ಧಾರವಾಡ : ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ವಿನಯ ಕುಲಕರ್ಣಿ ಆಪ್ತ ಪ್ರಶಾಂತ್ ಕೇಕರೆ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಿಲ್ಲೆಯ ಸಪ್ತಾಪುರ ಬಡಾವಣೆಯ ಕೃಷಿ ಪಾರ್ಕ್‌ನಲ್ಲಿರುವ ಕೇಕರೆ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ವಿವಿಧ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ಬಾರಿಯ ಚುನಾವಣೆ ಸಂದರ್ಭದಲ್ಲಿಯೂ ಪ್ರಶಾಂತ್ ಕೇಕರೆ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಚುನಾವಣೆ ಹೊತ್ತಿನಲ್ಲಿ …
Read More »ಬಜರಂಗದಳ ನಿಷೇಧ ಯಾರಿಂದಲೂ ಸಾಧ್ಯವಿಲ್ಲ:B,S.Y.
ಬೆಂಗಳೂರು: ”ಬಜರಂಗದಳ ನಿಷೇಧ ಮಾಡಲು ಯಾವನಿಂದಲೂ ಸಾಧ್ಯವಿಲ್ಲ, ಕಾಂಗ್ರೆಸ್‌ನವರು ಹುಚ್ಚುಹುಚ್ಚಾಗಿ ಮಾತನಾಡುತ್ತಿದಾರೆ, ಜನ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ” ಎಂದು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜರಂಗದಳ ನಿಷೇಧ ಮಾಡುವುದಾಗಿ ಕಾಂಗ್ರೆಸ್ ಮೂರ್ಖ ನಿರ್ಧಾರ ತಗೊಂಡಿದೆ. ಕಾಂಗ್ರೆಸ್ನವರ ಈ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಬಜರಂಗದಳವನ್ನು ಯಾವನಿಂದಲೂ ಬ್ಯಾನ್ ಮಾಡೋಕೆ ಸಾಧ್ಯ ಇಲ್ಲ ಹುಚ್ಚುಚ್ಚರ ತರ ಆಡುತ್ತಿರುವ …
Read More »ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್ ನಿಂತಿದ್ದ ಜಾಗದ ಬಳಿಯೇ ಬೆಂಕಿ
ಕಾರವಾರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೆರಳುತ್ತಿದ್ದ ಹೆಲಿಕಾಪ್ಟರ್ ಗೆ ರಣಹದ್ದು ಬಡಿದು ಹೆಲಿಕಾಪ್ಟರ್ ಗಾಜು ಪುಡಿ ಪುಡಿಯಾಗಿದ್ದ ಘಟನೆ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದೆ. ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್ ಲ್ಯಾಂಡ್ ಆಗಿದ್ದ ಹೆಲಿಪಾಡ್ ನ ಪಕ್ಕದಲ್ಲಿಯೇ ಬೆಂಕಿ ಅವಘಡ ಸಂಭವಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಬಳಿಯ ರಾಮತೀರ್ಥ ಬಳಿ ನಡೆದಿದೆ. ಡಿ.ಕೆ.ಶಿವಕುಮಾರ್ ಅವರು ಹೊನ್ನಾವರ ಬಳಿಯ ರಾಮತೀರ್ಥ ಹೆಲಿಪ್ಯಾಡ್ ಗೆ ಆಗಮಿಸಿದ್ದು, ಹೆಲಿಕಾಪ್ಟರ್ ನಿಲ್ಲಿಸಿದ್ದ ಜಾಗದ ಪಕ್ಕದಲ್ಲಿಯೇ ಬೆಂಕಿ …
Read More »ತಂದೆಯ ಜಮೀನು ಅಡವಿಟ್ಟು ವಿವಾಹ ಮಾಡಿದ್ರೂ ಮಗಳಿಗೆ ಆಸ್ತಿಯಲ್ಲಿ ಸಮಾನ ಹಕ್ಕಿದೆ: ಹೈಕೋರ್ಟ್
