Breaking News

ಕೊಲಿಜಿಯಂನಲ್ಲಿ ಸರ್ಕಾರದ ಹಸ್ತಕ್ಷೇಪ ದುರುದ್ದೇಶಪೂರಿತ: ನ್ಯಾ. ಸಂತೋಷ್ ಹೆಗ್ಡೆ

ಮೈಸೂರು: ‘ನ್ಯಾಯಮೂರ್ತಿಗಳ ನೇಮಕಾತಿ ವ್ಯವಸ್ಥೆ ‘ಕೊಲಿಜಿಯಂ’ನಲ್ಲಿ ತನ್ನ ಪ್ರತಿನಿಧಿ ಇರಬೇಕು ಎನ್ನುವ ಕೇಂದ್ರ ಸರ್ಕಾರದ ನಿಲುವಿನಲ್ಲಿ ದುರುದ್ದೇಶವಿದೆ’ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದರು.   ‘ನ್ಯಾಯಾಂಗವನ್ನು ಹಿಡಿತದಲ್ಲಿಡಲು ಬಯಸುವವರು ಕೊಲಿಜಿಯಂ ಅನ್ನು ವಿರೋಧಿಸುವ ಮೂಲಕವೇ ನಿಯಂತ್ರಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ. ಇಂತಹ ಅಪಾಯಕಾರಿ ನಡೆ ಖಂಡನೀಯ’ ಎಂದು ಮಂಗಳವಾರ ಮಾಧ್ಯಮ ಸಂವಾದದಲ್ಲಿ ಪ್ರತಿಪಾದಿಸಿದರು. ‘ನ್ಯಾಯಾಂಗದಲ್ಲೂ ನ್ಯೂನತೆಗಳಿದ್ದು, ಸುಧಾರಣೆಯಾಗಬೇಕು. ಆದರೆ ಹೊರಗಿನವರಿಗೆ ಲಗಾಮು ನೀಡಬೇಕು ಎನ್ನುವ ಸರ್ಕಾರದ ಯೋಜನೆ ನ್ಯಾಯಾಂಗದ …

Read More »

ಗ್ರಾಮದಲ್ಲಿ ಸೂಕ್ತ ರಸ್ತೆ ಹಾಗೂ ಚರಂಡಿ ಇಲ್ಲದ ಕಾರಣ ಜನ ತೊಂದರೆ

ಸಾಂಬ್ರಾ: ಸಮೀಪದ ಸುಳೇಭಾವಿ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳು ಆಮೆಗತಿಯಲ್ಲಿ ಸಾಗುತ್ತಿವೆ. ಇನ್ನು ಕೆಲವು ಶಿಲ್ಕು ಬಿದ್ದಿವೆ. ಇದಕ್ಕೆ ನಿದರ್ಶನವೆಂದರೆ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ, ರಸ್ತೆ ಹಾಗೂ ಚರಂಡಿ ಕಾಮಗಾರಿಗಳು. ಗ್ರಾಮದಲ್ಲಿ ಸೂಕ್ತ ರಸ್ತೆ ಹಾಗೂ ಚರಂಡಿ ಇಲ್ಲದ ಕಾರಣ ಜನ ತೊಂದರೆ ಅನುಭವಿಸುವಂತಾಗಿದೆ. ಕೆಲವು ಕಡೆ ಗ್ರಾಮ ಪಂಚಾಯಿತಿ ಅನುದಾನದಲ್ಲಿ ಚರಂಡಿ ಕಾಮಗಾರಿ ಆರಂಭಿಸಲಾಗಿದೆ. ವರ್ಷಗಳು ಕಳೆದರೂ ಅವು ಮುಗಿದಿಲ್ಲ. ಇದರಿಂದ ಮಳೆಗಾಲದಲ್ಲಿ ಚರಂಡಿ ಎಲ್ಲೆಂದರಲ್ಲಿ ಕಟ್ಟಿಕೊಂಡು ಜನ …

Read More »

