Breaking News

ಗ್ರೇಡ್‌- 2 ತಹಶೀಲ್ದಾರ್‌ ಹುದ್ದೆ: 47 ಮಂದಿಗೆ ನೇಮಕಾತಿ ಆದೇಶ

ಬೆಂಗಳೂರು: 2017ರ ಗೆಜೆಟೆಡ್‌ ಪ್ರೊಬೇಷನರಿ ಪರೀಕ್ಷೆಯಲ್ಲಿ ಗ್ರೇಡ್‌-2 ತಹಶೀಲ್ದಾರ್‌ ಹುದ್ದೆಗೆ ಆಯ್ಕೆಯಾಗಿದ್ದ 50 ಮಂದಿಯ ಪೈಕಿ 47 ಮಂದಿಗೆ ಕಂದಾಯ ಇಲಾಖೆ ಶುಕ್ರವಾರ ನೇಮಕಾತಿ ಆದೇಶ ನೀಡಿದೆ. 106 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ 2017ರಲ್ಲಿ ಪ್ರಕ್ರಿಯೆ ಆರಂಭಿಸಲಾಗಿತ್ತು. 2021ರ ಫೆಬ್ರುವರಿಯಲ್ಲಿ ಮುಖ್ಯ ಪರೀಕ್ಷೆ ನಡೆದಿತ್ತು. 2022ರ ಸೆಪ್ಟೆಂಬರ್‌ 9ರಂದು ಆಯ್ಕೆಪಟ್ಟಿ ಪ್ರಕಟಿಸಲಾಗಿತ್ತು. ಕಂದಾಯ ಇಲಾಖೆಯ ಮೂಲ ವೃಂದದ 44 ಹಾಗೂ ಹೈದರಾಬಾದ್‌ ಕರ್ನಾಟಕ ವೃಂದದ ಆರು ತಹಶೀಲ್ದಾರ್‌ ಗ್ರೇಡ್‌-2 ಹುದ್ದೆಗಳಿಗೆ …

Read More »

ಸರ್ವರ್‌ ಸಮಸ್ಯೆ: ನವೋದಯಕ್ಕೆ ಅರ್ಜಿ ಸಲ್ಲಿಸಲು ಪರದಾಟ

ಬೆಂಗಳೂರು: ರಾಜ್ಯದಲ್ಲಿನ ಜವಾಹರ್ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದ್ದು, ಸರ್ವರ್ ಸಮಸ್ಯೆಯಿಂದಾಗಿ ಅರ್ಜಿ ಸಲ್ಲಿಸಲು ಪೋಷಕರಿಗೆ ಸಾಧ್ಯವಾಗಿಲ್ಲ. ಆನ್‌ಲೈನಲ್ಲಿ ಅರ್ಜಿ ಸಲ್ಲಿಸಲು ಇದೇ ಜನವರಿ 31 ಕೊನೆಯ ದಿನ. ಪ್ರತಿ ದಿನವೂ ಸರ್ವರ್‌ ಸಮಸ್ಯೆ ಇದೆ. ನಿತ್ಯವೂ ಸೈಬರ್‌ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಮರಳುತ್ತಿದ್ದೇವೆ. ಸರ್ವರ್ ಸಮಸ್ಯೆ ಬಗೆಹರಿಸಬೇಕು. ಇಲ್ಲವೇ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಿಸಬೇಕು ಎಂದು ಗದಗ ಜಿಲ್ಲೆಯ …

Read More »

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ದೊರಕುವ ತನಕ ಹೋರಾಟ ಕೈಬಿಡುವುದಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಇದರ ಮಧ್ಯಸ್ಥಿಕೆ ವಹಿಸಬೇಕು’

ಬೆಂಗಳೂರು: ‘ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ದೊರಕುವ ತನಕ ಹೋರಾಟ ಕೈಬಿಡುವುದಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಇದರ ಮಧ್ಯಸ್ಥಿಕೆ ವಹಿಸಬೇಕು’ ಎಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮನವಿ ಮಾಡಿದರು.   ಸ್ವಾತಂತ್ರ್ಯ ಉದ್ಯಾನದಲ್ಲಿ 15 ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ತಾಯಿ ಮೇಲೆ ಆಣೆ ಮಾಡಿ ಈಗ ಮರೆತಿದ್ದಾರೆ. ಆದ್ದರಿಂದ …

Read More »

