Breaking News

ಕರ್ನಾಟಕದ ಒಬ್ಬರು ಸೇರಿ ಐವರಲ್ಲಿ ಎಕ್ಸ್‌ಬಿಬಿ.1.5 ತಳಿ ದೃಢ

ಹೊಸದಿಲ್ಲಿ: ಅಮೆರಿಕದಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿರುವ ಕೊರೊನಾ ರೂಪಾಂತರಿ ಎಕ್ಸ್‌ಬಿಬಿ.1.5 ತಳಿಯು ಭಾರತದ 5 ಮಂದಿಯಲ್ಲಿ ದೃಢಪಟ್ಟಿದ್ದು, ಈ ಪೈಕಿ ಕರ್ನಾಟಕದ ಒಬ್ಬ ವ್ಯಕ್ತಿಯೂ ಸೇರಿದ್ದಾರೆ ಎಂದು ಇಂಡಿಯನ್‌ ಸಾರ್ಸ್‌ ಕೋವ್‌-2 ಜಿನೋಮಿಕ್ಸ್‌ ಕನ್ಸೋರ್ಟಿಯಮ್‌ ತಿಳಿಸಿದೆ.   ಸೋಂಕು ದೃಢಪಟ್ಟಿರುವ ಐವರಲ್ಲಿ ಮೂವರು ಗುಜರಾತ್‌ ಮೂಲದವರಾಗಿದ್ದು, ಕರ್ನಾಟಕ ಹಾಗೂ ರಾಜಸ್ಥಾನದ ತಲಾ ಒಬ್ಬ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಎಕ್ಸ್‌ಬಿಬಿ.1.5 ತಳಿಯು ಒಮಿಕ್ರಾನ್‌ ರೂಪಾಂತರಿಯ ಉಪ ತಳಿಗಳಾದ ಬಿಎ.2.10.1 ಹಾಗೂ ಬಿಎ.2.75 …

Read More »

ಮಹದಾಯಿ ನಮಗೆ ತಾಯಿಯಷ್ಟೇ ಮುಖ್ಯ. ರಾಜಿ ಮಾಡಿಕೊಳ್ಳಲ್ಲ: ಗೋವಾ ಸಿಎಂ

ಪಣಜಿ: ಮಹದಾಯಿ ನಮಗೆ ತಾಯಿಯಷ್ಟೇ ಮುಖ್ಯ. ಗೋವಾದ ಅಸ್ಮಿತೆಯನ್ನು ಕಾಪಾಡಲು ಮತ್ತು ಅದನ್ನು ಎಲ್ಲಾ ರೀತಿಯಲ್ಲೂ ರಕ್ಷಿಸಲು, ದೇಶದ ಪರಿಣಿತ ಕಾನೂನು ತಜ್ಞರು ಮತ್ತು ಪರಿಸರವಾದಿಗಳ ಸಹಾಯದಿಂದ ಸುಪ್ರೀಂ ಕೋರ್ಟ್‍ನಲ್ಲಿ ಗೋವಾದ ಪರವನ್ನು ಬಲವಾಗಿ ಮಂಡಿಸಲಾಗುವುದು. ಇನ್ನೆರಡು ಮೂರು ದಿನಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಜ್ಯದ ನಿಯೋಗ ಭೇಟಿ ಮಾಡಲಿದೆ. ಮಹದಾಯಿ ವಿಚಾರದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ತಮ್ಮ ನಿಲುವನ್ನು …

Read More »

ಆರೋಗ್ಯದಲ್ಲಿ ಏರುಪೇರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮಂಗಳವಾರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ರಾಹುಲ್ ಹಾಗೂ ಪ್ರಿಯಾಂಕಾ ಯಾತ್ರೆ ಮೊಟಕುಗೊಳಿಸಿ ದೆಹಲಿಗೆ ಮರಳಿದ್ದಾರೆ ಎನ್ನಲಾಗಿದೆ.   ಬುಧವಾರ ಮುಂಜಾನೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಪುತ್ರಿ ಪ್ರಿಯಾಂಕಾ ಗಾಂಧಿ ಜೊತೆಗಿದ್ದಾರೆ ಎನ್ನಲಾಗಿದೆ.