ಚಿಕ್ಕೋಡಿ: ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದ ಉಪನೋಂದಣಾಧಿಕಾರಿ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಜಮೀನು ಖರೀದಿಯ ನೋಂದಣಿ ಮಾಡಿಕೊಡಲು ₹30 ಸಾವಿರ ಲಂಚ ತೆಗೆದುಕೊಳ್ಳುತ್ತಿದ್ದ ಚಿಕ್ಕೋಡಿ ಉಪನೋಂದಣಾಧಿಕಾರಿ ಜಿ.ಪಿ. ಶಿವರಾಜು, ಮಂಗಳವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಹಾರಾಷ್ಟ್ರದ ಇಚಲಕರಂಜಿಯ ರಾಜು ಲಕ್ಷ್ಮಣ ಪಾಚ್ಚಾಪುರೆ ಎನ್ನುವವರು ಚಿಕ್ಕೋಡಿ ತಾಲ್ಲೂಕಿನ ಡೊಣೆವಾಡ ಗ್ರಾಮದಲ್ಲಿ ಜಮೀನು ಖರೀದಿಸಿದ್ದರು. ನೋಂದಣಿ ಶುಲ್ಕ, ಮುದ್ರಾಂಕ ಶುಲ್ಕವೂ ಸೇರಿದಂತೆ ಎಲ್ಲವನ್ನು ತುಂಬಿದ್ದರು. ಆದರೆ, ಜಮೀನನ್ನು ಅವರ ಹೆಸರಿಗೆ ಮಾಡಿಕೊಡಲು ಉಪನೋಂದಣಾಧಿಕಾರಿ ₹ 30 ಸಾವಿರ ಲಂಚ ಕೇಳಿದ್ದರು. ಈ …

Read More »

ಖಾನಾಪುರ: ವೃದ್ಧೆಗೆ ನ್ಯುಮೋನಿಯಾ- ಜಿಲ್ಲಾಸ್ಪತ್ರೆಗೆ ದಾಖಲು

ಖಾನಾಪುರ  ತಾಲ್ಲೂಕಿನ ನಾವಗಾ ಹೊರವಲಯದ ಅರಣ್ಯದಲ್ಲಿ ಸೋಮವಾರ ಪತ್ತೆಯಾದ 90 ವರ್ಷದ ವೃದ್ಧೆ ನ್ಯುಮೋನಿಯಾದಿಂದ ಬಳಲುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ‘ತೀವ್ರ ನಿತ್ರಾಣಗೊಂಡ ಅಜ್ಜಿ ಸರಿಯಾಗಿ ಮಾತನಾಡುವಷ್ಟು ಚೇತರಿಸಿಕೊಂಡಿಲ್ಲ. ತನ್ನ ಹೆಸರು ಅಂಬವ್ವ ಕಾಟಗಾರಿ, ಊರಿನ ಹೆಸರು ಉಗರಖೋಡ ಎಂದಷ್ಟೇ ಹೇಳಿದ್ದಾರೆ. ಅವರ ಗುರುತು ಪತ್ತೆಗೆ ಯತ್ನ ನಡೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ‘ನಾಲ್ಕೈದು ದಿನಗಳಿಂದ ಅನ್ನ-ನೀರು ಸೇವಿಸದೇ ಚಳಿಯಲ್ಲಿ ಬಿದ್ದಿದ್ದರಿಂದ ಅಜ್ಜಿ ದೇಹ …

Read More »

ಛತ್ರಪತಿ ಶಿವಾಜಿ, ಹಿಂದೂ ದೇವತೆಗಳ ಅಶ್ಲೀಲ ಚಿತ್ರಣ: ಜಾಲತಾಣದಲ್ಲಿ ಪೋಸ್ಟ್‌

ಬೆಳಗಾವಿ: ಛತ್ರಪತಿ ಶಿವಾಜಿ ಹಾಗೂ ಹಿಂದೂ ದೇವತೆಗಳ ಚಿತ್ರಗಳಿಗೆ ಅಶ್ಲೀಲ ಚಿತ್ರಗಳನ್ನು ಅಂಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಈ ಚಿತ್ರಗಳು ಮಂಗಳವಾರ ನಗರದ ಹಲವರ ಮೊಬೈಲ್‌ಗಳಿಗೂ ಬಂದಿವೆ. ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಮ್‌ ಜಿಂದಾಬಾದ್‌ 786, ಕಿಂಗ್‌ ಕಿ ಜಾನ್, ಇಟ್ಸ್‌ ಅರ್ಮಾನ್‌ ಟೈಗರ್‌, ಆರ್‌.ಎಕ್ಸ್‌.ಇಮ್ರಾನ್, ಪ್ರಸಾದ್… ಎಂಬ ಹೆಸರಿನ ಖಾತೆಗಳಲ್ಲಿ ಈ ಪೋಸ್ಟರ್‌ಗಳು ಅಪ್ಲೋಡ್‌ ಆಗಿವೆ. ಕೆಲವು ಎರಡು ದಿನಗಳ ಹಿಂದೆ ಅಪ್ಲೋಡ್‌ ಮಾಡಿದ್ದು, ಇನ್ನು ಕೆಲವನ್ನು ಮಂಗಳವಾರವೇ ಹಾಕಲಾಗಿದೆ. ಈ …

