ಬೆಂಗಳೂರು: ಕೇವಲ ಒಂದು ಓಟಿನಿಂದ ಒಬ್ಬರು ಗೆದ್ದು, ಇನ್ನೊಬ್ಬರು ಸೋತಿರುವ ರೋಚಕ ಇತಿಹಾಸ ರಾಜ್ಯ ಹಾಗೂ ದೇಶದಲ್ಲಿದೆ. ಕೇವಲ ಒಂದು ಮತದಿಂದ ಸೋತವರು, ಅತಿ ಕಡಿಮೆ ಅಂತರದಿಂದ ಗೆದ್ದವರ ಕಥೆ ಮತ್ತು ವ್ಯಥೆಗೆ ಸುದೀರ್ಘ ಇತಿಹಾಸವಿದೆ. ಪ್ರಜಾಪ್ರಭುತ್ವ ಎಂಬ ಭವ್ಯ ಬಂಗಲೆಗೆ ಮತಗಳೇ ಅಡಿಪಾಯ. ಕಟ್ಟಡ ಗಟ್ಟಿಯಾಗಿರಲು ಒಂದೊಂದು ಇಟ್ಟಿಗೆಯೂ ಮುಖ್ಯ. ಅದರಂತೆ ಪ್ರಜಾಪ್ರಭುತ್ವ ಗಟ್ಟಿಗೊಳ್ಳಬೇಕಾದರೆ ಒಂದೊಂದು ಮತವೂ ನಿರ್ಣಾಯಕವಾಗುತ್ತದೆ. ಜನತಂತ್ರ ವ್ಯವಸ್ಥೆಯಲ್ಲಿ ಒಂದೊಂದು ಮತಕ್ಕೂ ಮೌಲ್ಯವಿದೆ. ಅಭ್ಯರ್ಥಿಗಳ ಸೋಲು-ಗೆಲುವು …
Read More »ಎಲೆಕ್ಷನ್ ಫೈಟ್: ಬಿಜೆಪಿ ಅಭ್ಯರ್ಥಿ,ಕಾಂಗ್ರೆಸ್ ಶಾಸಕನ ಪತ್ನಿ ಮೆಲೆ ದಾಳಿಯ ಆರೋಪ-ಪ್ರತ್ಯಾರೋಪ
ವಿಜಯಪುರ: ವಿಧಾನಸಭೆ ಚುನಾವಣೆಯ ಮತದಾನಕ್ಕೆ ಒಂದು ದಿನ ಬಾಕಿ ಇರುವಂತೆ ಜಿಲ್ಲೆಯ ಬಬಲೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಕಾಂಗ್ರೆಸ್ ಅಭ್ಯರ್ಥಿಯ ಸೊಸೆ-ಶಾಸಕರೊಬ್ಬರ ಪತ್ನಿಯ ಮೆಲೆ ದಾಳಿ ನಡೆದಿರುವ ಆರೋಪ ಕೇಳಿ ಬಂದಿವೆ. ಎರಡೂ ಪ್ರಕರಣದಲ್ಲಿ ಪೊಲೀಸ್ ಠಾಣೆಗೆ ಯಾರೂ ದೂರು ನೀಡಿಲ್ಲ. ಆದರೆ ಎರಡೂ ಪ್ರಕರಣಗಳಲ್ಲಿ ಬಾಧಿತ ಇಬ್ಬರೂ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಸದರಿ ಘಟನೆಯ ಕುರಿತು ಮಾಹಿತಿ ನೀಡಲು ಎಂ.ಬಿ.ಪಾಟೀಲ ಮಂಗಳವಾರ ಬೆಳಿಗ್ಗೆ 9-15 ಕ್ಕೆ ನಗರದಲ್ಲಿರುವ …
Read More »ಅಭ್ಯರ್ಥಿಗಳೂ ಕಾವಲು ಕಾಯಬಹುದು..’: ಈ ಬಾರಿ ಮತಯಂತ್ರ ಸುರಕ್ಷತೆಗೆ ಹೊಸ ವ್ಯವಸ್ಥೆ
ಮತದಾನ ನಡೆದ ಬಳಿಕ ಮತ ಯಂತ್ರಗಳನ್ನು ಹಿಂದಕ್ಕೆ ತಂದು ಭದ್ರತಾ ಕೊಠಡಿಗಳಲ್ಲಿ ಇರಿಸಲಾಗುತ್ತದೆ, ಆ ಬಳಿಕ ಮತ ಎಣಿಕೆಯಂದು ಅವುಗಳನ್ನು ಹೊರತೆಗೆದು ಎಣಿಕೆ ಮಾಡಲಾಗುತ್ತದೆ. ಡಿಮಸ್ಟರಿಂಗ್ ಕೇಂದ್ರಗಳಿಂದ ಭದ್ರತಾ ಕೊಠಡಿಗೆ ಮತಯಂತ್ರ ತರುವಾಗ ಹಾಗೂ ಭದ್ರತಾ ಕೊಠಡಿಗಳಲ್ಲಿ ಇರಿಸಿರುವಾಗ ಕೇವಲ ಕೇಂದ್ರೀಯ ಅರೆ ಮಿಲಿಟರಿ ಪೊಲೀಸ್ ಪಡೆ (ಸಿಪಿಎಂಎಫ್) ಭದ್ರತೆ ಕೊಡುವುದು ಸಹಜ. ಈ ಬಾರಿ ಚುನಾವಣಾ ಆಯೋಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಭದ್ರತೆ ನೀಡುವುದು ಹಾಗೂ …
Read More »ಚಿಕ್ಕೋಡಿ ಚೆಕ್ ಪೋಸ್ಟ್ ನಲ್ಲಿ 15 ಲಕ್ಷ ರೂಗಳನ್ನು ವಶ
