Breaking News

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ* *ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಂದ ಕ್ಷೇತ್ರ ಭೇಟಿ; ಸಮಿಕ್ಷೆ ಕಾರ್ಯ ಪರಿಶೀಲನೆ.*

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ* *ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಂದ ಕ್ಷೇತ್ರ ಭೇಟಿ; ಸಮಿಕ್ಷೆ ಕಾರ್ಯ ಪರಿಶೀಲನೆ.* *ಧಾರವಾಡ (ಕರ್ನಾಟಕ ವಾರ್ತೆ) ಮೇ.8:* ನ್ಯಾಯಮೂರ್ತಿ ಡಾ.ಎಚ್.ಎನ್. ನಾಗಮೋಹನ್‍ದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿರುವ ಜನರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ, ಔದ್ಯೋಗಿಕ ಪ್ರಾತಿನಿಧ್ಯದ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಮಾಡುವುದು. ಈ ಸಮೀಕ್ಷೆಯ ಉದ್ದೇಶವಾಗಿದೆ. ಸಮೀಕ್ಷೆದಾರರು ಜಿಲ್ಲೆಯ ಯಾವ ಪರಿಶಿಷ್ಟ ಜಾತಿಯ ಕುಟುಂಬಗಳು …

Read More »

ಬೆಳಗಾವಿಯ ಶ್ರೀ ಕನಕದಾಸ ವೃತ್ತದಲ್ಲಿ ನೆಲಕಚ್ಚಿದ ಸಿಗ್ನಲ್ ಲೈಟ್ಸ್…ಸಂಚಾರ ದಟ್ಟಣೆ… ಸಂಚಾರಿ ಪೊಲೀಸರಿಲ್ಲದೇ ಪೇಚಿಗೆ ಸಿಲುಕುತ್ತಿರುವ ವಾಹನಧಾರಕ…

ಬೆಳಗಾವಿಯ ಶ್ರೀ ಕನಕದಾಸ ವೃತ್ತದಲ್ಲಿ ನೆಲಕಚ್ಚಿದ ಸಿಗ್ನಲ್ ಲೈಟ್ಸ್…ಸಂಚಾರ ದಟ್ಟಣೆ… ಸಂಚಾರಿ ಪೊಲೀಸರಿಲ್ಲದೇ ಪೇಚಿಗೆ ಸಿಲುಕುತ್ತಿರುವ ವಾಹನಧಾರಕ… ಇದು ಬೆಳಗಾವಿ ನಗರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ. ಆದರೇ ಇಲ್ಲಿನ ಸಿಗ್ನಲ್’ಗಳ ಸ್ಥಿತಿ ದಯನೀಯವಾಗಿದ್ದು, ಮುಂದೆ ಸಾಗುವ ಜನರು ಸಂಚಾರಿ ನಿಯಮವಿಲ್ಲದೇ ವಿಚಲಿತರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವಾರು ದಿನಗಳಿಂದ ಕೆಟ್ಟು ನಿಂತಿರುವ ಸಿಗ್ನಲ್ ಲೈಟ್ಸ್’ಗಳು… ಮುರಿದು ನೆಲಕ್ಕೆ ವಾಲಿದರೂ ಹೇಳುವವರಿಲ್ಲ. ಕೇಳುವವರಿಲ್ಲ. ಯಾವಾಗಲೂ ಟ್ರಾಫಿಕ್ ಜಾಮ್. ಸಂಚಾರಿ ನಿಯಮವಂತೂ ಸುತಾರಾಂ …

Read More »

ಭಾರತೀಯ ಕುಟುಂಬ ಕಲ್ಯಾಣ ಸಂಸ್ಥೆಯಿಂದ ಸರ್ಕಾರಿ ಬಿ.ಇಡಿ ಕಾಲೇಜಿನಲ್ಲಿ ವರ್ಡ ರೆಡ್ ಕ್ರಾಸ್ ಡೆ ಆಚರಣೆ

