Breaking News

ಅನಿರ್ದಿಷ್ಟಾವಧಿ ಧರಣಿ: ಶಿಕ್ಷಕರ ಸ್ಥಾನಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಪಟ್ಟು

ಬೆಂಗಳೂರು: ಸೇವೆ ಕಾಯಂ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ನೇತೃತ್ವದಲ್ಲಿ ಬುಧವಾರದಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.   ಕಾರ್ಯಕರ್ತೆಯರಿಗೆ ಶಿಕ್ಷಕರ ಸ್ಥಾನಮಾನ ನೀಡಬೇಕು. ಪ್ರತಿ ತಿಂಗಳು ₹ 31 ಸಾವಿರ ವೇತನ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು. ‘ರಾಜ್ಯದಲ್ಲಿ ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಬೇಕು. ಆರೋಗ್ಯ ವಿಮೆ ಜಾರಿಗೆ ತರಬೇಕು. ತೀವ್ರತರಹದ …

Read More »

ಬಿಜೆಪಿ ಸರ್ಕಾರದ ಭ್ರಷ್ಟಾಚಾರ ತನಿಖೆಗೆ ಆಯೋಗ: ಸಿದ್ದರಾಮಯ್ಯ

ಬಾಗಲಕೋಟೆ: ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ತಕ್ಷಣ ಬಿಜೆಪಿ ಸರ್ಕಾರದಲ್ಲಿನ ಭ್ರಷ್ಟಾಚಾರ ಹಗರಣಗಳ ತನಿಖೆಗೆ ಆಯೋಗ ರಚಿಸಲಾಗುವುದು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಪ್ರಜಾಧ್ವನಿ ಬಸ್‌ ಯಾತ್ರೆ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಕಾಮಗಾರಿಗೆ ಶೇ 40ರಷ್ಟು ಕಮಿಷನ್‌ ಪಡೆದಿರುವುದು, ಪಿಎಸ್‌ಐ, ಪಿಡಬ್ಲ್ಯುಡಿ ಸಹಾಯಕ ಎಂಜಿನಿಯರ್ ನೇಮಕಾತಿ ಸೇರಿದಂತೆ ಹಲವು ಹಗರಣಗಳ ತನಿಖೆ ನಡೆಸಿ, ಕಠಿಣ ಕ್ರಮಕೈಗೊಳ್ಳಲಾಗುವುದು ಎಂದರು.   ಸ್ಯಾಂಟ್ರೊ …

Read More »

ಯಾದಗಿರಿ, ಕಲಬುರಗಿಗೆ ಇಂದು ಪ್ರಧಾನಿ ಮೋದಿ ಭೇಟಿ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ (ಜ.19) ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗೆ ಭೇಟಿ ನೀಡಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಕೊಡೆಕಲ್‌ಗೆ ಮಧ್ಯಾಹ್ನ 12ಕ್ಕೆ ಆಗಮಿಸುವರು. ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ನವೀಕರಣ ಮತ್ತು ಆಧುನಿಕ ಕಾಮಗಾರಿ ಲೋಕಾರ್ಪಣೆ, ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಸೂರತ್‌-ಚೆನ್ನೈ ಎಕ್ಸ್‌ಪ್ರೆಸ್‌ ವೇ ಪ್ಯಾಕೇಜ್‌-3 ಕಾಮಗಾರಿ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸುವರು. ‌ ಕಲಬುರಗಿ ಜಿಲ್ಲೆಯ …

Read More »

ಬಿಜೆಪಿಯಲ್ಲಿ ಗಂಡಸರೇ ಇಲ್ವಾ: ಹರಿಪ್ರಸಾದ್‌

ಬಾಗಲಕೋಟೆ: ಬಿಜೆಪಿಯಲ್ಲಿ ಸ್ಯಾಂಟ್ರೋ ರವಿ, ಫೈಟರ್‌ ರವಿ, ಪಿಂಪ್‌ ರವಿ, ಸಿ.ಟಿ. ರವಿ ಹೀಗೆ ತುಂಬಿ ತುಳುಕುತ್ತಿದ್ದಾರೆ. ಹೀಗಾಗಿ ಅಂತಹ ರವಿಗಳಿಂದ ಏನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಪಿಂಪ್‌ ಕೆಲಸ ಮಾಡಿಯೇ ಸಚಿವರಾಗಿದ್ದಾರೆ ಎಂದು ಒಬ್ಬ ಬಿಜೆಪಿಯ ಶಾಸಕರು ಹೇಳುತ್ತಾರೆ. ಶಾಸಕ ಯತ್ನಾಳ್‌ ಹೇಳಿಕೆಗೆ ಉತ್ತರ ಕೊಡಲು ಬಿಜೆಪಿಯಲ್ಲಿ ಒಬ್ಬ ಗಂಡಸೂ ಇಲ್ವಾ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌ ಪ್ರಶ್ನಿಸಿದರು. ಪ್ರಜಾಧ್ವನಿ ಯಾತ್ರೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ …

