Breaking News

ಸಿದ್ದೇಶ್ವರ ಶ್ರೀಗಳ ದರ್ಶನ ಪಡೆದು ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ ; ಕರೆ ಮಾಡಿದ ಪ್ರಧಾನಿ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ರಾತ್ರಿ ನಗರಕ್ಕೆ ಆಗಮಿಸಿ ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ರಾತ್ರಿ 10-30 ರ‌ ಸುಮಾರಿಗೆ ನಗರದ ಜ್ಞಾನಯೋಗಾಶ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಸಚಿವ ಜೋಶಿ ಶ್ರೀಗಳ ದರ್ಶನ ಪಡೆದರು.   ಬಳಿಕ ಕನ್ಹೇರಿ ಕಾಡಸಿದ್ದೇಶ್ವರ ಮಠದ ಶ್ರೀಗಳು, ಜ್ಞಾನಯೋಗಾಶ್ರಮದ ಮುಖ್ಯಸ್ಥರಾದ ಬಸವಲಿಂಗ ಶ್ರೀಗಳೊಂದಿಗೆ ಸಿದ್ದೇಶ್ವರ ಶ್ರೀಗಳ ಆರೋಗ್ಯದ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಿದರು. ನಂತರ ಸಿದ್ದೇಶ್ವರ …

Read More »

ನ್ನಡ ಭಾಷೆ-ಅನ್ನದ ಭಾಷೆ ಎಂಬ ಸತ್ಯವನ್ನು ಮನವರಿಕೆ ಮಾಡುವ ಕೆಲಸವಾಗಬೇಕು: ಈಶ್ವರ ಸಂಪಗಾವಿ

ಖಾನಾಪುರ: ಗಡಿಭಾಗದ ಕನ್ನಡೇತರರಿಗೂ ಕನ್ನಡ ಭಾಷೆ-ಅನ್ನದ ಭಾಷೆ ಎಂಬ ಸತ್ಯವನ್ನು ಮನವರಿಕೆ ಮಾಡುವ ಕೆಲಸವಾಗಬೇಕು ಎಂದು ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಈಶ್ವರ ಸಂಪಗಾವಿ ಹೇಳಿದರು. ಅವರು ಪಟ್ಟಣದ ಶನಯಾ ಪಾಮ್ಸ್‌ ಕಲ್ಯಾಣ ಮಂಟಪದಲ್ಲಿ ನಡೆದ 8ನೇ ತಾಲೂಕಾ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದರು.   ಗಡಿ ಭಾಗದಲ್ಲಿ ಸಾಹಿತ್ಯ ಪರಸ್ಪರ ವಿನಿಮಯಗೊಳ್ಳುವುದರ ಮೂಲಕ ಭಾವನೆಗಳನ್ನು ಬೆಸೆಯುವ ಕಾರ್ಯವಾಗಬೇಕು. ಅನ್ಯ ಭಾಷೆ ವ್ಯಾಮೋಹದಲ್ಲಿ ಮಾತೃಭಾಷೆ ಕೊಚ್ಚಿ ಹೋಗದಂತೆ ಮಕ್ಕಳಲ್ಲಿ ಸ್ವಾಭಿಮಾನ ಬೆಳೆಸಬೇಕು. ತಾಲೂಕಲ್ಲಿ …

Read More »