ಬೆಳಗಾವಿ : ಭಾರತೀಯ ಕುಟುಂಬ ಕಲ್ಯಾಣ ಸಂಸ್ಥೆಯಿಂದ ಸರ್ಕಾರಿ ಬಿ.ಇಡಿ ಕಾಲೇಜಿನಲ್ಲಿ ವರ್ಡ ರೆಡ್ ಕ್ರಾಸ್ ಡೆ ಆಚರಣೆ ಬೆಳಗಾವಿಯ ಭಾರತೀಯ ಕುಟುಂಬ ಕಲ್ಯಾಣ ಸಂಸ್ಥೆ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಹಾಗೂ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ವಿಶ್ವ ರೆಡ್ ಕ್ರಾಸ್ ದಿನ ಆಚರಿಸಲಾಯಿತು ಸರ್ಕಾರಿ ಬಿ.ಇಡಿ ಕಾಲೇಜ್ ಪ್ರಾಚಾರ್ಯ ಎನ್. ಶ್ರೀಕಂಠ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಭಾರತೀಯ ಕುಟುಂಬ ಕಲ್ಯಾಣ ಸಂಸ್ಥೆಯ ಅಧ್ಯಕ್ಷೆ …

Read More »

ಬಾಗಲಕೋಟೆ: ಲಾರಿ – ಬೈಕ್ ನಡುವೆ ಅಪಘಾತ ; ಮೂವರ ದಾರುಣ ಸಾವು

ಬಾಗಲಕೋಟೆ : ನಗರದ ಹೊರವಲಯದ ಸೀಮೀಕೇರಿ ಬೈಪಾಸ್ ಬಳಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದರಿಂದಾಗಿ ಮೂವರು ಮೃತಪಟ್ಟಿದ್ದಾರೆ. ಸಿದ್ದು (16), ಸಂತೋಷ (16) ಮತ್ತು ಕಾಮಣ್ಣ (16) ಮೃತ ದುರ್ದೈವಿಗಳು. ಮೃತರು ಪ್ರೌಢಶಾಲಾ ಹಂತದ ವಿದ್ಯಾರ್ಥಿಗಳು. ಮೂವರು ಬೈಕ್ ಮೇಲೆ ತೆರಳುವಾಗ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಮೃತರೆಲ್ಲರೂ ಮರನಾಳ ಗ್ರಾಮದವರು ಎಂಬುದಾಗಿ ತಿಳಿದು ಬಂದಿದೆ.ಅಪಘಾತದ ರಭಸಕ್ಕೆ ಮೃತದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ …

Read More »

ವೈದ್ಯ ವಿದ್ಯಾರ್ಥಿನಿ ಫೋಟೊ ಇಟ್ಟುಕೊಂಡು ಬ್ಲ್ಯಾಕ್​ಮೇಲ್​: ಹುಬ್ಬಳ್ಳಿ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲು

ಹುಬ್ಬಳ್ಳಿ: ನಗರದ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು ಆನ್​ಲೈನ್‌ನಲ್ಲಿ ಪರಿಚಿತನಾದ ಯುವಕನೊಂದಿಗೆ ವಿವಸ್ತ್ರಳಾಗಿ ವಾಟ್ಸ್‌ಆ್ಯಪ್ ಚಾಟ್, ವಿಡಿಯೋ ಕಾಲ್ ಮಾಡಿದ್ದನ್ನೇ ದುರುಪಯೋಗ ಪಡಿಸಿಕೊಂಡ ವ್ಯಕ್ತಿ, ನಕಲಿ ಖಾತೆ ಸೃಷ್ಟಿಸಿ ಮಾನ ಹರಾಜು ಹಾಕಿರುವ ಬಗ್ಗೆ ಹುಬ್ಬಳ್ಳಿ ಸಿಇಎನ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನಲ್ಲಿ ಏನಿದೆ?: ಇಲ್ಲಿನ ಮೆಡಿಕಲ್​​​​ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ಉತ್ತರಪ್ರದೇಶದ ರಜತ್​ ಶರ್ಮಾ ಎಂಬಾತ ಆನ್‌ಲೈನ್‌ನಲ್ಲಿ ಪರಿಚಯವಾಗಿದ್ದಾನೆ. ನಂತರ ವಿಡಿಯೋ ಕಾಲ್, ವಾಟ್ಸ್‌ಆ್ಯಪ್ ಚಾಟ್, ಟೆಲಿಗ್ರಾಮ್ ವಿಡಿಯೋ, ಸ್ನಾಪ್‌ಚಾಟ್, ಇನ್‌ಸ್ಟಾಗ್ರಾಂ, …

