ಶಿರಸಿ: ಐಟಿ, ಬಿಟಿ ಎಂದರೆ ಬೃಹತ್ ನಗರಗಳಿಗಷ್ಟೇ ಸೀಮಿತ. ಅದು ಆ ನಗರದ ಹಾಗೂ ಕಂಪನಿಯ ಪ್ರತಿಷ್ಠೆಯ ಪ್ರಶ್ನೆಯೂ ಹೌದು ಎಂಬ ಭಾವನೆ ದೂರಗೊಳಿಸುವ ವಿದ್ಯಮಾನಕ್ಕೆ ಐಟಿ ಕಂಪನಿಯೊಂದು ಶ್ರೀಗಣೇಶ ಹಾಡಿದೆ. ದಟ್ಟಾರಣ್ಯಗಳ ತವರೆಂದೇ ಖ್ಯಾತವಾದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಂಗಳೆ ಗ್ರಾಮದ ಒಡ್ಡಿನಕೊಪ್ಪದ ಹಸಿರ ಹೊದಿರಿನ ಮಧ್ಯೆ ಆಲ್ಟ್ ಡಿಜಿಟಲ್ ಟೆಕ್ನಾಲಜೀಸ್ ಎಂಬ ಕಂಪನಿ ಪಾದಾರ್ಪಣೆ ಮಾಡುವ ಮೂಲಕ ಹೊಸ ಬೆಳವಣಿಗೆಗೆ ನಾಂದಿ ಹಾಡಿದೆ. ಐಟಿಯಲ್ಲಿ ಸಾಕಷ್ಟು ಹೆಸರುವಾಸಿಯಾಗಿರುವ ಈ …
Read More »ಆಂಧ್ರದ ರಾಜ್ಯಪಾಲರಾಗಿ ಕನ್ನಡಿಗ ನಜೀರ್
ಬೆಂಗಳೂರು: ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಕರ್ನಾಟಕದ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶ ರಾಜ್ಯದ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ಎಸ್. ಅಬ್ದುಲ್ ನಜೀರ್ ಅವರು ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ‘ನೂತನವಾಗಿ ಆಂಧ್ರ ಪ್ರದೇಶದ ರಾಜ್ಯಪಾಲರಾಗಿ ನಿಯುಕ್ತಿಗೊಂಡಿರುವ ಹೆಮ್ಮೆಯ ಕನ್ನಡಿಗ ಎಸ್. ಅಬ್ದುಲ್ ನಜೀರ್ ಅವರಿಗೆ ಹಾರ್ದಿಕ ಅಭಿನಂದನೆಗಳು. ಮೂಲತಃ ಮಂಗಳೂರಿನ ಬೆಳುವಾಯಿಯವರಾದ ಇವರು ಕರ್ನಾಟಕದ ಉಚ್ಛ ನ್ಯಾಯಾಲಯದಲ್ಲಿ …
Read More »ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಮಕ್ಕಳನ್ನೇ ಕೊಂದ ತಂದೆ
ದೇವದುರ್ಗ (ರಾಯಚೂರು ಜಿಲ್ಲೆ): ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿದ ದೇವದುರ್ಗ ತಾಲ್ಲೂಕಿನ ಜಕ್ಲೇರದೊಡ್ಡಿ ಗ್ರಾಮದ ನಿಂಗಪ್ಪ ಎಂಬಾತ ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಶನಿವಾರ ಕೃತ್ಯ ನಡೆದಿದ್ದು, ಭಾನುವಾರ ಗೊತ್ತಾಗಿದೆ. ಶಿವರಾಜ ನಿಂಗಪ್ಪ (5), ರಾಘವೇಂದ್ರ ನಿಂಗಪ್ಪ (3) ಕೊಲೆಯಾದ ಮಕ್ಕಳು. ಶನಿವಾರ ಮಧ್ಯರಾತ್ರಿಯೇ ದೇವದುರ್ಗ ಪೊಲೀಸ್ ಠಾಣೆಗೆ ತೆರಳಿ ಪತಿ ನಿಂಗಪ್ಪನ ವಿರುದ್ಧ ಪತ್ನಿ ಪ್ರಭಾವತಿ ದೂರು ಸಲ್ಲಿಸಿದ್ದಾರೆ. ಆರೋಪಿಯನ್ನು ಪೊಲೀಸರು …
Read More »ಮಡಿವಾಳೇಶ್ವರ ಕಲ್ಮಠ ಚನ್ನಬಸವ ಸ್ವಾಮೀಜಿ ಲಿಂಗೈಕ್ಯ
