ಕಲಬುರಗಿ: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಿಂದ ಪಾರು ಮಾಡಲು ತಾನು ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರಿಗೆ 76 ಲಕ್ಷ ರೂ ನೀಡಿರುವುದಾಗಿ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ ಲೋಕಾಯುಕ್ತರಿಗೆ ದೂರು ನೀಡಿದ್ದಾನೆ. ಇದರೊಂದಿಗೆ ಪ್ರಕರಣಕ್ಕೆ ಹೊಸ ತಿರುವು ದೊರೆತಂತಾಗಿದೆ. ದೂರಿನೊಂದಿಗೆ 8.4 ನಿಮಿಷ ಅವಧಿಯ ಆಡಿಯೋದ ಪೆನ್ ಡ್ರೈವ್ ದಾಖಲೆಯಾಗಿ ನೀಡಿದ್ದಾರೆ. ಈ ಸಂಬಂದ ‘ಆರ್.ಡಿ. ಪಾಟೀಲ ಯುವ ಬ್ರಿಗೇಡ್’ ಹೆಸರಿನ ಫೇಸ್‌ಬುಕ್ ಪೇಜ್ ಮೂಲಕ …
Read More »ಬೆಳಗಾವಿ ಜಿಲ್ಲಾಧಿಕಾರಿಗೆ ರಾಜ್ಯಮಟ್ಟದ ‘ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ’ ಪ್ರಶಸ್ತಿ
ಬೆಳಗಾವಿ: ಭಾರತ ಚುನಾವಣಾ ಆಯೋಗದ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಕೊಡಮಾಡುವ ಅತ್ಯುತ್ತಮ “ಜಿಲ್ಲಾ ಚುನಾವಣಾಧಿಕಾರಿ” ಪ್ರಶಸ್ತಿಗೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಭಾಜನರಾಗಿದ್ದಾರೆ. ಭಾರತ ಚುನಾವಣಾ ಆಯೋಗ ಮತ್ತು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ವತಿಯಿಂದ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ನಲ್ಲಿ ಜ.25 ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ “ರಾಷ್ಟ್ರೀಯ ಮತದಾರರ ದಿನಾಚರಣೆ” ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ …
Read More »ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಇಲ್ಲ’: ಯಡಿಯೂರಪ್ಪ
ಬೆಳಗಾವಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಕೋಲಾರದಿಂದ ಸ್ಪರ್ಧಿಸುವುದಿಲ್ಲ. ಈಗ ನಡೆದಿರುವುದೆಲ್ಲ ಕೇವಲ ನಾಟಕ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಕೋಲಾರದ ಬದಲು ಮೈಸೂರಿನಿಂದ ಸ್ಪರ್ಧಿಸಲು ಪ್ರಯತ್ನಿಸುತ್ತಿದ್ದಾರೆ. ಕೋಲಾರದಲ್ಲಿ ನಿಂತರೆ ಮನೆಗೆ ಹೋಗುವುದು ನಿಶ್ಚಿತ ಎಂಬುದು ಅವರಿಗೆ ಮನದಟ್ಟಾಗಿದೆ. ಒಂದು ವೇಳೆ ಅವರು ಮೈಸೂರಿನಿಂದ ಸ್ಪರ್ಧಿಸುವುದು ಖಚಿತವಾದರೆ ನಾವು ನಮ್ಮ ಕಾರ್ಯತಂತ್ರವನ್ನು ರೂಪಿಸುತ್ತೇವೆ ಎಂದರು. ಸಿದ್ದರಾಮಯ್ಯ ಎರಡಲ್ಲ, …
Read More »ಸಂಕೇಶ್ವರ: ಅಪರಿಚಿತ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