Read More »

ಹುಬ್ಬಳ್ಳಿಯಲ್ಲಿ 1,700 ರೌಡಿ ಶೀಟರ್​ಗಳ ಪರೇಡ್​

ಹುಬ್ಬಳ್ಳಿ : ಸಾರ್ವಜನಿಕ ಶಾಂತಿ, ನೆಮ್ಮದಿ ಭಂಗ ಆಗದಂತೆ ಸುರಕ್ಷಿತ ವಾತಾವರಣ ನಿರ್ಮಾಣ ಮಾಡಲಾಗುತ್ತೆ. ವೈಲೆಂಟ್ ಆರೋಪಿಗಳ ಮೇಲೆ ರೌಡಿ ಶೀಟರ್ ಹಾಕಲಾಗುವುದು. ಗಡಿಪಾರು, ಗುಂಡಾ ಆಕ್ಟ್ ಮಾಡುವ ಕೆಲಸ ಮಾಡ್ತಾ ಬಂದಿದ್ದೇವೆ. ರಾಜ್ಯದಲ್ಲಿ ರೌಡಿ ಶೀಟರ್​ಗಳು ಸಾರ್ವಜನಿಕರ ಮೇಲೆ ಹಲ್ಲೆ, ಕೊಲೆ ಮಾಡಿರುವ ಹಿನ್ನೆಲೆ ನಮ್ಮ ಕಮಿಷನರೇಟ್ ವ್ಯಾಪ್ತಿಯಲ್ಲಿ ರೌಡಿ ಪರೇಡ್ ಮಾಡಲಾಗುತ್ತಿದೆ ಎಂದು ಹು -ಧಾ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ‌ತಿಳಿಸಿದ್ದಾರೆ. ನಗರದಲ್ಲಿ ಇಂದು ರೌಡಿಪರೇಡ್ ನಡೆಸಿ …

Read More »

ಆಪರೇಷನ್ ಸಿಂಧೂರ್ ಮೂಲಕ ಪಾಕ್’ಗೆ ತಕ್ಕ ಉತ್ತರ…

ಆಪರೇಷನ್ ಸಿಂಧೂರ್ ಮೂಲಕ ಪಾಕ್’ಗೆ ತಕ್ಕ ಉತ್ತರ… ಬೆಳಗಾವಿಯಲ್ಲಿ ಬಿಜೆಪಿ ವಿಶೇಷ ಪೂಜೆ; ಸಿಹಿ ಹಂಚಿ ಸಂಭ್ರಮಾಚರಣೆ ಸಿಂಧೂರ್’ವನ್ನು ಅಳಿಸಿದವರಿಗೆ ಸಿಂಧೂರ್’ನ ಶಕ್ತಿಯನ್ನು ತೋರಿದ ಭಾರತೀಯ ಸೇನೆ ಪೆಹಲ್’ಗಾಮ್’ನಲ್ಲಿ ದಾಳಿ ನಡೆಸಿ ಕ್ರೌರ್ಯ ಮೆರೆದಿದ್ದ ಉಗ್ರರಿಗೆ ಭಾರತೀಯ ಸೇನೆಯೂ ತಕ್ಕ ಪಾಠ ಕಲಿಸಿದ ಹಿನ್ನೆಲೆ ಬೆಳಗಾವಿ ಬಿಜೆಪಿಯ ವತಿಯಿಂದ ಗಣೇಶ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು. ಪೆಹಲ್’ಗಾಮ್’ನಲ್ಲಿ ದಾಳಿ ನಡೆಸಿ ಕ್ರೌರ್ಯ ಮೆರೆದಿದ್ದ ಉಗ್ರರಿಗೆ …

Read More »

