Breaking News

ಕಾರನ್ನು ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹುಕ್ಕೇರಿ: ಕಾರು ಖರೀದಿಸಿ ಮಾರಾಟ ಮಾಡಿ, ಅದೇ ಕಾರನ್ನು ಕಳ್ಳತನ ಮಾಡಿ ಮತ್ತೆ ಮಾರಾಟ ಮಾಡುತ್ತಿದ್ದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಕಿಂಗ್ ಪಿನ್ ಮಹಾರಾಷ್ಟ್ರದ ಔರಂಗಾಬಾದ್ ನಿವಾಸಿಯಾಗಿದ್ದು ಗಡಹಿಂಗ್ಲಜ್ ನಲ್ಲಿ ಮಹಾರಾಷ್ಟ್ರರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಗುಮಾಸ್ತನಾಗಿ ಕೆಲಸ ಮಾಡುತ್ತಿದ್ದ. ನಂತರದಲ್ಲಿ ಕೆಲಸ ಕಳೆದುಕೊಂಡಿದ್ದ ಈತ ಹಳೆಯ ಕಾರುಗಳನ್ನು ಕೊಳ್ಳುವಿಕೆ ವ್ಯವಹಾರ ಪ್ರಾರಂಭಿಸಿದ್ದ. ಬೇರೆಯವರ ಕಾರುಗಳನ್ನು ತಾನು ನಡೆಸುವುದಾಗಿ ಹೇಳಿ ಅವುಗಳನ್ನು ಪಡೆದ ನಂತರ ನಂಬರ್ ಪ್ಲೇಟ್ ಗಳನ್ನು …

Read More »

3 ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.

ತ್ರಿಪುರಾ, ನಾಗಾಲ್ಯಾಂಡ್ ಹಾಗೂ ಮೆಘಾಲಯ ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ತ್ರಿಪುರಾದಲ್ಲಿ ಫೆಬ್ರವರಿ 16ರಂದು ಚುನಾವಣೆ ನಡೆಯಲಿದ್ದು, ಎಲ್ಲಾ 60 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ತಿಳಿಸಿದರು. ಮೆಘಾಲಯ ಹಾಗೂ ನಾಗಾಲ್ಯಾಂಡ್ ಎರಡೂ ರಾಜ್ಯಗಳಲ್ಲಿಯೂ ಫೆಬ್ರವರಿ 27ರಂದು ಮತದಾನ ನಡೆಯಲಿದೆ. ಮೂರು ರಾಜ್ಯಗಳ ಚುನಾವಣಾ ಫಲಿತಾಂಶ ಮಾರ್ಚ್ 2ರಂದು ಪ್ರಕಟಗೊಳ್ಳಲಿದೆ ಎಂದು …

Read More »

ಕಾರು ಕಳುವು ಮಾಡಿ ಮಾರುತ್ತಿದ್ದ ಆರೋಪಿಗಳ ಬಂಧನ

ಹುಕ್ಕೇರಿ: ಕಾರು ಖರೀದಿಸಿ ಮಾರಾಟ ಮಾಡಿ, ಅದೇ ಕಾರನ್ನು ಕಳ್ಳತನ ಮಾಡಿ ಮತ್ತೆ ಮಾರಾಟ ಮಾಡುತ್ತಿದ್ದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಕಿಂಗ್ ಪಿನ್ ಮಹಾರಾಷ್ಟ್ರದ ಔರಂಗಾಬಾದ್ ನಿವಾಸಿಯಾಗಿದ್ದು ಗಡಹಿಂಗ್ಲಜ್ ನಲ್ಲಿ ಮಹಾರಾಷ್ಟ್ರರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಗುಮಾಸ್ತನಾಗಿ ಕೆಲಸ ಮಾಡುತ್ತಿದ್ದ. ನಂತರದಲ್ಲಿ ಕೆಲಸ ಕಳೆದುಕೊಂಡಿದ್ದ ಈತ ಹಳೆಯ ಕಾರುಗಳನ್ನು ಕೊಳ್ಳುವಿಕೆ ವ್ಯವಹಾರ ಪ್ರಾರಂಭಿಸಿದ್ದ. ಬೇರೆಯವರ ಕಾರುಗಳನ್ನು ತಾನು ನಡೆಸುವುದಾಗಿ ಹೇಳಿ ಅವುಗಳನ್ನು ಪಡೆದ ನಂತರ ನಂಬರ್ ಪ್ಲೇಟ್ ಗಳನ್ನು …

