Breaking News

ಜನವರಿ 21 ರಿಂದ ರಾಜ್ಯವ್ಯಾಪಿ ‘ವಿಜಯಸಂಕಲ್ಪ’ ಅಭಿಯಾನ: ಅಶ್ವತ್ಥನಾರಾಯಣ

ಬೆಂಗಳೂರು: ಇದೇ 21 ರಿಂದ 29 ರವರೆಗೆ ರಾಜ್ಯವ್ಯಾಪಿ ‘ವಿಜಯಸಂಕಲ್ಪ’ ಅಭಿಯಾನವನ್ನು ಬಿಜೆಪಿ ನಡೆಸಲಿದ್ದು, ಎರಡು ಕೋಟಿ ಜನರನ್ನು ಸಂಪರ್ಕಿಸುವ ಗುರಿ ಹೊಂದಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.   ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ 39 ಸಂಘಟನಾ ಜಿಲ್ಲೆಗಳು, 312 ಮಂಡಲಗಳಲ್ಲಿ ಈ ಅಭಿಯಾನ ನಡೆಯಲಿದೆ. ಮಹಾಶಕ್ತಿ ಕೇಂದ್ರ ಮತ್ತು ಶಕ್ತಿ ಕೇಂದ್ರಗಳ ಸಭೆಗಳು ನಡೆಯಲಿವೆ ಎಂದು ಅವರು ತಿಳಿಸಿದರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ …

Read More »

ಶಿಸ್ತು ಸಮಿತಿಯಿಂದ ನೋಟಿಸ್‌ ಬಂದಿಲ್ಲ, ಭಯ ಹುಟ್ಟಿಸುವ ತಂತ್ರ: ಯತ್ನಾಳ

ವಿಜಯಪುರ: ‘ನನಗೆ ಬಿಜೆಪಿ ಹೈಕಮಾಂಡ್‌ನಿಂದ ಅಥವಾ ಪಕ್ಷದ ಶಿಸ್ತು ಸಮಿತಿಯಿಂದ ಇದುವರೆಗೆ ಯಾವುದೇ ನೋಟಿಸ್‌ ಬಂದಿಲ್ಲ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು. ಪಕ್ಷದ ನಾಯಕರ ವಿರುದ್ಧ ಮಾತನಾಡಿದ ಕಾರಣಕ್ಕೆ ನೋಟಿಸ್‌ ನೀಡಲಾಗಿದೆ ಎಂಬ ಸುದ್ದಿ ಹರಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನನಗೆ ಪಕ್ಷದ ಶಿಸ್ತು ಸಮಿತಿ ನೋಟಿಸ್‌ ನೀಡಿದೆ ಎಂಬುದು ಕೇವಲ ವಿರೋಧಿಗಳ ಭಯ ಹುಟ್ಟಿಸುವ ತಂತ್ರ ಅಷ್ಟೇ, ನನಗೆ ನೋಟಿಸ್‌ ಬಂದಿಲ್ಲ, …

Read More »

ಗಡ್ಕರಿಗೆ ಬೆದರಿಕೆ: ಜೈಲಿನೊಳಗೆ ಮೊಬೈಲ್‌ ಹೋಗಿದ್ದು ಹೇಗೆ? ಇನ್ನೂ ಸಿಗದ ಸುಳಿವು

ಬೆಳಗಾವಿ: ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರ ನಾಗ್ಪುರದ ಕಚೇರಿಗೆ ಬೆದರಿಕೆ ಕರೆ ಮಾಡಿದ್ದ ಕೈದಿ ಜಯೇಶ್‌ ಪೂಜಾರಿ ಕೈಗೆ ಮೊಬೈಲ್‌ ಫೋನ್ ಕೊಟ್ಟಿದ್ದು ಯಾರು? ಜೈಲಿನೊಳಗೆ ಮೊಬೈಲ್‌ ಫೋನ್ ಹೋಗಿದ್ದು ಹೇಗೆ? ಎಂಬ ಬಗ್ಗೆ ಅಧಿಕಾರಿಗಳಿಗೆ ಇನ್ನೂ ಸುಳಿವು ಸಿಕ್ಕಿಲ್ಲ.   ಹಿಂಡಲಗಾ ಜೈಲಿನಲ್ಲಿ ಇದ್ದುಕೊಂಡೇ ಶನಿವಾರ ಕರೆ ಮಾಡಿದ್ದ ಕೈದಿ, ತಾನು ಭೂಗತಪಾತಕಿ ದಾವೂದ್‌ ಇಬ್ರಾಹಿಂ ತಂಡದ ಸದಸ್ಯ, ₹100 ಕೋಟಿ ನೀಡುವಂತೆ ಬೆದರಿಕೆ ಒಡ್ಡಿದ್ದ. ಈ ಬಗ್ಗೆ …