ಬೆಂಗಳೂರು : ತಂಗಿಯ ವಿವಾಹಕ್ಕಾಗಿ ಜಮೀನು ಅಡಮಾನ ಇಟ್ಟು ಪಡೆದ ಸಾಲ ಈವರೆಗೂ ತೀರಿಲ್ಲ. ಹೀಗಾಗಿ ತಂದೆಯ ಆಸ್ತಿಯಲ್ಲಿ ಸಹೋದರಿಗೆ ಆಸ್ತಿಯಲ್ಲಿ ಭಾಗ ಕೇಳುವ ಹಕ್ಕಿಲ್ಲ ಎಂಬುದಾಗಿ ಸಹೋದರನ ವಾದ ತಿರಸ್ಕರಿಸಿರುವ ಹೈಕೋರ್ಟ್, ತಂದೆಯ ಆಸ್ತಿಯಲ್ಲಿ ಮಗಳಿಗೂ ಸಮಾನ ಹಕ್ಕಿದೆ ಎಂದು ತಿಳಿಸಿದೆ. ತುಮಕೂರು ಜಿಲ್ಲೆಯ ಯಲ್ಲಾಪುರ ಗ್ರಾಮದ ನಿವಾಸಿಗಳಾದ ವೆಂಕಟೇಶ ಮತ್ತು ಅವರ ತಾಯಿ ವೆಂಕಟಲಕ್ಷ್ಮಮ್ಮ ಎಂಬುವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ …
Read More »10 ಸಾವಿರ ರೂಪಾಯಿಗಾಗಿ ಜಗಳ.. ಹೈಕೋರ್ಟ್ ಬಳಿ ಬರ್ಬರ ಕೊಲೆ
ಹೈದರಾಬಾದ್: ತೆಲಂಗಾಣ ಹೈಕೋರ್ಟ್ ಬಳಿ ಭೀಕರ ಹತ್ಯೆಯೊಂದು ನಡೆದಿದೆ. ಹೈಕೋರ್ಟ್‌ನ ಗೇಟ್ ಸಂಖ್ಯೆ 6 ರಲ್ಲಿ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಇರಿದು ಕೊಂದಿದ್ದಾರೆ. ಜನರು ನೋಡುತ್ತಿರುವಾಗಲೇ ವ್ಯಕ್ತಿಗೆ ಚಾಕುವಿನಿಂದ ಇರಿಯಲಾಗಿದೆ. 10 ಸಾವಿರ ರೂಪಾಯಿಗೆ ಇಬ್ಬರ ನಡುವೆ ಮಾರಾಮಾರಿ ನಡೆದಿದೆಯಂತೆ. ಈ ಘಟನೆಯನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿ ಪೊಲೀಸರು ಘಟನಾ ಸ್ಥಳವನ್ನು ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ …
Read More »ಕಾಂಗ್ರೆಸ್ ಪ್ರಣಾಳಿಕೆ ಸುಟ್ಟು ಪ್ರತಿಭಟನೆ ನಡೆಸಿದ ಬಜರಂಗದಳ ಪದಾಧಿಕಾರಿಗಳು
ದೊಡ್ಡಬಳ್ಳಾಪುರ: ನಗರದ ತಾಲ್ಲೂಕು ಕಚೇರಿ ವೃತ್ತದಲ್ಲಿ ಬುಧವಾರ ಬಜರಂಗದಳ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸುಡುವ ಮೂಲಕ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಜರಂಗದಳದ ಕೋಲಾರ ವಿಭಾಗದ ಸಂಯೋಜಕ ನರೇಶ್ ರಡ್ಡಿ, ಹಿಂದೂಗಳ ಹಾಗೂ ಹಿಂದೂ ಧರ್ಮದ ರಕ್ಷಣೆಗಾಗಿ ಕೆಲಸ ಮಾಡುತ್ತಿರುವ ಬಜರಂಗದಳವನ್ನು ನಿಷೇಧ ಮಾಡುವ ಕೆಲಸಕ್ಕೆ ಮುಂದಾದರೆ ಕಾಂಗ್ರೆಸ್ ನಿಷೇದಿಸುವ ಕೆಲಸಕ್ಕೆ ನಾವು ಮುಂದಾಗುತ್ತೇವೆ. ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿರುವ …
Read More »ಮಹಿಳಾ ಮತದಾರರ ಮತದಾನ ಪ್ರಮಾಣ ಹೆಚ್ಚಳಕ್ಕೆ ‘ಸಖಿ ಪಿಂಕ್ ಬೂತ್’
ವಿಜಯಪುರ(ದೇವನಹಳ್ಳಿ): ಮಹಿಳೆಯರಲ್ಲಿ ಮತದಾನ ಜಾಗೃತಿ ಮತ್ತು ಮಹಿಳಾ ಮತದಾನ ಪ್ರಮಾಣ ಹೆಚ್ಚಿಸಲು ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ‘ಸಖಿ ಪಿಂಕ್ ಬೂತ್’ (ಗುಲಾಬಿ ಬಣ್ಣದ ಮತಗಟ್ಟೆ) ತೆರೆಯಲು ಭಾರತೀಯ ಚುನಾವಣೆ ಆಯೋಗ ನಿರ್ಧರಿಸಿರುವ ಹಿನ್ನೆಲೆ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ‘ಪಿಂಕ್ ಬೂತ್’ ತೆರೆಯಲಾಗಿದೆ. ಇದರ ಜೊತೆಯಲ್ಲಿ ಯತನಿಕ್ ಮತಗಟ್ಟೆ, ಮಾದರಿ ಮತಗಟ್ಟೆಗಳನ್ನು ತೆರೆಯಲಾಗಿದೆ. ಪಿಂಕ್ ಬೂತ್ ಹೊರಗೆ ಮಹಿಳೆಯರ ಮನಸ್ಸಿಗೆ ಮುದ ನೀಡುವಂತಹ, ಅವರನ್ನು ಮತಗಟ್ಟೆಗೆ ಆಹ್ವಾನಿಸುವಂತಹ ಚಿತ್ತಾಕರ್ಷಕವಾದ ಚಿತ್ರಗಳನ್ನು …
