿರಿಯ ನಟ ಮಂದೀಪ್ ರಾಯ್ ಅವರು ಕೊನೆಯುಸಿರೆಳೆದಿದ್ದಾರೆ. 73 ವರ್ಷದ ಮಂದೀಪ್ ರಾಯ್ ಅವರಿಗೆ ಮಧ್ಯರಾತ್ರಿ 1.45ರ ಸುಮಾರಿಗೆ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಮಂದೀಪ್ ರಾಯ್ ಅವರು ಮೂಲತಃ ಮುಂಬೈನವರು. ಬಾಲ್ಯದಲ್ಲಿ ಕರಾಟೆ, ಕುಂಗ್ ಫು ಅಭ್ಯಾಸ ಮಾಡಿದ್ದ ಮಂದೀಪ್ ಅವರು ಒಂಬತ್ತನೇ ವಯಸ್ಸಿನಲ್ಲಿ ರಂಗಭೂಮಿ ಒಲವು ಮೂಡಿಸಿಕೊಂಡರು. ರಂಗಭೂಮಿಯಲ್ಲಿ ಪರಿಚಯವಾದ ಶಂಕರ್ ನಾಗ್ ಮತ್ತು ಅನಂತ್ ನಾಗ್ ಅವರ ಕಾರಣದಿಂದ …
Read More »ರಾಯಬಾಗ| ಅಪಘಾತದಲ್ಲಿ ಮೂವರು ಸವಾರರ ಸಾವು
ರಾಯಬಾಗ: ತಾಲ್ಲೂಕಿನ ನಿಡಗುಂದಿ ಬಳಿ ಬೈಕ್‌ಗಳ ಮಧ್ಯೆ ಶನಿವಾರ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟ್ಟಣದ ನಿವಾಸಿ ಸಿದ್ಧಾರ್ಥ ಜಗದಾಳೆ (24), ಬಾಗಲಕೋಟೆ ಜಿಲ್ಲೆಯ ಲೋಕಾಪುರದ ಮಾರುತಿ ವಿಭೂತಿ (32), ಮುಧೋಳದ ಶಾಮಣ್ಣ ವಿಭೂತಿ(22) ಮೃತರು. ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಯುದ್ಧ ವಿಮಾನಗಳ ಪತನದಲ್ಲಿ ಮೃತಪಟ್ಟ ಪೈಲೆಟ್ ಬೆಳಗಾವಿ ಮೂಲದವರು
ಬೆಳಗಾವಿ: ಮಧ್ಯಪ್ರದೇಶದ ಗ್ವಾಲಿಯರ್ ಸಮೀಪ ಸುಖೋಯ್ 30 ಎಂಕೆಐ ಹಾಗೂ ಮಿರಾಜ್-2000 ಯುದ್ಧ ವಿಮಾನಗಳ ಮಧ್ಯೆ ಶನಿವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಪೈಲೆಟ್, ವಿಂಗ್ ಕಮಾಂಡರ್ ಹನುಮಂತರಾವ್ ರೇವಣಸಿದ್ಧಪ್ಪ ಸಾರಥಿ (34) ಬೆಳಗಾವಿ ಮೂಲದವರು. ಇಲ್ಲಿನ ಗಣೇಶಪುರದ ಮನೆಯಲ್ಲಿ 1987ರಲ್ಲಿ ಜನಿಸಿದ ಅವರು, ಬಾಲ್ಯವನ್ನು ಇಲ್ಲಿಯೇ ಕಳೆದಿದ್ದರು. ನಗರದ ಕೇಂದ್ರೀಯ ವಿದ್ಯಾಲಯ-2ರಲ್ಲಿ ಶಿಕ್ಷಣ ಪೂರೈಸಿದ್ದರು. ಪೈಲೆಟ್ ಆದ ಮೇಲೆ ಪತ್ನಿ, ಮಕ್ಕಳ ಸಮೇತ ಗ್ವಾಲಿಯರ್‌ನಲ್ಲಿ ನೆಲೆಸಿದ್ದರು. 2009ರಿಂದ ಭಾರತೀಯ …
Read More »ನಾನು ಬೆಳಗಾವಿಗೆ ಮತ್ತೊಮ್ಮೆ ಬರುತ್ತೇನೆ ಅಷ್ಟರೊಳಗೆ ಎಲ್ಲ ಭಿನ್ನಮತ ಮುಗಿದಿರಬೇಕು:ಅಮಿತ್ ಶಾ
ಹುಬ್ಬಳ್ಳಿ: ನಾಲ್ಕೈದು ತಿಂಗಳಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಸಲ ತ್ರಿಕೋನ ಸ್ಪರ್ಧೆಯಿಲ್ಲ, ಬಿಜೆಪಿ- ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಶನಿವಾರ ಬಿಜೆಪಿ ಹಮ್ಮಿಕೊಂಡ ‘ವಿಜಯ ಸಂಕಲ್ಪ ಅಭಿಯಾನ’ ಅಂಗವಾಗಿ ರೋಡ್ ಶೋ ನಡೆಸಿದ ನಂತರ ಅವರು ಮಾತನಾಡಿದರು. ರಾಜ್ಯದಲ್ಲಿ ತ್ರಿಕೋನ ಸ್ಪರ್ಧೆ ನಡೆಯಲಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಕಾಂಗ್ರೆಸ್‌ಗೆ ಅಷ್ಟೆ ಅಲ್ಲ, …
Read More »ಬೆಳಗಾವಿಯಲ್ಲಿ ಅಮಿತ್ ಶಾ ಗೋಪ್ಯ ಸಭೆ
