ಮಂಡ್ಯ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಬೇಕು ಎಂದು ಮಳವಳ್ಳಿ ತಾಲ್ಲೂಕು ಚೊಟ್ಟನಹಳ್ಳಿ ಗ್ರಾಮದ ಆದಿನಾಡು ಚಿಕ್ಕಮ್ಮ ತಾಯಿ ಹೇಳಿದ್ದಾರೆ ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಿದ್ದರಾಮಯ್ಯ ಅವರ ಪುತ್ರ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಈಚೆಗೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಆದಿನಾಡು ಚಿಕ್ಕಮ್ಮ ತಾಯಿ ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರ ಸ್ವಾಮಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.ದೇವರ …
Read More »ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ: ಒಂದು ಮಗುವಿನ ರಕ್ಷಣೆ
ಬಳ್ಳಾರಿ: ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿಯೂ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಸಿಂಧವಾಳ ಗ್ರಾಮದ ಬಳಿ ಗುರುವಾರ ನಡೆದಿದೆ. ಘಟನೆಯಲ್ಲಿ ಒಬ್ಬ ಮಗಳನ್ನು ರಕ್ಷಿಸಲಾಗಿದೆ. ಲಕ್ಷ್ಮಿ (35), ಶಾಂತಿ (3), ವೆನ್ನೆಲ (4) ಕಾಲುವೆಗೆ ಹಾರಿದ ದುರ್ದೈವಿ ತಾಯಿ, ಮಕ್ಕಳು. ಘಟನೆಯಲ್ಲಿ ಒಬ್ಬ ಮಗಳು ವೆನ್ನೆಲಳನ್ನು ಸ್ಥಳೀಯರು ದಡ ಸೇರಿಸಿ ರಕ್ಷಿಸಿದ್ದಾರೆ. ಮೂಲತಃ ಬಳ್ಳಾರಿ ನಗರದ ಗುಗ್ಗರಹಟ್ಟಿ ನಿವಾಸಿಯಾದ ಲಕ್ಷ್ಮಿಳನ್ನು ನೆರೆಯ ಆಂಧ್ರದ ಅಲೂರು ಗ್ರಾಮದ ವೀರಭದ್ರ ಎನ್ನುವವರೊಂದಿಗೆ …
Read More »ಉಚಿತ ವಿದ್ಯುತ್ ಕಾಂಗ್ರೆಸ್ ನ ಸುಳ್ಳು ಡಂಗುರ: ಸಚಿವ ಸುನಿಲ್ ಕುಮಾರ್
ಬೆಂಗಳೂರು: ಅಧಿಕಾರದಲ್ಲಿದ್ದಾಗ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸಂಪರ್ಕ ನೀಡದೆ ಸತಾಯಿಸಿದವರು ಈಗ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುತ್ತೇವೆ ಎಂದು ಡಂಗುರ ಸಾರುತ್ತಿರುವುದು ಈ ಶತಮಾನದ ಅತಿದೊಡ್ಡ ಸುಳ್ಳಾಗಬಹುದು ಎಂದು ಇಂಧನ ಹಾಗೂ ಕನ್ನಡ ಸಂಸ್ಕ್ರತಿ ಸಚಿವ ವಿ ಸುನಿಲ್ ಕುಮಾರ್ ವ್ಯಂಗ್ಯವಾಡಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲಾ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ …
Read More »ಟ್ರಕ್ ಗೆ ಢಿಕ್ಕಿಯಾದ ಸಾಯಿಬಾಬಾ ಭಕ್ತರಿದ್ದ ಬಸ್: 10 ಮಂದಿ ಮೃತ್ಯು, ಹಲವರಿಗೆ ಗಾಯ