ಬೆಳಗಾವಿ : ಚುನಾವಣೆ ಕರ್ತವ್ಯ ನಿರತ ಸಿಬ್ಬಂದಿ ಮತ್ತು ಪೊಲೀಸರು ಚಿಕ್ಕೋಡಿ ಚೆಕ್ ಪೋಸ್ಟ್ ನಲ್ಲಿ 15 ಲಕ್ಷ ರೂಗಳನ್ನು ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರದಿಂದ ಮಾಂಜರಿಗೆ ಬರುತ್ತಿದ್ದ ವ್ಯಕ್ತಿಯ ಬಳಿಯಿಂದ ಈ ಹಣ ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಆದಾಯ ತೆರಿಗೆ ಇಲಾಖೆಗೂ ಮಾಹಿತಿ ನೀಡಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
Read More »ದಿ ಕೇರಳ ಸ್ಟೋರಿ’ ಚಿತ್ರ ತಂಡದ ಸದಸ್ಯನಿಗೆ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಭದ್ರತೆ ಒದಗಿಸಿದ್ದಾರೆ.
ಮುಂಬೈ (ಮಹಾರಾಷ್ಟ್ರ): ‘ದಿ ಕೇರಳ ಸ್ಟೋರಿ’ ಚಿತ್ರ ತಂಡದ ಸಿಬ್ಬಂದಿಯೊಬ್ಬರಿಗೆ ಅಪರಿಚಿತ ಸಂಖ್ಯೆಯಿಂದ ಬೆದರಿಕೆ ಸಂದೇಶ ಬಂದಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ‘ದಿ ಕೇರಳ ಸ್ಟೋರಿ’ ಚಿತ್ರದ ನಿರ್ದೇಶಕ ಸುದೀಪ್ತೋ ಸೇನ್ ಸಿಬ್ಬಂದಿಯೊಬ್ಬರು ಅಪರಿಚಿತ ಸಂಖ್ಯೆಯಿಂದ ಸಂದೇಶ ಸ್ವೀಕರಿಸಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಹಾಗಾಗಿ, ಸಿಬ್ಬಂದಿಗೆ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಲಿಖಿತ ದೂರು ಸ್ವೀಕರಿಸದ ಕಾರಣ ಎಫ್‌ಐಆರ್ ದಾಖಲಿಸಿಲ್ಲ. ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಸರ್ಕಾರ ಮೇ …
Read More »ಮುಸ್ಲಿಂ ಕೋಟಾ ಬಗ್ಗೆ ರಾಜಕೀಯ ಹೇಳಿಕೆ ನೀಡದಂತೆ ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ: ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ 4 ಮೀಸಲಾತಿ ಕೋಟಾ ರದ್ದುಪಡಿಸಿರುವ ವಿಷಯ ಸದ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ ಕೆಲವರು ಈ ವಿಚಾರದಲ್ಲಿ ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡುತ್ತಿರುವ ವಿಚಾರವನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಕರ್ನಾಟಕದಲ್ಲಿ ಶೇಕಡಾ ನಾಲ್ಕರಷ್ಟು ಮುಸ್ಲಿಂ ಕೋಟಾವನ್ನು ರದ್ದುಗೊಳಿಸುವುದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿತು. ಒಂದು ವಿಷಯದಲ್ಲಿ ನ್ಯಾಯಾಲಯದ ಆದೇಶವಿದ್ದಾಗ ಅದರ ಬಗ್ಗೆ ಒಂದಿಷ್ಟು ಪಾವಿತ್ರ್ಯತೆ ಕಾಯ್ದುಕೊಳ್ಳಬೇಕು ಎಂದು ಕೋರ್ಟ್ …
Read More »ಕಾರ್‌ನ ಡಿಕ್ಕಿಯಲ್ಲಿತ್ತು 3 ಕೋಟಿ ರೂಪಾಯಿ, ಹಣ ಎಣಿಕೆ ಯಂತ್ರ: ಪುಣೆ ಪೊಲೀಸರಿಂದ ಜಪ್ತಿ