Read More »

8 ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ವಶದಲ್ಲಿ ಇರುವ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸಲು ರಣತಂತ್ರ : ಅಣ್ಣಾಸಾಹೇಬ ಜೊಲ್ಲೆ

ಚಿಕ್ಕೋಡಿ: ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ವಶದಲ್ಲಿ ಇರುವ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸಲು ರಣತಂತ್ರ ರೂಪಿಸಲಾಗಿದೆ. ಎಲ್ಲ ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಾಗಿ ದುಡಿಯಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪ್ರಿಯ ಯೋಜನೆಗಳ ಮಾಹಿತಿ ಜನರಿಗೆ ತಿಳಿಸುವ ಮೂಲಕ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.   ತಾಲೂಕಿನ ನನದಿ ಗ್ರಾಮದಲ್ಲಿ ನಡೆದ ಬೂತ್‌ ವಿಜಯ ಅಭಿಯಾನ ಕಾರ್ಯಕ್ರಮದಲ್ಲಿ ಮನೆ …

Read More »

ಪಲ್ಸ ಪೊಲಿಯೋ ಮಾದರಿಯಲ್ಲಿ ಲಸಿಕಾ ಅಭಿಯಾನ ಯಶಸ್ಸಿಗೆ ಸೂಚನೆ:

ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣದಡಿ ಜಿಲ್ಲೆಯಾದ್ಯಂತ ದಿನಾಂಕ: 05-01-2023 ರಿಂದ 31-01-2023ರವರೆಗೆ ಮೂರನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನವನ್ನು ಪಲ್ಸ್ ಪೋಲಿಯೋ ಮಾದರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಹೆಚ್.ವಿ ಅವರು ತಿಳಿಸಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ (ಜ.4) ನಡೆದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಮೂರನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು …

Read More »

ಖಾನಾಪುರ ಗೊವಾ ಸಂಪಕ೯ ಕಲ್ಪಿಸುವ ರಸ್ತೆಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕಿ ಆಕ್ರೋಶ

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂಕೆ ಹುಬ್ಬಳ್ಳಿಯಿಂದ ಪಾರಿಶ್ವಾಡ ಖಾನಾಪುರ ಗೊವಾ ಸಂಪಕ೯ ಕಲ್ಪಿಸುವ ಲೊಕೂಪಯೂಗಿ ಇಲಾಖೆಗೆ ಬರುವ ರಸ್ತೆ ಮಂಜೂರಾಗಿದ್ದು ಎಂಜಿನಿಯರ್ ಮತ್ತು ಗುತ್ತಿಗೆದಾರನ ಬೇಜವಾಬ್ದಾರಿಯಿಂದ ಯಾವುದೇ ಮುನ್ಸೂಚನೆ ಫಲಕ ಇಲ್ಲದೆ ತುಂಬಾ ತಗ್ಗು ಗುಂಡಿಗಳಿಂದ ತುಂಬಿದ್ದು ವಾಹನ ಸವಾರರು ಹಾಗೂ ರೈತರು ಕಾಖಾ೯ನೆಗೆ ಕಬ್ಬು ತುಂಬಿದ ವಾಹನಗಳನ್ನು ಸಾಗಿಸಲು ಕೈಯಲ್ಲಿ ಜೀವ ಹಿಡಿದು ಹರ ಸಾಹಸ ಪಡಬೇಕಾಗಿದೆ. ವಾಹನ ಸವಾರರು ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳಿಗೆ ಹಿಡಿಶಾಪ …

Read More »

ಲಾಡ್ಜ್ ಒಂದರಲ್ಲಿ ವ್ಯಕ್ತಿಯೊಬ್ಬ ಕುತ್ತಿಗೆಗೆ ಬೇಡ ಶೀಟ್ ಕಟ್ಟಿಕೊಂಡು ನೇಣಿಗೆ ಶರಣಾದ

ಲಾಡ್ಜ್ ಒಂದರಲ್ಲಿ ವ್ಯಕ್ತಿಯೊಬ್ಬ ಕುತ್ತಿಗೆಗೆ ಬೇಡ ಶೀಟ್ ಕಟ್ಟಿಕೊಂಡು ನೇಣಿಗೆ ಶರಣಾದ ಘಟನೆ ಚನ್ನಮ್ಮಾ ವೃತ್ತದ ಹತ್ತಿರ ಇರುವ ಸಂಗಮ ಲಾಡ್ಜ್ ನಲ್ಲಿ ನಡೆದಿದೆ. ಮೃತ ಯುವಕನನ್ನು ಕಲಘಟಗಿ ತಾಲುಕಿನ ಕಂಪ್ಲಿಕೊಪ್ಪ ಗ್ರಾಮದ ನಿವಾಸಿ ಸಂತೋಷ ಯಲ್ಲಪ್ಪ ಹರಿಜನ ಎಂದು ಗುರುತಿಸಲಾಗಿದೆ. ಈತ ವೃತ್ತಿಯಲ್ಲಿ ಡ್ರೈವರ್ ಆಗಿದ್ದು ಡಿಸೆಂಬರ್ 19 ರಂದು ಸಂಗಮ ಲಾಡ್ಜನಲ್ಲಿ 302 ಕೊಠಡಿ ಬುಕ್ಕ ಮಾಡಿದ್ದು ತಿಳಿದು ಬಂದಿದೆ. ಇನ್ನು ಇತನ ಮೇಲೆ ನವನಗರ ಪೊಲೀಸ್ …

Read More »