ಧಾರವಾಡ: ತಾಲ್ಲೂಕಿನ ಐತಿ ಹಾಸಿಕ ಗರಗ ಮಡಿವಾಳೇಶ್ವರ ಕಲ್ಮಠದ ಪೀಠಾ ಧಿಪತಿ ಚನ್ನಬಸವ ಸ್ವಾಮೀಜಿ (88) ಅವರು ಭಾನುವಾರ ಲಿಂಗೈಕ್ಯರಾದರು. ಇವರು ವಯೋಸಹಜ ಕಾಯಿಲೆ ಬಳಲುತ್ತಿದ್ದರು. ಹಲವು ವರ್ಷಗಳಿಂದ ಕಲ್ಮಠದ ಜವಾಬ್ದಾರಿ ಹೊತ್ತಿದ್ದ ಸ್ವಾಮೀಜಿ, ಮಠದ ಏಳಿಗೆಗಾಗಿ ಶ್ರಮಿಸಿದ್ದರು. ಅನ್ನದಾನ, ವಿದ್ಯಾದಾನಕ್ಕೆ ಹೆಚ್ಚಿನ ಒತ್ತು ನೀಡಿದ್ದ ಅವರು, ಸಮಾಜ ಸೇವೆ ಯಲ್ಲಿಯೂ ತೊಡಗಿಸಿಕೊಂಡಿದ್ದರು. ಮಠದ ಆವರಣದಲ್ಲಿ ಮಧ್ಯಾಹ್ನ 12.30ರಿಂದ ಸೋಮವಾರ ಬೆಳಿಗ್ಗೆ 7.30ರವರೆಗೆ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ಭಕ್ತರಿಗೆ ಅವಕಾಶ …
Read More »2.60 ಕೋಟಿ ರೂ. ಮೌಲ್ಯದ ವಜ್ರ ವಶಕ್ಕೆ ಪಡೆದ ಅಧಿಕಾರಿಗಳು
ಮಂಗಳೂರು: ಭಾರತ ದಿಂದ ದುಬಾೖಗೆ ಅಕ್ರಮವಾಗಿ ವಿಮಾನದಲ್ಲಿ 2.60 ಕೋಟಿ ರೂ. ಮೌಲ್ಯದ ವಜ್ರ ಸಾಗಿಸುತ್ತಿದ್ದ ಇಬ್ಬರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾರತೀಯ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದುಬಾೖಗೆ ತೆರಳುತ್ತಿದ್ದ ಭಟ್ಕಳದ ಅನಾಸ್ ಮತ್ತು ಅಮ್ಮರ್ ತಮ್ಮ ಶೂ ಮತ್ತು ಬ್ಯಾಗ್ ಅಡಿಯಲ್ಲಿ ಅನುಮಾನ ಬಾರದಂತೆ ವಜ್ರವನ್ನು ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದರು. ಮುಂಬಯಿಯಿಂದ ತಂದಿದ್ದರು ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದಲ್ಲಿ ತಪಾಸಣೆ ವೇಳೆ ಇದು …
Read More »ರಾಜ್ಯಪಾಲರ ನೇಮಕದಲ್ಲೂ ಕೇಂದ್ರದಿಂದ ಚಾಣಾಕ್ಷ ನಡೆ
ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳಿಗೆ ವಿಶೇಷ ಸ್ಥಾನಮಾನವಿದೆ. ರಾಜ್ಯಪಾಲರು ಆಯಾಯ ರಾಜ್ಯಗಳ ಪ್ರಥಮ ಪ್ರಜೆಯಾಗಿದ್ದು ಇವರನ್ನು ಕೇಂದ್ರ ಸರಕಾರದ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ಅವರು ನೇಮಕ ಮಾಡುತ್ತಾರೆ. ರಾಜ್ಯ ಮತ್ತು ಕೇಂದ್ರ ಸರಕಾರದ ನಡುವಣ ಕೊಂಡಿಯಾಗಿ ರಾಜ್ಯಪಾಲರು ಕರ್ತವ್ಯ ನಿರ್ವಹಿಸುತ್ತಾರೆ. ರಾಜ್ಯದಲ್ಲಿ ಯಾವುದೇ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾದಾಗ ರಾಜ್ಯಪಾಲರ ಪಾತ್ರ ಅತೀ ಮಹತ್ವದ್ದಾಗಿರುತ್ತದೆ. ರವಿವಾರದಂದು ಕೇಂದ್ರ ಸರಕಾರದ ಶಿಫಾರಸಿನಂತೆ ಹೊಸದಾಗಿ …
Read More »ಚುನಾವಣ ಸೇತುವೆ ಮೇಕೆದಾಟು
ಬೆಂಗಳೂರು ನಗರ ಹಾಗೂ ಸುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರನ್ನು ಪೂರೈಸುವ ಯೋಜನೆಯಾದ ಮೇಕೆದಾಟು ಯೋಜನೆ ಈ ಬಾರಿಯ ಚುನಾವಣ ಅಸ್ತ್ರವಾಗುವ ಸಾಧ್ಯತೆಗಳಿವೆ. ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ರಾಜಕೀಯ ಮತ್ತು ಭಾವನಾತ್ಮಕ ಸಂಘರ್ಷಕ್ಕೆ ಕಾರಣವಾಗುವ ಮೇಕೆದಾಟು ಯೋಜನೆ ರಾಜಕೀಯ ಪಕ್ಷಗಳಿಗೆ ಆಯಾ ಸಂದರ್ಭದಲ್ಲಿ ರಾಜಕೀಯ ದಾಳ ಮತ್ತು ಚುನಾವಣ ಅಸ್ತ್ರವೂ ಆಗಿರುತ್ತದೆ. ಈ ಬಾರಿಯೂ ಅಷ್ಟೇ ದಕ್ಷಿಣ ಕರ್ನಾಟಕದಲ್ಲಿ ಮೇಕೆದಾಟು ಯೋಜನೆಯನ್ನು ಚುನಾವಣೆ ಅಸ್ತ್ರವನ್ನಾಗಿಸಲು ಎಲ್ಲ ಪಕ್ಷಗಳು ಪ್ರಯತ್ನಿಸಿವೆ. …
