Breaking News

ವಿಧಾನಸೌಧದಲ್ಲಿ ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ್‌ ಶಾಮನೂರು ಪ್ರಮಾಣವಚನ

ಬೆಂಗಳೂರು: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಇಂದು ಅಧಿಕೃತವಾಗಿ ಪದಗ್ರಹಣ ಮಾಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನೂತನ ಶಾಸಕರು ಶಾಸನಬದ್ಧವಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಾಗಲಕೋಟೆ ಕ್ಷೇತ್ರದ ಶಾಸಕ ಉಮೇಶ್ ಮೇಟಿ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್‌ ಶಾಮನೂರುಅವರಿಗೆ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ …

Read More »

ದಾವಣಗೆರೆ ಉಪಚುನಾವಣೆ ಎಫೆಕ್ಟ್‌ನಿಂದ ಸರ್ಕಾರ ಹಿಜಬ್‌ಗೆ ಅನುಮತಿ ಕೊಟ್ಟಿದೆ: ಹೆಚ್‌ಡಿಕೆ

ಬೆಂಗಳೂರು: ದಾವಣಗೆರೆ ಉಪಚುನಾವಣೆ ಎಫೆಕ್ಟ್ ನೋಡಿ ಕಾಂಗ್ರೆಸ್  ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಹಿಜಬ್‌ಗೆ ಅವಕಾಶ ಕೊಟ್ಟಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ  ಸರ್ಕಾರದ ನಡೆಯನ್ನ ವಿರೋಧಿಸಿದ್ದಾರೆ. ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸುಪ್ರೀಂಕೋರ್ಟ್‌ನಲ್ಲಿ ಹಿಜಬ್ ಕೇಸ್ ಇದೆ. ಆ ಕೇಸ್‌ಗೆ ಕಾಯದೇ ಇವರು ಹೇಗೆ ಹೊಸ ಆದೇಶ ಮಾಡಿದ್ರು. ವಿದ್ಯಾರ್ಥಿಗಳ ಹಿತಕ್ಕಾಗಿ ಅಂತಾರೆ. ಹಾಗಾದರೆ 3 ವರ್ಷ ಆಯ್ತು ಸರ್ಕಾರ ಬಂದು ಇಷ್ಟು ದಿನ ಏನ್ ಮಾಡ್ತಾ …

Read More »

ಪೋಕ್ಸೋ ಕೇಸಲ್ಲಿ ವಚನಾನಂದ ಶ್ರೀಗೆ ಐದು ಗಂಟೆ ಗ್ರಿಲ್

ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಸುತ್ತ ಈಗ ಪೋಕ್ಸೋ ಉರುಳು ಬಿಗಿಗೊಂಡಿದೆ. ಇಂದು ಹರಿಹರ ಗ್ರಾಮಾಂತರ ಪೊಲೀಸರು ಶ್ರೀಗಳನ್ನು ಐದು ಗಂಟೆಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ್ದಾರೆ. ಇತ್ತೀಚಿಗೆ ಮಠದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶ್ರೀಗಳ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಹರಿಹರ ಗ್ರಾಮಾಂತರ ಠಾಣೆಯ ಪಿಎಸ್‌ಐ ಮಂಜುಳಾ ನೇತೃತ್ವದ ತಂಡ, ಇಂದು ವಚನಾನಂದ ಶ್ರೀಗಳನ್ನು ನಿರಂತರ ಐದು …

Read More »

ಕೇಸರಿ ಪೇಟಕ್ಕೂ ಅವಕಾಶ ಇಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಶಾಲೆಗಳಿಗೆ ಕೇಸರಿ ಶಾಲು ಹಾಕಿಕೊಂಡು ಬರುವಂತಿಲ್ಲ. ಕೇಸರಿ ಪೇಟಕ್ಕೂ ಅವಕಾಶ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಮೊದಲಿನಿಂದ ಯಾವ ಪೇಟಗಳಿವೆ ಆ ಪೇಟಗಳಿಗಷ್ಟೇ ಅವಕಾಶ ನೀಡಲಾಗಿದೆ. ಈಗ ಪೇಟದ ಬಣ್ಣ ಬದಲಾಯಿಸಿಕೊಂಡು ಬಂದರೆ ಅವಕಾಶ ಮಾಡಿಕೊಡುವುದಿಲ್ಲ. ಹಿಜಬ್‌ಗೆ ಮಾತ್ರ ಅವಕಾಶ ಕೊಟ್ಟಿಲ್ಲ. ಜನಿವಾರ, ಶಿವಧಾರ, ಪೇಟಕ್ಕೂ ಅವಕಾಶ ಕೊಟ್ಟಿದ್ದೇವೆ. ಆದರೆ ಹೊಸ ರೂಪದ ಪೇಟಕ್ಕೆ ಅವಕಾಶ ಇಲ್ಲ …

Read More »

ಏ ಇವನ್ಯಾವನೋ ಬಿಸಿಲಲ್ಲಿ ಎಳನೀರು ತರಬೇಕಲ್ವಾ – ನೀರು ಕೊಡಲು ಬಂದ ಅಧಿಕಾರಿ ಮೇಲೆ ಸಿಎಂ ಗರಂ

ಮೈಸೂರು: ಕಾಮಗಾರಿ ವೀಕ್ಷಣೆ ಮಾಡಲು ಹೋಗಿದ್ದಾಗ ನೀರು ಕೊಡಲು ಬಂದ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ  ಗರಂ ಆಗಿದ್ದಾರೆ. ಏ ಇವನ್ಯಾವನೋ ಬಿಸಿಲಲ್ಲಿ ಎಳನೀರು ತರಬೇಕಲ್ವಾ ಎಂದು ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಮೈಸೂರು ನಗರದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸುತ್ತಿದ್ದಾರೆ. ಈ ವೇಳೆ ಎಂಜಿನಿಯರ್ ಒಬ್ಬರು ನೀರು ಕೊಡಲು ಬಂದಿದ್ದು, ಆಗ ಸಿಎಂ ಏ ಜ್ಯೂಸ್ ಇಲ್ವೇನಯ್ಯ ಎಂದು ಕೇಳಿದ್ದಾರೆ. ಏ ಇವನ್ಯಾವನೋ ಬಿಸಿಲಲ್ಲಿ ಎಳನೀರು ತರಬೇಕಲ್ವಾ …