ಮುಂಬೈ: ಸಾಯಿಬಾಬಾ ಭಕ್ತರು ಪ್ರಯಾಣಿಸುತ್ತಿದ್ದ ಬಸ್ಸೊಂದು ನಾಸಿಕ್-ಶಿರಡಿ ಹೆದ್ದಾರಿಯ ಪಥರೆ ಬಳಿ ಟ್ರಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಸುಮಾರು 10 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಭೀಕರ ಅಪಘಾತದಲ್ಲಿ ಜೀವಹಾನಿಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸುವಂತೆ ಸಿಎಂ ಶಿಂಧೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶ …
Read More »ಇದೇ 29ಕ್ಕೆ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ
ಬೆಂಗಳೂರು: ಚಲನಚಿತ್ರ ನಟ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಇದೇ 29 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ. ಮೈಸೂರಿನ ಎಚ್.ಡಿ.ಕೋಟೆ ರಸ್ತೆಯಲ್ಲಿರುವ ಅಲ್ಲಾಳು ಗ್ರಾಮದಲ್ಲಿ ಈ ಸ್ಮಾರಕ ನಿರ್ಮಾಣವಾಗಿದೆ. 2020 ರ ಸೆಪ್ಟೆಂಬರ್‌ನಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿತ್ತು. ಚಾಮುಂಡಿಪುರಂನ ವಾಸಿಯಾಗಿದ್ದ ವಿಷ್ಣುವರ್ಧನ್ ಅವರು ತಮ್ಮ ಶಾಲಾ ಶಿಕ್ಷಣವನ್ನು ಮೈಸೂರಿನಲ್ಲೇ ಪೂರ್ಣಗೊಳಿಸಿದ್ದರು. ಮೈಸೂರಿನ ಜತೆ ಉತ್ತಮ ಒಡನಾಟ ಹೊಂದಿದ್ದ ಅವರು ತಮ್ಮ ಹೆಚ್ಚಿನ ಚಲನಚಿತ್ರಗಳ …
Read More »ಹಿಂದೂ ಮಹಿಳೆಯರ ರಕ್ಷಣೆಗಾಗಿ ಮನೆಯಲ್ಲಿ ತಲ್ವಾರ್ ಇಟ್ಟುಕೊಳ್ಳಿ: ಮುತಾಲಿಕ್
ಕಲಬುರಗಿ: ‘ಹಿಂದೂ ಮಹಿಳೆಯರ ರಕ್ಷಣೆಗಾಗಿ ನಿಮ್ಮ ಮನೆಗಳಲ್ಲಿ ಎಲ್ಲರಿಗೂ ಕಾಣಿಸುವ ಸ್ಥಳದಲ್ಲಿ ತಲ್ವಾರ್ ಇಟ್ಟುಕೊಳ್ಳಿ’ ಎಂದು ಶ್ರೀರಾಮ ಸೇನೆ ಸಂಘಟನೆಯ ರಾಷ್ಟ್ರೀಯ ಘಟಕದ ಅಧ್ಯಕ್ಷ ಪ್ರಮೋದ ಮುತಾಲಿಕ್ ಸಲಹೆ ನೀಡಿದರು. ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ಗುರುವಾರ ಶ್ರೀರಾಮಸೇನೆ ಸಂಘಟನೆ ವತಿಯಿಂದ ನಡೆದ ಸಂತರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಒಂದು ತಲ್ವಾರ್ ಇಟ್ಟುಕೊಂಡರೆ ಪೊಲೀಸರು ಎಫ್‌ಐಆರ್ ಹಾಕಲ್ಲ. ತಲ್ವಾರ್ ಅನ್ನು ಸಹೋದರಿಯರ ರಕ್ಷಣೆಗೆ ಇಡಬೇಕೆ ಹೊರತು …
Read More »ಇದೇ ವರ್ಷ ಮಂಡ್ಯ ಸಾಹಿತ್ಯ ಸಮ್ಮೇಳನ: ಮುಂದಿನ ತಿಂಗಳು ಸಭೆ
ಬೆಂಗಳೂರು: ಮಂಡ್ಯದಲ್ಲಿ ಇದೇ ವರ್ಷ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನಿರ್ಧರಿಸಿದೆ. ಇದರಿಂದಾಗಿ ಒಂದೇ ವರ್ಷ ಎರಡು ಸಮ್ಮೇಳನ ನಡೆಸಿದಂತಾಗಲಿದೆ. ಹಾವೇರಿಯಲ್ಲಿ ನಡೆದ ಪರಿಷತ್ತಿನ ಕಾರ್ಯಕಾರಿಣಿ ಸಭೆಯಲ್ಲಿ ಮುಂದಿನ ಸಮ್ಮೇಳನದ ಆತಿಥ್ಯವನ್ನು ಮಂಡ್ಯಕ್ಕೆ ನೀಡಲಾಗಿದೆ. ಕಸಾಪ 1915ರಿಂದ ನಿಯಮಿತವಾಗಿ ಸಾಹಿತ್ಯ ಸಮ್ಮೇಳನವನ್ನು ನಡೆಸಿಕೊಂಡು ಬರುತ್ತಿದೆ. ವರ್ಷಕ್ಕೊಮ್ಮೆ ನಡೆಯಬೇಕಿದ್ದ ಈ ಸಮ್ಮೇಳನ, ಕಾರಣಾಂತರಗಳಿಂದ ಈ ಹಿಂದೆಯೂ ವರ್ಷಕ್ಕೆ ಎರಡು ಬಾರಿ ನಡೆದಿದೆ. 2020ರ …