Read More »JDS ಶಾಸಕರು ಕಾಂಗ್ರೆಸ್ ಸೇರುವುದು ಖಚಿತ
ರಾಯಚೂರು: ಜೆಡಿಎಸ್ ಶಾಸಕ ಶಿವಲಿಂಗೇಗೌಡರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದು, ನೂರಕ್ಕೆ ನೂರರಷ್ಟು ಅವರು ಕಾಂಗ್ರೆಸ್ ಗೆ ಬರುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಅರಸಿಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡರು 100 ಪರ್ಸೆಂಟ್ ಕಾಂಗ್ರೆಸ್ ಗೆ ಬರ್ತಾರೆ. ಯಾಕೆ ಅನುಮಾನಾನಾ? ಎಂದು ಪ್ರಶ್ನಿಸಿದ್ದಾರೆ. ವಿಧಾನಮಂಡಲ ಅಧಿವೇಶನ ಮುಗಿದ ಮೇಲೆ ಯಾವತ್ತು ಬೇಕಾದರೂ ಅವರು ಕಾಂಗ್ರೆಸ್ ಗೆ ಬರುತ್ತಾರೆ ಎಂದು ತಿಳಿಸಿದ್ದಾರೆ. ಅರಸಿಕೆರೆ ಜೆಡಿಎಸ್ ಶಾಸಕರಾಗಿರುವ ಶಿವಲಿಂಗೇಗೌಡರಿಗೆ …
Read More »ಚಿನ್ನ ಗಿರವಿ ಇಡಲು ಅಂಗಡಿಗೆ ಬಂದ ಗ್ರಾಹಕ ಚಿನ್ನದ ಶಾಪ್ ಗೆ ಬೆಂಕಿ ಇಟ್ಟ
ಬೆಂಗಳೂರು: ಚಿನ್ನ ಗಿರವಿ ಇಡಲು ಅಂಗಡಿಗೆ ಬಂದ ಗ್ರಾಹಕ ಚಿನ್ನದ ಶಾಪ್ ಗೆ ಬೆಂಕಿ ಇಟ್ಟಿರುವ ಘಟನೆ ಬೆಂಗಳೂರಿನ ಮುನೇಶ್ವರ ಬ್ಲಾಕ್ ನಲ್ಲಿ ನಡೆದಿದೆ. ಚಿನ್ನ ಗಿರವಿ ಇಟ್ಟಿದ್ದಕ್ಕೆ ಕೇವಲ 50 ಸಾವಿರ ರೂಪಾಯಿ ಕೊಡುವುದಾಗಿ ಹೇಳಿದ್ದಕ್ಕೆ ಸಿಟ್ಟಿಗೆದ್ದ ವ್ಯಕ್ತಿ ಗಿರವಿ ಅಂಗಡಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಗಿರವಿ ಅಂಗಡಿ ಮಾಲೀಕ ಭರತ್ ಲಾಲ್ (54) ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »ಶಿವಮೊಗ್ಗ ಏರ್ ಪೋರ್ಟ್ ಗೆ ‘ಕುವೆಂಪು’ ಹೆಸರಿಡಲು ನಿರ್ಧಾರ : B.S ಯಡಿಯೂರಪ್ಪ
ಶಿವಮೊಗ್ಗ : ಶಿವಮೊಗ್ಗ ಏರ್ ಪೋರ್ಟ್ ಗೆ ರಾಷ್ಟ್ರಕವಿ ಕುವೆಂಪು ಹೆಸರಿಡಲು ನಿರ್ಧಾರ ಮಾಡಲಾಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಯಡಿಯೂರಪ್ಪ ಶಿವಮೊಗ್ಗ ಏರ್ ಪೋರ್ಟ್ ಗೆ ನನ್ನ ಹೆಸರು ಇಡಬೇಡಿ ಎಂದು ಈಗಾಗಲೇ ಮನವಿ ಮಾಡಿದ್ದೇನೆ. ಶಿವಮೊಗ್ಗ ಏರ್ ಪೋರ್ಟ್ ಗೆ ಕುವೆಂಪು ಹೆಸರಿಡುವಂತೆ ಅಧಿವೇಶನದಲ್ಲಿ ಪ್ರಸ್ತಾಪ ಮಾಡುತ್ತೇನೆ. ಫೆ.27 ರಂದು ಶಿವಮೊಗ್ಗ ಏರ್ ಪೋರ್ಟ್ ಗೆ ಮೋದಿ ಬರುತ್ತಾರೆ. ಮೋದಿ …
Read More »
Laxmi News 24×7