ಸಂಕೇಶ್ವರ : ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸಂಕೇಶ್ವರ ನಗರದ ಹೊರವಲಯದ ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೃತಪಟ್ಟಿರುವ ವ್ಯಕ್ತಿಯ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಈ ಅಪಘಾತದಲ್ಲಿ ಬೈಕ್ ಸವಾರನ ದೇಹವು ಮೂರು ಭಾಗವಾಗಿ ತುಂಡರಿಸಿದಂತಾಗಿದೆ. ಬೈಕ್ ಗೆ ಢಿಕ್ಕಿ ಹೊಡೆದು ಪರಾರಿಯಾಗಿರುವ ಅಪರಿಚಿತ ವಾಹನ ಪತ್ತೆ ಹಚ್ಚಲು ಸಂಕೇಶ್ವರ ಪೊಲೀಸರು …
Read More »ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮುರುಘರಾಜೇಂದ್ರಗೌಡ ಹಾಟ್ ಬಾಕ್ಸ್ ವಿತರಿಸುವ ಮೂಲಕ ಜನರನ್ನು ಓಲೈಸುತ್ತಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಎಲೆಕ್ಷನ್ ಪ್ರಚಾರ ಭರ್ಜರಿಯಿಂದ ಸಾಗುತ್ತಿದೆ. ಪಕ್ಷಗಳು, ಟಿಕೆಟ್ ಆಕಾಂಕ್ಷಿಗಳು ತಮ್ಮ ಗೆಲುವಿಗಾಗಿ ಮತ ಬೇಟೆಗೆ ಇಳಿದಿವೆ. ಇಂಥಾ ಸಮಯಲ್ಲಿ ಕುಂದಾನಗರಿ ಬೆಳಗಾವಿ ಜಿಲ್ಲೆ ಜನರಿಗೆ ಭರಪೂರದ ಉಡುಗೊರೆ ಭಾಗ್ಯ ಸಿಕ್ಕಿದೆ. ರಾಜಕಾರಣಿಗಳು ಮತದಾರರ ಓಲೈಕೆಗಾಗಿ ವಿವಿಧ ಗಿಫ್ಟ್ ನೀಡುತ್ತಿರುವ ಸಂಗತಿ ಬೆಳಕಿಗೆ ಬಂದಿದೆ. ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮುರುಘರಾಜೇಂದ್ರಗೌಡ ಹಾಟ್ ಬಾಕ್ಸ್ ವಿತರಿಸುವ ಮೂಲಕ ಜನರನ್ನು ಓಲೈಸುತ್ತಿದ್ದಾರೆ. ಅರಿಶಿಣ ಕುಂಕುಮ …
Read More »ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ಗೆ ಭೀಕರ ಅಪಘಾತ: ವೃದ್ಧೆ ಸಾವು
ಬೆಳಗಾವಿ: ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿರೋ ಘಟನೆ ಬೈಲಹೊಂಗಲ ತಾಲೂಕಿನ ಶಿಗೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಗಂಗವ್ವ ಕಂಬಾರ (56) ಮೃತ ವೃದ್ಧೆ. ಟ್ರ್ಯಾಕ್ಟರ್ವೊಂದು ರಸ್ತೆಯ ಪಕ್ಕದ ಗುಡಿಸಲು ಮೇಲೆ ಪಲ್ಟಿಯಾಗಿದೆ. ಇದರ ಪರಿಣಾಮ ಗುಡಿಸಲಿನಲ್ಲಿದ್ದ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಜೊತೆಗೆ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »ಶ್ರೀ ಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಗಮನ ಸೆಳೆದ ಶ್ವಾನ ಪ್ರದರ್ಶನ; ಫೋಟೋ ಇಲ್ಲಿದೆ
ಬೆಳಗಾವಿ: ಶ್ರೀ ಸಿದ್ದೇಶ್ವರ ದೇವರ ಜಾತ್ರಾ ಮಹೋತ್ಸವದಲ್ಲಿ ಬೃಹತ್ ಕೃಷಿ ಮೇಳವನ್ನ ಆಯೋಜಿಸಲಾಗಿತ್ತು. ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದ ಈ ಮೇಳದಲ್ಲಿ ಶ್ವಾನ ಪ್ರದರ್ಶನವೂ ನಡೀತು. ವಿವಿಧ ತಳಿಯ ಶ್ವಾನಗಳ ಪ್ರದರ್ಶನ ನೀಡಿವೆ. ಸುಮಾರು 65ಕ್ಕೊ ಹೆಚ್ಚು ವಿವಿಧ ತಳಿಯ ಶ್ವಾನಗಳು ಪ್ರದರ್ಶನದಲ್ಲಿ ಭಾಗವಹಿಸಿದ್ದವು. ಕರ್ನಾಟಕ, ಮಹಾರಾಷ್ಟ್ರದಿಂದ ನೂರಾರು ಮಂದಿ ತಮ್ಮ ಶ್ವಾನಗಳನ್ನ ಸ್ಪರ್ಧೆಗೆ ಕರೆ ತಂದಿದ್ರು. ಈ ಸ್ಫರ್ಧೆಯಲ್ಲಿ ಭಾಗವಹಿಸಿದ್ದ ಶ್ವಾನಗಳು ವಿಷೇಶವಾದ ಕೂದಲು, ಬಣ್ಣ, ದೇಹಾಕಾರದಿಂದ ಪ್ರೇಕ್ಷಕರನ್ನು …
