Breaking News

ಪ್ರಜಾಧ್ವನಿ’ ಕಾಂಗ್ರೆಸ್ ಬಸ್ ಯಾತ್ರೆಗೆ ಚಾಲನೆ; ರಾಜ್ಯದಲ್ಲಿ ಬದಲಾವಣೆಗೆ ನಾಂದಿ ಹಾಡಿದ್ದೇವೆ ಎಂದ ಡಿ.ಕೆ.ಶಿವಕುಮಾರ್

ಬೆಳಗಾವಿ: ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ವಿಪಕ್ಷ ಕಾಂಗ್ರೆಸ್ ಬಸ್ ಯಾತ್ರೆ ಆರಭವಾಗಿದೆ. ಗಡಿ ಜಿಲ್ಲೆ ಬೆಳಗಾವಿಯ ವೀರಸೌಧದಿಂದ ಕಾಂಗ್ರೆಸ್ ಪ್ರಜಾಧ್ವನಿ ಬಸ್ ಯಾತ್ರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಚಾಲನೆ ನಿಡಿದರು.   ಬೆಳಗಾವಿಯ ವೀರಸೌಧದ ಬಳಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಪ್ರಜಾಧ್ವನಿ ಬಸ್ ಯಾತ್ರೆಗೆ ಚಾಲನೆ ನೀಡಲಯಿತು. ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ …

Read More »

ನಾನು ಬಿಜೆಪಿ ಕಾರ್ಯಕರ್ತ, ವರ್ಗಾವಣೆ ದಂಧೆ ನಿಜ ಎಂದು ಒಪ್ಪಿಕೊಂಡಿದ್ದ ಸ್ಯಾಂಟ್ರೋ ರವಿ

ಮೈಸೂರು: ಕುಖ್ಯಾತ ಕ್ರಿಮಿನಲ್‌, ರಾಜಕಾರಣಿಗಳು, ಅಧಿಕಾರಿಗಳ ಅಪ್ತ ಸಖನೆಂದು ಗುರುತಿಸಿಕೊಂಡಿರುವ ಮೈಸೂರಿನ ಕೆ.ಎಸ್‌. ಮಂಜುನಾಥ್‌ ಅಲಿಯಾಸ್‌ ಸ್ಯಾಂಟ್ರೋ ರವಿ (Santro Ravi Case) ತಾನೇ ಸ್ವತಃ ಈ ವಿಚಾರಗಳನ್ನು ಒಪ್ಪಿಕೊಂಡಿದ್ದಾನೆ. ತಾನೊಬ್ಬ ಬಿಜೆಪಿ ಕಾರ್ಯಕರ್ತ, ಪೊಲೀಸ್‌ ಅಧಿಕಾರಿಗಳು ಮತ್ತು ಸರ್ಕಾರಿ ನೌಕರರ ವರ್ಗಾವಣೆ ಮಾಡಿಸಿದ್ದು ನಿಜ. ವೇಶ್ಯಾವಾಟಿಕೆ ದಂಧೆಯ ಆರೋಪವಿರುವುದು ನಿಜ ಎಂದೆಲ್ಲ ಲಿಖಿತವಾಗಿ ಒಪ್ಪಿಕೊಂಡಿದ್ದಾನೆ. ೨೦೨೨ರ ಜನವರಿ ೨೨ರಂದು ಪ್ರಕರಣವೊಂದು ದಾಖಲಾದಾಗ ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ಸ್ವತಃ …

Read More »

ಫೆ.17 ರಂದು ರಾಜ್ಯ ಬಜೆಟ್ ಮಂಡನೆ : ಜನಪ್ರಿಯ ಯೋಜನೆಗಳ ಘೋಷಣೆ ಸಾಧ್ಯತೆ

ಹುಬ್ಬಳ್ಳಿ : ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಫೆಬ್ರವರಿ 17 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಮುಂದಿನ ತಿಂಗಳ 3 ನೇ ವಾರ ಬಜೆಟ್ ಮಂಡಿಸಲಾಗುವುದು. ಈಗಾಗಲೇ ಬಜೆಟ್ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ. ಏಪ್ರಿಲ್,ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಬಾರಿ …

Read More »

ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಯಾರು? ಇಲ್ಲಿದೆ ಕುತೂಹಲಕರ ಮಾಹಿತಿ