ಬೆಳಗಾವಿ: ‘ನಾನು ಬೆಳಗಾವಿಗೆ ಮತ್ತೊಮ್ಮೆ ಬರುತ್ತೇನೆ ಅಷ್ಟರೊಳಗೆ ಎಲ್ಲ ಭಿನ್ನಮತ ಮುಗಿದಿರಬೇಕು. ಬೆಂಗಳೂರನ್ನು ಹೊರತುಡಿಸಿದರೆ ಬೆಳಗಾವಿಯಲ್ಲೇ ಹೆಚ್ಚು ಕ್ಷೇತ್ರಗಳು ಇವೆ. ಎಲ್ಲ 18 ಕ್ಷೇತ್ರಗಳನ್ನೂ ನಾವು ಗೆಲ್ಲಬೇಕು. ಇದು ಎಲ್ಲರೂ ಒಂದಾಗಿದ್ದರೆ ಮಾತ್ರ ಸಾಧ್ಯ. ಗೆಲುವಿಗೆ ಏನು ಬೇಕೋ ಆ ತಂತ್ರ ರೂಪಿಸೋಣ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಜಿಲ್ಲೆಯ ನಾಯಕರಿಗೆ ಕಟ್ಟಪ್ಪಣೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಗರದ ಯುಕೆ-27 ಹೋಟೆಲ್‌ನಲ್ಲಿ ಶನಿವಾರ ರಾತ್ರಿ ನಡೆದ …
Read More »ಭದ್ರತಾ ಲೋಪ; ಅಮಿತ್ ಶಾ ಮಧ್ಯಪ್ರವೇಶಿಸುವಂತೆ ಖರ್ಗೆ ಕೋರಿಕೆ
ನವದೆಹಲಿ: ರಾಹುಲ್ ಗಾಂಧಿ ನೇತೃತ್ವದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಗುತ್ತಿರುವ ಭಾರತ್ ಜೋಡೊ ಯಾತ್ರೆಗೆ ಸೂಕ್ತ ಭದ್ರತೆಯನ್ನು ನೀಡುವಂತೆ ಕೋರಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಯಾತ್ರೆಗೆ ಸೂಕ್ತ ಭದ್ರತೆ ಒದಗಿಸುವಲ್ಲಿ ಜಮ್ಮು ಮತ್ತು ಕಾಶ್ಮೀರದ ಆಡಳಿತ ವಿಫಲವಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯಪ್ರವೇಶಿಸುವಂತೆ ಕೋರಿದೆ. ಭದ್ರತಾ ಲೋಪದ ಹಿನ್ನೆಲೆಯಲ್ಲಿ …
Read More »ಬಿಎಸ್‌ವೈಗೆ ಕಲ್ಲು ಎಸೆದರೆ ಪಕ್ಷಕ್ಕೆ ಪೆಟ್ಟು: ಬಿ.ವೈ ವಿಜಯೇಂದ್ರ
ವಿಜಯಪುರ: ‘ಯಡಿಯೂರಪ್ಪ ಅವರಿಗೆ ಕಲ್ಲು ಎಸೆದರೆ ಅದು ಪಕ್ಷಕ್ಕೆ ಪೆಟ್ಟು ಎನ್ನುವುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಬಿಎಸ್‌ವೈ ಬಗ್ಗೆ ಶಾಸಕ ಬಸನಗೌಡ ಯತ್ನಾಳ ಇನ್ನು ಟೀಕೆ ಮಾಡುವುದಿಲ್ಲ ಎಂದು ಹೇಳಿಕೆ ನೀಡಿರುವುದು ಪಕ್ಷದ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. ವಿಜಯಪುರ ಜಿಲ್ಲೆಯ ಹೊರ್ತಿ ಗ್ರಾಮದಲ್ಲಿ ಶುಕ್ರವಾರ ಮಾಧ್ಯಮದ ಜೊತೆ ಮಾತನಾಡಿದ ಅವರು, ‘ಯತ್ನಾಳ ಬಗ್ಗೆ ನಮಗೆ ವೈಯಕ್ತಿಕ ವಿರೋಧವಿಲ್ಲ. …
Read More »ಗ್ರೇಡ್- 2 ತಹಶೀಲ್ದಾರ್ ಹುದ್ದೆ: 47 ಮಂದಿಗೆ ನೇಮಕಾತಿ ಆದೇಶ
ಬೆಂಗಳೂರು: 2017ರ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆಯಲ್ಲಿ ಗ್ರೇಡ್-2 ತಹಶೀಲ್ದಾರ್ ಹುದ್ದೆಗೆ ಆಯ್ಕೆಯಾಗಿದ್ದ 50 ಮಂದಿಯ ಪೈಕಿ 47 ಮಂದಿಗೆ ಕಂದಾಯ ಇಲಾಖೆ ಶುಕ್ರವಾರ ನೇಮಕಾತಿ ಆದೇಶ ನೀಡಿದೆ. 106 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ 2017ರಲ್ಲಿ ಪ್ರಕ್ರಿಯೆ ಆರಂಭಿಸಲಾಗಿತ್ತು. 2021ರ ಫೆಬ್ರುವರಿಯಲ್ಲಿ ಮುಖ್ಯ ಪರೀಕ್ಷೆ ನಡೆದಿತ್ತು. 2022ರ ಸೆಪ್ಟೆಂಬರ್ 9ರಂದು ಆಯ್ಕೆಪಟ್ಟಿ ಪ್ರಕಟಿಸಲಾಗಿತ್ತು. ಕಂದಾಯ ಇಲಾಖೆಯ ಮೂಲ ವೃಂದದ 44 ಹಾಗೂ ಹೈದರಾಬಾದ್ ಕರ್ನಾಟಕ ವೃಂದದ ಆರು ತಹಶೀಲ್ದಾರ್ ಗ್ರೇಡ್-2 ಹುದ್ದೆಗಳಿಗೆ …
Read More »