ಬೆಳಗಾವಿ: ‘ಕಳಸಾ ಬಂಡೂರಿ ನಾಲಾ ಯೋಜನೆ ಕಾಮಗಾರಿಯ ಸಮಗ್ರ ಯೋಜನಾ ವರದಿಗೆ ಅನುಮೋದನೆ, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಿರುವುದು ಬಿಜೆಪಿಯ ಚುನಾವಣೆ ಗಿಮಿಕ್’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆಪಾದಿಸಿದರು. ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯವರು ಇಂತಹ ದಾಳ ಉರುಳಿಸುತ್ತಿದ್ದಾರೆ. ಆದರೆ, ಅವುಗಳಲ್ಲಿ ಸ್ಪಷ್ಟತೆ ಇಲ್ಲ’ ಎಂದು ಕಿಡಿಕಾರಿದರು.
Read More »ಹುಬ್ಬಳ್ಳಿ: ಕಾಂಗ್ರೆಸ್ ಸಮಾವೇಶಕ್ಕೆ ಬಂದ ವ್ಯಕ್ತಿ ಮೇಲೆ ಬಸ್ ಹರಿದು ಸಾವು
ಹುಬ್ಬಳ್ಳಿ: ನಗರದ ನೆಹರೂ ಮೈದಾನದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ವ್ಯಕ್ತಿ ಮೇಲೆ ಬಸ್ ಹಾಯ್ದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ, ಜೆಸಿ ನಗರದ ಜೋಶಿ ಪೆಟ್ರೋಲ್ ಬಂಕ್ ಎದುರು ಸೋಮವಾರ ನಡೆದಿದೆ. ಮೃತಪಟ್ಟವರು ಅಣ್ಣಿಗೇರಿ ನಿವಾಸಿ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸ್’ಗೆ ದಾಖಲಿಸಲಾಗಿದೆ. ಸಮಾವೇಶ ನಡೆಯುತ್ತಿದ್ದ ಸ್ಥಳಕ್ಕೆ ತೆರಳುತ್ತಿದ್ದಾಗ ಗದುಗಿನಿಂದ ಗದಗ-ಹುಬ್ಬಳ್ಳಿ ಬಸ್ ಅವರ ಮೇಲೆ ಹಾಯ್ದಿದೆ. ಬಸ್ ಎಡ ಭಾಗದ ಟೈರ್ …
Read More »‘ಕಳಸಾ-ಬಂಡೂರಿ ನಾಲಾ ಯೋಜನೆ ಕಾಮಗಾರಿಯನ್ನು ಒಂದೇ ವರ್ಷದಲ್ಲಿ ಪೂರ್ಣಗೊಳಿಸದಿದ್ದರೆ ನನ್ನ ಹೆಸರು ಗೋವಿಂದ ಕಾರಜೋಳ ಅಲ್ಲ
ಬೆಳಗಾವಿ: ‘ಕಳಸಾ-ಬಂಡೂರಿ ನಾಲಾ ಯೋಜನೆ ಕಾಮಗಾರಿಯನ್ನು ಒಂದೇ ವರ್ಷದಲ್ಲಿ ಪೂರ್ಣಗೊಳಿಸದಿದ್ದರೆ ನನ್ನ ಹೆಸರು ಗೋವಿಂದ ಕಾರಜೋಳ ಅಲ್ಲ’ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು. ‘ಒಂದು ತಿಂಗಳಲ್ಲಿ ಕಾಮಗಾರಿಗೆ ಚಾಲನೆ ನೀಡುತ್ತೇನೆ. ಏನೇ ಅಡ್ಡಿಗಳಿದ್ದರೂ ವರ್ಷ ಉರುಳುವುದರಲ್ಲಿ ಎಲ್ಲವನ್ನೂ ಮುಗಿಸುತ್ತೇನೆ’ ಎಂದು ಅವರು ನಗರದಲ್ಲಿ ಸೋಮವಾರ ಮಾಧ್ಯಮದವರಿಗೆ ಮಾಹಿತಿ ನೀಡಿದರು. ‘ಇದರ ‘ಸಮಗ್ರ ಯೋಜನಾ ವರದಿ’ಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ …
Read More »ಹೊಸ ವರ್ಷ ಸ್ವಾಗತಕ್ಕೆ ಹಾರಿಸಿದ ಗುಂಡು: ಇಬ್ಬರ ಸಾವು