Read More »

ಫೆ.2ರಂದು ಅಭ್ಯರ್ಥಿಗಳು ಅಂತಿಮ: ಡಿ.ಕೆ. ಶಿವಕುಮಾರ್‌

ಬಾಗಲಕೋಟೆ: ವಿಧಾನಸಭೆ ಚುನಾವಣೆಗೆ ರಾಜ್ಯದ 224 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಬಗ್ಗೆ ಚರ್ಚಿಸಲು ಕೆಪಿಸಿಸಿ ಚುನಾವಣ ಸಮಿತಿ ಸಭೆಯನ್ನು ಫೆ.2ರಂದು ಕರೆಯಲಾಗಿದೆ. ಸಭೆಯಲ್ಲಿ ಸುದೀಘ್ರವಾಗಿ ಚರ್ಚಿಸಿದ ಬಳಿಕ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಎಐಸಿಸಿಗೆ ಕಳುಹಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು. ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಅಭ್ಯರ್ಥಿ ಗಳನ್ನು ಬೇಗ ಘೋಷಿಸಲಾಗುವುದು. ಇದಕ್ಕಾಗಿ ಈಗಾಗಲೇ ರಾಜ್ಯದ ಎಲ್ಲ ಕ್ಷೇತ್ರಗಳಿಂದ ಆಕಾಂಕ್ಷಿಗಳ ಅರ್ಜಿ …

Read More »

ಚುನಾವಣಾ ಬಾಂಡ್‌ ಹಣದಲ್ಲಿ ಬಿಜೆಪಿಗೆ ಸಿಂಹಪಾಲು!

ನವದೆಹಲಿ: 2018ರ ಮಾರ್ಚ್‌ನಿಂದ 2022ರವರೆಗೆ ರಾಜಕೀಯ ಪಕ್ಷಗಳಿಗೆ ಚುನಾವಣಾ ಬಾಂಡ್‌ಗಳ ಮೂಲಕ ಹರಿದುಬಂದಿರುವ ದೇಣಿಗೆ 9,208 ಕೋಟಿ ರೂ.! ಇದರಲ್ಲಿ ಶೇ.57ಕ್ಕೂ ಅಧಿಕ ಮೊತ್ತ ಅಂದರೆ 5,270 ಕೋಟಿ ರೂ. ಬಿಜೆಪಿಗೆ ಬಂದಿದೆ. ಇನ್ನು 2ನೇ ಸ್ಥಾನ ಪಡೆದಿರುವುದು ದೇಶದ ಹಳೆಯ ರಾಷ್ಟ್ರೀಯ ಪಕ್ಷ ಕಾಂಗ್ರೆಸ್‌. ಅದಕ್ಕೆ ದಕ್ಕಿರುವುದು ಕೇವಲ 964 ಕೋಟಿ ರೂ. ಪ.ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ಗೆ 767 ಕೋಟಿ ರೂ. ಬಂದಿದೆ ಎಂದು ಚುನಾವಣಾ ಆಯೋಗದ ದತ್ತಾಂಶಗಳು …

Read More »

ಬಿಜೆಪಿ ಸೋಲಿಸಲು ಪಣ: ಇದೇ ಮೊದಲ ಬಾರಿಗೆ ಬಿಆರ್‌ಎಸ್‌ ಮೆಗಾ ಸಮಾವೇಶ

ಖಮ್ಮಾಮ್‌: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ನೇತೃತ್ವದ ಭಾರತ್‌ ರಾಷ್ಟ್ರ ಸಮಿತಿ (ಬಿಆರ್‌ಎಸ್‌)ಯ ಮೆಗಾ ಸಮಾವೇಶ ಬುಧವಾರ ಖಮ್ಮಾಮ್‌ನಲ್ಲಿ ನಡೆದಿದೆ. ವಿವಿಧ ರಾಜಕೀಯ ಪಕ್ಷಗಳ ಘಟಾನುಘಟಿಗಳು ಈ ಸಭೆಯಲ್ಲಿ ಪಾಲ್ಗೊಂಡು, ಬಿಜೆಪಿ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿವೆ.   ಇದೇ ಮೊದಲ ಬಾರಿಗೆ ಇಂಥದ್ದೊಂದು ಸಭೆ ನಡೆದಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೂಗೆಯುವ ಶಪಥ ಮಾಡಲಾಗಿದೆ. ಜತೆಗೆ, 2024ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಆರ್‌ಎಸ್‌ ಪಕ್ಷ ಅಧಿಕಾರಕ್ಕೆ ಬಂದರೆ …