Read More »

ಅರಿಶಿಣ ಕುಂಕಮ ಮಹತ್ವ ವಿವರಿಸಿದ ಡಾ. ಸೋನಾಲಿ ಸರ್ನೋಬತ್

ಖಾನಾಪುರ: ಖಾನಾಪುರ ತಾಲೂಕಿನ ಇಟಗಿಯಲ್ಲಿ ನಿಯತಿ ಫೌಂಡೇಶನ್ ವತಿಯಿಂದ ಅರಿಶಿಣ ಕುಂಕುಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಿಯತಿ ಫೌಂಡೇಶನ್ ಅಧ್ಯಕ್ಷೆ ಹಾಗೂ ಖಾನಾಪುರ ತಾಲೂಕಿನ ಬಿಜೆಪಿ ಮಹಿಳಾ ಮೋರ್ಚಾ ಪ್ರಭಾರಿ ಡಾ. ಸೋನಾಲಿ ಸರ್ನೋಬತ್ ಅವರು ಕಾರ್ಯಕ್ರಮ ಉದ್ಘಾಟಿಸಿ ಅರಿಶಿಣ ಕುಂಕುಮದ ಮಹತ್ವ ವಿವರಿಸಿದರು. ಅಲ್ಲದೇ ಮಹಿಳೆಯರು ಸಂಘಟಿತರಾಗುವಂತೆ ಅವರು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಬಿಜೆಪಿಯ ಸ್ಥಳೀಯ ಮುಖಂಡರಾದ ಪ್ರಶಾಂತ ಸಾನಿಕೊಪ್ಪ, ಚಂದ್ರಕಾಂತ ಕೋಲ್ಕರ್, ಬಾಳೇಶ ಚವ್ಹಾಣವರ್, ನಾಗೇಶ ರಾಮಾಜಿ, ಅನಿತಾ ಕೋಮಸ್ಕರ್, …

Read More »

ಡಾಂಬರು ಹಾಕಿದ ಎರಡೇ ದಿನದಲ್ಲಿ ಕುಸಿದ ರಸ್ತೆ!

ಬೆಂಗಳೂರು: ರಾಜ್ಯ ರಾಜಧಾನಿ ಇತ್ತೀಚೆಗೆ ಸಮಸ್ಯೆಗಳ ಆಗರವಾಗಿ ಸುದ್ದಿಯಾಗುತ್ತಿದೆ. ರಸ್ತೆ ಗುಂಡಿ, ಮೆಟ್ರೋ ಪಿಲ್ಲರ್ ದುರಂತ ಮತ್ತು ಪುಡಿ ರೌಡಿಗಳ ಅಟ್ಟಹಾಸದ ಕಾರಣಕ್ಕಾಗಿ ಬೆಂಗಳೂರು ಸಾರ್ವಜನಿಕರಿಗೆ ಸೇಫ್ ಅಲ್ಲ ಎಂಬ ಭಾವನೆ ಉಂಟಾಗಲು ಕಾರಣವಾಗಿತ್ತು.   ಕಳೆದ ವಾರವಷ್ಟೇ ಹೆಣ್ಣೂರು ಕ್ರಾಸ್​ ಬಳಿ ಮೆಟ್ರೋ ಪಿಲ್ಲರ್​ ದುರಂತದಿಂದ ತಾಯಿ ಮತ್ತು ಮಗ ಸಾವನ್ನಪ್ಪಿದ್ದರು. ಇದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ, ಬೆಂಗಳೂರು ತಲೆ ತಗ್ಗಿಸುವಂತಾಗಿತ್ತು. ಜತೆಗೆ ಬೆಂಗಳೂರಿನ ಹಲವೆಡೆ ರಸ್ತೆಗಳು ಕೆಟ್ಟು ಹೋಗಿ, ಗುಂಡಿಗಳು …

Read More »

ಪ್ರೀತಿಸಲು ಒಲ್ಲೆ ಎಂದಿದ್ದಕ್ಕೆ ಚೂರಿಯಿಂದ ಇರಿದು ಹತ್ಯೆಗೈದ!