ಪುಣೆ (ಮಹಾರಾಷ್ಟ್ರ): ಪುಣೆ-ಸೊಲ್ಲಾಪುರ ಹೆದ್ದಾರಿಯ ಹಡಪ್ಸರ್ ಪ್ರದೇಶದಲ್ಲಿ 3 ಕೋಟಿ ರೂಪಾಯಿ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ಮಹತ್ವ ಪಡೆದಿದೆ. ಹಡಪ್ಸರ್ ಪ್ರದೇಶದ ದ್ರಾಕ್ಷಿ ಸಂಶೋಧನಾ ಕೇಂದ್ರದ ಬಳಿ ಅಪರಾಧ ವಿಭಾಗದ ಸಹಾಯದಿಂದ ಪೊಲೀಸರು 3 ಕೋಟಿ 42 ಲಕ್ಷಕ್ಕೂ ಅಧಿಕ ಹಣವನ್ನು ಜಪ್ತಿ ಮಾಡಿದ್ದಾರೆ. ಹಣ ಎಣಿಕೆ ಯಂತ್ರಗಳನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಕಾರ್ ಚಾಲಕ ಪ್ರಶಾಂತ ಧನಪಾಲ್ ಗಾಂಧಿ …
Read More »ನಾಳೆ ಪ್ರಜಾ ತೀರ್ಪು! ಗಡಿಭಾಗಗಳಲ್ಲಿ ಪೊಲೀಸರಿಂದ ಕಟ್ಟೆಚ್ಚರ, ನಕಲಿ ಮತದಾನಕ್ಕೆ ಅವಕಾಶವಿಲ್ಲ
ಬೆಂಗಳೂರು: ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದೆ. ನಾಳೆ ರಾಜ್ಯದ ಗಡಿ ಭಾಗಗಳಲ್ಲಿ ಹೆಚ್ಚಿನ ಭದ್ರತೆ ವಹಿಸಲಾಗುವುದು ಎಂದು ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ನಕಲಿ ಮತದಾನಕ್ಕೆ ಅವಕಾಶವಿಲ್ಲ: ಇಂದು ಮತ್ತು ನಾಳೆ ರಾಜ್ಯದ ಎಲ್ಲ ಚೆಕ್ ಪೋಸ್ಟ್ಗಳಲ್ಲಿ ಭಾರಿ ಭದ್ರತೆ ಇರಲಿದ್ದು ಎಲ್ಲ ಎಸ್‌ಪಿ, ಕಮಿಷನರ್ಗಳು ರಾತ್ರಿ ಗಸ್ತು ತಿರುಗಲಿದ್ದಾರೆ. ಹೊರ ರಾಜ್ಯಗಳಿಂದ ರಾಜ್ಯ ಪ್ರವೇಶಿಸುವವರನ್ನು ಪರಿಶೀಲನೆ ನಡೆಸಿ ಪ್ರವೇಶಕ್ಕೆ ಅನುಮತಿ …
Read More »ಮೇ 12ರವರೆಗೂ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಇಂದು ಹಾಗೂ ನಾಳೆ ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, …
Read More »ಮತದಾರರನ್ನು ಸೆಳೆಯಲು, ವಿವಿಧ ರೀತಿಯ ಥೀಮ್ ಮತಗಟ್ಟೆಗಳನ್ನು ಸ್ಥಾಪಿಸಿದೆ.
ಬೆಂಗಳೂರು: ವಿಧಾನಸಭಾ ಚುನಾವಣೆಗೆ ಇನ್ನೊಂದು ದಿನ ಬಾಕಿಯಿದ್ದು, ರಾಜ್ಯದ ಮತಗಟ್ಟೆಗಳಲ್ಲಿ ಕೊನೇ ಹಂತದ ತಯಾರಿ ನಡೆದಿದೆ. ಮತದಾರರನ್ನು ಸೆಳೆಯಲು, ಪ್ರತೋಹಿಸುವ ನಿಟ್ಟಿನಲ್ಲಿ ಈ ಬಾರಿ ಚುನಾವಣಾ ಆಯೋಗ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿವಿಧ ರೀತಿಯ ಥೀಮ್ ಮತಗಟ್ಟೆಗಳನ್ನು ಸ್ಥಾಪಿಸಿದೆ. ಬೆಂಗಳೂರಿನಲ್ಲಿ ಹಲವು ರೀತಿಯ ಮತಗಟ್ಟೆಗಳನ್ನು ನಿರ್ಮಿಸಲಾಗಿದ್ದು, ಮತಗಟ್ಟೆ ಬೂತ್ ಗಳು ಮತದಾರರನ್ನು ಆಕರ್ಷಿಸುತ್ತಿವೆ. 28 ಕ್ಷೇತ್ರಗಳಲ್ಲಿ 264 ಥೀಮ್ ಮತಗಟ್ಟೆಗಳನ್ನು ಚುನಾವಣಾ ಆಯೋಗ ಸ್ಥಾಪಿಸಿದೆ. ಯುವ ಮತದಾರರನ್ನು ಪ್ರೋತ್ಸಾಹಿಸಲು ಯುವ ಮತಗಟ್ಟೆ, …
Read More »
Laxmi News 24×7