Read More »

ಕೇಂದ್ರೀಯ ಪರೀಕ್ಷೆಗಳು ಕನ್ನಡದಲ್ಲೇ ನಡೆಯಲಿ: ಬಾಲಚಂದ್ರ ಜಾರಕಿಹೊಳಿ ಮನವಿ

ಮೂಡಲಗಿ : ಕೇಂದ್ರ ಸರ್ಕಾರದ ಅಧೀನದಲ್ಲಿ ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳು ಕನ್ನಡದಲ್ಲಿಯೇ ನಡೆಯಬೇಕು. ಇದರಿಂದ ನಮ್ಮ ರಾಜ್ಯದ ಅಭ್ಯರ್ಥಿಗಳಿಗೆ ಉದ್ಯೋಗಗಳು ಸೃಷ್ಠಿಯಾಗಲಿವೆ. ಜೊತೆಗೆ ಕನ್ನಡ ಭಾಷೆಯ ಮಕ್ಕಳಿಗೆ ಹೆಚ್ಚು ಪ್ರಾಶಸ್ತ್ಯ ಸಿಕ್ಕಂತಾಗುತ್ತದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.   ಮೂಡಲಗಿ ತಾಲೂಕಿನ ಶಿವಾಪೂರ(ಹ) ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರದಂದು ಕನ್ನಡ ಸಾಹಿತ್ಯ ಪರಿಷತ್ತು ಮೂಡಲಗಿ ತಾಲೂಕು ಘಟಕ ಆಯೋಜಿಸಿದ್ದ ಮೂಡಲಗಿ …

Read More »

ಪ್ರಧಾನಿ ಮೋದಿ ಮೇಲಿಂದ ಮೇಲೆ ರಾಜ್ಯಕ್ಕೆ ಸೈಕಲ್ ತುಳಿಯುತ್ತಿದ್ದಾರೆ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬಂದಿರುವ ಕಾರಣದಿಂದ ಪ್ರಧಾನಿ ಮೋದಿಯವರಿಗೆ ಸಂಪ್ರದಾಯದಂತೆ ಕರ್ನಾಟಕ ನೆನಪಾಗಿದೆ. ಹೀಗಾಗಿ ಮೇಲಿಂದ ಮೇಲೆ ರಾಜ್ಯಕ್ಕೆ ಸೈಕಲ್ ತುಳಿಯುತ್ತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.   ಮೋದಿಯವರು ರಾಜ್ಯದ ಕಡೆ ಮುಖ ಮಾಡುವ ವೇಳೆಗೆ ಬಿಜೆಪಿಯ ಸುಳ್ಳಿನ ಕಾರ್ಖಾನೆಯ ಕಾರ್ಮಿಕರು ಸುಳ್ಳುಗಳ ಉತ್ಪಾದನೆಯಲ್ಲಿ ಬಿರುಸಾಗಿದ್ದಾರೆ‌ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಆಕ್ರೋಶ ಹೊರ ಹಾಕಿದ್ದಾರೆ. ದೇಶದ ಆರ್ಥಿಕತೆ ಕುಸಿದಿರುವುದು, ಹಣದುಬ್ಬರ …

Read More »

5,000 ರೂ. ವೃದ್ಯಾಪ್ಯ ವೇತನ! ಪಂಚರತ್ನ ಯಾತ್ರೆ ಪುನಾರಂಭ

ಇಂಡಿ: ಮುಂದಿನ ಚುನಾವಣೆಯಲ್ಲಿ ಸ್ಪಷ್ಟ  ಬಹುಮತದಿಂದ ಜೆಡಿಎಸ್‌ ಅಧಿಕಾರಕ್ಕೆ ಬಂದರೆ ವೃದ್ಧರಿಗೆ ಪ್ರತೀ ತಿಂಗಳು 5 ಸಾವಿರ ರೂ. ಮಾಸಾಶನ ನೀಡುವುದಾಗಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಅಧಿಕಾರಕ್ಕೆ ಬಂದ 24 ತಾಸುಗಳಲ್ಲಿ ಸ್ತ್ರೀ ಶಕ್ತಿ ಗುಂಪುಗಳ ಸಂಪೂರ್ಣ ಸಾಲ ಮನ್ನಾ ಮಾಡಲಾಗುವುದು ಎಂದೂ ಪ್ರಕ ಟಿಸಿದ್ದಾರೆ. ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಸಿದ್ಧಾರೂಢ ಮಠದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್‌ ಪಂಚರತ್ನ ರಥಯಾತ್ರೆ ಪುನಾರಂಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. …

Read More »