Read More »

ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಆದೇಶ

ನವದೆಹಲಿ: ಭಾರತ ಚುನಾವಣಾ ಆಯೋಗವುಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ  ನಡೆಸಲು ಆದೇಶ ಪ್ರಕಟಿಸಿದೆ. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ ಹೊರತು ಪಡಿಸಿ ಉಳಿದ ರಾಜ್ಯಗಳಲ್ಲಿ ಎಸ್‌ಐಆರ್‌ ನಡೆಯಲಿದೆ. ಈ ರಾಜ್ಯಗಳಲ್ಲಿ ಕಷ್ಟಕರವಾದ ಭೂಪ್ರದೇಶ, ಹವಾಮಾನ ಅಡಚಣೆಗಳು ಮತ್ತು ಕಾರ್ಯಾಚರಣೆಯ ಸವಾಲುಗಳು, ವಿಶೇಷವಾಗಿ ಹಿಮಪಾತ ಪೀಡಿತ ಮತ್ತು ಎತ್ತರದ ಪ್ರದೇಶಗಳಿರುವುದರಿಂದ ಎಸ್‌ಐಆರ್‌ ಪ್ರಕ್ರಿಯೆಯನ್ನು ಮುಂದೂಡಿದೆ. …

Read More »

ನೀಟ್ ಪರೀಕ್ಷೆ ಪೇಪರ್ ಲೀಕ್ – ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ‌ಕೊಡಲಿ: ಸಿದ್ದರಾಮಯ್ಯ

ಬೆಂಗಳೂರು: ನೀಟ್ ‌ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್ ಮತ್ತು ಮರು ಪರೀಕ್ಷೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ‌ಮಾಡರುವ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್ ರಾಜೀನಾಮೆ ಕೊಡಬೇಕು ಅಂತ ಆಗ್ರಹ ಮಾಡಿದ್ದಾರೆ‌. ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ‘ನೀಟ್-ಯುಜಿ 2026’ ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವು ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ದೇಶದ …

Read More »

ಕಾಲುವೆಗಳಿಗೆ ನೀರು ಹರಿಸುವಂತೆ ಸಚಿವರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ

ಗೋಕಾಕ- ಸಾರ್ವಜನಿಕರಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಿಡ್ಕಲ್ ಜಲಾಶಯದಿಂದ ಮೂರು ಕಾಲುವೆಗಳಿಗೆ ನೀರು ಹರಿಸಲು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಮನವಿ ಮಾಡಿಕೊಂಡರು. ಇಲ್ಲಿನ ಎನ್ಎಸ್ಎಫ್ ಕಾರ್ಯಾಲಯದಲ್ಲಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೇಸಿಗೆಯ ಆಹಾಕಾರ ತಪ್ಪಿಸಲು ಕಾಲುವೆಗಳಿಗೆ ನೀರು ಹರಿಸುವುದು ಅವಶ್ಯವಾಗಿದೆ ಎಂದವರು ತಿಳಿಸಿದರು. ಘಟಪ್ರಭಾ ಎಡದಂಡೆ, ಘಟಪ್ರಭಾ ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ನೀರು …

Read More »

PGCET | MBA, MCA ಪ್ರವೇಶ ಪರೀಕ್ಷೆ ಜೂ.4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ  ಪರೀಕ್ಷೆಯನ್ನು ಜೂನ್ 14ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ  ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿದ್ದು, ಮೇ 24ರಂದು ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಇರುವ ಕಾರಣ ಈ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈ ಹಿಂದೆ ಪ್ರಕಟಿಸಿದಂತೆ ಮೇ 23ರಂದು ಎಂ.ಟೆಕ್/ಎಂಬಿಎ ಹಾಗೂ ಡಿಸಿಇಟಿ ಪ್ರವೇಶ ಪರೀಕ್ಷೆಗಳು ನಡೆಯಲಿವೆ ಎಂದು ವಿವರಿಸಿದ್ದಾರೆ.

Read More »

ಹಿಜಾಬ್‌ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ

ಉಡುಪಿ: ಹಿಜಾಬ್  ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಶಾಲಾ – ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಗ್ರೀನ್ ಸಿಗ್ನಲ್ ಕೊಟ್ಟಿರುವ ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳು ) ಭಾರೀ ವಿರೋಧ ವ್ಯಕ್ತಪಡಿಸಿವೆ. ಅಲ್ಲದೇ ರಾಜ್ಯಾದ್ಯಂತ ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿದೆ. ಈ ಕುರಿತು ಹಿಂದೂ ಮುಖಂಡ ಸುನೀಲ್ ಕೆ.ಆರ್  ಮಾತನಾಡಿ, ಸರ್ಕಾರ ಇಸ್ಲಾಮಿಕರಣಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದೆ. ರಾಜ್ಯ ಸರ್ಕಾರಕ್ಕೆ ಮುಸ್ಲಿಮರ ಓಲೈಕೆಯೆ ಬಹು ಮುಖ್ಯವಾದಂತಿದೆ. ಮೂಲಭೂತವಾದಿ ಸಂಘಟನೆಗಳ ಜೊತೆಗೆ ರಾಜ್ಯ …

Read More »