Read More »

ಹಿರೇಬಾಗೇವಾಡಿ: ಟ್ರ್ಯಾಕ್ಟರ್‌ಗೆ ಟಿಪ್ಪರ್ ಡಿಕ್ಕಿ, ಚಾಲಕ ಸ್ಥಳದಲ್ಲೇ ಸಾವು

ಹಿರೇಬಾಗೇವಾಡಿ (ಬೆಳಗಾವಿ ತಾ): ಸಮೀಪದ ಸುವರ್ಣ ವಿಧಾನಸೌಧದ ಬಳಿ ಬುಧವಾರ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ರಸ್ತೆಯಲ್ಲಿ ಟ್ರ್ಯಾಕ್ಟರಿಗೆ ಟಿಪ್ಪರ್ ಡಿಕ್ಕಿ ಹೊಡೆದು ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ತಾಲ್ಲೂಕಿನ ಹಲಗಾ ಗ್ರಾಮದ ಸಂತೋಷ ಮಹಾವೀರ ಹುಡೇದ (23) ಮೃತಪಟ್ಟವರು.   ಸುವರ್ಣ ವಿಧಾನಸೌಧದ ಎದುರಿನ ಕಮಕಾರಟ್ಟಿ ರಸ್ತೆಯಲ್ಲಿ ಖಡಿ ತರಲು ಟ್ರ್ಯಾಕ್ಟರ್ ಹೊರಟಿತ್ತು. ಖಡಿ ತುಂಬಿಕೊಂಡು ಬಂದ ಟಿಪ್ಪರ್ ವಾಹನ ಟ್ರ್ಯಾಕ್ಟರನ್ನು ಹಿಂದಿಕ್ಕುವ ಭರದಲ್ಲಿ ಎರಡೂ ವಾಹನಗಳ ಮಧ್ಯೆ ಡಿಕ್ಕಿ ಸಂಭವಿಸಿತು. …

Read More »

ಚುನಾವಣೆ ನಡೆಯುವುದು ಧಮ್‌, ತಾಕತ್‌ ಮೇಲಲ್ಲ ಅಭಿವೃದ್ಧಿ ಮೇಲೆ: ಬಿಸಿ ಪಾಟೀಲ್

ಹಾವೇರಿ: ಇಂದು ಹಿರೇಕೇರೂರು ಕ್ಷೇತ್ರದಲ್ಲಿ 461 ಕೋಟಿ ರೂಪಾಯಿ ಕಾಮಗಾರಿಗಳಿಗೆ ಚಾಲನೆ ಕೊಡ್ತಿದ್ದೇವೆ. 38 ಕೋಟಿ ರೂಪಾಯಿ ಮಡ್ಲೂರು ಏತ ನೀರಾವರಿ ಯೋಜನೆ ಲೋಕಾರ್ಪಣೆ ಮಾಡುತ್ತಾ ಇದ್ದೇವೆ. ಇದರಲ್ಲಿ ಸಿಎಂ ಬೊಮ್ಮಾಯಿ ಭಾಗಿಯಾಗುತ್ತಿದ್ದಾರೆ ಎಂದು ಸಚಿವ ಬಿಸಿ ಪಾಟೀಲ್‌ ಹೇಳಿದರು.   ಹಿರೇಕೇರೂರಿನಲ್ಲಿ ಮಾತನಾಡಿದ ಅವರು, 2018 ರಲ್ಲಿ ಚುನಾಯಿತರಾಗಿ ನಾನು ಹಿರೇಕೇರೂರು ತಾಲೂಕಿಗೆ 1000 ಕೋಟಿಗೂ ಹೆಚ್ಚು ಅನುದಾನ ತಂದಿದ್ದೇನೆ. ತಾಲೂಕಿಗೆ 6 ನೀರಾವರಿ ಯೋಜನೆ ತಂದಿದ್ದೇನೆ. ತಾಲೂಕಿನಲ್ಲಿ ಎಲ್ಲಾ ಕೆರೆಗಳು …

Read More »

ಕಮಲ” ಮತ್ತೊಮ್ಮೆ ಅರಳಲು ಕಾರ್ಯಕರ್ತರು ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

