ಬೆಳಗಾವಿ: ಸರ್ಕಾರಿ ಕರ್ತವ್ಯದ ಮೇಲಿದ್ದ ಉಪ-ನೊಂದಣಿ ಅಧಿಕಾರಿಗೆ ಕರ್ತವ್ಯಕ್ಕೆ ಅಡ್ಡಿ ಹಾಗೂ ಧಮ್ಕಿ ಹಾಕಿದ್ದ ಆರೋಪಿಯನ್ನು ಮೂಡಲಗಿ ಪೊಲೀಸರು ಬಂಧಿಸಿ ನ್ಯಾಯಾಂಗಕ್ಕೆ ಒಪ್ಪಿಸಿದ್ದಾರೆ. ಗೋಕಾಕ ಸೋಮವಾರ ಪೇಟೆಯ ನಿವಾಸಿ ಹಾಗೂ ಬಾಂಡ್ ರೈಟರ್ ಆಗಿರುವ ಆನಂದ ಸಿದ್ದಲಿಂಗಪ್ಪಾ ಗೊಟಡಕಿ ( 52) ಬಂಧಿತ ಆರೋಪಿ. ಈತನು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಜೀವ ಬೆದರಿಕೆ ಹಾಕಿದ್ದಾನೆಂದು ಮೂಡಲಗಿ ಉಪ-ನೊಂದಣಿ ಅಧಿಕಾರಿ ದುರದುಂಡೆಪ್ಪಾ ಕೆಂಪಣ್ಣಾ ಕುಳ್ಳೂರ ಅವರು ಮೂಡಲಗಿ ಪೊಲೀಸ್ ಠಾಣೆಯಲ್ಲಿ ದೂರು …
Read More »ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ-48 ರ ಆರು ಪಥಗಳ ಕಾಮಗಾರಿ ಅಂತಿಮ ಹಂತದಲ್ಲಿ; ಪ್ರಯಾಣಿಕರಿಗೆ ಶೀಘ್ರವೇ ಸುಗಮ ಸಂಚಾರಕ್ಕೆ ಮುಕ್ತ: ಸಂಸದ ಈರಣ್ಣ ಕಡಾಡಿ
ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-48 ರ ಪುಣೆ-ಬೆಂಗಳೂರು ವಿಭಾಗದ ಆರು ಪಥಗಳ ಕಾಮಗಾರಿಯು ಬೆಳಗಾವಿಯಿಂದ ಸಂಕೇಶ್ವರ ಬೈಪಾಸ್‌ವರೆಗಿನ 40 ಕಿ.ಮೀ ರಸ್ತೆಯು ಶೇ. 98.10 ರಷ್ಟು ಪೂರ್ಣಗೊಂಡಿದ್ದು, ಮಾರ್ಚ್ 31, 2026 ರೊಳಗೆ ಪೂರ್ಣಗೊಳ್ಳಲಿದೆ. ಹಾಗೂ ಸಂಕೇಶ್ವರ ಬೈಪಾಸ್‌ನಿಂದ ಮಹಾರಾಷ್ಟ್ರ ಗಡಿಯವರೆಗಿನ 37.83 ಕಿ.ಮೀ ಉದ್ದದ ಕಾಮಗಾರಿಯು ಶೇ 78.10% ಪ್ರಗತಿಯಲ್ಲಿದ್ದು ಅಕ್ಟೋಬರ್ 31, 2026 ಕ್ಕೆ ಪೂರ್ಣಗೊಳ್ಳುವ ನಿರೀಕ್ಷೆಯಿದ್ದು ಶೀಘ್ರದಲ್ಲೇ ಪ್ರಯಾಣಿಕರಿಗೆ ಸುಗಮ ಸಂಚಾರಕ್ಕೆ …
Read More »ಫಸಲ್ ಭೀಮಾ ಯೋಜನೆ ಬೆಳೆ ವಿಮೆಯಲ್ಲಿ 30 ಕೋಟಿಗೂ ಅಧಿಕ ಹಣ ಲೂಟಿ – 11 ಜನರ ವಿರುದ್ಧ FIR
ಬಾಗಲಕೋಟೆ: ಫಸಲ್ ಭೀಮಾ ಯೋಜನೆ ಬೆಳೆ ವಿಮೆಯಲ್ಲಿ 30 ಕೋಟಿ ರೂ.ಗೂ ಅಧಿಕ ಹಣ ಲೂಟಿ ಹೊಡೆದ 11 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಸಂಬಂಧ ಮುಧೋಳ ಸಹಾಯಕ ಕೃಷಿ ನಿರ್ದೇಶಕ ಸಿದ್ದಲಿಂಗೇಶ ದೊಡ್ಡಮನಿ ಎಂಬುವವರು ದೂರು ನೀಡಿದ್ದು, ದೂರಿನ ಆಧಾರದ ಮಾ.10ರಂದು ಮೇಲೆ ಮೆಟಗುಡ್ಡ ಗ್ರಾಮದ ಕಲ್ಲಪ್ಪ ಹುಣಸೀಕಟ್ಟಿ, ಶ್ರೀನಿವಾಸ ಪಾಟಿಲ್, ಕಲ್ಮೇಶ್ ಜುನ್ನೂರ, ಶ್ರೀನಿವಾಸ ಹುಣಸೀಕಟ್ಟಿ, ರಮೇಶ್ ಹುಣಸೀಕಟ್ಟಿ, ಪ್ರಶಾಂತ ಕೋಮಾರ, ಶ್ರೀಕಾಂತ ಹಲಗಲಿ, ಇನ್ಶುರೆನ್ಸ್ …