ಬೆಂಗಳೂರು, ಜನವರಿ 11: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇವೆ. ಈಗಾಗಲೇ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸುವಲ್ಲಿ ನಿರತವಾಗಿವೆ. ಜೆಡಿಎಸ್‌ 93 ಅಭ್ಯರ್ಥಿಗಳನ್ನು ಘೋಷಿಸಿದೆ. ಸಂಕ್ರಾಂತಿ ಸಮಯದಲ್ಲಿ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯನ್ನು ಹೊರತರಲು ಸಿದ್ದತೆ ಮಾಡಿಕೊಂಡಿದೆ. ಆಡಳಿತಾರೂಢ ಬಿಜೆಪಿ ಪಕ್ಷ ಫೆಬ್ರವರಿ ಅಂತ್ಯದಲ್ಲಿ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಬಹುದು. ಆ ಹೊತ್ತಿಗೆ ಕೇಂದ್ರ ಮತ್ತು ರಾಜ್ಯ ಬಜೆಟ್‌ಗಳು ಹೊರಬಂದಿರುತ್ತವೆ. ಈ ಹಿನ್ನೆಲೆಯಲ್ಲಿ ಬಿಜೆಪಿಯ …

Read More »

ಫೆ. 17ರಂದು ರಾಜ್ಯ ಬಜೆಟ್‌: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಫೆ. 17ರಂದು ರಾಜ್ಯದ 2023-24ನೇ ಸಾಲಿನ ಆಯವ್ಯಯ ಮಂಡನೆ ಮಾಡುತ್ತೇನೆ. ಉತ್ತರ ಕರ್ನಾಟಕಕ್ಕೆ ಕೊಡುಗೆ ಏನೆಂಬುದನ್ನು ಕಾಯ್ದು ನೋಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರೊಂದಿಗೆ ಮಾತನಾಡಿ, ರಾಜ್ಯ ಆಯವ್ಯಯ ಮಂಡನೆಗೆ ಸಿದ್ಧತೆ ನಡೆದಿದೆ.   ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆಯನ್ನು ಬಜೆಟ್‌ನಲ್ಲೇ ಘೋಷಿಸಲಾಗುವುದು. ಜ.16ರಂದು ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುತ್ತಿದ್ದೇನೆ. ಈ ಸಭೆಯಲ್ಲಿ ಸಂಪುಟ ವಿಸ್ತರಣೆ ಕುರಿತು ಚರ್ಚಿಸುವುದಿಲ್ಲ ಎಂದರು.

Read More »

ಗ್ರಾಮಗಳಿಗೆ ಶ್ಮಶಾನ ಜಾಗ: ವರದಿ ಸಲ್ಲಿಸಲು ಸಮಯ ಕೇಳಿದ ಸರ್ಕಾರ

ಬೆಂಗಳೂರು: ರಾಜ್ಯದ ಎಲ್ಲಾ ಗ್ರಾಮಗಳಲ್ಲಿ ಶವ ಸಂಸ್ಕಾರಕ್ಕೆ ಶ್ಮಶಾನ ಜಾಗ ಒದಗಿಸಿರುವ ಬಗ್ಗೆ ಸಮಗ್ರ ವರದಿ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡುವಂತೆ ಸರ್ಕಾರ ಹೈಕೋರ್ಟ್‌ಗೆ ಮನವಿ ಮಾಡಿದೆ.   ರಾಜ್ಯದ ಎಲ್ಲಾ ಗ್ರಾಮಗಳು ಮತ್ತು ಪಟ್ಟಣ ಪ್ರದೇಶಗಳಿಗೆ ಶವಸಂಸ್ಕಾರಕ್ಕೆ ಶ್ಮಶಾನ ಜಾಗ ಒದಗಿಸುವಂತೆ 2019ರ ಆಗಸ್ಟ್‌ 20ರಂದು ಹೈಕೋರ್ಟ್‌ ನೀಡಿದ್ದ ಆದೇಶ ಸರ್ಕಾರ ಪಾಲಿಸಿಲ್ಲ ಎಂದು ದೂರಿ ಬೆಂಗಳೂರು ನಿವಾಸಿ ಮಹಮ್ಮದ್‌ ಇಕ್ಬಾಲ್‌ ಎಂಬುವರು ಸಲ್ಲಿಸಿರುವ ಸಿವಿಲ್‌ ನ್ಯಾಯಾಂಗ ನಿಂದನೆ …

Read More »

ಜನಾರ್ದನ ರೆಡ್ಡಿ ಆಸ್ತಿ ಜಪ್ತಿ: ಸರ್ಕಾರದ ನಿಲುವು ಕೇಳಿದ ಹೈಕೋರ್ಟ್‌

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತವರ ಕುಟುಂಬಕ್ಕೆ ಸೇರಿದ ಹೆಚ್ಚುವರಿ ಆಸ್ತಿಗಳನ್ನು ಜಪ್ತಿ ಮಾಡುವ ಸಂಬಂಧ ಸಿಬಿಐ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸಲು ಸರ್ಕಾರ ಕಾಲಾವಕಾಶ ಕೋರಿದೆ.   ಸಿಬಿಐ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ವಿಚಾರಣೆ ವೇಳೆ ಆಸ್ತಿ ಜಪ್ತಿಗೆ ಅನುಮತಿ ಕೋರಿ ಸಿಬಿಐ ಅರ್ಜಿ ಸಲ್ಲಿಸಿ 5 ತಿಂಗಳಾದರೂ ಮನವಿ ಪರಿಗಣಿಸದಿರಲು …

