Breaking News

ವಿವೇಕಾನಂದರು ನಮಗೆಲ್ಲ ಪ್ರೇರಣೆ; ಮಲ್ಲಿಕಾರ್ಜುನ ಬಾಳಿಕಾಯಿ

ಬೈಲಹೊಂಗಲ: ಭಾರತ ದೇಶದ ಸನಾತನ ಹಿಂದೂ ಸಂಸ್ಕೃತಿಯನ್ನು ದೇಶ ವಿದೇಶಗಳಲ್ಲಿ ಎತ್ತಿ ಹಿಡಿದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು ನಮಗೆಲ್ಲರಿಗೂ ಪ್ರೇರಣೆ. ಮಹಾನ್‌ ದೇಶ ಭಕ್ತರನ್ನು, ಸಾಧು-ಸಂತರನ್ನು ಸ್ಮರಿಸುವುದು ಕೇವಲ ಬಿಜೆಪಿ ಸಂಸ್ಕೃತಿಯಲ್ಲಿ ಮಾತ್ರ ಎಂದು ರಾಜ್ಯ ಬಿ.ಜೆ.ಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಾಳಿಕಾಯಿ ಹೇಳಿದರು.   ತಾಲೂಕಿನ ಸಂಪಗಾಂವ ಗ್ರಾಮದ ಬೆ„ಲಬಸವೇಶ್ವರ ದೇವಸಾನದಲ್ಲಿ ಬಿಜೆಪಿ ಯುವ ಮೋರ್ಚಾ ಕಿತ್ತೂರ ಮಂಡಳ ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ …

Read More »

ಮೋದಿಗೆ ಸಮನಾದ ನಾಯಕ ಕಾಂಗ್ರೆಸ್​ನಲ್ಲಿ ಯಾರಿದ್ದಾರೆ ಹೇಳಿ?B.S.Y.

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಮನಾದ ನಾಯಕ ಕಾಂಗ್ರೆಸ್​ನಲ್ಲಿ ಯಾರಿದ್ದಾರೆ ಹೇಳಿ ಎಂದು ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಪ್ರಶ್ನಿಸಿದ್ದಾರೆ. ಸಿಂದಗಿಯಲ್ಲಿ ಶನಿವಾರ ನಡೆದ ವಿಜಯಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಬಿಎಸ್​ವೈ, ಆ ಇಬ್ಬರು ನಾಯಕರು ಮತ್ತೊಮ್ಮೆ ಮೋದಿ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ ಆ ಕೆಲಸ ಮಾಡ್ತಿದ್ದಾರೆ. ಮುಂದಿನ ಚುನಾವಣೆ ವೇಳೆಗೆ ಕಾಂಗ್ರೆಸ್ ಇರೋದಿಲ್ಲ. ಎಲ್ಲಿದೆಯಪ್ಪಾ ಕಾಂಗ್ರೆಸ್​? ನಿಮ್ಮ ನಾಯಕ ಯಾರು? ಎಂದು ಕಾಂಗ್ರೆಸ್ ಪಡೆಯನ್ನು ಅಣಕಿಸಿದರು. ವಿಜಯಸಂಕಲ್ಪ ಅಭಿಯಾನ …

Read More »

ಕಾಂಗ್ರೆಸ್ಸಿನದು ಫ್ಯಾಮಿಲಿ ಪಾಲಿಟಿಕ್ಸ್ ಜತೆಗೆ ಜಾತಿ ರಾಜಕಾರಣ; ನಡ್ಡಾ ಟೀಕೆ

ವಿಜಯಪುರ: ಮುಂಬರುವ ವಿಧಾನ ಸಭೆ ಚುನಾವಣೆ ಹಿನ್ನೆಲೆ ಹಮ್ಮಿಕೊಂಡಿರುವ ವಿಜಯಸಂಕಲ್ಪ ಅಭಿಯಾನಕ್ಕೆ ಸಿಂದಗಿಯಲ್ಲಿ ಶನಿವಾರ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ‌ ನಡ್ಡಾ ಜ್ಯೋತಿ ಬೆಳಗಿಸುವ ಮೂಲಕ ಅದ್ದೂರಿ ಚಾಲನೆ ನೀಡಿದರು.   ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ನಡ್ಡಾ, ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವ ಸಂಕಲ್ಪ‌ ಎಲ್ಲರದ್ದಾಗಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ, ಎಂಬ ಧ್ಯೇಯದೊಂದಿಗೆ ಬಿಜೆಪಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕದ …

Read More »