Read More »ಸಂಗೊಳ್ಳಿ ರಾಯಣ್ಣನ ಕೀರ್ತಿ ಅಜರಾಮರ: ಸಂಸದೆ ಮಂಗಲಾ ಅಂಗಡಿ
ಬೈಲಹೊಂಗಲ: ನಾಡಿನ ಬಗ್ಗೆ ಅಭಿಮಾನ ಇಟ್ಟುಕೊಂಡು ದೇಶಪ್ರೇಮವನ್ನು ಮೆರೆದ ಶೂರ ಸಂಗೊಳ್ಳಿ ರಾಯಣ್ಣನ ಕೀರ್ತಿ ಅಜರಾಮರ ಎಂದು ಸಂಸದೆ ಮಂಗಲಾ ಅಂಗಡಿ ಹೇಳಿದರು. ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಉತ್ಸವ 2023 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂಗೊಳ್ಳಿ ರಾಯಣ್ಣನ ಸ್ವಾಭಿಮಾನವನ್ನು ಬೆಳೆಸಿಕೊಳ್ಳಬೇಕು.ಇಂದಿನ ಯುವಕರು ದುಶ್ಚಟಗಳನ್ನು ತೊರೆದು ಸಂಗೊಳ್ಳಿ ರಾಯಣ್ಣನ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು. ಶಾಸಕ ಮಹಾಂತೇಶ ಕೌಜಲಗಿ,ಎಂಎಲ್ ಸಿ ಎಂ.ನಾಗರಾಜ ಯಾದವ,ಶಾಸಕ ಮಹಾಂತೇಶ ದೊಡ್ಡಗೌಡರ, ಕಾಡಾ ಅಧ್ಯಕ್ಷ …
Read More »ಕೆಪಿಟಿಸಿಎಲ್ ಅಕ್ರಮ ಪರೀಕ್ಷೆ: ಬಂಧಿತರ ಸಂಖ್ಯೆ ಅರ್ಧ ಶತಕ
ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಲಿಖಿತ ಪರೀಕ್ಷೆಯಲ್ಲಿ ಇಲೆಕ್ಟ್ರಾನಿಕ್ ಡಿವೈಸ್ ಮತ್ತು ಮೈಕ್ರೋಚಿಪ್ ತೆಗೆದುಕೊಂಡು ಪರೀಕ್ಷೆ ಬರೆದಿದ್ದ ಮತ್ತೊಬ್ಬ ಅಭ್ಯರ್ಥಿಯನ್ನು ಗುರುವಾರ ಬಂಧಿಸುವ ಮೂಲಕ ಬಂಧಿತರ ಸಂಖ್ಯೆ ಅರ್ಧ ಶತಕವಾಗಿದೆ. ಕಲ್ಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ದರ್ಗಾಶಿರೂರ ಗ್ರಾಮದ ಶಿವರಾಜ್ ಲಕ್ಷ್ಮೀಪುತ್ರ ಪೊಲೀಸ್ ಪಾಟೀಲ್ (28) ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಈವರೆಗೆ ಒಟ್ಟು 50 ಜನರನ್ನು ಬಂಧಿಸಿದಂತಾಗಿದೆ. 7 ಆಗಸ್ಟ್ 2022ರಂದು ನಡೆದಿದ್ದ ಪರೀಕ್ಷೆ ಬರೆದಿದ್ದರು. ಪರೀಕ್ಷೆ ವೇಳೆ …
Read More »ಪಂಚಮಸಾಲಿ, ಒಕ್ಕಲಿಗ ಮೀಸಲಾತಿ ಓಟಕ್ಕೆ ಹೈಕೋರ್ಟ್‌ನಿಂದ ತಾತ್ಕಾಲಿಕ ತಡೆ
ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು 2-ಎ ಪ್ರವರ್ಗಕ್ಕೆ ಸೇರಿಸಿ ಮೀಸಲಾತಿ ನೀಡುವ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಗುರುವಾರ ಹೈಕೋರ್ಟ್ ಆದೇಶಿಸಿದೆ. ಪಂಚಮಸಾಲಿ ಸಮುದಾಯವನ್ನು 2-ಎ ಪ್ರವರ್ಗಕ್ಕೆ ಸೇರಿಸಬಾರದು ಎಂದು ಕೋರಿ ಬೆಂಗಳೂರು ನಿವಾಸಿ ಡಿ.ಜಿ. ರಾಘವೇಂದ್ರ ಎಂಬವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಲೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ಗುರುವಾರ ವಿಚಾರಣೆಗೆ ಪಟ್ಟಿಯಾಗಿತ್ತು. ಆದರೆ ದಿನದ ಕಲಾಪದ ಸಮಯ ಮುಗಿದದ್ದರಿಂದ ಅರ್ಜಿ ವಿಚಾರಣೆಗೆ ಬರಲಿಲ್ಲ. ಮುಖ್ಯ ನ್ಯಾಯಮೂರ್ತಿಯವರು …
Read More »