Read More »

ಹೋಂಗಾರ್ಡ್ ವರ್ಗಾವಣೆಗೆ ಲಂಚ: ಕೊಪ್ಪಳ ಜಿಲ್ಲಾ ಕಮಾಂಡೆಂಟ್ ಲೋಕಾಯುಕ್ತ ಬಲೆಗೆ

ಕೊಪ್ಪಳ: ಹೋಂಗಾರ್ಡ್ ಒಬ್ಬರ ವರ್ಗಾವಣೆಗೆ 10 ಸಾವಿರ ರೂ. ಲಂಚದ ಬೇಡಿಕೆಯನ್ನಿಟ್ಟಿದ್ದ ಜಿಲ್ಲಾ ಕಮಾಂಡೆಂಟ್ ಗವಿಸಿದ್ದಪ್ಪ ಹಾಗೂ ತಾಲೂಕು ಕಮಾಂಡೆಂಟ್ ರುದ್ರಪ್ಪ ಪತ್ತಾರ್ ಅವರು ನಗರದ ಮಾನಸಿಕ ಆರೋಗ್ಯ ತಪಾಸಣಾ ಕಚೇರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.   ತಾಲೂಕಿನ ಮುನಿರಾಬಾದ್‌ ನ ಹೋಂಗಾರ್ಡ್ ಮಹೆಬೂಬ ಖಾನ್ ಅವರು ಮುನಿರಾಬಾದ್‌ನಿಂದ ಗಂಗಾವತಿಗೆ ವರ್ಗಾವಣೆ ಕೇಳಿಕೊಂಡಿದ್ದರು. ಇದಕ್ಕೆ ರುದ್ರಪ್ಪ ಪತ್ತಾರ ಹಾಗೂ ಗವಿಸಿದ್ದಪ್ಪ ಅವರು 10 ಸಾವಿರ ರೂ. ಹಣದ ಬೇಡಿಕೆ ಇಟ್ಟಿದ್ದರು. …

Read More »

ಜನಾರ್ದನ ರೆಡ್ಡಿಯೇ ನಿಂತರೂ ಬಿಜೆಪಿಯಿಂದ ನಾನು ಸ್ಪರ್ಧಿಸುತ್ತೇನೆ: ಸೋಮಶೇಖರ ರೆಡ್ಡಿ

ಬಳ್ಳಾರಿ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದಿಂದ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿಯವರೇ ಸ್ವತಃ ಬಂದು ನಿಂತರೂ ನಾನು ಸ್ಪರ್ಧಿಸುವೆ ಎಂದು ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಸವಾಲು ಹಾಕುವ ಮೂಲಕ ಬಹಿರಂಗವಾಗಿ ರಣಕಹಳೆ ಮೊಳಗಿಸಿದರು.   ರಾಜ್ಯ ಸರ್ಕಾರ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ ನೀಡಿರುವ ವಿಷಯಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಸ್ವಲ್ಪ ತಾಳ್ಮೆ ವಹಿಸಿದ್ದರೆ ಜನಾರ್ದನ ರೆಡ್ಡಿ ಪರಿಸ್ಥಿತಿ ಈ …

Read More »