Read More »ಕೇವಲ ಮಧುರೈ ಏಕೆ? ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್
ಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು ತಾರತಮ್ಯ ಧೋರಣೆಯ ಪ್ರದರ್ಶನವಾಗಿದೆ. ಇದು ಸರ್ವಥಾ ಸರಿಯಲ್ಲ. ಅವರಿಗೆ ಬೆಣ್ಣೆ, ನಮಗೆ ಸುಣ್ಣ ಎಂದರೆ ಹೇಗೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಅವರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಕೇಂದ್ರ ಸರ್ಕಾರವು …
Read More »ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಆಯೋಜಿಸಲಾಗಿದ್ದ ಔತಣಕೂಟದಲ್ಲಿ ಪಾಲ್ಗೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಹೂಗುಚ್ಛ ನೀಡಿ ಡಿ.ಕೆ.ಶಿವಕುಮಾರ್ ಅವರನ್ನು ಅಭಿನಂದಿಸಿದರು. ಪಕ್ಷದ ಸಂಘಟನೆಯಲ್ಲಿನ ಅವರ ಅಚಲ ಬದ್ಧತೆ, ತಳಮಟ್ಟದ ಕಾರ್ಯಕರ್ತರಿಗೆ ನೀಡಿದ ಬೆಂಬಲ ಮತ್ತು ಸವಾಲಿನ ಸಂದರ್ಭಗಳಲ್ಲಿ ಅವರು ಪ್ರದರ್ಶಿಸಿದ ದಿಟ್ಟ ನಾಯಕತ್ವ …
Read More »ನಿವೃತ್ತ ಸುಭೇದಾರ ಶಿವಾಜೀರಾವ್ ಯಲ್ಲಪ್ಪ ಪಾಟೀಲ್ ನಿಧನ
ಬೆಳಗಾವಿ ತಾಲೂಕಿನ ಮುಚ್ಚಂಡಿ ಮೂಲದ ಸದಸ್ಯ ವಡಗಾಂವನ ರಹಿವಾಸಿಯಾಗಿದ್ದ ನಿವೃತ್ತ ಸುಭೇದಾರ ಶಿವಾಜೀರಾವ್ ಯಲ್ಲಪ್ಪ ಪಾಟೀಲ್ (67) ಅವರು ಇಂದು ನಿಧನರಾದರು. ಮೃತರು ಸಹೋದರ, ಸಹೋದರಿ, ಪತ್ನಿ, ಸುಪುತ್ರ, ಸುಪುತ್ರಿ, ಅಳಿಯ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯೂ ಬುಧವಾರ ಮಾರ್ಚ್ 11 ರಂದು ಬೆಳಿಗ್ಗೆ 11 ಗಂಟೆಗೆ ವಡಗಾಂವ ಸ್ಮಶಾನಭೂಮಿಯಲ್ಲಿ ನಡೆಯಲಿದೆ. ಗುರುವಾರ 12 ರಂದು ಬೆಳಿಗ್ಗೆ 8 ಗಂಟೆಗೆ ಅಸ್ಥಿ ವಿಸರ್ಜನೆ ನಡೆಯಲಿದೆ.