ಶಿವಮೊಗ್ಗ: ಡಬಲ್ ಬ್ಯಾರಲ್ ಗನ್ ಮೂಲಕ ಗುಂಡು ಹಾರಿಸಿ ಹೊಸ ವರ್ಷವನ್ನು ಸ್ವಾಗತಿಸುವ ಧಾವಂತಕ್ಕೆ ನಗರದಲ್ಲಿ ಎರಡು ಜೀವಗಳು ಬಲಿಯಾಗಿವೆ. ಇಲ್ಲಿನ ವಿದ್ಯಾನಗರದ ನಿವಾಸಿ ಮಂಜುನಾಥ ಓಲೇಕಾರ, ತಮ್ಮ ಮನೆಯ ಮಹಡಿಯ ಮೇಲೆ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಶನಿವಾರ ರಾತ್ರಿ ಗನ್‌ಗೆ ಗುಂಡು ತುಂಬುವಾಗ ಆಕಸ್ಮಿಕವಾಗಿ ಸಿಡಿದ ಅದು ಎಚ್.ಯು. ವಿನಯ್ (34) ಅವರಿಗೆ ತಗುಲಿ ತೀವ್ರವಾಗಿ ಗಾಯಗೊಂಡರು. ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆಯಿಂದ ತೀವ್ರವಾಗಿ …
Read More »ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರ- ಶಾಸಕ ಬಾಲಚಂದ್ರ ಜಾರಕಿಹೊಳಿ
ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರ- ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಮಠಾಧೀಶರು, ರಾಜಕಾರಣಿಗಳು ಹಾಗೂ ಅಧಿಕಾರಿಗಳು ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ. ನಿಸ್ವಾರ್ಥ ಮನೋಭಾವನೆಯಿಂದ ಕೆಲಸಗಳನ್ನು ಮಾಡಿದರೆ ಮುಂದೊಂದು ದಿನ ದೇವರು ಯಾವುದಾದರೂ ರೂಪದಲ್ಲಿ ಬಂದು ಸಹಾಯ ಮಾಡುತ್ತಾನೆ. ಸ್ವಾರ್ಥವನ್ನಿಟ್ಟುಕೊಂಡು ಕೆಲಸ ಮಾಡಿದ್ದಾದರೆ ದೇವರು ಎಂದಿಗೂ ಮೆಚ್ಚುವುದಿಲ್ಲ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಹುಣಶ್ಯಾಳ ಪಿಜಿ …
Read More »ಸಾಮಾನ್ಯ ಕಾರ್ಯಕರ್ತನನ್ನು ಸಿದ್ದರಾಮಯ್ಯ ವಿರುದ್ದ ಗೆಲ್ಲಿಸುತ್ತೇವೆ: ಈಶ್ವರಪ್ಪ
ಶಿವಮೊಗ್ಗ: ಚುನಾವಣೆಯಲ್ಲಿ ಗೆದ್ದ ಶಾಸಕ ಬೇರೆ ಕ್ಷೇತ್ರ ಹುಡುಕುವುದು ರಾಜ್ಯದ ಮತ್ತು ಆ ಕ್ಷೇತ್ರದ ಮತದಾರರಿಗೆ ಮಾಡುವ ಅವಮಾನ. ತನ್ನ ಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರದ ಜನತೆಯ ಮುಂದಿಟ್ಟು ಮತ ಕೇಳುವಂತಿರಬೇಕು. ಇವತ್ತಿಗೂ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆಂದು ಹೇಳುತ್ತಿಲ್ಲ. ಇಂದಲ್ಲ ನಾಳೆ ಯಾವ ಪಕ್ಷದಿಂದ ಸ್ಪರ್ಧೆ ಎಂದು ಹೇಳುವ ದಿನ ಕೂಡ ಬರಲಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕ್ಷೇತ್ರದಿಂದ ಸ್ಪರ್ಧೆ …
Read More »ಪಣಜಿ: ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರ ರಚಿಸುವಂತೆ ಕೇಂದ್ರಕ್ಕೆ ಗೋವಾ ಸರಕಾರ ಒತ್ತಾಯ
ಪಣಜಿ: ಮಹದಾಯಿ ನದಿಯಿಂದ ಅಕ್ರಮವಾಗಿ ನೀರು ತಿರುಗಿಸುವುದನ್ನು ತಡೆಯಲು ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರವನ್ನು ರಚಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ರಾಜ್ಯ ಸಚಿವ ಸಂಪುಟವು ಇಂದು ನಿರ್ಧರಿಸಿದೆ. ಕಳಸಾ-ಭಂಡೂರಿ ನೀರಿನ ಯೋಜನೆಗೆ ಕರ್ನಾಟಕದ ವಿವರವಾದ ಯೋಜನಾ ವರದಿಗೆ ನೀಡಲಾದ ಎನ್‍ಒಸಿಯನ್ನು ತಕ್ಷಣವೇ ಹಿಂಪಡೆಯಲು ಕೇಂದ್ರಕ್ಕೆ ಪತ್ರ ಬರೆಯಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದಲ್ಲಿ ಸೋಮವಾರ ಪಣಜಿಯಲ್ಲಿ ವಿಶೇಷ ಸಚಿವ …