ಪುತ್ತೂರು: ಹಾಡಹಗಲೇ ಯುವತಿಯೊಬ್ಬಳನ್ನು ಮನಸೋಇಚ್ಛೆ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಂಪ ಎಂಬಲ್ಲಿ ಇಂದು(ಮಂಗಳವಾರ) ಸಂಭವಿಸಿದೆ. ಗಿರಿಜಾ ಎಂಬುವರ ಪುತ್ರಿ ಜಯಶ್ರೀ(23) ಕೊಲೆಯಾದ ದುರ್ದೈವಿ. ಕನಕಮಜಲಿನ ಉಮೇಶ ಎಂಬಾತ ಜಯಶ್ರೀ ಒಬ್ಬಳೇ ಇದ್ದ ವೇಳೆ ಮನೆಗೆ ನುಗ್ಗಿ ಹೊಟ್ಟೆಗೆ ಇರಿದು ಚೂರಿಯನ್ನು ಹೊಟ್ಟೆಯಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.   ಉಮೇಶ ಕೆಲ ಸಮಯದಿಂದ ಜಯಶ್ರೀಯನ್ನು ಪ್ರೀತಿಸುತ್ತಿದ್ದು, ಆಗಾಗ್ಗೆ ಜಯಶ್ರೀ ಮನೆಗೆ ಬರುತ್ತಿದ್ದನು. …

Read More »

ಬೆಳಗಾವಿಯಿಂದ ಸೇವೆ ನೀಡುತ್ತಿದ್ದ 12 ವಿಮಾನಗಳ ಸೇವೆ ಬಂದ್

ಬೆಳಗಾವಿ: ಬೆಳಗಾವಿಯಿಂದ ಸೇವೆ ನೀಡುತ್ತಿದ್ದ ಕೆಲ ವಿಮಾನ ಸೇವೆ ಬಂದ್ ಆಗಿವೆ. ಇದರಿಂದ ಉದ್ಯಮಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ಕುರಿತು ಸರಕಾರ ಹಾಗೂ ಇಲ್ಲಿನ ಜನಪ್ರತಿನಿಧಿಗಳು ಗಮನ ಹರಿಸುವ ಅವಶ್ಯಕತೆ ಇದೆ ಎಂದು ಬೆಳಗಾವಿ ಚೆಂಬರ್ ಆಫ್ ಕಾಮಸ್೯ ಸಭಾಂಗಣದಲ್ಲಿ ಉದ್ಯಮಿಗಳು ಹಕ್ಕೊತ್ತಾಯ ಮಾಡಿದರು. ಮಂಗಳವಾರ ವಿವಿಧ ಉದ್ಯಮಿಗಳು ನಡೆಸಿದ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಯಿತು. ಚೇಂಬರ್ ಆಫ್ ಕಾಮಸ್೯ನ ಅಧ್ಯಕ್ಷ ಹೇಮೇಂದ್ರ ಪೋರವಾಲ್ ಮಾತನಾಡಿ, ಬೆಳಗಾವಿಯಲ್ಲಿ ಈಗಾಗಲೇ ಸಾಕಷ್ಟು ಬಾರಿ …

Read More »

