ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಕಾಂಗ್ರೆಸ್ ಈಗ ಯೋಜನೆಗಳ ಮಹಾಪೂರವನ್ನೇ ಹರಿಸಲು ಮುಂದಾಗಿದೆ ಎನ್ನಲಾಗುತ್ತಿದೆ. ಈಗಾಗಲೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತೀ ಮನೆಗೂ 200 ಯೂನಿಟ್ ವಿದ್ಯುತ್ಅನ್ನು ಉಚಿತವಾಗಿ ನೀಡುವ ಬಗ್ಗೆ ಘೋಷಣೆ ಮಾಡಿದೆ. ಇದೀಗ ಪ್ರಿಯಾಂಕಾ ಗಾಂಧಿ ರಾಜ್ಯಕ್ಕೆ ಭೇಟಿ ನೀಡಲಿದ್ದು ಈ ಹಿನ್ನೆಲೆಯಲ್ಲಿ ಭರ್ಜರಿ ಘೋಷಣೆಗಳನ್ನು ಮಾಡಲು ಕಾಂಗ್ರೆಸ್ ಸಿದ್ಧವಾಗಿದೆ. ವಿಶೇಷವಾಗಿ ಮಹಿಳೆಯರಿಗೆ ಹಲವು ಯೋಜನೆ ಘೋಷಣೆ ಮಾಡಲು ಸಿದ್ಧವಾಗಿರುವ ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ರಾಜ್ಯಕ್ಕೆ ಬಂದ …
Read More »ಡಾ.ವಿಜಯ ಸಂಕೇಶ್ವರ ಅವರಿಗೆ ‘ಶ್ರೀ ಸಿದ್ಧಶ್ರೀ ಪ್ರಶಸ್ತಿ’, ವಿಜಯಾನಂದ ಚಿತ್ರಕ್ಕೆ ‘ಅತ್ಯುತ್ತಮ ಬಯೋಪಿಕ್’ ಪ್ರದಾನ
ಬಾಗಲಕೋಟೆ: ಪುಣ್ಯಕ್ಷೇತ್ರ ಸಿದ್ಧನಕೊಳ್ಳದ ಸಿದ್ಧೇಶ್ವರ ಮಠದಿಂದ 2023ನೇ ಸಾಲಿನ ‘ಶ್ರೀ ಸಿದ್ಧಶ್ರೀ ರಾಷ್ಟ್ರೀಯ ಪ್ರಶಸ್ತಿ’ಯನ್ನು ವಿಆರ್ಎಲ್ ಸಮೂಹ ಸಂಸ್ಥೆ ಚೇರ್ಮನ್ ಡಾ. ವಿಜಯ ಸಂಕೇಶ್ವರ ಅವರಿಗೆ ಪ್ರದಾನ ಮಾಡಲಾಯಿತು. ಮೂರು ದಿನಗಳ ಸಿದ್ಧಶ್ರೀ ಉತ್ಸವದಲ್ಲಿ ಎರಡನೇ ದಿನವಾದ ಭಾನುವಾರ ರಾತ್ರಿ ನಡೆದ ಉತ್ಸವ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಡಾ.ವಿಜಯ ಸಂಕೇಶ್ವರ ಅವರಿಗೆ ಪ್ರಶಸ್ತಿ ವಿತರಿಸಲಾಯಿತು. ‘ವಿಜಯಾನಂದ’ ಚಿತ್ರಕ್ಕೆ ಅತ್ಯುತ್ತಮ ಬಯೋಪಿಕ್ ಪ್ರಶಸ್ತಿಯನ್ನೂ ಇದೇ ಸಂದರ್ಭದಲ್ಲಿ ಪ್ರದಾನ ಮಾಡಲಾಯಿತು. ಸಿದ್ಧನಕೊಳ್ಳದ ಧರ್ಮಾಧಿಕಾರಿ ಡಾ. …
Read More »ಸಂಕ್ರಾಂತಿ ಪ್ರಯುಕ್ತ ನಡೆದ ಹೋರಿ ಹಬ್ಬದಲ್ಲಿ ಅವಘಡ: ಇಬ್ಬರು ದುರ್ಮರಣ