ಮದುವೆಗೆ ಹೆಣ್ಣು ಸಿಗಲಿಲ್ಲವೆಂದು ವ್ಯಕ್ತಿಯೋರ್ವ ಮನನೊಂದು ಸ್ಮಶಾನದಲ್ಲಿಯೇ ಬೆಂಕಿ ಹಚ್ಚಿಕೊಂಡ

ಮದುವೆಗೆ ಹೆಣ್ಣು ಸಿಗಲಿಲ್ಲವೆಂದು ವ್ಯಕ್ತಿಯೋರ್ವ ಮನನೊಂದು ಸ್ಮಶಾನದಲ್ಲಿಯೇ ಬೆಂಕಿ ಹಚ್ಚಿಕೊಂಡ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ನಡೆದಿದೆ. ಸಂತೋಷ ಕೊರಡಿ (೩೦) ಎಂಬಾತನೇ ಬೆಂಕಿಹಚ್ಚಿಕೊಂಡಾತ. ತನಗೆ ವಯಸ್ಸಾದರೂ ಮದುವೆಗೆ ಕನ್ಯೆ ಸಿಗಲಿಲ್ಲವೆಂದು ಮನನೊಂದಿದ್ದು, ಅಲ್ಲದೇ ಮಾನಸಿಕ ಅಸ್ವಸ್ಥನಾಗಿದ್ದ ಯುವಕ ಅಮ್ಮಿನಬಾವಿ ಗ್ರಾಮದ ಸ್ಮಶಾನದಲ್ಲಿಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದೆನ್ನಲಾಗಿದೆ. ಸಂತೋಷನಿಗೆ ದೇಹದ ಶೇಕಡಾ ಅರ್ಧದಷ್ಟು ಭಾಗ ಬೆಂಕಿಗೆ ಆಹುತಿಯಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದು, ತೀವ್ರ ಗಾಯಗೊಂಡ ಹಿನ್ನಲೆ ಹುಬ್ಬಳ್ಳಿ ಕಿಮ್ಸ್ …

Read More »

ಜಯಪುರದಲ್ಲಿ ಕೈ ಕೈ ಮಿಲಾಯಿಸಿದ ಕಾಂಗ್ರೆಸ್ ಮುಖಂಡರು

ವಿಜಯಪುರ : ವಿಜಯಪುರದಲ್ಲಿ ಇಂದು ಕಾಂಗ್ರೆಸ್ ನಾಯಕರು ಕೈ ಕೈ ಮಿಲಾಯಿಸಿದ ಘಟನೆ ವರದಿಯಾಗಿದೆ. ಕೃಷ್ಣಾ ಜನಾಂದೋಲನ ಕಾರ್ಯಕ್ರಮ ಆರಂಭಕ್ಕೂ ಮುನ್ನ ಘಟನೆ ನಡೆದಿದೆ. ಕಾಂಗ್ರೆಸ್ ಮುಖಂಡ ಇರ್ಫಾನ್ ಶೇಖ್ ಹಾಗೂ ಎಂ ಆರ್ ತಾಂಬೋಳಿ ನಡುವೆ ಗಲಾಟೆ ನಡೆದಿದೆ.   ವೇದಿಕೆ ಮೇಲೆ ಕುಳಿತುಕೊಳ್ಳುವ ವಿಚಾರಕ್ಕೆ ಕಾಂಗ್ರೆಸ್ ನಾಯಕರು ಕೈ ಕೈ ಮಿಲಾಯಿಸಿದ್ದಾರೆ ಎಂದು ತಿಳಿದು ಬಂದಿದೆ

Read More »

ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್ : ‘BMTC’ ಬಸ್ ಪಾಸಿನ ದರ ಹೆಚ್ಚಳ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಿದ್ದು, ಮಾಸಿಕ, ದೈನಿಕ ಬಸ್ ಪಾಸಿನ ದರವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಸಂಸ್ಥೆಯ ಆರ್ಥಿಕ ಹಿತವನ್ನು ಗಮನದಲ್ಲಿಟ್ಟುಕೊಂಡು ಸಂಸ್ಥೆಯು ವಿತರಣೆ ಮಾಡುತ್ತಿರುವ ವಜ್ರ ಹವಾನಿಯಂತ್ರಿತ ಸೇವೆಗಳ ದೈನಿಕ, ಮಾಸಿಕ ಪಾಸುಗಳ ದರಗಳನ್ನು ದಿನಾಂಕ 2023ರ್ ಜನವರಿ 1 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆದೇಶ ಹೊರಡಿಸಿದೆ.   ವಜ್ರ ಮಾಸಿಕ …