1 ಕಿ.ಮೀ ದೂರ ವ್ಯಕ್ತಿಯನ್ನು ಎಳೆದೊಯ್ದ ಬೈಕ್ ಸವಾರ; ಬೆಂಗಳೂರಿನಲ್ಲೊಂದು ಆಘಾತಕಾರಿ ಘಟನೆ

ಬೆಂಗಳೂರು: ದೆಹಲಿಯಲ್ಲಿ ಮಹಿಳೆಯನ್ನು ಒಂದು ಗಂಟೆಗೂ ಹೆಚ್ಚು ಕಾಲ ಎಳೆದೊಯ್ದು, ಆಕೆ ಸಾವಿಗೀಡಾದ ಆಘಾತಕಾರಿ ಪ್ರಕರಣವೊಂದು ಮಾಸುವ ಮುನ್ನವೇ ಇದೀಗ ರಾಜ್ಯ ರಾಜಧಾನಿಯಲ್ಲಿ ಇದೇ ಮಾದರಿಯ ಘಟನೆಯೊಂದು ನಡೆದಿದೆ. ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ಟಾಟಾ ಸುಮೋ ಕಾರಿಗೆ ಡಿಕ್ಕಿ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಕಾರಿನ ‌ಡ್ರೈವರ್ ಪ್ರಶ್ನಿಸುತ್ತಿದ್ದಂತೆ ಸವಾರ ಸ್ಕೂಟರ್ ಹತ್ತಿ ಎಸ್ಕೇಪ್ ಆಗಲು ಮುಂದಾಗಿದ್ದಾನೆ. ಈ ವೇಳೆ ಬೈಕ್ ಸವಾರನನ್ನು ಹಿಡಿಯಲು ಟಾಟಾ ಸುಮೋ ಚಾಲಕ …

Read More »

ಬಿಜೆಪಿ ಅಧ್ಯಕ್ಷರಾಗಿ ಜೆ.ಪಿ.ನಡ್ಡಾ ಮುಂದುವರಿಕೆ: ಲೋಕಸಭಾ ಚುನಾವಣೆ ವೇಳೆಯೂ ನಡ್ಡಾ ಸಾರಥ್ಯ

ನವದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ.ನಡ್ಡಾ ಅವರನ್ನ ಮುಂದುರಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಮಂಗಳವಾರ ಘೋಷಿಸಿದರು. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕಾರಾವಧಿಯನ್ನು 2024ರ ಜೂನ್ ವರೆಗೆ ವಿಸ್ತರಿಸಲಾಗಿದೆ. ಮುಂಬರುವ ಲೋಕಸಭಾ ಚುನಾವಣೆ ವೇಳೆಯೂ ನಡ್ಡಾ ಅವರೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಉಳಿಯಲಿದ್ದಾರೆ. ಚುನಾವಣೆಯ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ಅಮಿತ್ ಶಾ ತಿಳಿಸಿದ್ದಾರೆ. ಜೆ.ಪಿ. ನಡ್ಡಾ ಅವರ ನಾಯಕತ್ವದಲ್ಲಿ ಬಿಹಾರ ವಿಧಾನಸಭಾ …

Read More »

ಮೊಬೈಲ್​ ಟವರ್ ಏರಿದ ಕಳ್ಳ; ಬಿರಿಯಾನಿ-ಸಿಗರೇಟ್​ ಕೇಳಿದವ ಕಡೆಗೆ ಕೆಳಗಿಳಿಯಲು ಇಟ್ಟ ಬೇಡಿಕೆಯೇ ಬೇರೆ!

ಧಾರವಾಡ: ಕಳ್ಳತನದ ಆರೋಪಿಯೊಬ್ಬ ಮೊಬೈಲ್​ ಫೋನ್ ಟವರ್ ಏರಿ ಕುಳಿತು ಕೆಲವು ಕ್ಷಣಗಳ ಕಾಲ ತಲೆನೋವಾಗಿ ಪರಿಣಮಿಸಿದ ಪ್ರಕರಣವೊಂದು ನಡೆದಿದೆ. ಬಿರಿಯಾನಿ ಕೊಡಿ, ಸಿಗರೇಟ್ ಕೊಡಿ ಎಂದು ಬೇಡಿಕೆ ಇಟ್ಟಿದ್ದ ಈ ಕಳ್ಳ ಬಳಿಕ ಕೆಳಗಿಳಿಯಲು ಮತ್ತೊಂದು ಬೇಡಿಕೆ ಇರಿಸಿದ್ದ.   ಧಾರವಾಡದ ಜ್ಯುಬಿಲಿ ವೃತ್ತದಲ್ಲಿ ಇಂದು ಈ ಘಟನೆ ನಡೆದಿದೆ. ಜಾವೀದ್ ಡಲಾಯತ್ ಎಂಬ ಈತ ಕಳ್ಳತನದ ಆರೋಪ ಎದುರಿಸುತ್ತಿದ್ದು, ಇತ್ತೀಚೆಗಷ್ಟೇ ಜೈಲಿನಿಂದ ಹೊರಬಂದಿದ್ದ. ಟವರ್ ತುದಿಗೇರಿದ್ದ ಈತನನ್ನು ನೋಡಲು …

Read More »