ಶಿವಮೊಗ್ಗ: ಮಕರ ಸಂಕ್ರಾಂತಿ ಪ್ರಯುಕ್ತ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಹೋರಿ ಹಬ್ಬದಲ್ಲಿ ದುರಂತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲೂಕಿನ ಕೊನಗವಳ್ಳಿ ಮತ್ತು ಶಿಕಾರಿಪುರ ತಾಲೂಕಿನ ಆವನಟ್ಟಿ ಸಮೀಪದ ಮಾಳ್ಳೂರು ಗ್ರಾಮದಲ್ಲಿ ಸಂಭವಿಸಿದ ಪ್ರತ್ಯೇಕ ಅವಘಡದಲ್ಲಿ ಶಿವಮೊಗ್ಗ ಆಲ್ಕೊಳದ ನಿವಾಸಿ ಲೋಕೇಶ್ (32) ಮತ್ತು ಮಾಳ್ಳೂರು ಗ್ರಾಮದ ರಂಗನಾಥ (24) ಎಂಬುವರು ಮೃತಪಟ್ಟಿದ್ದಾರೆ. ಹೋರಿಗಳ ಕಾಲಡಿ ಸಿಲುಕಿ ಆರು ಮಂದಿ ಗಾಯಗೊಂಡಿದ್ದಾರೆ. ಜ.14ರಂದು ಮಳ್ಳೂರಿನಲ್ಲಿ ನಡೆದಿದ್ದ ಹೋರಿ ಹಬ್ಬದಲ್ಲಿ ರಂಗನಾಥ್ ಗಂಭೀರವಾಗಿ …
Read More »26ನೇ ರಾಷ್ಟ್ರೀಯ ಯುವಜನೋತ್ಸವದ ಬಹುಮಾನ ಪ್ರಕಟ
ಹುಬ್ಬಳ್ಳಿ: 26ನೇ ರಾಷ್ಟ್ರೀಯ ಯುವಜನೋತ್ಸವದ ಬಹುಮಾನ ಪ್ರಕಟವಾಗಿದೆ. ಜಾನಪದ ಹಾಡು ಸ್ಪರ್ಧೆಯಲ್ಲಿ ಕರ್ನಾಟಕ ಮೂರನೇ ಬಹುಮಾನ ಪಡೆದಿದೆ. ಜಾನಪದ ನೃತ್ಯ ಸ್ಪರ್ಧೆ 3ನೇ ಬಹುಮಾನ = ಕೇರಳ- ₹75ಸಾವಿರ 2ನೇ ಬಹುಮಾನ-ಗುಜರಾತ್ ₹1 ಲಕ್ಷ 1ನೇ ಬಹುಮಾನ- ಪಂಜಾಬ್- ₹1.5ಲಕ್ಷ ಜಾನಪದ ಹಾಡು ಸ್ಪರ್ಧೆ 3ನೇ ಬಹುಮಾನ- ಕರ್ನಾಟಕ- ₹75ಸಾವಿರ 2ನೇ ಬಹುಮಾನ – ಅಸ್ಸಾಂ- ₹1ಲಕ್ಷ 1ನೇ ಬಹುಮಾನ- ಉತ್ತರ ಪ್ರದೇಶ- ₹1.5ಲಕ್ಷ
Read More »ಸ್ಯಾಂಟ್ರೋ ರವಿಗೆ ಜನವರಿ 25ರವರೆಗೆ ನ್ಯಾಯಾಂಗ ಬಂಧನ
ಮೈಸೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮಂಜುನಾಥ ಅಲಿಯಾಸ್ ಸ್ಯಾಂಟ್ರೊ ರವಿಗೆ ಜ.25ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನಗರದ ಆರನೇ ಹೆಚ್ಚುವರಿ ಮತ್ತು ಸೆಶೆನ್ಸ್ ನ್ಯಾಯಾಲಯವು ಸೋಮವಾರ ಆದೇಶ ನೀಡಿತು. ಜಾಮೀನು ಮತ್ತು ಇತರ ಆಕ್ಷೇಪಣೆಗಳಿಗೆ ಜ.18ರಂದು ಮನವಿ ಸಲ್ಲಿಸಬಹುದು ಎಂದು ನ್ಯಾಯಾಧೀಶ ಗುರುರಾಜ್ ಸೋಮಕ್ಕಳವರ್ ಆದೇಶಿಸಿದರು. ಅವರ ಮುಂದೆ ಬೆಳಿಗ್ಗೆ 11:10ಕ್ಕೆ ಬಿಗಿ ಭದ್ರತೆಯೊಂದಿಗೆ ಸ್ಯಾಂಟ್ರೊ ರವಿಯನ್ನು ಹಾಜರುಪಡಿಸಲಾಯಿತು. ಸರ್ಕಾರಿ ವಕೀಲರು ವಾದಿಸಿ, ‘ಸ್ಯಾಂಟ್ರೊ ರವಿ …
Read More »ಅಂಬೇಡ್ಕರ್ ಸ್ಪರ್ಧಾ ಪರೀಕ್ಷೆ ಪೋಸ್ಟರ್ ಬಿಡುಗಡೆ ಗೊಳಿಸಿ ಸತೀಶ್ ಜಾರಕಿಹೊಳಿ : ಪ್ರಥಮ ಬಹುಮಾನ 5 ಲಕ್ಷ ರೂ