ಅನ್ನಭಾಗ್ಯಕ್ಕೆ ಮತ್ತೆ ವಕ್ಕರಿಸಿದ ಸರ್ವರ್ ಭೂತ: ಪಡಿತರ ಪಡೆಯಲು ಕಾರ್ಡ್‌ದಾರರ ಪರದಾಟ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಮತ್ತೆ ಸರ್ವರ್ ಭೂತ ವಕ್ಕರಿಸಿದೆ. ನಾಲ್ಕೈದು ದಿನಗಳಿಂದ ಸರ್ವರ್ ಸಮಸ್ಯೆಯಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಲು ರಾಜ್ಯಾದ್ಯಂತ ಕಾರ್ಡ್‌ದಾರರು ಪರದಾಡುವಂತಾಗಿದೆ. ಯೋಜನೆಗೆ ‘ಸರ್ವರ್ ಡೌನ್’ಸಮಸ್ಯೆ ನಿರಂತರವಾಗಿ ಕಾಡುತ್ತಿದ್ದರೂ ಶಾಶ್ವತ ಪರಿಹಾರ ಕಂಡುಕೊಳ್ಳಲು ಆಹಾರ ಇಲಾಖೆ ಹೆಣಗಾಡುವಂತಾಗಿದೆ. ಇದರಿಂದಾಗಿ ಪ್ರತಿ ನಿತ್ಯ ನ್ಯಾಯಬೆಲೆ ಅಂಗಡಿಗಳಿಗೆ ಕಾರ್ಡ್‌ದಾರರು ಹೋಗಿ ಬರುವಂತಾಗಿದೆ. 2022ರ ಸೆ.15ರಿಂದ 10 ದಿನವರೆಗೆ ಸರ್ವರ್ ಡೌನ್ ಗುಮ್ಮ ಕಾಡಿತ್ತು. ಈಗ ಮತ್ತೆ ಜನಪ್ರಿಯ ಯೋಜನೆಗೆ ನೂರೆಂಟು ತೊಂದರೆಯಾಗುತ್ತಿದೆ. …

Read More »

ಠೇವಣಿ ಹಣ ಮರಳಿಸದ ಅಂಚೆ ಇಲಾಖೆಗೆ ಗ್ರಾಹಕರ ಆಯೋಗದಿಂದ ದಂಡ

ಧಾರವಾಡ : ಧಾರವಾಡದ ಯು.ಬಿ.ಹಿಲ್ ನಿವಾಸಿ ಅಶೋಕ ಹುದ್ದಾರ ಎಂಬುವವರು ಇಲ್ಲಿನ ಹೆಡ್‍ಪೋಸ್ಟ್ ಕಛೇರಿಯಲ್ಲಿ 15 ವರ್ಷಗಳ ಅವಧಿಯ ಹೆಚ್.ಯು.ಎಫ್, ಪಿ.ಪಿ.ಎಫ್ ಅಕೌಂಟ್ ತೆರೆದು ಸದರಿ ಯೋಜನೆಯಡಿ ಹಣವನ್ನು ತೊಡಗಿಸಿದ್ದರು. ಸದರಿ ಯೋಜನೆಯು ದಿ:31/03/2015 ರಂದು ಮುಕ್ತಾಯವಾಗಿತ್ತು.ತದನಂತರ ದೂರುದಾರ ಸದರಿ ಯೋಜನೆಯನ್ನು ಮತ್ತೆ 5 ವರ್ಷಗಳ ಅವಧಿಗೆ ಅಂದರೆ 01/04/2015 ರಿಂದ 31/03/2020 ರವರೆಗೆ ಮುಂದುವರೆಸಿದ್ದರು. ಆ ಯೋಜನೆ ದಿ:31/03/2020 ರಂದು ಮುಕ್ತಾಯವಾಗಿದ್ದರೂ ಅಲ್ಲಿಯವರೆಗಿನ ಅವರ ವಂತಿಗೆ ಹಣ ಮತ್ತು ಅದರ …

Read More »

2023ರಲ್ಲಿ ಜೆಡಿಎಸ್‌ ಪಕ್ಷ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ..!