Read More »

ಸ್ಯಾಂಟ್ರೋ ರವಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಾಂಗ್ರೆಸ್ ನಿಂದ ಸಿಎಂ ಬೊಮ್ಮಾಯಿ ಪುತ್ರನ ಜೊತೆಗಿನ ವಾಟ್ಸಾಪ್ ಚಾಟ್ ರಿಲೀಸ್

ಬೆಂಗಳೂರು: ಸ್ಯಾಂಟ್ರೋ ರವಿಯ ಸ್ವೀಟ್ ( Santro Ravi ) ಬ್ರದರ್ ಆಗಿರುವ ಸಿಎಂ ಪುತ್ರ ಮತ್ತು ರವಿಯ ವಾಟ್ಸಾಪ್ ಮೆಸೇಜ್‌ಗಳು ಹಲವು ಪ್ರಶ್ನೆಗಳನ್ನ ಎತ್ತುತ್ತವೆ. ಎಲ್ಲಾ ಬ್ರೋಕರ್‌ಗಳನ್ನು ಮ್ಯಾನೇಜ್ ಮಾಡುವ ಜವಾಬ್ದಾರಿ ಸಿಎಂ ಪುತ್ರನದ್ದೇ? ಸಿಎಂ ಪಾಲಿನ ಕಮಿಷನ್ ವ್ಯವಹಾರ ನೋಡಿಕೊಳ್ಳುವುದು ಪುತ್ರನೇ? ಸ್ವತಃ ಸಿಎಂ ರವಿಯ ರಕ್ಷಣೆಗೆ ನಿಂತಿದ್ದಾರೆಯೇ ಬಿಜೆಪಿ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ಟ್ವಿಟ್ ನಲ್ಲಿ ( Twitter ) …

Read More »

ವಿಧಾನಸಭೆ ಚುನಾವಣೆಯಲ್ಲಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ.? ಮಧು ಬಂಗಾರಪ್ಪ ಹೇಳಿಕೆ

ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನಾಲಾಯಕ್ ವ್ಯಕ್ತಿ. ಅಭಿವೃದ್ಧಿ ವಿಚಾರ ಬಿಟ್ಟು ಲವ್ ಜಿಹಾದ್ ಬಗ್ಗೆ ಮಾತನಾಡಿ ಎಂದು ಹೇಳುತ್ತಾರೆ ಎಂದು ಕೆಪಿಸಿಸಿ ಒಬಿಸಿ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಟೀಕಿಸಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಕೇವಲ ಹಿಂದುತ್ವದಿಂದ ಜನರ ಹೊಟ್ಟೆ ತುಂಬುವುದಿಲ್ಲ. ಕಾಂಗ್ರೆಸ್ ಪಕ್ಷ ಯಾವತ್ತೂ ಭಾವನಾತ್ಮಕವಾಗಿ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ. ನಟ ಶಿವರಾಜ್ ಕುಮಾರ್ ಅವರಿಗೆ ರಾಜಕೀಯ ಕ್ಷೇತ್ರದಲ್ಲಿ ಒಲವಿಲ್ಲ. ಆದರೆ, ಗೀತಕ್ಕ ಚುನಾವಣೆಯಲ್ಲಿ ನನ್ನ …

Read More »

ಮಗಳನ್ನು ಕೊಂದು ರಾತ್ರೋರಾತ್ರಿ ಸುಟ್ಟು ಹಾಕಿದ ತಂದೆ-ತಾಯಿ

ತಂದೆ ಮತ್ತು ಮಲ ತಾಯಿ ಸೇರಿಕೊಂಡು 17 ವರ್ಷದ ಮಗಳನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಒಡಿಶಾದ ಪುರಿ ಜಿಲ್ಲೆಯ ಗೋಪ್​ ಪ್ರದೇಶದಲ್ಲಿ ನಿನ್ನೆ (ಜ.9) ರಾತ್ರಿ ನಡೆದಿದೆ. ಸಾಕ್ಷಿಯನ್ನು ನಾಶ ಮಾಡಲು ಮಗಳ ಶವವನ್ನು ಸುಟ್ಟು ಹಾಕಿರುವುದಾಗಿ ವರದಿಯಾಗಿದೆ.   ಮೃತಳನ್ನು ಸೊನಾಲಿ ಮೊಹರಾಣ ಎಂದು ಗುರುತಿಸಲಾಗಿದೆ. ಹಿರಿಯ ಸಹೋದರಿ ರಂಜಿತಾ ಮೊಹರಾಣ ನೀಡಿದ ದೂರಿನ ಆಧಾರದ ಮೇಲೆ ಗೋಪ್​ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ದುರ್ಗಾಚರಣ …

Read More »