ಬೆಳಗಾವಿ : ಡಾ. ಬಿ ಆರ್ ಅಂಬೇಡ್ಕರ್ ಅವರ 132ನೇ ಜನ್ಮದಿನಾಚರಣೆಯ ಅಂಗವಾಗಿ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಡಾ.ಬಿ.ಆರ್ ಅಂಬೇಡರ್ ಕುರಿತು ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಯೋಜಿಸಿದೆ. ಸದರಿ ಪರೀಕ್ಷೆಯ ಪೋಸ್ಟರ್ ಅನ್ನು ಬೆಳಗಾವಿ ನಗರದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಶಾಸಕರಾದ ಸತೀಶ್ ಜಾರಕಿಹೊಳಿ ಬಿಡುಗಡೆ ಮಾಡಿ, ಪರೀಕ್ಷೆಗೆ ಶುಭ ಕೋರುತ್ತ “ಎಲ್ಲರೂ ಈ ವಿಶೇಷ ಪರೀಕ್ಷೆಯ ಸದುಪಯೋಗ ಪಡೆದುಕೊಳ್ಳಬೇಕು” ಎಂದರು. ಈ ಬಗ್ಗೆ ಮಾತನಾಡಿದ ಪರಿಷತ್ ರಾಜ್ಯ …
Read More »2 ಎ ಮೀಸಲಾತಿಗಾಗಿ ರಾಜಧಾನಿಯಲ್ಲಿ
ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಲು ಒತ್ತಾಯಿಸಿ, ರಾಜಧಾನಿಯಲ್ಲಿ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಶನಿವಾರದಿಂದ ಮತ್ತೊಂದು ಸುತ್ತಿನ ಹೋರಾಟ ಆರಂಭವಾಗಿದೆ. ಸ್ವಾಮೀಜಿ ನೇತೃತ್ವದಲ್ಲಿ ಶುಕ್ರವಾರ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದ್ದ ಪ್ರತಿಭಟನಕಾರರು ಅಲ್ಲಿಂದ ಶನಿವಾರ ಬೆಂಗಳೂರಿಗೆ ಬಂದರು. ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ‘ಮುಖ್ಯಮಂತ್ರಿ ಕ್ಷೇತ್ರದಲ್ಲಿಯೇ ಪಂಚಮಸಾಲಿ ಸಮುದಾಯಕ್ಕೆ ಆಗಿರುವ ಅನ್ಯಾಯ ಖಂಡಿಸಿದ್ದೇವೆ. ಅಂತಿಮ …
Read More »ವಿವಾದಾತ್ಮಕ ಹೇಳಿಕೆ ನೀಡದಂತೆ ಸೂಚನೆ: ಬಸನಗೌಡ ಪಾಟೀಲ ಯತ್ನಾಳ
ವಿಜಯಪುರ: ‘ಯಾವುದೇ ವಿವಾದಾತ್ಮಕ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡದಂತೆ ವರಿಷ್ಠರು ಭಾನುವಾರ ಬೆಳಿಗ್ಗೆ ಫೋನ್ ಮಾಡಿ ತಿಳಿಸಿದ್ದಾರೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಭಾನುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಪಂಚಮಸಾಲಿ 2ಎ ಮೀಸಲಾತಿ ಹೋರಾಟ ವಿಷಯವಾಗಿ ಚರ್ಚಿಸುವ ಸಂಬಂಧ ದೆಹಲಿಗೆ ಬರುವಂತೆಯೂ ಪಕ್ಷದ ವರಿಷ್ಠರು ನನಗೆ ಆಹ್ವಾನಿಸಿದ್ದಾರೆ. ಮೀಸಲಾತಿ ಕುರಿತಂತೆ ಕೇಂದ್ರದಿಂದ ಸಿಹಿ ಸುದ್ದಿ ಸಿಗುವ ಆಶಾಭಾವ ಇದೆ’ ಎಂದು ಹೇಳಿದರು. ‘ಪಕ್ಷದಲ್ಲಿ ಇರಲು ಸಾಧ್ಯವಿಲ್ಲದಿದ್ದರೆ …
Read More »ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ: ಕೈದಿ ವಿಚಾರಣೆ
ಬೆಳಗಾವಿ: ಭೂಗತಪಾತಕಿ ದಾವೂದ್ ಇಬ್ರಾಹಿಂ ತಂಡದ ಸದಸ್ಯ ಎಂದು ಹೇಳಿಕೊಂಡು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಬೆದರಿಕೆ ಕರೆ ಮಾಡಿದ್ದ ಕೈದಿಯನ್ನು, ಮಹಾರಾಷ್ಟ್ರದ ಪೊಲೀಸರು ಭಾನುವಾರ ಇಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿದರು. ತನಿಖೆಗೆ ಮಹಾರಾಷ್ಟ್ರದ ಎಟಿಎಸ್ ಮತ್ತು ನಾಗ್ಪುರದ ಪೊಲೀಸರ ತಂಡ ಧಾವಿಸಿದ್ದು, ಕೈದಿಯಿಂದ ಮಾಹಿತಿ ಕಲೆ ಹಾಕಿತು. ಆತನಿಂದ ಡೈರಿ ಜಪ್ತಿ ಮಾಡಿದೆ. ಆದರೆ, ಕರೆ ಮಾಡಲು ಬಳಸಿದ್ದ ಮೊಬೈಲ್ ಸಿಕ್ಕಿಲ್ಲ. ಕೊಲೆ ಸೇರಿ …
Read More »2ಎ ಮೀಸಲಾತಿ ಸಿಗುವವರೆಗೂ ಸಿಂಹಾಸನದಲ್ಲಿ ಕೂರುವುದಿಲ್ಲ: ವಚನಾನಂದ ಸ್ವಾಮೀ
ದಾವಣಗೆರೆ: ‘ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಿಗುವವರೆಗೂ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಬೆಳ್ಳಿ ಸಿಂಹಾಸನದಲ್ಲಿ ಕೂರುವುದಿಲ್ಲ’ ಎಂದು ಪೀಠಾಧಿಪತಿ ವಚನಾನಂದ ಸ್ವಾಮೀಜಿ ಪ್ರಕಟಿಸಿದರು. ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಕ್ಷೇತ್ರದಲ್ಲಿ ಭಾನುವಾರ ನಡೆದ ಹರಜಾತ್ರೆ ಹಾಗೂ ‘ಪಂಚಮ ಪೀಠಾರೋಹಣ’ ಸಮಾರಂಭದಲ್ಲಿ ಅವರು ಸಿಂಹಾಸನದಲ್ಲಿ ಕೂರಲು ನಿರಾಕರಿಸಿದರು. ‘ಸಮುದಾಯಕ್ಕೆ ಮೀಸಲಾತಿ ಸಿಗುವಂತೆ ಮಾಡಿ ಜನರ ಹೃದಯ ಸಿಂಹಾಸನದಲ್ಲಿ ಕೂರಲು ಇಚ್ಛೆ ಪಡುತ್ತೇನೆ. ಪಂಚಮ ಪೀಠಾರೋಹಣ ಮಾಡುವುದಿಲ್ಲ’ ಎಂದು …
Read More »