ಹೊಳೆನರಸೀಪುರ : ಕರ್ನಾಟಕ ರಾಜ್ಯದಾದ್ಯಂತ ಹೆಚ್.ಡಿ.ಕುಮಾರಸ್ವಾಮಿ ನೇತ್ರತ್ವದಲ್ಲಿ ನಡೆಯುತ್ತಿರುವ ಪಂಚರತ್ನ ಯಾತ್ರೆಗೆ ಸಾರ್ವಜನಿಕರಿಂದ ಅಭೂತಪೂರ್ವ ಬೆಂಬಲ ವ್ಯಕವಾಗಿದ್ದು 2023 ರ ವಿಧಾನಸಭಾ ಚುನಾವಣೆಯಲ್ಲಿ ಜೆ.ಡಿ.ಎಸ್. ಪಕ್ಷವು ಸಂಪೂರ್ಣ ಬಹುಮತದೊಂದಿಗೆ ಜನಪರ ಸರ್ಕಾರವನ್ನು ರಚಿಸಲಿದೆ ಎಂದು ಶಾಸಕ ಹೆಚ್.ಡಿ.ರೇವಣ್ಣನವರು ತಿಳಿಸಿದರು.   ಅವರು ಇಂದು ಪಟ್ಟಣದ ಚೆನ್ನಾಂಬಿಕ ಕನ್ವೆನ್ಷನ್ ಹಾಲ್ ನಲ್ಲಿ ತಾಲೂಕು ಜೆ.ಡಿ.ಎಸ್. ಪಕ್ಷದ ಕಾರ್ಯಕರ್ತರ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದರು. ತಮ್ಮ ಜೆ.ಡಿ.ಎಸ್. ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸ್ತ್ರೀ …

Read More »

ಡಬಲ್ ಇಂಜಿನ್ ಸರ್ಕಾರದಲ್ಲಿ ರಾಜ್ಯಕ್ಕೆ ಬರಬೇಕಾದ ತೆರಿಗೆ ಹಣವೇ ಬರುತ್ತಿಲ್ಲ

ಬೆಂಗಳೂರು: ಇನ್ನೂ ಕೆಲವೇ ದಿನಗಳಲ್ಲಿ ರಾಜ್ಯದ ಚುನಾವಣೆ ಬರಲಿದೆ. ಪ್ರತಿಪಕ್ಷಗಳ ಮೇಲೆ ಜವಾಬ್ದಾರಿ ಇದೆ. ರಾಜ್ಯದ ಜನರಿಗೆ ಬಿಜೆಪಿ ಸರ್ಕಾರ ಮಾಡಿರುವ ಅನ್ಯಾಯಗಳನ್ನ ತೆರದಿಡುವ ಪ್ರಯತ್ನ ಮಾಡುತ್ತಿದ್ದೇವೆ. ಡಬಲ್ ಇಂಜಿನ್ ಸರ್ಕಾರ ಬಂದ್ರೆ ಅಭಿವೃದ್ಧಿ ರಾಜ್ಯವಾಗುತ್ತೆ , ಅನುದಾನ ಹೆಚ್ಚು ಸಿಗುತ್ತೆ ಎಂದು ಬಿಜೆಪಿ ಭರವಸೆ ನೀಡಿ ಓಟು ಹಾಕಿಸಿಕೊಂಡಿದೆ. ಆದ್ರೆ ಬಿಜೆಪಿ ಡಬಲ್ ಇಂಜಿನ್ ಸರ್ಕಾರದಲ್ಲಿ ರಾಜ್ಯಕ್ಕೆ ಬರಬೇಕಾದ ತೆರಿಗೆ ಹಣವೇ ಬರುತ್ತಿಲ್ಲ ಎಂದು ವಿಧಾನಪರಿಷತ್ ವಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ …

Read More »

ಈ ಬಾರಿ ಗಣರಾಜ್ಯೋತ್ಸವ ಪೆರೇಡ್ ನ ಟಿಕೆಟ್ ಗಳು ಆನ್ಲೈನ್ ನಲ್ಲಿ ಲಭ್ಯ

ನವದೆಹಲಿ: ಈ ವರ್ಷ ಗಣರಾಜ್ಯೋತ್ಸವ ಆಚರಣೆಗಳು ಪರಿಷ್ಕೃತ ಸೆಂಟ್ರಲ್ ವಿಸ್ಟಾ ಅವೆನ್ಯೂದಲ್ಲಿ ನಡೆಯಲಿದ್ದು, ಸರ್ಕಾರವು ಜನಸಾಮಾನ್ಯರಿಗಾಗಿ ಆನ್‌ಲೈನ್‌ನಲ್ಲಿ 32,000 ಟಿಕೆಟ್‌ಗಳನ್ನು ಮಾರಾಟಕ್ಕೆ ಇರಿಸಿದೆ ಎಂದು ರಕ್ಷಣಾ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.     ಮೊದಲ ಬಾರಿಗೆ ಸಮಾರಂಭದ ಎಲ್ಲಾ ಅಧಿಕೃತ ಆಹ್ವಾನಗಳನ್ನು ಆನ್‌ಲೈನ್‌ನಲ್ಲಿ ಕಳುಹಿಸಲಾಗುವುದು ಎಂದು ಅವರು ಹೇಳಿದರು.ಕಳೆದ ವರ್ಷ ರಾಜಪಥವನ್ನು ‘ಕರ್ತವ್ಯ ಪಥ’ಎಂದು ಮರುನಾಮಕರಣ ಮಾಡಿದ ನಂತರ ಔಪಚಾರಿಕ ಬೌಲೆವಾರ್ಡ್‌ನಲ್ಲಿ ಆಯೋಜಿಸಲಾದ ಮೊದಲ ಗಣರಾಜ್ಯೋತ್ಸವ ಸಮಾರಂಭ ಇದಾಗಿದೆ.ಗಣರಾಜ್ಯೋತ್ಸವದ ಅಂಗವಾಗಿ ಜನವರಿ …