ಚುನಾವಣೆ ಸುಗ್ಗಿ ಆರಂಭ: ಇಂದು “ನಾ ನಾಯಕಿ’ ಕಾರ್ಯಕ್ರಮಕ್ಕಾಗಿ ಪ್ರಿಯಾಂಕಾ ಆಗಮನ

ಸಂಕ್ರಾಂತಿಯ ಬಳಿಕ ರಾಜ್ಯ ರಾಜಕೀಯದಲ್ಲಿ ಚುನಾವಣೆ ಚಟುವಟಿಕೆ ಬಿರುಸುಗೊಳ್ಳುತ್ತಿದೆ. ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ನಲ್ಲಿ ವಿಧಾನಸಭೆ ಚುನಾವಣೆಗಾಗಿ ಭರದ ಸಿದ್ಧತೆ ನಡೆಯುತ್ತಿದೆ. ಸೋಮವಾರ ಮತ್ತು ಮಂಗಳವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯಲಿದ್ದು, ಇದರಲ್ಲಿ ಭಾಗಿಯಾಗಲು ರಾಜ್ಯ ಬಿಜೆಪಿ ನಾಯಕರು ದಿಲ್ಲಿಗೆ ತೆರಳಲಿದ್ದಾರೆ. ಮಹಿಳೆಯರಿಗಾಗಿ ಸೋಮವಾರ ಕಾಂಗ್ರೆಸ್‌ ‘ನಾ ನಾಯಕಿ’ ಸಮಾವೇಶ ಏರ್ಪಡಿಸಿದ್ದು, ಪ್ರಿಯಾಂಕಾ ವಾದ್ರಾ ಭಾಗವಹಿಸಲಿದ್ದಾರೆ. ‘ರೈತ ಚೈತನ್ಯ’ ಕಾರ್ಯಕ್ರಮ ಹಮ್ಮಿಕೊಂಡಿರುವ ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ‘ರೈತ ಸಂಕ್ರಾಂತಿ’ …

Read More »

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ವರಿಷ್ಠರ ಬುಲಾವ್‌

ಬೆಂಗಳೂರು: ಪಂಚಮಸಾಲಿ ಮೀಸಲು ಹೋರಾಟಕ್ಕೆ ಸಂಬಂಧಪಟ್ಟಂತೆ ರಾಜ್ಯ ನಾಯಕತ್ವದ ವಿರುದ್ಧವೇ ಸಿಡಿದು ನಿಂತಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ರಾಷ್ಟ್ರೀಯ ನಾಯಕರು ದಿಲ್ಲಿಗೆ ಬುಲಾವ್‌ ನೀಡಿದ್ದಾರೆ. ರಾಷ್ಟ್ರೀಯ ಕಾರ್ಯಕಾರಿಣಿ ಬಳಿಕ ದಿಲ್ಲಿಗೆ ಬರುವಂತೆ ಸೂಚಿಸಿದ್ದಾರೆ.   ಯತ್ನಾಳ್‌ಗೆ ಕಾರಣ ಕೇಳಿ ವರಿಷ್ಠರು ನೋಟಿಸ್‌ ನೀಡಿ ದ್ದಾರೆ ಎಂಬುದು ಸೋಮವಾರ ಬಿಜೆಪಿ ವಲಯದಲ್ಲಿ ಚರ್ಚೆ ನಡೆದಿತ್ತು. ಆದರೆ ವಿಜಯ ಪುರದಲ್ಲಿ ಖುದ್ದು ಯತ್ನಾಳ್‌ ಅವರೇ ಈ ಸಂಗತಿಯನ್ನು ನಿರಾಕರಿಸಿದ್ದಾರೆ. ಆ ಬಳಿಕ ನಡೆದ ಬೆಳವಣಿಗೆಯಲ್ಲಿ ವರಿಷ್ಠರೇ …

Read More »

ಈ ಖತರ್ನಾಕ್​ ಕಳ್ಳರ ಟಾರ್ಗೆಟ ಮೊಬೈಲ್​​ ಟವರ್​​

ಬೆಂಗಳೂರು: ಮೊಬೈಲ್ ಟವರ್​ಗಳನ್ನೇ ಟಾರ್ಗೇಟ್ ಮಾಡಿ RRU ಕಾರ್ಡ್​ಗಳನ್ನು ಇಬ್ಬರು ಖತರ್ನಾಕ ಕಳ್ಳರು ಕಳ್ಳತನ ಮಾಡುತ್ತಿರೋ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇಬ್ಬರು ಖತರ್ನಾಕ ಕಳ್ಳರು ಟವರ್ ಬಳಿ RRU ಕಾರ್ಡ್ ಕಳ್ಳತನ ಮಾಡುತ್ತಿದ್ದರು. ಕೆಂಗೇರಿ, ನಾಗರಬಾವಿ, ಚಂದ್ರಲೇಔಟ್, ಪದ್ಮನಾಭನಗರ ಸೇರಿದಂತೆ ಹಲವೆಡೆ ಕಳ್ಳತನ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಲ್ಲಿಯವರೆಗೆ 10 ಲಕ್ಷಕ್ಕೂ ಹೆಚ್ಚು ಮೌಲ್ಯದ RRU (Riote Radio Unit) ಕಳ್ಳತನ ಮಾಡಿದ್ದಾರೆ. ಈ ಘಟನೆ ಸಂಬಂಧ ಇಂಡಸ್ …