Read More »

ಸಿಎಂ ಹುದ್ದೆಯನ್ನೇ ಮಾರಾಟಕ್ಕಿಟ್ಟ ಅಮಿತ್ ಶಾ ಆರೋಪ ತಮಾಷೆಯಾಗಿದೆ: ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಅಮಿತ್‌ ಶಾ ಅವರು ಮುಖ್ಯಮಂತ್ರಿ ಹುದ್ದೆಯನ್ನೇ ₹ 2000 ಕೋಟಿಗೆ ಮಾರಾಟಕ್ಕೆ ಇಟ್ಟಿರುವ ರಾಜಕೀಯ ವ್ಯಾಪಾರಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯದಲ್ಲಿ ಶುಕ್ರವಾರ ನಡೆದ ಜನ ಸಂಕಲ್ಪ ಯಾತ್ರೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ್ದ ಅವರು, ‘ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕ ದೆಹಲಿಯ ಎಟಿಎಂ …

Read More »

ಗೋವಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಚಾಲಕನಿಂದ ಅತ್ಯಾಚಾರ

ಪಣಜಿ: ರಜೆಯ ನಿಮಿತ್ತ ಗೋವಾಕ್ಕೆ ಕ್ರಿಸ್​ಮಸ್​ ಪಾರ್ಟಿ ಮಾಡಲು ಸ್ನೇಹಿತರ ಜೊತೆ ತೆರಳಿದ್ದ 18 ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ಬಸ್​ ಚಾಲಕನೇ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಮುಂಬೈ ಮೂಲದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಶನಿವಾರದಂದು ಆರೋಪಿಯ ಬಸ್‌ನಲ್ಲಿ ಈ ಘಟನೆ ನಡೆದಿದೆ. ಆರೋಪಿಯು ವಾಸ್ಕೋದ ಜುವಾರಿನಗರದ ನಿವಾಸಿಯಾಗಿದ್ದಾನೆ. ಸಂತ್ರಸ್ತೆ 14 ಜನ ಸ್ನೇಹಿತರ ಜತೆಗೂಡಿ ಗೋವಾಕ್ಕೆ ಪ್ರವಾಸಕ್ಕೆ ತೆರಳಿದ್ದಳು. ಈ ಸಂದರ್ಭದಲ್ಲಿ ಆಕೆಯ …

Read More »

ಪ್ರತಿ ಟನ್‌ ಕಬ್ಬಿಗೆ ಹೆಚ್ಚುವರಿ ₹150 | ಪ್ರತಿಭಟನೆ ಕೈಬಿಟ್ಟ ಕಬ್ಬು ಬೆಳೆಗಾರರು

ಬೆಂಗಳೂರು: ಕಬ್ಬು ಬೆಳೆಗಾರರಿಗೆ ನ್ಯಾಯಯುತ ಹಾಗೂ ಲಾಭದಾಯಕ ಬೆಲೆ (ಎಫ್‌ಆರ್‌ಪಿ) ಜತೆಗೆ ಹೆಚ್ಚುವರಿಯಾಗಿ ₹ 150 ನೀಡಲು ರಾಜ್ಯ ಸರ್ಕಾರವು ಆದೇಶಿಸಿದೆ. ಈ ಹಿನ್ನೆಲೆಯಲ್ಲಿ, ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ 39 ದಿನಗಳಿಂದ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಕಬ್ಬು ಬೆಳೆಗಾರರು ಶುಕ್ರವಾರ ಸ್ಥಗಿತಗೊಳಿಸಿದರು.‌ ಎಲ್ಲ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ ಮೊದಲ ಕಂತಿನಲ್ಲಿ ಕೇಂದ್ರ ಸರ್ಕಾರವು ನಿಗದಿ ಪಡಿಸಿರುವ ಎಫ್‌ಆರ್‌ಪಿ ಜತೆಗೆ ಪ್ರತಿ ಟನ್‌ಗೆ …

Read More »