Read More »ಎಂಇಎಸ್ ವಿರುದ್ಧ ಪ್ರಚಾರ: ಸಂಜಯ್ ರಾವುತ್ ಆಕ್ಷೇಪ
ಬೆಳಗಾವಿ: ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)ಯಿಂದ ಕಣಕ್ಕಿಳಿದ ಅಭ್ಯರ್ಥಿಗಳ ವಿರುದ್ಧ ಮಹಾರಾಷ್ಟ್ರದ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಪ್ರಚಾರ ಮಾಡುತ್ತಿರುವುದಕ್ಕೆ ಶಿವಸೇನಾ(ಉದ್ಧವ್ ಠಾಕ್ರೆ ಬಣ) ಮುಖ್ಯಸ್ಥ ಸಂಜಯ್ ರಾವುತ್ ಆಕ್ಷೇಪ ವ್ಯಕ್ತಪಡಿಸಿದರು. ಬೆಳಗಾವಿ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ವಡಗಾವಿಯಲ್ಲಿ ಬುಧವಾರ ನಡೆದ ಎಂಇಎಸ್ ಅಭ್ಯರ್ಥಿ ರಮಾಕಾಂತ್ ಕೊಂಡೂಸ್ಕರ್ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ‘ಗಡಿಭಾಗದ ಮರಾಠಿ ಭಾಷಿಕರು ತಮ್ಮನ್ನು ಮಹಾರಾಷ್ಟ್ರಕ್ಕೆ ಸೇರಿಸುವಂತೆ ಕಳೆದ 60 …
Read More »ಸಂದರ್ಶನ | ವೃದ್ಧಿಯೇ ನನ್ನ ಗೆಲುವಿಗೆ ಸಾಧನ : ಬಾಲಚಂದ್ರ ಜಾರಕಿಹೊಳಿ
ಯಾಾವ ಅಂಶ ಇಟ್ಟುಕೊಂಡು ಮತ ಕೇಳುತ್ತಿದ್ದೀರಿ? ಸತತ ಐದು ಚುನಾವಣೆಗಳಲ್ಲಿ ನಾನು ಗೆದ್ದಿದ್ದೇನೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಅವುಗಳನ್ನೇ ಮುಂದಿಟ್ಟುಕೊಂಡು ನಾನು ಹಾಗೂ ಪಕ್ಷದ ಬೆಂಬಲಿಗರು ಮತಯಾಚಿಸುತ್ತಿದ್ದೇವೆ. lಈ ಬಾರಿಯೂ ಗೆಲ್ಲುತ್ತೇನೆ ಎಂಬ ವಿಶ್ವಾಸ ಮೂಡಿದೆಯೇ? ವಿಶ್ವಾಸ ಮೂಡಲು ಕಾರಣವೇನು? ಸಾವಿರಾರು ಕೋಟಿ ರೂಪಾಯಿ ಅನುದಾನ ತಂದು, ಕ್ಷೇತ್ರದಲ್ಲಿ ವಿವಿಧ ಕಾಮಗಾರಿ ಕೈಗೊಂಡಿದ್ದೇನೆ. ಪ್ರತಿ ಸಮುದಾಯದ ಶೇ 80ರಷ್ಟು ಮತದಾರರು ನನ್ನೊಂದಿಗೆ ಇದ್ದಾರೆ. ನಾನು ಅವರ …
Read More »ನಿಪ್ಪಾಣಿ ನಗರಕ್ಕೆ ಇಂದುನಿತಿನ್ ಗಡ್ಕರಿ
ನಿಪ್ಪಾಣಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಇಂದು ನಿಪ್ಪಾಣಿ ನಗರಕ್ಕೆ ಆಗಮಿಸಲಿದ್ದಾರೆ. ಅವರು ಮುಜರಾಯಿ ಮತ್ತು ವಕ್ಫ್ ಸಚಿವೆ ಹಾಗೂ ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ ಅವರ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಇಲ್ಲಿನ ಸರಕಾರಿ ಕನ್ನಡ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮಧ್ಯಾಹ್ನ 1 ಗಂಟೆಗೆ ಪ್ರಚಾರ ಸಭೆ ಆಯೋಜನೆಗೊಂಡಿದೆ.
Read More »
Laxmi News 24×7