Read More »

ಡೇಟಾ ಸೈನ್ಸ್ ಓದಿದವರಿಗೆ ಮುಂದೆ ತುಂಬಾ ಬೇಡಿಕೆ ಇದೆ

ಡೇಟಾ ಸೈನ್ಸ್‌ (Data Science ) ಬಗ್ಗೆ ಹಲವರು ಕೇಳಿರುತ್ತಾರೆ. ಡೇಟಾ ಸೈನ್ಸ್‌ ಗೊತ್ತಿದ್ರೆ ಹತ್ತಾರು ಕೆಲಸಗಳ ಅವಕಾಶಗಳು (Job Opportunities) ಲಭ್ಯವಿದೆ ಎನ್ನಲಾಗುತ್ತದೆ. ಪಿಯುಸಿ (PUC) ನಂತರ ಮುಂದೇನು ಎನ್ನುವವರಿಗೂ ಸಹ ಡೇಟಾ ಸೈನ್ಸ್‌ ಕೋರ್ಸ್‌ಗಳನ್ನು ಶಿಫಾರಸು ಮಾಡಲಾಗುತ್ತದೆ. ಪ್ರಪಂಚದಲ್ಲಿ ಡೇಟಾದ ಪ್ರಾಮುಖ್ಯತೆ ಹೆಚ್ಚುತ್ತಿರುವಂತೆಯೇ ಡೇಟಾ ಸೈಂಟಿಸ್ಟ್, ಡೇಟಾ ಅನಾಲಿಟಿಕ್ಸ್‌ನಂತಹ ಉದ್ಯೋಗಾವಕಾಶಗಳು ಸಹ ಅದೇ ವೇಗದಲ್ಲಿ ಹೆಚ್ಚುತ್ತಿವೆ. ಈ ಸಂಬಂಧಿತ ಕೋರ್ಸ್‌ಗಳ ವ್ಯಾಪ್ತಿ ಮುಂದಿನ 10-15 ವರ್ಷಗಳವರೆಗೆ ಇನ್ನೂ …

Read More »

ಯುವಕನ ಮೇಲೆ ನಾಲ್ವರು ಹುಡುಗಿಯರಿಂದ ಅತ್ಯಾಚಾರ?

: ಪಂಜಾಬ್‌ನ ಜಲಂಧರ್‍ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. 20ರ ಹರೆಯದ ನಾಲ್ವರು ಹುಡುಗಿಯರು ತನ್ನನ್ನು ಅಪಹರಿಸಿ ನಂತರ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆಂದು ವ್ಯಕ್ತಿಯೊಬ್ಬ ಆರೋಪಿಸಿದ್ದಾನೆ. ಇದು ಕೇಳಲು ವಿಚಿತ್ರ ಎನಿಸಿದರೂ ನಿಜವಾಗಿಯೂ ನಡೆದಿರುವ ಘಟನೆ.   ನಾಲ್ವರು ಯುವತಿಯರು ನನ್ನ ಕಣ್ಣಿಗೆರಾಸಾಯನಿಕಸಿಂಪಡಿಸಿ, ನಂತರ ಕಿಡ್ನಾಪ್ ಮಾಡಿ ಕಾರಿನಲ್ಲಿ ಅಜ್ಞಾನ ಸ್ಥಳಕ್ಕೆ ಕರೆದೊಯ್ದಿದ್ದರು. ಅರಣ್ಯ ಪ್ರದೇಶದಲ್ಲಿ ನನಗೆ ಮಾದಕ ದ್ರವ್ಯ ನೀಡಿ ಲೈಂಗಿಕ ದೌರ್ಜನ್ಯ ಎಸಗಿದರು ಎಂದು ಸಂತ್ರಸ್ತ ವ್ಯಕ್ತಿ ಆರೋಪಿಸಿದ್ದಾನೆ. …

Read More »