Read More »ಅರಭಾವಿ ಆಂಜನೇಯ, ಕಲ್ಲೊಳ್ಳಿ ಮಾರುತೇಶ್ವರ ದೇವಸ್ಥಾನಕ್ಕೆ ಕೆಎಂಎಫ್ ಅಧ್ಯಕ್ಷರ ಭೇಟಿ
ಮೂಡಲಗಿ: ಹೊಸ ವರ್ಷದ ದಿನದಂದು ಕ್ಷೇತ್ರದ ಜನ ಕಲ್ಯಾಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಯ ಸಂಕಲ್ಪದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾನುವಾರ ಸಂಜೆ ಕ್ಷೇತ್ರದ ಅಧಿದೇವತೆ ಅರಭಾವಿಯ ಆಂಜನೇಯ ಮತ್ತು ಕಲ್ಲೋಳ್ಳಿ ಮಾರುತೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಮ್ಮ ಕ್ಷೇತ್ರ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯದ ಜನತೆಯು ಸುಖ, ಶಾಂತಿ, ನೆಮ್ಮದಿಯಿಂದ ಜೀವನ ಸಾಗಿಸಬೇಕು. ಎಲ್ಲರಿಗೂ ದೇವರು ಒಳ್ಳೆಯದನ್ನು …
Read More »ಸಂಕ್ರಾಂತಿಯೊಳಗೆ ‘ಕೈ’ ಮೊದಲ ಪಟ್ಟಿ ಬಿಡುಗಡೆ; ಖರ್ಗೆ ಜತೆ ಡಿಕೆಶಿ ಚರ್ಚೆ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸುವ ವಿಚಾರದಲ್ಲಿ 3-4 ಜಿಲ್ಲೆಗಳು ಮಾತ್ರ ಹಿಂದುಳಿದಿದ್ದು, ಸಂಕ್ರಾಂತಿಯೊಳಗೆ ಮೊದಲ ಪಟ್ಟಿ ಬಿಡುಗಡೆಗೊಳಿಸುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ಮಹತ್ವದ ಚರ್ಚೆ ನಡೆಸಿದ್ದಾರೆ. ಭಾನುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿ ಹೊಸ ವರ್ಷದ ಶುಭಾಶಯ ತಿಳಿಸಿದ ಬಳಿಕ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸುದೀರ್ಘ …
Read More »ಚಾಕುವಿನಿಂದ ತಿವಿದು ಹೆತ್ತ ತಾಯಿಯ ಪ್ರಾಣವನ್ನೇ ತೆಗೆದ ಮಗಳು
ಪ್ರೇಮ ವಿವಾಹ ನಿರಾಕರಿಸಿದ್ದಕ್ಕೆ ಪ್ರಿಯಕರನೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಅಪ್ರಾಪ್ತ ಮಗಳೊಬ್ಬಳು ಅಂತ್ಯವಾಗಿಸಿರುವ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಮಮತಾ ಕುಶ್ವಾಹಾ ಮೃತ ಮಹಿಳೆ. ಮಮತಾ ಅವರ ಮಗಳು ಕಳೆದ ಕೆಲ ಸಮಯದಿಂದ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ಮಗಳ ಸಂಬಂಧಕ್ಕೆ ತಾಯಿ ವಿರೋಧ ವ್ಯಕ್ತಪಡಿಸಿದ್ದರು. ಆ ಕಾರಣಕ್ಕಾಗಿ ಈ ಕೃತ್ಯವನ್ನು ಎಸಗಿದ್ದಾರೆ. ಮಮತಾಳ ಮಗಳನ್ನು ಆಕೆಯ ಪ್ರಿಯಕರ ಕೆಲ ಸಮಯದ ಹಿಂದೆ ಅಪಹರಿಸಿ, ಆಕೆಯ ಮೇಲೆ ದೈಹಿಕ ದೌರ್ಜನ್ಯ …
Read More »