ಐವರು ಶತಾಯುಷಿಗಳಿಗೆ ಸನ್ಮಾನ

ಅಂಕಲಗಿ: ಹಿರಿಯರು ನಮ್ಮ ಇಂದಿನ ಬಹು ದೊಡ್ಡ ಆಸ್ತಿ. ಅವರ ನಡೆ, ನುಡಿ, ಆದರ್ಶಗಳು ನಮಗೆಲ್ಲ ಸ್ಫೂರ್ತಿ ಎಂದು ಸತೀಶ ಶುಗರ್ಸ್‌ನ ಉಪಾಧ್ಯಕ್ಷ ಎಲ್.ಆರ್.ಕಾರಗಿ ಹೇಳಿದರು. ಸಮೀಪದ ಮಿಡಕನಟ್ಟಿ ಗ್ರಾಮದಲ್ಲಿ ಶುಕ್ರವಾರ ಶತಾಯುಷಿಗಳಿಗಾಗಿ ಹಮ್ಮಿಕೊಂಡ ಶತಮಾನೋತ್ಸವ ಸಮಾರಂಭದಲ್ಲಿ ಐವರು ಶತಾಯುಷಿಗಳನ್ನು ಕಾರಗಿ ಪರಿವಾರದ ಪರವಾಗಿ ಸನ್ಮಾನಿಸಿ ಮಾತನಾಡಿದರು.   ಶತಾಯುಷಿಗಳಾದ ರಾಮಸಿದ್ದಪ್ಪ ಹಾಲಪ್ಪ ಕಾರಗಿ (105), ಹಾಲಪ್ಪ ಸಿದ್ದಪ್ಪ ಸಂಸುದ್ದಿ (104), ಶಿವಲಿಂಗಪ್ಪ ಶಿದ್ಲಿಂಗಪ್ಪ ಪಾಟೀಲ (ನಬಾಪೂರ)-102), ಭೀಮಪ್ಪ ಹನುಮಂತಪ್ಪ …

Read More »

‘ಗಡಿನಾಡ ಚೇತನ’ ಪ್ರಶಸ್ತಿಗೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಭಾಜನ

ಬೆಳಗಾವಿ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನೀಡುವ ‘ಗಡಿನಾಡ ಚೇತನ’ ಪ್ರಶಸ್ತಿಗೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಭಾಜನರಾಗಿದ್ದಾರೆ. ಕರ್ನಾಟಕ ಏಕೀಕರಣ ಹೋರಾಟದ ವೀರಾಗ್ರಣಿ ಡಾ.ಜಯದೇವಿತಾಯಿ ಲಿಗಾಡೆ ಅವರ ಹೆಸರಿನಲ್ಲಿ ನೀಡುವ ಪ್ರಶಸ್ತಿಯನ್ನು ಅಶೋಕ ಚಂದರಗಿ ಪಡೆದಿದ್ದಾರೆ. ಕಳೆದ ಬಾರಿ ಇದೇ ಪ್ರಶಸ್ತಿಯನ್ನು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ನೀಡಲಾಗಿತ್ತು. ಎಂಇಎಸ್‌ ಉಪಟಳದ ಮಧ್ಯೆಯೂ ಗಡಿ ಜಿಲ್ಲೆಯಲ್ಲಿ ಕನ್ನಡಪರ ಹೋರಾಟವನ್ನು ಜೀವಂತವಾಗಿ …

Read More »

ಅಭಿವೃದ್ಧಿಯ ಚಿಂತನೆಗಳ ಒಂದು ದಿನದ ಅಂತರರಾಷ್ಟ್ರೀಯವಿಚಾರ ಸಂಕಿರಣ ಇಂದು

ಸವದತ್ತಿ: ಬಹುಭಾಷಾ ಸಂಗಮ ಸಂಸ್ಥೆಯಿಂದ ಜ.28ರಂದು ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯಾನಂತರ ಭಾರತ ಅಭಿವೃದ್ಧಿಯ ಚಿಂತನೆಗಳ ಒಂದು ದಿನದ ಅಂತರರಾಷ್ಟ್ರೀಯ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಚಾರ್ಯ ಮಾರುತಿ ದೊಂಬರ ಹೇಳಿದರು. ಇಲ್ಲಿನ ಬೆಳ್ಳುಬ್ಬಿ ಕಾಲೇಜಿನಲ್ಲಿ ಶುಕ್ರವಾರ ನಡೆದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತರರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅಮೇರಿಕಾ ಪತ್ರಕರ್ತೆ ಡಾ.ಅನಿತಾ ಕಪೂರ ಆಶಯ ನುಡಿ ತಿಳಿಸಲಿದ್ದಾರೆ. ನವದೆಹಲಿಯ ಪಿಜಿಡಿಎವಿ ಕಾಲೇಜಿನ ಪ್ರಾಧ್ಯಾಪಕ ಡಾ.ಹರೀಶ ಅರೋರಾ ಮುಖ್ಯ ಅಥಿತಿಗಳಾಗಿ, ಡಾ.ವಿದ್ಯಾವತಿ …

Read More »

ಬೆಳಗಾವಿ ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಹಾಗಂತ ರಮೇಶ ಜಾರಕಿಹೊಳಿ ಎಲ್ಲಿಯೂ ಹೇಳಿಲ್ಲ. :C.M.ಬೊಮ್ಮಾಯಿ