ಡಬಲ್ ಎಂಜಿನ್‌ ಸರ್ಕಾರ ತೆಗೆಯದಿದ್ದರೆ ಸಂಕಷ್ಟ: ಬಡಗಲಪುರ ನಾಗೇಂದ್ರ

ಬಾಗಲಕೋಟೆ: ‘ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್‌ ಎಂಜಿನ್‌ ಸರ್ಕಾರ ಬದಲಾಯಿಸದಿದ್ದರೆ ಮುಂದಿನ ದಿನಗಳಲ್ಲಿ ಸಂಕಷ್ಟ ಹೆಚ್ಚಾಗಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲವಾಗಿ, ಉಸಿರಾಡಿಸಲೂ ಕಷ್ಟವಾಗಬಹುದು’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಸಿದರು.   ಜನಾಂದೋಲನಗಳ ಮಹಾಮೈತ್ರಿ ಕರ್ನಾಟಕ, ಸಿಟಿಜನ್‌ ಫಾರ್‌ ಡೆಮೊಕ್ರಸಿ, ಜನತಂತ್ರ ಪಯೋಗ ಶಾಲೆ ಹಾಗೂ ಸಂಯುಕ್ತ ಹೋರಾಟ ಮುಖಂಡರು ಸೇರಿಕೊಂಡು ಜಿಲ್ಲೆಯ ಕೂಡಲಸಂಗಮದಿಂದ ಬೆಂಗಳೂರುವರೆಗೆ ಹಮ್ಮಿಕೊಂಡಿರುವ ಸಮಾಜ ಪರಿವರ್ತನ ಸತ್ಯಾಗ್ರಹ …

Read More »

ಪ್ರದೀಪ್‌ ಆತ್ಮಹತ್ಯೆ: ಅರವಿಂದ ಲಿಂಬಾವಳಿ ಬಂಧನಕ್ಕೆ ಕಾಂಗ್ರೆಸ್‌ ಆಗ್ರಹ

ಬೆಂಗಳೂರು: ಗುತ್ತಿಗೆದಾರ ಪ್ರದೀಪ್‌ ಆತ್ಮಹತ್ಯೆ ಪ್ರಕರಣ ಸಂಬಂಧ, ಬಿಜೆಪಿ ಶಾಸಕ ಅರವಿಂದ ಲಿಂಬಾವಳಿಯನ್ನು ಬಂಧಿಸಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ. ಟ್ವೀಟ್‌ ಮೂಲಕ ವಾಗ್ದಾಳಿ ನಡೆಸಿರುವ ಕಾಂಗ್ರೆಸ್‌, ಲಿಂಬಾವಳಿ ವಿರುದ್ಧ ಇನ್ನೂ ಯಾಕೆ ತನಿಖೆ ಆರಂಭವಾಗಿಲ್ಲ ಎಂದು ಪ್ರಶ್ನೆ ಮಾಡಿದೆ.   ಈ ಪ್ರಕರಣದಲ್ಲಿ ಹೆಚ್ಚಿನ ಅವ್ಯವಹಾರ ನಡೆದಿರುವ ಸಂಭವವಿದೆ ಎಂದು ಹೇಳಿರುವ ಕಾಂಗ್ರೆಸ್, #ArrestLimbavali ಎನ್ನುವ ಹ್ಯಾಷ್‌ ಟ್ಯಾಗ್‌ ಬಳಕೆ ಮಾಡಿ ವಾಗ್ದಾಳಿ ನಡೆಸಿದೆ.   ‘ಆತ್ಮಹತ್ಯೆ ಮಾಡಿಕೊಂಡ ಪ್ರದೀಪ್ ಬಿಜೆಪಿ …

Read More »

ಸಾಹಿತ್ಯ ಸಮ್ಮೇಳನ: ಪಾರ್ಕಿಂಗ್‌ಗೆ ಕ್ಯೂ ಆರ್‌ ಕೋಡ್‌ ಸ್ಕ್ಯಾನ್‌ ವ್ಯವಸ್ಥೆ

ಹಾವೇರಿ: ನಗರದಲ್ಲಿ ಜನವರಿ 6 ರಿಂದ 8ರವರೆಗೆ ಮೂರು ದಿನಗಳ ಕಾಲ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನಲೆಯಲ್ಲಿ ಸುಗಮ ಸಂಚಾರಕ್ಕಾಗಿ ಜ.6 ರಿಂದ ಜ.8ರವರೆಗೆ ದೈನಂದಿನ ಸಂಚಾರ ಮಾರ್ಗವನ್ನು ತಾತ್ಕಾಲಿಕವಾಗಿ ಬದಲಾವಣೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ.   ದಾವಣಗೆರೆ ಮಾರ್ಗವಾಗಿ ಬರುವ ವಾಹನಗಳು ತೋಟದ ಯಲ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ-48ರ ಕೆಳ ಸೇತುವೆ ಸರ್ವಿಸ್ ರಸ್ತೆ ಮುಖಾಂತರ ಹಳೇ ಪಿಬಿ …

Read More »