Read More »ಸಿದ್ದರಾಮಯ್ಯ ಕ್ಷೇತ್ರದ ಸ್ಫೋಟಕ ಭವಿಷ್ಯ ನುಡಿದ BSY
ಬೆಳಗಾವಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸ್ಪರ್ಧೆ ಕ್ಷೇತ್ರದ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಕೋಲಾರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದಿಲ್ಲ. ಕೋಲಾರದಿಂದ ಸ್ಪರ್ಧಿಸಿದರೆ ಅವರಿಗೆ ಸೋಲು ನಿಶ್ಚಿತ. ಇದು ಸಿದ್ದರಾಮಯ್ಯನವರಿಗೂ ಗೊತ್ತು. ಕೋಲಾರದಿಂದ ಸ್ಪರ್ಧಿಸುವುದಾಗಿ ಡ್ರಾಮಾ ಮಾಡ್ತಿದ್ದಾರೆ. ಇದೆಲ್ಲ ರಾಜಕೀಯ ದೊಂಬರಾಟ ಎಂದು ಹೇಳಿದರು. ಅಂತಿಮವಾಗಿ ಸಿದ್ದರಾಮಯ್ಯ ಮೈಸೂರಿಗೆ …
Read More »ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ನ ಎಲ್ಲ ನಾಯಕರು ಪಿಎಚ್ ಡಿ ಮಾಡಿದ್ದಾರೆ: ಸಿಎಂ ಬೊಮ್ಮಾಯಿ
ಬೆಳಗಾವಿ: ಬೆಂಗಳೂರನ್ನು ಸಂಪೂರ್ಣವಾಗಿ ಹಾಳು ಮಾಡಿದವರೇ ಕಾಂಗ್ರೆಸ್ ನವರು. ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ನ ಎಲ್ಲ ನಾಯಕರು ಪಿ ಎಚ್ ಡಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು. ಬೆಳಗಾವಿ ವಿಮಾನ ನಿಲ್ದಾಣದ ಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಬೆಂಗಳೂರಿನಲ್ಲಿ ಅತಿಕ್ರಮಣ ಬರುವುದಕ್ಕೆ ರಾಜಕಾಲುವೆ ಮುಚ್ಚುವದಕ್ಕೆ ಮತ್ತು ರಾಜಕಾಲುವೆ ಹೆಸರಿನಲ್ಲಿ ಭ್ರಷ್ಟಾಚಾರ ನಡೆದಿರುವದಕ್ಕೆ ಕಾಂಗ್ರೆಸ್ ಕಾರಣ. ಹತ್ತು ಹಲವು ಭ್ರಷ್ಟಾಚಾರ ಅವರ ಕಾಲದಲ್ಲಿ ನಡೆದಿವೆ. ಈಗ ಅವುಗಳನ್ನು …
Read More »ಕಳಸಾ ಬಂಡೂರಿ ವಿಷಯದಲ್ಲಿ ಗೋವಾ ನಿರ್ಣಯಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ: ಸಿಎಂ ಬೊಮ್ಮಾಯಿ
ಬೆಳಗಾವಿ: ಕಳಸಾ ಬಂಡೂರಿ ವಿಷಯದಲ್ಲಿ ಗೋವಾ ಸರಕಾರ ತೆಗೆದುಕೊಂಡಿರುವ ನಿರ್ಣಯಕ್ಕೆ ಕವಡೆ ಕಾಸಿನ ಕಿಮ್ಮತ್ತೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೋವಾ ನಾಯಕರಿಗೆ ಸ್ಪಷ್ಟವಾಗಿ ತಿರುಗೇಟು ನೀಡಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಈಗಾಗಲೇ ಯೋಜನೆಯ ಸಮಗ್ರ ಪರಿಷ್ಕೃತ ವರದಿ ಗೆ ಅನುಮೋದನೆ ಸಿಕ್ಕಿದೆ. ಅರಣ್ಯ ಇಲಾಖೆಯ ಒಪ್ಪಿಗೆ ಸಿಕ್ಕ ತಕ್ಷಣ ಕಾಮಗಾರಿಯನ್ನು ಕೈಗೊಳ್ಳಲಾಗುವದು ಎಂದು ಸ್ಪಷ್ಟಪಡಿಸಿದರು. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ …
Read More »