ಹುಬ್ಬಳ್ಳಿ: ‘ಆಂಧ್ರಪ್ರದೇಶ, ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಫಾರ್ಮಾ ಪಾರ್ಕ್ ಸ್ಥಾಪಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ’ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಫಾರ್ಮಾ ಪಾರ್ಕ್ ಸ್ಥಾಪಿಸಲು ಅನುಮತಿ ಕೋರಿ ದೇಶದ ವಿವಿಧ ರಾಜ್ಯಗಳಿಂದ ಪ್ರಸ್ತಾವಗಳು ಬಂದಿದ್ದವು. ರಾಜ್ಯದ ಯಾದಗಿರಿಯಲ್ಲಿ ಸ್ಥಾಪಿಸಲು ರಾಜ್ಯದಿಂದಲೂ ಪ್ರಸ್ತಾವ ಬಂದಿತ್ತು. ರಾಜ್ಯ ಸರ್ಕಾರಗಳು …
Read More »ಫೆಬ್ರುವರಿ 10ರಿಂದ ವಿಧಾನಮಂಡಲ ಅಧಿವೇಶನ: 17ಕ್ಕೆ ರಾಜ್ಯ ಬಜೆಟ್
ಬೆಂಗಳೂರು: ಫೆಬ್ರುವರಿ 10ರಂದು ವಿಧಾನಮಂಡಲದ ಪ್ರಸಕ್ತ ವರ್ಷದ ಬಜೆಟ್ ಅಧಿವೇಶನ ನಡೆಸಲು ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ‘ಫೆ. 10ರಂದು ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆ. 16ರವರೆಗೂ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಫೆ.17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಮಂಡಿಸುವ ಸಾಧ್ಯತೆ ಇದೆ’ ಎಂದರು. ಅಧಿವೇಶನದ …
Read More »ಹೆಚ್ ಡಿಕೆ ಸಿಎಂ ಆಗದಿದ್ದರೆ ನಾನು. : ಸಿಎಂ ಇಬ್ರಾಹಿಂ ಶಪಥ !
ವಿಜಯಪುರ : ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಆಗದಿದ್ದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಕಾಂಗ್ರೆಸ್-ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ಹೇಳಿ ಎಂದು ಆಗ್ರಹಿಸಿದರು. ಶುಕ್ರವಾರ ನಗರದಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಫೆಬ್ರುವರಿ ಮುಗಿಯಲಿ ಬಿಜೆಪಿ, ಕಾಂಗ್ರೆಸ್ ಪಕ್ಷದಿಂದ ಜೆಡಿಎಸ್ ಪಕ್ಷಕ್ಕೆ ಯಾರು ವಲಸೆ ಬರಲಿದ್ದಾರೆ ಎಂದು ಹೇಳುತ್ತೇನೆ ಎಂದರು. ವಿಜಯಪುರ ಜಿಲ್ಲೆಯಲ್ಲಿ 5 ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲಲಿದ್ದು, ನಾಗಠಾಣಾ ಕ್ಷೇತ್ರದ …
Read More »ದೇವೇಗೌಡರ ಧೂಳಿಗೂ ಸಮಾನವಲ್ಲ ನಳಿನ್ ಕುಮಾರ್ ಕಟೀಲ್:H.D.K.
ವಿಜಯಪುರ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ”ದೇವೇಗೌಡರ ಧೂಳಿಗೂ ಸಮಾನವಲ್ಲದ ನೀವು ಮಾತನಾಡಬೇಕಿದ್ದರೆ ಎಚ್ಚರಿಕೆ ಇರಲಿ” ಎಂದು ಕಿಡಿ ಕಾರಿದ್ದಾರೆ. ದೇವೇಗೌಡರ ಕುಟುಂಬ ಅಧಿಕಾರಕ್ಕಾಗಿ ಚಪ್ಪಲಿಯಲ್ಲಿ ಹೊಡೆದಾಡುತ್ತಿದೆ ಎಂದು ಹೇಳಿಕೆ ನೀಡಿದ್ದ ನಳಿನ್ ಕುಮಾರ್ ವಿರುದ್ಧ ವಿಜಯಪುರ ನಗರದಲ್ಲಿ ಪಂಚರತ್ನ ರಥಯಾತ್ರೆಯಲ್ಲಿ ವಾಗ್ದಾಳಿ ನಡೆಸಿ, ದೇವೇಗೌಡರ ಕುಟುಂಬದ ಬಗ್ಗೆ ಲಘುವಾಗಿ ಮಾತನಾಡಲು ನಿಮಗೆ ಯೋಗ್ಯತೆ ಇಲ್ಲ ಎಂದು ಹರಿಹಾಯ್ದರು. ದೇವೇಗೌಡರ …
Read More »ಈ ಬಾರಿ ಗ್ರಾಮೀಣ ಮತಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರುವುದು ನಿಶ್ಚಿತ.
ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಹೇಳಿಕೆ ಬರುವ ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಸೋಲುವ ಭೀತಿ ಇದೆ. ಸೋಲುವ ಭೀತಿಯಿಂದ ಕಾಂಗ್ರೆಸ್ ಶಾಸಕಿ ಮತದಾರರಿಗೆ ಆಮಿಷ ತೋರಿಸುತ್ತಿದ್ದಾರೆ. ಚುನಾವಣೆ ಬಂದಾಗ ಕ್ಷೇತ್ರದ ಜನರಿಗೆ ಆಕಾಂಕ್ಷಿಗಳು ಆಮಿಷ ತೋರಿಸುವುದು ಸ್ವಾಭಾವಿಕ. ಇದು ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಲ್ಲಿ ಜೋರಾಗಿದೆ. ಈ ಬೆಳವಣಿಗೆ ಸರಿಯಲ್ಲ, ಯಾವ ಪಕ್ಷದವರು ಇಂಥ ಕೆಲಸ ಮಾಡಬಾರದು. ಅಭಿವೃದ್ಧಿ ಮಾಡಿದ್ದರೆ, ಉಡುಗೊರೆ ಕೊಡುವ ಅವಶ್ಯಕತೆ ಏನಿದೆ ಎಂದು …
Read More »ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂಸೆ, ಅಸಹಿಷ್ಣುತೆ, ಸೇಡಿನ ರಾಜಕಾರಣ ಆರಂಭ: ಸಿದ್ದರಾಮಯ್ಯ
ಹಾವೇರಿ,ಜನವರಿ20: ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂಸೆ, ಅಸಹಿಷ್ಣುತೆ, ಸೇಡಿನ ರಾಜಕಾರಣ ಆರಂಭವಾಗುತ್ತದೆ ಎಂಬುದು ನಮ್ಮ ಆತಂಕ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಗುರುವಾರ ಹಾವೇರಿಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ಜಾತಿ ಧರ್ಮಗಳ ಆಧಾರದ ಮೇಲೆ ಜನರನ್ನು ಕೆರಳಿಸಿ, ಸಮಾಜ ಒಡೆಯುವ ಕೆಲಸವನ್ನ ಬಿಜೆಪಿ ಮಾಡುತ್ತದೆ ಎಂದು ಕಿಡಿಕಾರಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ 104 ಸ್ಥಾನಗಳಲ್ಲಿ ಜಯಗಳಿಸಿದ್ದರಿಂದ …
Read More »ವಿಜಯಪುರದಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲಿರುವ ಬಿಜೆಪಿ ರಾಜ್ಯಾಧ್ಯಕ್ಷ ನಡ್ಡಾ
ವಿಜಯಪುರ: ಮುಂಬರುವ ವಿಧಾನಸಭಾ ಚುನಾವಣೆಯ ಸಿದ್ಧತೆಯ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಜನವರಿ 21 ರಂದು ವಿಜಯಪುರಕ್ಕೆ ಆಗಮಿಸಲಿದ್ದು, ಬೂತ್ ಮಟ್ಟದ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕುಚಬಾಳ, ರಾಜ್ಯದಲ್ಲಿಯೇ ಮೊದಲು ವಿಜಯಪುರ ಜಿಲ್ಲೆಯಿಂದ ಅಭಿಯಾನ ಆರಂಭಿಸಲಾಗುವುದು. ಮುಂಬರುವ ಚುನಾವಣೆಗೆ ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸುವುದು ಇದರ ಉದ್ದೇಶ ಎಂದು ಹೇಳಿದ ಅವರು, ಬೃಹತ್ ಸಾರ್ವಜನಿಕ ಸಮಾವೇಶ …