ಸಿಎಂ ವಿರುದ್ಧ ಮುಡಾ ಕೇಸ್: ಕಾಲಾವಕಾಶ ಕೋರಿದ ಲೋಕಾಯುಕ್ತ ಪೊಲೀಸ್

ಬೆಂಗಳೂರು, ಮೇ 07: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಪತ್ನಿ ಪಾರ್ವತಿಯವರು ಕಾನೂನುಬಾಹಿರವಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) 14 ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ ವಿಚಾರಣೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿ ನಡೆಯಿತು. ಕೋರ್ಟ್ ಸೂಚನೆಯಂತೆ ಬುಧವಾರ (ಮೇ.07) ಅಂತಿಮ ತನಿಖಾ ವರದಿ ಸಲ್ಲಿಸಬೇಕಿದ್ದ ಲೋಕಾಯುಕ್ತ ಪೊಲೀಸರು ಕಾಲಾವಕಾಶ ಕೋರಿ ಮನವಿ ಸಲ್ಲಿಸಿದರು. ಕೋರ್ಟ್​ಗೆ ಹಾಜರಾಗಿದ್ದ …

Read More »

ಉಗ್ರ ಮಸೂದ್ ಅಜರ್​ಗೆ ಮನೆಯವರೇ ಸತ್ತರೂ ಕಣ್ಣೀರಿಲ್ಲ, ಹತಾಶೆಯಿಲ್ಲ: ಭಯೋತ್ಪಾದನೆಯೇ ಕನಸು!

ನವದೆಹಲಿ, ಮೇ 8: ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂದೂರ್​​​ನಲ್ಲಿ (Operation Sindoor) ಕುಟುಂಬದವರು ಹಾಗೂ ಸಂಬಂಧಿಕರು ಮೃತಪಟ್ಟಿರುವುದಾಗಿ ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್ (Jaish-e-Mohammad) ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ (Masood Azhar) ಹೇಳಿಕೊಂಡಿದ್ದಾನೆ. ಕುಟುಂಬದ 10 ಮಂದಿ ಸದಸ್ಯರು ಮತ್ತು ನಾಲ್ವರು ಅತ್ಯಾಪ್ತರು ಸಾವಿಗೀಡಾಗಿದ್ದಾರೆ ಎಂದು ಆತ ತಿಳಿಸಿರುವುದಾಗಿ ವರದಿಯಾಗಿದೆ. ಆದಾಗ್ಯೂ ಆತನಲ್ಲಿ ಕಣ್ಣೀರು ಕಂಡುಬಂದಿಲ್ಲ. ಅಷ್ಟೇ ಯಾಕೆ, ವಿಷಾದವಾಗಲೀ ಹತಾಶೆಯಾಗಲೀ ಇಲ್ಲ. ಇದನ್ನು ಸ್ವತಃ ಆತನೇ ಹೇಳಿಕೊಂಡಿದ್ದಾನೆ. ಇಷ್ಟೆಲ್ಲ ಆದ ಮೇಲೂ ಆತನಿಗಿರುವುದು ಭಯೋತ್ಪಾದನೆಯ ಕನಸು …

Read More »

ಬೆಂಗಳೂರಿನಿಂದ 5 ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳು ಕ್ಯಾನ್ಸಲ್

ಬೆಂಗಳೂರು, ಮೇ 07: ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ಮಾಡುವ ಮೂಲಕ ಪಹಲ್ಗಾಮ್​ನ (Pahalgam) ಉಗ್ರರ ದಾಳಿ ಪ್ರತೀಕಾರವನ್ನು ತೀರಿಸಿಕೊಂಡಿದೆ. ಈ ಮಧ್ಯೆ ಕೇಂದ್ರ ಸರ್ಕಾರದಿಂದ ಸೂಚನೆ ಹಿನ್ನೆಲೆ ಭಾರತದ ವಿವಿಧೆಡೆ ವಿಮಾನ ಸಂಚಾರ ರದ್ದು (Flights Cancelled) ಮಾಡಲಾಗಿದೆ. ಅದೇ ರೀತಿಯಾಗಿ ಬೆಂಗಳೂರಿನಿಂದ ಬೇರೆ ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳನ್ನು ರದ್ದು ಮಾಡಲಾಗಿದೆ.ಸದ್ಯ ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಿಂದ ಜಮ್ಮು-ಕಾಶ್ಮೀರ, ರಾಜಸ್ಥಾನದ ಜೋಧಪುರ್, ಯುಪಿಯ ಅಯೋಧ್ಯೆ, ಲಖನೌ …

Read More »