ಹುಬ್ಬಳ್ಳಿ: ಬೆಳಗಾವಿ ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಹಾಗಂತ ರಮೇಶ ಜಾರಕಿಹೊಳಿ ಎಲ್ಲಿಯೂ ಹೇಳಿಲ್ಲ. ಪ್ರತಿಯೊಬ್ಬರಿಗೂ ಒಂದು ಗುರಿ ನೀಡಿದ್ದು, ಅದರ ಸಾಕಾರಕ್ಕೆ ಎಲ್ಲರೂ ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.   ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಿನ್ನಮತದ ಕುರಿತ ಎಲ್ಲಿಯೂ ಪ್ರಸ್ತಾಪ ಮಾಡಿಲ್ಲ. ಇದು ಕೇವಲ ಕಲ್ಪಿತವಷ್ಟೇ. ಪ್ರತಿಯೊಬ್ಬರಿಗೂ ಒಂದೊಂದು ಗುರಿ ನೀಡಲಾಗಿದೆ. ಪಕ್ಷದ ಸಂಘಟನೆ ಎಲ್ಲರೂ ಒತ್ತು ನೀಡಬೇಕಾಗಿದೆ. ಪಕ್ಷದ ಏಳ್ಗೆಗಾಗಿ ಎಲ್ಲರೂ ಶ್ರಮಿಸಬೇಕು. ಕೇಂದ್ರ ಹಾಗೂ …

Read More »

ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಗೆ ಲೋಕಾಯುಕ್ತ ನೋಟಿಸ್

ಮಂಗಳೂರು: ಉಳ್ಳಾಲ ಪೊಲೀಸ್ ಠಾಣೆಯ ಠಾಣಾಧಿಕಾರಿ ಸಂದೀಪ್ ಮತ್ತು ಸಬ್ ಇನ್ಸ್ ಪೆಕ್ಟರ್ ಪ್ರದೀಪ್ ವಿರುದ್ಧ ಸಾಮಾಜಿ ಕಾರ್ಯಕರ್ತರೊಬ್ಬರು ದಾಖಲಿಸಿರುವ ದೂರಿಗೆ ಸ್ಪಂದಿಸದ ಹಾಗೂ ಮಾಹಿತಿ ಹಕ್ಕಿನಡಿ ಕೇಳಿದ ದಾಖಲೆಗಳನ್ನು ಒದಗಿಸದಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರಿಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ. ಉಳ್ಳಾಲ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳು ಗಾಂಜಾ ಮಾಫಿಯಾ, ಮರಳು, ಹೋಟೆಲ್ ಮಾಲಕರಿಗೆ ಹೀಗೆ ಪ್ರತಿಯೊಂದರಲ್ಲೂ ಹಣದ ಬೇಡಿಕೆ ಇಡುತ್ತಿದ್ದಾರೆ. ಠಾಣೆಯಲ್ಲಿ …

Read More »

ಯುವಕರು ಮಹಾನ್ ಭಾರತ ನಿರ್ಮಾಣದ ಸಂಕಲ್ಪ ಮಾಡಬೇಕು: ಅಮಿತ್ ಶಾ

ಹುಬ್ಬಳ್ಳಿ: ಯುವಕರು ವೈಯಕ್ತಿಕ ಅಭಿವೃದ್ಧಿ ಜತೆಗೆ ಮಹಾನ್ ಭಾರತ ನಿರ್ಮಾಣದ ಸಂಕಲ್ಪ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದರು. ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಅಮೃತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.   ಭಾರತ ವಿಶ್ವದಲ್ಲಿ ಅಗ್ರಗಣ್ಯ ರಾಷ್ಟ್ರವಾಗಬೇಕೆಂಬುದು ಪ್ರಧಾನಿಯವರ ಆಶಯವಾಗಿದೆ. ಈ ನಿಟ್ಟಿನಲ್ಲಿ ತಾಂತ್ರಿಕ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದೆ ಎಂದರು. ಕಳೆದ ಎಂಟುವರೆ ವರ್ಷಗಳಿಂದ ದೇಶದಲ್ಲಿ ಅಭಿವೃದ್ಧಿ, ಬದಲಾವಣೆ …

Read More »

ಕಾಂಗ್ರೆಸ್ – ಜೆಡಿಎಸ್ ಎರಡೂ ಬಿಜೆಪಿಗೆ ಸಮಾನ ಶತ್ರು:

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಬಿಜೆಪಿಗೆ ಸಮಾನ ಶತ್ರುಗಳು ಎಂದು ಉನ್ನತ ಶಿಕ್ಷಣ ಸಚಿವ ಡಾ ಅಶ್ವಥ್ ನಾರಾಯಣ್ ಹೇಳಿದರು. ಈ ಮೂಲಕ ಜೆಡಿಎಸ್ ಗೆ ಮತ ಹಾಕಿದರೆ ಬಿಜೆಪಿಗೆ ಮತ ಹಾಕಿದಂತೆ ಎಂದು ಟೀಕಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಸಚಿವ ಅಶ್ವಥ್ ನಾರಾಯಣ್ ತಿರುಗೇಟು ನೀಡಿದರು‌.   ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಸಮಾನ ಶತ್ರುಗಳು. ಚುನಾವಣೆ ವಿಚಾರದಲ್ಲಿ ಬಿಜೆಪಿ …

Read More »