  *ವಡೇರಹಟ್ಟಿ (ಮೂಡಲಗಿ)-* ತಮ್ಮೆಲ್ಲ ವೈಯಕ್ತಿಕ ಕೆಲಸಗಳನ್ನು ಬದಿಗಿಟ್ಟು ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು. ಪಕ್ಷ ವಹಿಸಿರುವ ಸಂಘಟನಾತ್ಮಕ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಲು ಶ್ರಮಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಸೋಮವಾರ ಸಂಜೆ ಅರಭಾವಿ ಬಿಜೆಪಿ ಮಂಡಲದಿಂದ ವಿಜಯ ಸಂಕಲ್ಪ ಅಭಿಯಾನದ ನಿಮಿತ್ಯ ಹಮ್ಮಿಕೊಂಡಿದ್ದ ಮತಗಟ್ಟೆ ಶಕ್ತಿಕೇಂದ್ರ, ಪೇಜ್ …

Read More »

ಮಹದಾಯಿ ನದಿ ನೀರು ತಿರುಗಿಸುವುದರಿಂದ ಜನಜೀವನದ ಮೇಲೆ ಪರಿಣಾಮ: ಮಧು ಗಾಂವಕರ್

ಪಣಜಿ: ಕರ್ನಾಟಕದ ಕಳಸಾ ಉಪನದಿಯಾದ ಮಹದಾಯಿಯನ್ನು ತಿರುಗಿಸುತ್ತಿರುವುದರಿಂದ ಜನಜೀವನದ ಮೇಲೆ ಪರಿಣಾಮ ಬೀರಲಿದೆ ಎಂದು ಪರಿಸರವಾದಿ ಮಧು ಗಾಂವಕರ್ ಆತಂಕ ವ್ಯಕ್ತಪಡಿಸಿದ್ದಾರೆ. ಪಣಜಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು- ಮಹದಾಯಿಯ ಉಪನದಿಯಾದ ಹಲ್ತಾರಾದಲ್ಲಿ ಕರ್ನಾಟಕ ಅಣೆಕಟ್ಟು ಅಥವಾ ಬ್ಯಾರೇಜ್ ನಿರ್ಮಿಸಿದರೆ, ಈ ಭಾಗದಿಂದ ಬರುವ ನೀರಿಗೆ ತೊಂದರೆಯಾಗುತ್ತದೆ. ನೀರು ಕಡಿಮೆಯಾದರೆ ಭವಿಷ್ಯದಲ್ಲಿ ಗೋವಾದ ವಜರಾ-ಸಕಾಲ ಜಲಪಾತ ಕಣ್ಮರೆಯಾಗುತ್ತದೆ. ಏಕೆಂದರೆ ಹಲ್ತಾರ್ ನಿಂದ ಬರುವ ನೀರು ವಿರ್ಡಿ ಪ್ರದೇಶಕ್ಕೆ ಬರುತ್ತದೆ. ಇದು ಕಟ್ಟಿಕಾ …

Read More »

ಮಳೆಯಿಂದ ಮನೆ ಕಳೆದುಕೊಂಡಿದ್ದ ವೃದ್ಧೆಗೆ ದಾನಿಗಳಿಂದಲೇ ನಿರ್ಮಾಣವಾಗುತ್ತಿದೆ ಸೂರು

ಕುಷ್ಟಗಿ: ಕುಷ್ಟಗಿ ಪಟ್ಟಣದ 5ನೇ ವಾರ್ಡಿನಲ್ಲಿ ಮಳೆಯಿಂದ ವೃದ್ದೆಯ ಬಿದ್ದ ಮನೆಗೆ ಸರ್ಕಾರದಿಂದ ಜನಪ್ರತಿನಿಧಿಗಳಿಂದ ಸಿಗದ ನೆರವು ಹೆಸರು ಹೇಳಲಿಚ್ಚಸದ ದಾನಿಗಳಿಂದ ಸಿಕ್ಕಿದ್ದು ಮನೆಯ ನಿರ್ಮಾಣ ಕಾರ್ಯಕ್ಕೆ ಚಾಲನೆ ಸಿಕ್ಕಿರುವ ಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ.   ಮನೆ ಮನೆಯಲ್ಲಿ ಮುಸುರಿ ತಿಕ್ಕಿಕೊಂಡು ಜೀವನೋಪಾಯ ಮಾಡಿಕೊಂಡಿದ್ದ ನೀಲಮ್ಮ ಹಾಬಲಕಟ್ಟಿ ವಯೋವೃದ್ದೆಗೆ ಪಾರ್ಶ್ವವಾಯುವಿಗೆ ತುತ್ತಾಗಿ ಮನೆಯಲ್ಲಿದ್ದಾರೆ. ಈ ಸಂದರ್ಭದಲ್ಲಿ ಮನೆ ಮಳೆಗೆ ಮನೆ ಬಿದ್ದಿದ್ದು ಮಗ, ಸೊಸೆ ಹಾಗೂ ಈ ವೃದ್ದೆ ಸಮೇತ …

Read More »