ಕುಷ್ಟಗಿ ಕ್ಷೇತ್ರಕ್ಕೆ ಬಸವರಾಜ್ ಹಳ್ಳೂರಗೆ ಗಾಳ ಹಾಕಿದ ಜನಾರ್ದನ ರೆಡ್ಡಿ

ಕುಷ್ಟಗಿ:ಕುಷ್ಟಗಿ ವಿಧಾನಸಭಾ ಕ್ಷೇತ್ರಕ್ಕೆ ಗಾಲಿ ಜನಾರ್ದನ ರೆಡ್ಡಿ ಅವರ ಕರ್ನಾಟಕ ರಾಜ್ಯ ಪ್ರಗತಿ ಪಕ್ಷಕ್ಕೆ ವೀರಶೈವ ಲಿಂಗಾಯತ ಸಮುದಾಯದ ಅಭ್ಯರ್ಥಿಗೆ ಗಾಳ ಹಾಕಿದ್ದು,ಕುಷ್ಟಗಿ ಕ್ಷೇತ್ರದಲ್ಲಿ ರೆಡ್ಡಿ ಪಕ್ಷ ಇದೀಗ ಮುನ್ನೆಲೆಗೆ ಬಂದಿದೆ.   ಈಗಾಗಲೇ ಜೆಡಿಎಸ್ ತುಕಾರಾಮ್ ಸುರ್ವೆ ತನ್ನ ಅಭ್ಯರ್ಥಿ ಎಂದು ಪ್ರಕಟಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಹಾಲಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ, ಪ್ರತಿಸ್ಪರ್ಧಿ ಬಿಜೆಪಿ ಪಕ್ಷದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಅಭ್ಯರ್ಥಿಗಳೆಂದು ಪ್ರಕಟಿಸುವುದು ಬಾಕಿ ಇದೆ. …

Read More »

ಮೆಜೆಸ್ಟಿಕ್‌ ‘ಅಕ್ರಮ’ ವ್ಯಾಪಾರ: ಪ್ರಶ್ನಿಸಿದರೆಚಾಕು- ಚೂರಿ ತೋರಿಸಿ ಕೊಲೆ ಬೆದರಿಕೆ

ಬೆಂಗಳೂರು: ಮೆಜೆಸ್ಟಿಕ್‌ ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣಕ್ಕೆ ಹೊಂದಿಕೊಂಡಿರುವ ಸುರಂಗ ಮಾರ್ಗದಲ್ಲಿ ‘ಅಕ್ರಮ’ ವ್ಯಾಪಾರ ಜೋರಾಗಿದ್ದು, ಇದನ್ನು ಪ್ರಶ್ನಿಸುವ ಜನರ ಮೇಲೆ ವ್ಯಾಪಾರಿಗಳು ಹಲ್ಲೆ ಮಾಡುತ್ತಿದ್ದಾರೆ. ತಮ್ಮದೇ ಗುಂಪು ಕಟ್ಟಿಕೊಂಡು ಚಾಕು- ಚೂರಿ ತೋರಿಸಿ ಕೊಲೆ ಬೆದರಿಕೆಯೊಡ್ಡುತ್ತಿರುವ ದೂರುಗಳು ಹೆಚ್ಚಾಗಿವೆ.   ನಿಲ್ದಾಣಕ್ಕೆ ಬಂದು ಹೋಗುವ ಜನರ ಸಂಚಾರಕ್ಕೆ ಅನುಕೂಲವಾಗಲೆಂದು ಸುರಂಗ ಮಾರ್ಗ ನಿರ್ಮಿಸಲಾಗಿದ್ದು, ‘ಕಡ್ಡಾಯವಾಗಿ ಸುರಂಗ ಮಾರ್ಗ ಬಳಸಿ’ ಎಂಬ ನಾಮಫಲಕಗಳನ್ನು ನೇತುಹಾಕಲಾಗಿದೆ. ಆದರೆ, ಜನರು ಓಡಾಡುವ …

Read More »