Read More »ಆಸ್ತಿ ವಿವಾದ: ಅಣ್ಣನಿಂದ ತಮ್ಮನ ಕೊಲೆ
ಖಾನಾಪುರ: ಹಲವು ವರ್ಷಗಳಿಂದ ಸಹೋದರರ ನಡುವೆ ಇದ್ದ ಆಸ್ತಿ ವಿವಾದ ತಾಲ್ಲೂಕಿನ ಬೇಕವಾಡ ಗ್ರಾಮದ ಬಳಿ ಗುರುವಾರ ಕೊಲೆಯಲ್ಲಿ ಅಂತ್ಯಗೊಂಡಿದೆ. ಯಲ್ಲಪ್ಪ ಶಾಂತಾರಾಮ ಗುರವ (36) ಮೃತರು. ಇವರ ಅಣ್ಣ ರಾಜು ಶಾಂತಾರಾಮ ಗುರವ (40) ಅವರು ಕೊಲೆ ಆರೋಪಿ. ಇವರಿಬ್ಬರ ನಡುವೆ ಪಿತ್ರಾರ್ಜಿತ ಆಸ್ತಿಗಾಗಿ ಮನಸ್ತಾಪವಿತ್ತು. ಗುರುವಾರ ಇದೇ ವಿಷಯಕ್ಕಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಕೈ ಮಿಲಾಯಿಸಿದ್ದರು. ಇಬ್ಬರೂ ಗಾಯಗೊಂಡಿದ್ದರು. ರಾಜು ಅವರು ಬೀಸಿದ …
Read More »ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ ₹1.10 ಕೋಟಿ ಮೌಲ್ಯದ ಕಾಣಿಕೆ ಸಂಗ್ರಹ
(ಬೆಳಗಾವಿ ಜಿಲ್ಲೆ): ಇಲ್ಲಿನ ಯಲ್ಲಮ್ಮನಗುಡ್ಡದಲ್ಲಿ ಬುಧವಾರ ಮತ್ತು ಗುರುವಾರ ಯಲ್ಲಮ್ಮ ದೇವಸ್ಥಾನದ ಹುಂಡಿ ಎಣಿಕೆ ಮಾಡಲಾಗಿದ್ದು, ಒಟ್ಟು ₹1.10 ಕೋಟಿಗೂ ಅಧಿಕ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. 2022ರ ಡಿಸೆಂಬರ್‌ನಲ್ಲಿ ಭಕ್ತರು ಹುಂಡಿಗೆ ಹಾಕಿದ್ದ ₹95 ಲಕ್ಷ ನಗದು, ₹6.66 ಲಕ್ಷ ಮೌಲ್ಯದ 119 ಗ್ರಾಂ ಚಿನ್ನಾಭರಣ ಹಾಗೂ ₹8.73 ಲಕ್ಷ ಮೌಲ್ಯದ 2.962 ಕೆ.ಜಿ ಬೆಳ್ಳಿ ಆಭರಣ ಸಂಗ್ರಹವಾಗಿವೆ. ಇಲ್ಲಿಯವರೆಗೆ ಅರ್ಧದಷ್ಟು ಹುಂಡಿಯನ್ನು ಮಾತ್ರ ಎಣಿಸಲಾಗಿದೆ. ಬಾಕಿ ಉಳಿದ ಎಣಿಕೆ ಮುಂದಿನ …
Read More »K.P.T.C.L. ಪರೀಕ್ಷಾ ಅಕ್ರಮ: ಮತ್ತೊಬ್ಬ ಆರೋಪಿ ಬಂಧನ
ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ, ಪೊಲೀಸರು ಗುರುವಾರ ಇನ್ನೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ 51ಕ್ಕೆ ಏರಿದೆ. ಗೋಕಾಕ ತಾಲ್ಲೂಕಿನ ಉಪ್ಪಾರಟ್ಟಿಯ ಹನುಮಂತ ಮಲ್ಲಪ್ಪ ಗುದಿಗೊಪ್ಪ (22) ಬಂಧಿತ. ಈಗಾಗಲೇ ಬಂಧಿತರಾದ ಸಂಜೀವ ಭಂಡಾರಿ, ಬಾಳೇಶ ಕಟ್ಟಿಕಾರ, ಸಿದ್ದಪ್ಪ ಮದಿಹಳ್ಳಿ, ಭೀಮಪ್ಪ ಗುದಿಗೋಪ್ಪ ಅವರೊಂದಿಗೆ ಹನುಮಂತ ಕೂಡ ಸೇರಿದ್ದ. ಇವರೆಲ್ಲರೂ ಕೂಡಿಕೊಂಡು ಏಳು ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದೊಳಗೆ ಎಲೆಕ್ಟ್ರಾನಿಕ್ ಡಿವೈಸ್ ಮತ್ತು ಮೈಕ್ರೋಚಿಪ್ ತಲುಪಿಸಿದ್ದರು …
Read More »