Read More »

ಕೇಂದ್ರದಿಂದ ಸವಾರರಿಗೆ ಬಿಗ್ ಶಾಕ್: 15 ವರ್ಷಕ್ಕಿಂತ ಹಳೆಯದಾದ ಸರ್ಕಾರಿ ವಾಹನಗಳ ನೋಂದಣಿ ರದ್ದು!

15 Year Old Vehicle Registration: ಮಾಲಿನ್ಯವನ್ನು ನಿಯಂತ್ರಿಸಲು ಮತ್ತು ವೃತ್ತಾಕಾರದ ಆರ್ಥಿಕತೆಯನ್ನು ಉತ್ತೇಜಿಸಲು, ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಮೋಟಾರು ವಾಹನ ಕಾಯ್ದೆಯಲ್ಲಿ ತಿದ್ದುಪಡಿಯ ಅಧಿಸೂಚನೆಯನ್ನು ಹೊರಡಿಸಿತು.ಅದರ ಪ್ರಕಾರ 15 ವರ್ಷಕ್ಕಿಂತ ಹಳೆಯದಾದ ಎಲ್ಲಾ ಸರ್ಕಾರಿ ವಾಹನಗಳ ನೋಂದಣಿಯನ್ನು ಕಡ್ಡಾಯವಾಗಿ ರದ್ದುಗೊಳಿಸಲಾಗುತ್ತದೆ. ನೋಂದಣಿಯನ್ನು ನವೀಕರಿಸಿದ (15 ವರ್ಷಗಳ ನಂತರ) ವಾಹನಗಳನ್ನು ಸ್ವಯಂಚಾಲಿತವಾಗಿ ರದ್ದುಗೊಳಿಸಲಾಗಿದೆ ಎಂದು ಪರಿಗಣಿಸಲಾಗುತ್ತದೆ. ಅಂತಹ ಎಲ್ಲಾ ಹಳೆಯ ವಾಹನಗಳನ್ನು ನೋಂದಾಯಿತ ಸ್ಕ್ರ್ಯಾಪ್ ಕೇಂದ್ರದಲ್ಲಿ ವಿಲೇವಾರಿ ಮಾಡಬೇಕಾಗುತ್ತದೆ. ಕೇಂದ್ರ …

Read More »

ಬೆಂಗಳೂರು: ನಾಲ್ಕು ದಿಕ್ಕುಗಳಿಂದ ಬಿಜೆಪಿ ರಥಯಾತ್ರೆಗೆ ಸಿದ್ಧತೆ

ಬೆಂಗಳೂರು: ಫೆಬ್ರವರಿ ಅಂತ್ಯದ ವೇಳೆಗೆ ನಾಲ್ಕು ದಿಕ್ಕುಗಳಿಂದ ರಥಯಾತ್ರೆಯನ್ನು ಪ್ರಾರಂಭಿಸುವ ವಿಧಾನಗಳು ಮತ್ತು ಇತರ ವಿಷಯಗಳ ಬಗ್ಗೆ ಶುಕ್ರವಾರ ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ತಿಂಗಳು ಮತ್ತು ಮುಂದಿನ ತಿಂಗಳು ಕೈಗೊಳ್ಳಬೇಕಾದ ಕಾರ್ಯಕ್ರಮಗಳು, ಅಧಿವೇಶನದ ಜೊತೆಗೆ ಪಕ್ಷದ ಸಂಘಟನೆ, ಫೆಬ್ರವರಿಯೊಳಗೆ ಜನ ಸಂಕಲ್ಪ ಯಾತ್ರೆ ಪೂರ್ಣಗೊಳಿಸುವುದು, ಜಿಲ್ಲಾ ಮತ್ತು ರಾಜ್ಯ ಮಟ್ಟದ ಚುನಾವಣಾ ಪ್ರಣಾಳಿಕೆ ತಯಾರಿಕೆ ಮತ್ತು ರಾಜ್ಯಕ್ಕೆ …

Read More »