Read More »ಅಗಸಗೆಯಲ್ಲಿ ಸಡಗರದ ವಿಶ್ವ ಮಹಿಳಾ ದಿನಾಚರಣೆ: ಮಹಿಳೆಯರಿಗೆ ಸೀರೆ ವಿತರಿಸಿ ಸಂಭ್ರಮ
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬೆಳಗಾವಿ ಜಿಲ್ಲೆಯ ಅಗಸಗೆ ಗ್ರಾಮದಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಚಿವರಾದ ಸತೀಶ್ ಜಾರಕೀಹೊಳಿ, ಸಂಸದೆ ಪ್ರಿಯಾಂಕಾ ಜಾರಕೀಹೊಳಿ ಮತ್ತು ಯುವ ನಾಯಕ ರಾಹುಲ್ ಜಾರಕೀಹೊಳಿ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮವು ಮಹಿಳಾ ಸಬಲೀಕರಣಕ್ಕೆ ಸಾಕ್ಷಿಯಾಯಿತು. ಬೆಳಗಾವಿ ಜಿಲ್ಲೆಯ ಅಗಸಗೆ ಗ್ರಾಮದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮವು ಅತ್ಯಂತ ಉತ್ಸಾಹದಿಂದ ನೆರವೇರಿತು. ರಾಜ್ಯ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ …
Read More »ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ, ಹುಬ್ಬಳ್ಳಿಯಲ್ಲಿ ಡಿ.ಕೆ.ಶಿವಕುಮಾರ್ ಬೆಂಬಲಿಗರ ಸಂಭ್ರಮ
ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಬೆಂಬಲಿಗರು ಹುಬ್ಬಳ್ಳಿಯಲ್ಲಿ ಸಂಭ್ರಮಾಚರಣೆ ನಡೆಸಿದರು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಸರ್ವೋದಯ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹಾಗೂ ಪರಸ್ಪರ ಸಿಹಿ ತಿನ್ನಿಸುವ ಮೂಲಕ ವಿಜಯೋತ್ಸವ ಆಚರಿಸಿದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರ ಅಳಿಯ ರಜತ್ ಉಳ್ಳಾಗಡ್ಡಿಮಠ ಅವರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು. ಈ ವೇಳೆ ಕಾರ್ಯಕರ್ತರು “ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್” ಎಂದು …
Read More »ಖೋಖೋ ಆಟದಿಂದ ಭವಿಷ್ಯ ನಿರ್ಮಾಣ: ಡಾ. ಜಗದೀಶ ಚಿತ್ತರಗಿ
ಬಾಗಲಕೋಟೆ : ಖೋಖೋ ಕ್ರೀಡೆಯಾಗಿರದೇ ಜೀವನ ಶೈಲಿಯಾಗಿದ್ದು ಇದರಲ್ಲಿ ತೊಡಗಿಸಿಕೊಳ್ಳವುದರಿಂದ ಆರೋಗ್ಯದ ಜೊತೆಗೆ ಭವಿಷ್ಯ ರೂಪಿಸಿಕೊಳ್ಳಲು ಸಹಾಯಕ ಎಂದು ಕರ್ನಾಟಕ ರಾಜ್ಯದ ಖೋಖೋ ಸಂಸ್ಥೆಯ ಉಪಾಧ್ಯಕ್ಷ ಹಾಗೂ ಧಾರಾವಾಡದ ಎಕ್ಸಲೆಂಟ್ ನೀಟ್ ಅಕಾಡೆಮಿ ಅಧಿಕಾರಿಗಳಾದÀ ಡಾ. ಜಗದೀಶ ಚಿತ್ತರಗಿ ಹೇಳಿದರು. ಬಾಗಲಕೋಟ ವಿಶ್ವವಿದ್ಯಾಲಯ ಹಾಗೂ ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡ ಪ್ರಸಕ್ತ ಸಾಲಿನ ಏಕವಲಯ ಮಹಿಳೆಯರ ಖೋ – ಖೋ ಪಂದ್ಯಾವಳಿಗಳು ಹಾಗೂ ವಿಶ್ವವಿದ್ಯಾಲಯ ತಂಡದ …
Read More »13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು
ನವದೆಹಲಿ: 13 ವರ್ಷಗಳಿಂದ ಕೋಮಾದಲ್ಲಿದ್ದ 31 ವರ್ಷದ ವ್ಯಕ್ತಿಗೆ ದಯಾಮರಣ ನೀಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡುವ ಮೂಲಕ ಐತಿಹಾಸಿಕ ತೀರ್ಪು ನೀಡಿದೆ. ರೋಗಿಯ ಆರೋಗ್ಯ ಸ್ಥಿತಿಯ ಕುರಿತು ಎರಡು ವೈದ್ಯಕೀಯ ಮಂಡಳಿಗಳ ಅಭಿಪ್ರಾಯಗಳನ್ನು ಪರಿಗಣಿಸಿ ತೀರ್ಪು ಪ್ರಕಟಿಸಿದೆ. ನ್ಯಾಯಾಲಯವು ತನ್ನ ಮಾರ್ಗಸೂಚಿಗಳ ಅಡಿಯಲ್ಲಿ ನಿಷ್ಕ್ರಿಯ ದಯಾಮರಣವನ್ನು ಅನುಮತಿಸಿದ ಮೊದಲ ಪ್ರಕರಣ ಇದಾಗಿದೆ. ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಹರೀಶ್ ರಾಣಾ 2013 ರಲ್ಲಿ ಪೇಯಿಂಗ್ ಗೆಸ್ಟ್‌ನ ನಾಲ್ಕನೇ ಮಹಡಿಯಿಂದ ಬಿದ್ದು …
Read More »
Laxmi News 24×7